Jeremiah · chapter 32 · verse 38
Jeremiah 32:38 in Kannada
ಅವರು ನನಗೆ ಜನರಾಗಿರುವರು; ನಾನು ಅವರಿಗೆ ದೇವರಾಗಿರುವೆನು.
Avaru nanage janaraagiruvaru; naanu avarige devaraagiruvenu.
Jeremiah 32:38 in English
- King James Version (KJV)
- And they shall be my people, and I will be their God:
- World English Bible (WEB)
- Then they will be my people, and I will be their God.
- American Standard Version (ASV)
- And they shall be my people, and I will be their God:
- Bible in Basic English (BBE)
- And they will be my people, and I will be their God:
- Darby Translation (DBY)
- And they shall be my people, and I will be their God.
- Webster's Bible (WBS)
- And they shall be my people, and I will be their God:
- Young's Literal Translation (YLT)
- and they have been to Me for a people, and I am to them for God;
Read in context
- 36ಹೀಗಾದರೂ ಈಗ ಅದು ಕತ್ತಿಯಿಂದಲೂ ಬರದಿಂದಲೂ ಜಾಡ್ಯದಿಂದಲೂ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದೆಂದು ನೀವು ಹೇಳುವ ಈ ಪಟ್ಟಣದ ವಿಷಯ ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--
- 37ಇಗೋ, ನಾನು ನನ್ನ ಕೋಪ ದಲ್ಲಿಯೂ ಉಗ್ರದಲ್ಲಿಯೂ ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶಗಳೊಳಗಿಂದ ಅವರನ್ನು ಕೂಡಿಸಿ ಈ ಸ್ಥಳಕ್ಕೆ ತಿರಿಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.
- 38ಅವರು ನನಗೆ ಜನರಾಗಿರುವರು; ನಾನು ಅವರಿಗೆ ದೇವರಾಗಿರುವೆನು.
- 39ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು.
- 40ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ.
Cross references
- Ezekiel 11:19–20 ಯೆಹೆಜ್ಕೇಲನು 11:19–20ಅವರಿಗೆ ಒಂದು ಹೃದಯವನ್ನು ಕೊಡು ವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು; ಅವರೊಳಗಿಂದ ಕಠಿಣ ಹೃದಯವನ್ನು ಹೊರಗೆ ತೆಗೆದು ಮೃದು ಹೃದಯವನ್ನು ಕೊಡುವೆನು. ಆಗ ಅವರು ನನ್ನ ನಿಯಮಗಳಲ್ಲಿ ನಡೆದುಕೊಂಡು ನನ್ನ ನಿಯಮಗ ಳನ್ನು ಕೈಕೊಂಡು ನಡೆಯುವರು. ಅವರು ನನ್ನ ಜನರಾಗು ವರು, ನಾನು ಅವರ ದೇವರಾಗುವೆನು.
- Jeremiah 24:7 ಯೆರೆಮೀಯ 24:7ನಾನೇ ಕರ್ತನೆಂದು ನನ್ನನ್ನು ತಿಳುಕೊಳ್ಳುವದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿ ರುವರು; ನಾನು ಅವರ ದೇವರಾಗಿರುವೆನು; ತಮ್ಮ ಪೂರ್ಣ ಹೃದಯದಿಂದ ನನ್ನ ಬಳಿಗೆ ಹಿಂತಿರುಗಿಕೊಳ್ಳು ವರು.
- Revelation 21:7 ಪ್ರಕಟನೆ 21:7ಜಯಹೊಂದುವವನು ಎಲ್ಲವುಗಳಿಗೆ ಬಾಧ್ಯನಾಗುವನು; ನಾನು ಅವನ ದೇವರಾಗಿರುವೆನು. ಅವನು ನನ್ನ ಮಗನಾಗಿರುವನು.
- Hebrews 8:10 ಇಬ್ರಿಯರಿಗೆ 8:10ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ
- Psalm 144:15 ಕೀರ್ತನೆಗಳು 144:15ಹೀಗಿರುವ ಜನರು ಧನ್ಯರು; ಕರ್ತನು ತಮಗೆ ದೇವರಾಗಿರುವ ಜನರು ಧನ್ಯರು.
- Ezekiel 37:27 ಯೆಹೆಜ್ಕೇಲನು 37:27ನನ್ನ ಗುಡಾರವು ಸಹ ಅವರೊಂದಿಗಿರುವದು; ಹೌದು, ನಾನು ಅವರ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಕರ್ತ ನಾದ ನಾನೇ ಇಸ್ರಾಯೇಲ್ಯರನ್ನು ಪರಿಶುದ್ಧ ಗೊಳಿಸಿದೆನೆಂದು ಅನ್ಯಜನರು ತಿಳಿದುಕೊಳ್ಳುವರು.
- Jeremiah 31:33 ಯೆರೆಮೀಯ 31:33ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ.
- Zechariah 13:9 ಜೆಕರ್ಯ 13:9ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
- Genesis 17:7 ಆದಿಕಾಂಡ 17:7ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.
- Jeremiah 30:22 ಯೆರೆಮೀಯ 30:22ನೀವು ನನಗೆ ಜನರಾಗಿರುವಿರಿ; ನಾನು ನಿಮಗೆ ದೇವರಾಗಿರುವೆನು.
- Ezekiel 36:28 ಯೆಹೆಜ್ಕೇಲನು 36:28ನಾನು ನಿಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ವಾಸಿ ಸುವಿರಿ; ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು.
- Deuteronomy 26:17–19 ಧರ್ಮೋಪದೇಶಕಾಂಡ 26:17–19ನೀನು ಈಹೊತ್ತು ಕರ್ತನು--ನಿನಗೆ ದೇವರಾಗಬೇಕೆಂದೂ ಆತನ ಮಾರ್ಗಗಳಲ್ಲಿ ನಡೆದು ಆತನ ನಿಯಮ ಆಜ್ಞೆ ನ್ಯಾಯಗಳನ್ನು ಕಾಪಾಡಿ ಆತನ ಸ್ವರ ಕೇಳುತ್ತೇನೆಂದೂ ದೃಢವಾಗಿ ಹೇಳಿದಿ. ಕರ್ತನು ಈಹೊತ್ತು ನಿನಗೆ ತಾನು ವಾಗ್ದಾನಮಾಡಿದಂತೆ ನೀನು ಆತನಿಗೆ ಅಸಮಾನ್ಯ ಜನವಾಗಬೇಕೆಂದೂ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಬೇಕೆಂದೂಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ. ಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ.