Jeremiah · chapter 33 · verse 7
Jeremiah 33:7 in Kannada
ಯೆಹೂದದ ಸೆರೆಯನ್ನೂ ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ ಅವರನ್ನು ಮುಂಚಿನ ಹಾಗೆ ಕಟ್ಟುವೆನು.
Yehoodada sereyannoo israayelina sereyannoo tirugisi avarannu munchina haage kattuvenu.
Jeremiah 33:7 in English
- King James Version (KJV)
- And I will cause the captivity of Judah and the captivity of Israel to return, and will build them, as at the first.
- World English Bible (WEB)
- I will restore the fortunes of Judah and Israel, and will build them as at the first.
- American Standard Version (ASV)
- And I will cause the captivity of Judah and the captivity of Israel to return, and will build them, as at the first.
- Bible in Basic English (BBE)
- And I will let the fate of Judah and of Israel be changed, building them up as at first.
- Darby Translation (DBY)
- And I will turn the captivity of Judah and the captivity of Israel, and will build them, as at the beginning.
- Webster's Bible (WBS)
- And I will cause the captivity of Judah and the captivity of Israel to return, and will build them, as at the first.
- Young's Literal Translation (YLT)
- And I have turned back the captivity of Judah, And the captivity of Israel, And I have built them as at the first,
Read in context
- 5ಅವರು ಕಸ್ದೀಯರ ಸಂಗಡ ಯುದ್ಧಮಾಡುವದಕ್ಕೂ ನಾನು ನನ್ನ ಕೋಪದಲ್ಲಿಯೂ ನನ್ನ ಉರಿಯಲ್ಲಿಯೂ ಕೊಂದುಹಾಕಿದ ಮನುಷ್ಯರ ಹೆಣಗಳಿಂದ ಅವುಗಳನ್ನು ತುಂಬಿಸುವದಕ್ಕೂ ಬರುತ್ತಾರೆ; ನಾನು ಈ ಪಟ್ಟಣಕ್ಕೆ ವಿರೋಧವಾಗಿ ಅದರ ಸಮಸ್ತ ಕೆಟ್ಟತನದ ನಿಮಿತ್ತ ನನ್ನ ಮುಖವನ್ನು ಮರೆಮಾಡಿದ್ದೇನೆ.
- 6ಇಗೋ, ನಾನು ಅದಕ್ಕೆ ಕ್ಷೇಮವನ್ನೂ ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಮಾಡಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು.
- 7ಯೆಹೂದದ ಸೆರೆಯನ್ನೂ ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ ಅವರನ್ನು ಮುಂಚಿನ ಹಾಗೆ ಕಟ್ಟುವೆನು.
- 8ಅವರು ಯಾವದರಿಂದ ನನಗೆ ವಿರೋಧವಾಗಿ ಪಾಪಮಾಡಿದರೋ ಆ ಅಕ್ರಮ ದಿಂದೆಲ್ಲಾ ಅವರನ್ನು ಶುದ್ಧ ಮಾಡುವೆನು; ಅವರು ಎಂಥವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದರೋ ಆ ಅಕ್ರಮ ಗಳನ್ನೆಲ್ಲಾ ಮನ್ನಿಸುವೆನು.
- 9ಅದು ನನಗೆ ಆನಂದದ ಹೆಸರೂ ನಾನು ಅವರಿಗೆ ಒಳ್ಳೇದನ್ನೆಲ್ಲಾ ಮಾಡುವದನ್ನು ಕೇಳುವ ಭೂಮಿಯಲ್ಲಿರುವ ಎಲ್ಲಾ ಜನಾಂಗಗಳ ಮುಂದೆ ಸ್ತೋತ್ರವೂ ಮಹಿಮೆಯೂ ಆಗುವದು; ನಾನು ಅದಕ್ಕೆ ಉಂಟು ಮಾಡುವ ಮೇಲಿಗಾಗಿಯೂ ಎಲ್ಲಾ ಅಭಿವೃದ್ಧಿಗಾಗಿಯೂ ಅವರು ಹೆದರಿ ನಡುಗುವರು.
Cross references
- Amos 9:14–15 ಆಮೋಸ 9:14–15ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ. ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- Jeremiah 30:3 ಯೆರೆಮೀಯ 30:3ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ನನ್ನ ಜನರಾದ ಇಸ್ರಾಯೇಲ್ ಮತ್ತು ಯೆಹೂದದ ಸೆರೆಯವರನ್ನು ತಿರುಗಿ ಬರ ಮಾಡುತ್ತೇನೆ; ಆಗ ನಾನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ; ಅವರು ಅದನ್ನು ಸ್ವಾಧೀನ ಮಾಡಿಕೊಳ್ಳುವರು.
- Isaiah 1:26 ಯೆಶಾಯ 1:26ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ ನಿನ್ನ ಆಲೋಚನಾ ಪರರನ್ನು ಪ್ರಾರಂಭ ದಲ್ಲಿದ್ದ ಹಾಗೆಯೂ ತಿರಿಗಿ ಒದಗಿಸಿಕೊಡುವೆನು: ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ ನಂಬಿಗಸ್ತಿಕೆಯ ಪಟ್ಟಣವೆಂದೂ ಕರೆಯಲ್ಪಡುವಿ.
- Jeremiah 32:44 ಯೆರೆಮೀಯ 32:44ಬೆನ್ಯಾವಿಾನನ ದೇಶದ ಲ್ಲಿಯೂ ಯೆರೂಸಲೇಮಿನ ಪ್ರದೇಶಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಬೆಟ್ಟದ ಪಟ್ಟಣಗಳ ಲ್ಲಿಯೂ ತಗ್ಗಿನ ಪಟ್ಟಣಗಳಲ್ಲಿಯೂ ದಕ್ಷಿಣದ ಪಟ್ಟಣಗಳ ಲ್ಲಿಯೂ ಹೊಲಗಳನ್ನು ಹಣಕ್ಕೆ ಕೊಂಡುಕೊಂಡು ಪತ್ರಗಳನ್ನು ಬರೆದು ಮುದ್ರೆ ಹಾಕಿ ಸಾಕ್ಷಿಗಳನ್ನು ಇಟ್ಟುಕೊಳ್ಳುವರು; ನಾನು ಅವರ ಸೆರೆಯಿಂದ ಹಿಂದಿರು ಗುವಂತೆ ಮಾಡುವೆನು ಎಂದು ಕರ್ತನು ಅನ್ನುತ್ತಾನೆ.
- Jeremiah 31:4 ಯೆರೆಮೀಯ 31:4ಇಸ್ರಾ ಯೇಲಿನ ಕನ್ಯಾಸ್ತ್ರೀಯೇ, ನೀನು ಕಟ್ಟಲ್ಪಟ್ಟಿರುವ ಹಾಗೆ ತಿರುಗಿ ನಿನ್ನನ್ನು ಕಟ್ಟುವೆನು; ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷಪಡು ವವರ ನಾಟ್ಯದಲ್ಲಿ ಹೊರಡುವಿ.
- Jeremiah 29:14 ಯೆರೆಮೀಯ 29:14ನಿಮಗೆ ಕಂಡುಕೊಳ್ಳಲ್ಪಡುವೆನೆಂದು ಕರ್ತನು ಅನ್ನುತ್ತಾನೆ; ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿ ಬಿಟ್ಟ ಎಲ್ಲಾ ಜನಾಂಗಗಳಿಂದಲೂ ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನೆಂದು ಕರ್ತನು ಅನ್ನುತ್ತಾನೆ; ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿ ದೆನೋ ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು.
- Jeremiah 30:18 ಯೆರೆಮೀಯ 30:18ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ; ಅವನ ನಿವಾಸಗಳನ್ನು ಕರುಣಿಸುತ್ತೇನೆ; ಪಟ್ಟಣವು ಅದರ ದಿಣ್ಣೆಯ ಮೇಲೆ ಕಟ್ಟಲ್ಪಡುವದು; ಅರಮನೆಯು ತಕ್ಕಸ್ಥಳದಲ್ಲಿ ನೆಲೆಯಾಗಿರುವದು.
- Jeremiah 42:10 ಯೆರೆಮೀಯ 42:10ನೀವು ಇನ್ನು ಈ ದೇಶದಲ್ಲಿ ವಾಸ ಮಾಡಿದರೆ ನಾನು ನಿಮ್ಮನ್ನು ಕೆಡವದೆ ಕಟ್ಟುವೆನು; ಕಿತ್ತುಹಾಕದೆ ನೆಡುವೆನು. ನಾನು ನಿಮಗೆ ಮಾಡಿರುವ ಕೇಡಿನ ವಿಷಯ ಪಶ್ಚಾತ್ತಾಪ ಪಡುತ್ತೇನೆ.
- Jeremiah 23:3 ಯೆರೆಮೀಯ 23:3ನಾನು ನನ್ನ ಮಂದೆಯ ಶೇಷವನ್ನು, ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು; ಅವರು ಫಲಕಾರಿಯಾಗಿ ಹೆಚ್ಚುವರು.
- Psalm 126:4 ಕೀರ್ತನೆಗಳು 126:4ಓ ಕರ್ತನೇ, ದಕ್ಷಿಣದಲ್ಲಿರುವ ಹೊಳೆಗಳ ಹಾಗೆ ಸೆರೆಯಿಂದ ನಮ್ಮನ್ನು ತಿರಿಗಿ ಬರಮಾಡು.
- Jeremiah 33:26 ಯೆರೆಮೀಯ 33:26ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.
- Jeremiah 30:20 ಯೆರೆಮೀಯ 30:20ಅವರ ಮಕ್ಕಳು ಸಹ ಪೂರ್ವ ಕಾಲದ ಹಾಗೆ ಇರುವರು; ಅವರ ಸಭೆಯು ನನ್ನ ಮುಂದೆ ಸ್ಥಾಪಿಸಲ್ಪಡುವದು; ಅವರನ್ನು ಬಾಧಿಸುವವರೆಲ್ಲರನ್ನು ವಿಚಾರಿಸುವೆನು.