Jeremiah · chapter 34 · verse 11
Jeremiah 34:11 in Kannada
ಅವರು ತರುವಾಯ ತಿರುಗಿಕೊಂಡು ತಾವು ಬಿಡುಗಡೆಯಾಗಿ ಕಳುಹಿಸಿಬಿಟ್ಟಿದ್ದ ದಾಸದಾಸಿ ಯರನ್ನು ತಿರಿಗಿ ಬರಮಾಡಿ ಅವರನ್ನು ದಾಸ ದಾಸಿಯ ರಾಗಿಯೂ ವಶಮಾಡಿಕೊಂಡರು.
Avaru taruvaaya tirugikondu taavu bidugadeyaagi kaluhisibittidda daasadaasi yarannu tirigi baramaadi avarannu daasa daasiya raagiyoo vashamaadikondaru.
Jeremiah 34:11 in English
- King James Version (KJV)
- But afterward they turned, and caused the servants and the handmaids, whom they had let go free, to return, and brought them into subjection for servants and for handmaids.
- World English Bible (WEB)
- but afterwards they turned, and caused the servants and the handmaids whom they had let go free to return, and brought them into subjection for servants and for handmaids.
- American Standard Version (ASV)
- but afterwards they turned, and caused the servants and the handmaids, whom they had let go free, to return, and brought them into subjection for servants and for handmaids.
- Bible in Basic English (BBE)
- But later, they took back again the servants and the servant-girls whom they had let go free, and put them again under the yoke as servants and servant-girls.
- Darby Translation (DBY)
- But afterwards they turned, and caused the bondmen and the bondmaids whom they had let go free, to return, and brought them into subjection for bondmen and for bondmaids.
- Webster's Bible (WBS)
- But afterwards they turned, and caused the servants and the handmaids, whom they had liberated, to return, and brought them into subjection for servants and for handmaids.
- Young's Literal Translation (YLT)
- and they turn afterwards, and cause the men-servants and the maid-servants to return, whom they had sent forth free, and they subdue them for men-servants and for maid-servants.
Read in context
- 9ಒಬ್ಬೊಬ್ಬನು ತನ್ನ ತನ್ನ ದಾಸ ದಾಸಿಯನ್ನು ಅವನು ಇಬ್ರೀಯನಾಗಲಿ ಇಬ್ರೀಯಳಾಗಲಿ ಇದ್ದರೆ ಸ್ವತಂತ್ರರಾಗಿ ಕಳುಹಿಸ ಬೇಕೆಂದು ಒಬ್ಬನಾದರೂ ಅವರಿಂದ ಅಂದರೆ ತನ್ನ ಸಹೋದರನಾದ ಯೆಹೂದ್ಯನಿಂದ ಸೇವೆ ತಕ್ಕೊಳ್ಳ ಬೇಡವೆಂದು ಅವರಿಗೆ ಬಿಡುಗಡೆಯನ್ನು ಸಾರಿದ ಮೇಲೆ ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವು.
- 10ಆಗ ಒಡಂಬಡಿಕೆಯಲ್ಲಿ ಸೇರಿದ ಪ್ರಧಾನರೆಲ್ಲರೂ ಜನರೆಲ್ಲರೂ ಒಬ್ಬೊಬ್ಬನು ತನ್ನ ತನ್ನ ದಾಸನನ್ನೂ ತನ್ನ ತನ್ನ ದಾಸಿಯನ್ನೂ ಬಿಡುಗಡೆಯಾಗಿ ಕಳುಹಿಸ ಬೇಕೆಂದೂ ಅವರಿಂದ ಸೇವೆ ತಕ್ಕೊಳ್ಳಬಾರದೆಂದೂ ಕೇಳಿದ ಮೇಲೆ ವಿಧೇಯರಾಗಿದ್ದು ಅವರನ್ನು ಕಳುಹಿಸಿ ಬಿಟ್ಟರು.
- 11ಅವರು ತರುವಾಯ ತಿರುಗಿಕೊಂಡು ತಾವು ಬಿಡುಗಡೆಯಾಗಿ ಕಳುಹಿಸಿಬಿಟ್ಟಿದ್ದ ದಾಸದಾಸಿ ಯರನ್ನು ತಿರಿಗಿ ಬರಮಾಡಿ ಅವರನ್ನು ದಾಸ ದಾಸಿಯ ರಾಗಿಯೂ ವಶಮಾಡಿಕೊಂಡರು.
- 12ಆದದರಿಂದ ಕರ್ತನ ವಾಕ್ಯವು ಯೆರೆವಿಾಯನಿಗೆ ಕರ್ತನಿಂದ ಉಂಟಾಗಿ ಹೇಳಿದ್ದೇನಂದರೆ--
- 13ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನಿಮ್ಮ ಪಿತೃಗಳನ್ನು ಐಗುಪ್ತದೇಶದೊಳಗಿದ್ದ ದಾಸರ ಮನೆಯೊಳಗಿಂದ ಹೊರಗೆ ತಂದ ದಿನದಲ್ಲಿ ಅವರ ಸಂಗಡ ಒಡಂಬಡಿಕೆಮಾಡಿ
Cross references
- 2 Peter 2:20–22 2 ಪೇತ್ರನು 2:20–22ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ. ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು. ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
- Matthew 12:43–45 ಮತ್ತಾಯನು 12:43–45ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ತಿರುಗಾಡಿದರೂ ಅದನ್ನು ಕಂಡುಕೊಳ್ಳಲಿಲ್ಲ. ಆಗ ಅದು--ನಾನು ಹೊರಟುಬಂದ ನನ್ನ ಮನೆಗೆ ಹಿಂತಿರುಗುವೆನು ಎಂದು ಅಂದುಕೊಂಡು ಬಂದು ಅದು ಬರಿದಾಗಿಯೂ ಗುಡಿಸಿ ಅಲಂಕರಿಸಲ್ಪಟ್ಟದ್ದಾ ಗಿಯೂ ಇರುವದನ್ನು ಕಂಡಿತು. ತರುವಾಯ ಅದು ಹೋಗಿ ತನಗಿಂತ ಕೆಟ್ಟವುಗಳಾಗಿರುವ ಬೇರೆ ಏಳು ಆತ್ಮಗಳನ್ನು ಕರಕೊಂಡು ಅವು ಅದರೊಳಗೆ ಪ್ರವೇಶಿಸಿ ವಾಸಮಾಡುತ್ತವೆ; ಹೀಗೆ ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತಲೂ ಕೆಟ್ಟದ್ದಾಗಿರುವದು. ಅದರಂತೆಯೇ ಈ ಕೆಟ್ಟ ಸಂತತಿಗೂ ಆಗುವದು ಎಂದು ಹೇಳಿದನು.
- Proverbs 26:11 ಜ್ಞಾನೋಕ್ತಿಗಳು 26:11ತಾನು ಕಕ್ಕಿದ್ದಕ್ಕೆ ನಾಯಿಯು ತಿರುಗುವಂತೆ ಮೂಢನು ತನ್ನ ಮೂಢತನಕ್ಕೆ ಹಿಂದಿರುಗುತ್ತಾನೆ.
- Ecclesiastes 8:11 ಪ್ರಸಂಗಿ 8:11ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವದರಿಂದ ಮನುಷ್ಯಪುತ್ರರ ಹೃದ ಯವು ಅವರನ್ನು ಕೆಟ್ಟದ್ದನ್ನು ಮಾಡುವದರಲ್ಲಿಯೇ ತುಂಬಿಸುವದು.
- 1 Samuel 19:6–11 1 ಸಮುವೇಲನು 19:6–11ಆಗ ಸೌಲನು ಯೋನಾತಾನನ ಮಾತನ್ನು ಕೇಳಿ--ಕರ್ತನಾಣೆ ಅವನುಕೊಲೆಯಾಗುವದಿಲ್ಲ ಅಂದನು. ಆಗ ಯೋನಾತಾ ನನು ದಾವೀದನನ್ನು ಕರೆದು ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿ ದಾವೀದನನ್ನು ಸೌಲನ ಬಳಿಗೆ ಕರ ತಂದನು; ಅವನು ಮುಂಚಿನ ಹಾಗೆಯೇ ಅವನ ಬಳಿಯಲ್ಲಿ ಇದ್ದನು. ಆದರೆ ತಿರಿಗಿ ಯುದ್ಧ ಉಂಟಾ ಯಿತು; ಆಗ ದಾವೀದನು ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧ ಮಾಡಿ ಅವರನ್ನು ದೊಡ್ಡ ಸಂಹಾರ ದಿಂದ ಹೊಡೆದನು; ಅವರು ಅವನ ಎದುರಿನಿಂದ ಓಡಿಹೋದರು. ಸೌಲನು ತನ್ನ ಕೈಯಲ್ಲಿ ಈಟಿಯನ್ನು ಹಿಡಿದು ತನ್ನ ಮನೆಯೊಳಗೆ ಕುಳಿತಿರುವಾಗ ಕರ್ತನಿಂದ ಕಳುಹಿಸಲ್ಪಟ್ಟ ದುರಾತ್ಮವು ಅವನ ಮೇಲೆ ಬಂತು; ದಾವೀದನು ತನ್ನ ಕೈಯಿಂದ (ಕಿನ್ನರಿ) ಬಾರಿಸುತ್ತಿದ್ದನು. ಆಗ ಸೌಲನು ದಾವೀದನನ್ನು ಈಟಿಯಿಂದ ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯಬೇಕೆಂದು ಯತ್ನಿಸಿದನು; ಆದರೆ ಇವನು ಸೌಲನ ಎದುರಿನಿಂದ ತಪ್ಪಿಸಿಕೊಂಡನು. ಈಟಿಯು ಗೋಡೆಯಲ್ಲಿ ಹತ್ತಿ ಕೊಳ್ಳುವಂತೆ ಅವನು ಹೊಡೆದನು. ದಾವೀದನು ಆ ರಾತ್ರಿಯಲ್ಲಿ ಓಡಿಹೋಗಿ ತಪ್ಪಿಸಿಕೊಂಡನು. ಆದರೆ ದಾವೀದನಿಗಾಗಿ ಕಾದುಕೊಂಡಿದ್ದು ಉದಯ ದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ವಿಾಕಲಳು ಅವನಿಗೆ--ನೀನು ಈ ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ ನಾಳೆ ಕೊಲ್ಲಲ್ಪಡುವಿ ಎಂದು ಹೇಳಿ
- Jeremiah 34:21 ಯೆರೆಮೀಯ 34:21ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ನಿಮ್ಮನ್ನು ಬಿಟ್ಟು ಹೋಗಿರುವ ಬಾಬೆಲಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು.ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.
- Hosea 7:16 ಹೋಶೇಯ 7:16ಅವರು ಹಿಂತಿರುಗುತ್ತಾರೆ, ಆದರೆ ಮಹೋನ್ನತನಾ ದಾತನ ಕಡೆಗೆ ಅಲ್ಲ. ಅವರು ಮೋಸ ಮಾಡುವ ಬಿಲ್ಲಿನ ಹಾಗೆ ಇದ್ದಾರೆ; ಅವರ ಪ್ರಧಾನರ ನಾಲಿಗೆಯ ಹುಚ್ಚು ಕೂಗಾಟದ ನಿಮಿತ್ತ ಕತ್ತಿಯಿಂದ ಬೀಳುವರು; ಇದೇ ಐಗುಪ್ತದೇಶದಲ್ಲಿ ಅವರಿಗಿರುವ ನಿಂದೆಯಾಗಿದೆ.
- 1 Samuel 26:21 1 ಸಮುವೇಲನು 26:21ಆಗ ಸೌಲನುನಾನು ಪಾಪಮಾಡಿದೆನು; ನನ್ನ ಮಗನಾದ ದಾವೀ ದನೇ, ತಿರಿಗಿ ಬಾ; ಯಾಕಂದರೆ ನನ್ನ ಜೀವವು ಈ ಹೊತ್ತು ನಿನ್ನ ದೃಷ್ಟಿಗೆ ಅಮೂಲ್ಯವಾಗಿದ್ದರಿಂದ ನಾನು ಇನ್ನು ಮೇಲೆ ನಿನಗೆ ಕೇಡುಮಾಡೆನು; ಇಗೋ, ನಾನು ಹುಚ್ಚು ಕೆಲಸಮಾಡಿದ್ದೇನೆ. ಮಹಾ ಹೆಚ್ಚಾದ ತಪ್ಪು ಮಾಡಿದೆನು ಅಂದನು.
- Zephaniah 1:6 ಚೆಫನ್ಯ 1:6ಕರ್ತನ ಕಡೆಯಿಂದ ಹಿಂತಿ ರುಗಿದವರನ್ನೂ ಕರ್ತನನ್ನು ಹುಡುಕದೆಯೂ ವಿಚಾರಿಸ ದೆಯೂ ಇರುವವರನ್ನೂ ಕಡಿದುಬಿಡುವೆನು.
- Psalm 125:5 ಕೀರ್ತನೆಗಳು 125:5ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
- Exodus 8:15 ವಿಮೋಚನಕಾಂಡ 8:15ಆದರೆ ಫರೋಹನು ತನಗೆ ಉಪಶಮನವಾಯಿತೆಂದು ತಿಳಿ ದಾಗ ಕರ್ತನು ಹೇಳಿದಂತೆ ಅವನು ತನ್ನ ಹೃದಯವನ್ನು ಕಠಿಣಮಾಡಿಕೊಂಡು ಅವರ ಮಾತನ್ನು ಕೇಳಲಿಲ್ಲ.
- Psalm 36:3 ಕೀರ್ತನೆಗಳು 36:3ಅವನ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿವೆ; ಬುದ್ಧಿ ಯಿಂದ ನಡೆಯುವದನ್ನೂ ಒಳ್ಳೇದು ಮಾಡುವದನ್ನೂ ಬಿಟ್ಟಿದ್ದಾನೆ.