Jeremiah · chapter 34 · verse 3
Jeremiah 34:3 in Kannada
ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳು ವದಿಲ್ಲ; ಆದರೆ ನಿಶ್ಚಯವಾಗಿ ಹಿಡಿಯಲ್ಪಟ್ಟು, ಅವನ ಕೈಯಲ್ಲಿ ಒಪ್ಪಿಸಲ್ಪಡುವಿ; ನಿನ್ನ ಕಣ್ಣುಗಳು ಬಾಬೆಲಿನ ಅರಸನ ಕಣ್ಣುಗಳನ್ನು ನೋಡುವವು, ಅವನು ಎದುರೆ ದುರಾಗಿ ಸಾಕ್ಷಾತ್ತಾಗಿ ನಿನ್ನ ಸಂಗಡ ಮಾತನಾಡು ವನು; ನೀನು ಬಾಬೆಲಿಗೆ ಹೋಗುವಿ.
Neenu avana kaiyolaginda tappisikollu vadilla; aadare nishchayavaagi hidiyalpattu, avana kaiyalli oppisalpaduvi; ninna kannugalu baabelina arasana kannugalannu noduvavu, avanu edure duraagi saakshaattaagi ninna sangada maatanaadu vanu; neenu baabelige hoguvi.
Jeremiah 34:3 in English
- King James Version (KJV)
- And thou shalt not escape out of his hand, but shalt surely be taken, and delivered into his hand; and thine eyes shall behold the eyes of the king of Babylon, and he shall speak with thee mouth to mouth, and thou shalt go to Babylon.
- World English Bible (WEB)
- You won’t escape out of his hand, but will surely be taken and delivered into his hand. Your eyes will see the eyes of the king of Babylon, and he will speak with you mouth to mouth. You will go to Babylon.”’
- American Standard Version (ASV)
- and thou shalt not escape out of his hand, but shalt surely be taken, and delivered into his hand; and thine eyes shall behold the eyes of the king of Babylon, and he shall speak with thee mouth to mouth, and thou shalt go to Babylon.
- Bible in Basic English (BBE)
- And you will not get away from him, but will certainly be taken and given up into his hands; and you will see the king of Babylon, eye to eye, and he will have talk with you, mouth to mouth, and you will go to Babylon.
- Darby Translation (DBY)
- And thou shalt not escape out of his hand, but shalt certainly be taken, and given into his hand; and thine eyes shall behold the eyes of the king of Babylon, and his mouth shall speak with thy mouth, and thou shalt go to Babylon.
- Webster's Bible (WBS)
- And thou shalt not escape from his hand, but shalt surely be taken, and delivered into his hand; and thy eyes shall behold the eyes of the king of Babylon, and he shall speak with thee mouth to mouth, and thou shalt go to Babylon.
- Young's Literal Translation (YLT)
- and thou, thou dost not escape out of his hand, for thou art certainly caught, and into his hand thou art given, and thine eyes see the eyes of the king of Babylon, and his mouth with thy mouth speaketh, and Babylon thou enterest.
Read in context
- 1ಬಾಬೆಲಿನ ಅರಸನಾದ ನೆಬೂಕದ್ನೆಚ್ಚ ರನೂ ಅವನ ಸೈನ್ಯವೆಲ್ಲವೂ ಅವನ ಆಡಳಿತದ ಭೂಮಿಯ ಎಲ್ಲಾ ರಾಜ್ಯಗಳೂ ಎಲ್ಲಾ ಜನಾಂಗಗಳೂ ಯೆರೂಸಲೇಮಿಗೂ ಅದರ ಎಲ್ಲಾ ಪಟ್ಟಣಗಳಿಗೂ ವಿರೋಧವಾಗಿ ಯುದ್ಧಮಾಡುವಾಗ ಕರ್ತನಿಂದ ಯೆರೆವಿಾಯನಿಗೆ ಉಂಟಾದ ವಾಕ್ಯವೇನಂ ದರೆ--
- 2ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕ ದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅದನ್ನು ಬೆಂಕಿಯಿಂದ ಸುಡು ವನು.
- 3ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳು ವದಿಲ್ಲ; ಆದರೆ ನಿಶ್ಚಯವಾಗಿ ಹಿಡಿಯಲ್ಪಟ್ಟು, ಅವನ ಕೈಯಲ್ಲಿ ಒಪ್ಪಿಸಲ್ಪಡುವಿ; ನಿನ್ನ ಕಣ್ಣುಗಳು ಬಾಬೆಲಿನ ಅರಸನ ಕಣ್ಣುಗಳನ್ನು ನೋಡುವವು, ಅವನು ಎದುರೆ ದುರಾಗಿ ಸಾಕ್ಷಾತ್ತಾಗಿ ನಿನ್ನ ಸಂಗಡ ಮಾತನಾಡು ವನು; ನೀನು ಬಾಬೆಲಿಗೆ ಹೋಗುವಿ.
- 4ಆದಾಗ್ಯೂ ಯೆಹೂದದ ಅರಸನಾದ ಚಿದ್ಕೀಯನೇ, ಕರ್ತನ ವಾಕ್ಯ ವನ್ನು ಕೇಳು. ಕರ್ತನು ಹೀಗೆ ಹೇಳುತ್ತಾನೆ--ನೀನು ಕತ್ತಿಯಿಂದ ಸಾಯುವದಿಲ್ಲ.
- 5ಸಮಾಧಾನದಲ್ಲಿ ಸಾಯುವಿ; ಹಿಂದೆ ಇದ್ದ ಪೂರ್ವದ ಅರಸನಾದ ನಿನ್ನ ಪಿತೃಗಳನ್ನು ಸುಟ್ಟ ಪ್ರಕಾರ ನಿನಗೋಸ್ಕರ (ಸುಗಂಧ ಗಳನ್ನು) ಸುಡುವರು; ಹಾ, ಒಡೆಯನೇ, ಎಂದು ಹೇಳಿ ನಿನಗೋಸ್ಕರ ಗೋಳಾಡುವರು; ನಾನೇ ವಾಕ್ಯವನ್ನು ನುಡಿದಿದ್ದೇನೆಂದು ಕರ್ತನು ಅನ್ನುತ್ತಾನೆ.
Cross references
- Jeremiah 32:4 ಯೆರೆಮೀಯ 32:4ಅವನು ಅದನ್ನು ವಶಪಡಿಸಿಕೊಳ್ಳುವನು; ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಗೆ ತಪ್ಪಿಸಿಕೊಳ್ಳದೆ ನಿಶ್ಚಯ ವಾಗಿ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವನು, ಸಾಕ್ಷಾತ್ತಾಗಿ ಅವನ ಸಂಗಡ ಮಾತನಾಡುವನು; ಅವನ ಕಣ್ಣುಗಳು ಅವನ ಕಣ್ಣುಗಳನ್ನು ನೋಡುವವು.
- Jeremiah 21:7 ಯೆರೆಮೀಯ 21:7ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಈ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ.
- 2 Kings 25:4–7 2 ಅರಸುಗಳು 25:4–7ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು. ಕಸ್ದೀಯರು ಪಟ್ಟಣದ ಬಳಿಯಲ್ಲಿ ಇದ್ದದರಿಂದ ಅವರ ದಂಡು ಅರಸನನ್ನು ಹಿಂಬಾಲಿಸಿ ಯೆರಿಕೋವಿನ ಬಯಲು ಸ್ಥಳಗಳಲ್ಲಿ ಅವನನ್ನು ಹಿಡು ಕೊಂಡರು. ಅವನ ದಂಡೆಲ್ಲಾ ಅವನ ಕಡೆಯಿಂದ ಚದರಿ ಹೋಯಿತು. ಅವರು ಅರಸನನ್ನು ಹಿಡಿದು ಕೊಂಡು, ರಿಬ್ಲದಲ್ಲಿರುವ ಬಾಬೆಲಿನ ಅರಸನ ಬಳಿಗೆ ತಕ್ಕೊಂಡು ಬಂದು ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು. ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿನಲ್ಲಿಯೇ ಕೊಂದ ತರುವಾಯ ಅವನ ಕಣ್ಣುಗಳನ್ನು ಕಿತ್ತುಹಾಕಿ ಅವನಿಗೆ ಹಿತ್ತಾಳೆಯ ಬೇಡಿ ಹಾಕಿ ಅವನನ್ನು ಬಾಬೆಲಿಗೆ ತಕ್ಕೊಂಡು ಹೋದರು.
- Jeremiah 39:4–7 ಯೆರೆಮೀಯ 39:4–7ಆಗ ಆದದ್ದೇನಂದರೆ--ಯೆಹೂ ದದ ಅರಸನಾದ ಚಿದ್ಕೀಯನೂ ಯುದ್ಧಸ್ಥರೆಲ್ಲರೂ ಅವರನ್ನು ನೋಡಿದಾಗ ಓಡಿಹೋಗಿ ರಾತ್ರಿಯಲ್ಲಿ ಪಟ್ಟಣವನ್ನು ಅರಸನ ತೋಟದ ಮಾರ್ಗದಿಂದ ಬಿಟ್ಟು ಎರಡು ಗೋಡೆಗಳ ಮಧ್ಯದಲ್ಲಿರುವ ಬಾಗಲಿನಿಂದ ಹೊರಟರು; ಅವನು ಬೈಲುಸೀಮೆಯ ಮಾರ್ಗ ವಾಗಿ ಹೊರಟನು. ಆದರೆ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಅವರು ಅವನನ್ನು ಹಿಡಿದು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು. ಅಲ್ಲಿ ಅವನು ಅವನಿಗೆ ನ್ಯಾಯತೀರಿಸಿದನು. ಬಾಬೆಲಿನ ಅರಸನು ಚಿದ್ಕೀಯನ ಕುಮಾರರನ್ನು ರಿಬ್ಲದಲ್ಲಿ ಅವನ ಕಣ್ಣುಗಳ ಮುಂದೆ ಕೊಂದುಹಾಕಿದನು; ಯೆಹೂದದ ಘನವುಳ್ಳವರೆಲ್ಲ ರನ್ನು ಸಹ ಬಾಬೆಲಿನ ಅರಸನು ಕೊಂದುಹಾಕಿದನು. ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಅವನು ಕಿತ್ತುಹಾಕಿ ಬಾಬೆಲಿಗೆ ತಕ್ಕೊಂಡು ಹೋಗಬೇಕೆಂದು ಅವನನ್ನು ಸರಪಣಿಗಳಿಂದ ಕಟ್ಟಿಸಿದನು.
- Jeremiah 34:21 ಯೆರೆಮೀಯ 34:21ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ನಿಮ್ಮನ್ನು ಬಿಟ್ಟು ಹೋಗಿರುವ ಬಾಬೆಲಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು.ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.
- Jeremiah 52:7–11 ಯೆರೆಮೀಯ 52:7–11ಆಗ ಪಟ್ಟಣವು ವಿಭಾಗವಾಯಿತು; ಯುದ್ಧಸ್ಥರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದ ಬಾಗಲಿನ ಮಾರ್ಗವಾಗಿ ರಾತ್ರಿಯಲ್ಲಿ ಪಟ್ಟಣವನ್ನು ಬಿಟ್ಟು ಹೊರಟು, ಬೈಲು ಸೀಮೆಯ ಮಾರ್ಗವಾಗಿ ಹೋದರು. ಆದರೆ ಕಸ್ದೀಯರು ಪಟ್ಟಣದ ಸುತ್ತಲೂ ಇದ್ದರು. ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು. ಆಗ ಅವರು ಅರಸನನ್ನು ಹಿಡಿದು, ಬಾಬೆಲಿನ ಅರಸನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು; ಅಲ್ಲಿ ಅವನು ಅವನ ವಿಷಯ ನ್ಯಾಯತೀರ್ಪು ಮಾಡಿದನು. ಬಾಬೇಲಿನ ಅರಸನು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣುಗಳ ಮುಂದೆ ಕೊಂದು ಹಾಕಿಸಿದನು. ಯೆಹೂದದ ಪ್ರಧಾನರೆಲ್ಲ ರನ್ನೂ ಸಹ ರಿಬ್ಲದಲ್ಲಿ ಕೊಂದು ಹಾಕಿಸಿದನು. ಇದಲ್ಲದೆ ಬಾಬೆಲಿನ ಅಸನು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿಸಿ, ಅವನನ್ನು ಹಿತ್ತಾಳೆಯ ಸಂಕೋಲೆಗಳಿಂದ ಕಟ್ಟಿಸಿ, ಬಾಬೆಲಿಗೆ ಒಯ್ದು ಅವನು ಸಾಯುವ ದಿನದ ವರೆಗೆ ಸೆರೆಮನೆಯಲ್ಲಿ ಇಟ್ಟನು.
- Ezekiel 17:18–20 ಯೆಹೆಜ್ಕೇಲನು 17:18–20ಅವನು ಪ್ರಮಾಣವನ್ನು ತಿರಸ್ಕರಿಸಿ ಕೈಕೊಟ್ಟಾಗ್ಯೂ; ಇಗೋ, ಒಡಂಬಡಿಕೆಯನ್ನು ವಿಾರಿ ಇವುಗಳನ್ನೆಲ್ಲಾ ಮಾಡಿದ್ದ ರಿಂದ ತಪ್ಪಿಸಿಕೊಳ್ಳುವದಿಲ್ಲ. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ ಅವನು ವಿಾರಿದ ಒಡಂಬಡಿಕೆಯನ್ನೂ ನನ್ನ ಜೀವ ದಾಣೆ ನಿಶ್ಚಯವಾಗಿ ಅವನ ತಲೆಯ ಮೇಲೆಯೇ ಮುಯ್ಯಿ ತೀರಿಸುವೆನು. ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ; ಆಗ ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು; ನಾನು ಅವನನ್ನು ಬಾಬೆಲಿಗೆ ಒಯ್ದು ಅವನು ನನಗೆ ವಿರೋಧವಾಗಿ ಮಾಡಿರುವ ಅಪರಾಧದ ವಿಷಯದಲ್ಲಿ ನಾನು ಅವರೊಂದಿಗೆ ವಾದಿಸುವೆನು.
- Ezekiel 21:25 ಯೆಹೆಜ್ಕೇಲನು 21:25ದುಷ್ಟನಾದ ಭ್ರಷ್ಟ ಇಸ್ರಾಯೇಲನ ಪ್ರಭುವೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು.
- Ezekiel 12:13 ಯೆಹೆಜ್ಕೇಲನು 12:13ನನ್ನ ಬಲೆಯನ್ನು ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯ ದೇಶದ ಬಾಬೆಲಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು.
- Jeremiah 38:18 ಯೆರೆಮೀಯ 38:18ನೀನು ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಡುವದು; ಅವರು ಅದನ್ನು ಬೆಂಕಿಯಿಂದ ಸುಡುವರು; ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವದಿಲ್ಲ ಅಂದನು.
- Jeremiah 37:17 ಯೆರೆಮೀಯ 37:17ಅವನನ್ನು ಹೊರಗೆ ತನ್ನ ಮನೆಯಲ್ಲಿ ಕರತರಿಸಿ--ರಹಸ್ಯವಾಗಿ ಕರ್ತನಿಂದ ವಾಕ್ಯ ಉಂಟೋ ಎಂದು ಅವನನ್ನು ಕೇಳಿದನು; ಉಂಟು ಎಂದು ಯೆರೆವಿಾಯನು ಹೇಳಿ ರಹಸ್ಯವಾಗಿ ನೀನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವಿ ಅಂದನು.
Original words (Hebrew)
- out · H4422מָלַט mâlaṭ
- hand · H3027יָד yâd
- surely · H8610תָּפַשׂ tâphas
- taken · H8610תָּפַשׂ tâphas
- delivered · H5414נָתַן nâthan
- hand · H3027יָד yâd
- eyes · H5869עַיִן ʻayin
- behold · H7200רָאָה râʼâh
- eyes · H5869עַיִן ʻayin
- king · H4428מֶלֶךְ melek
- Babylon · H894בָּבֶל Bâbel
- speak · H1696דָבַר dâbar
- mouth · H6310פֶּה peh
- mouth · H6310פֶּה peh
- go · H935בּוֹא bôwʼ
- Babylon · H894בָּבֶל Bâbel