Jeremiah · chapter 34 · verse 8
Jeremiah 34:8 in Kannada
ಅರಸನಾದ ಚಿದ್ಕೀಯನು ಯೆರೂಸಲೇಮಿನಲ್ಲಿದ್ದ ಎಲ್ಲಾ ಜನರ ಸಂಗಡ ಒಡಂಬಡಿಕೆ ಮಾಡಿ
Arasanaada chidkeeyanu yeroosaleminallidda ellaa janara sangada odambadike maadi
Jeremiah 34:8 in English
- King James Version (KJV)
- [This is] the word that came unto Jeremiah from the LORD, after that the king Zedekiah had made a covenant with all the people which [were] at Jerusalem, to proclaim liberty unto them;
- World English Bible (WEB)
- The word came to Jeremiah from the LORD, after King Zedekiah had made a covenant with all the people who were at Jerusalem, to proclaim liberty to them,
- American Standard Version (ASV)
- The word that came unto Jeremiah from Jehovah, after that the king Zedekiah had made a covenant with all the people that were at Jerusalem, to proclaim liberty unto them;
- Bible in Basic English (BBE)
- The word which came to Jeremiah from the Lord, after King Zedekiah had made an agreement with all the people in Jerusalem, to give news in public that servants were to be made free;
- Darby Translation (DBY)
- The word that came unto Jeremiah from Jehovah, after that king Zedekiah had made a covenant with all the people that were at Jerusalem, to proclaim liberty unto them:
- Webster's Bible (WBS)
- [This is] the word that came to Jeremiah from the LORD, after king Zedekiah had made a covenant with all the people who [were] at Jerusalem, to proclaim liberty to them;
- Young's Literal Translation (YLT)
- The word that hath been unto Jeremiah from Jehovah, after the making by the king Zedekiah of a covenant with all the people who [are] in Jerusalem, to proclaim to them liberty,
Read in context
- 6ಆಗ ಪ್ರವಾದಿಯಾದ ಯೆರೆವಿಾಯನು ಈ ವಾಕ್ಯಗಳ ನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದ ಅರಸನಾದ ಚಿದ್ಕೀಯನಿಗೆ ಹೇಳಿದನು.
- 7ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ ಯೆಹೂದದಲ್ಲಿ ಮಿಕ್ಕ ಸಮಸ್ತ ಪಟ್ಟಣಗಳಿಗೂ ಅಂದರೆ ಲಾಕೀಷಿಗೂ ಅಜೇ ಕಕ್ಕೂ ವಿರೋಧವಾಗಿ ಯುದ್ಧ ಮಾಡಿದಾಗಲೇ ಹೇಳಿ ದನು. ಯೆಹೂದದ ಪಟ್ಟಣಗಳಲ್ಲಿ ಈ ಕೋಟೆಯುಳ್ಳ ಪಟ್ಟಣಗಳು ನಿಂತಿದ್ದವು.
- 8ಅರಸನಾದ ಚಿದ್ಕೀಯನು ಯೆರೂಸಲೇಮಿನಲ್ಲಿದ್ದ ಎಲ್ಲಾ ಜನರ ಸಂಗಡ ಒಡಂಬಡಿಕೆ ಮಾಡಿ
- 9ಒಬ್ಬೊಬ್ಬನು ತನ್ನ ತನ್ನ ದಾಸ ದಾಸಿಯನ್ನು ಅವನು ಇಬ್ರೀಯನಾಗಲಿ ಇಬ್ರೀಯಳಾಗಲಿ ಇದ್ದರೆ ಸ್ವತಂತ್ರರಾಗಿ ಕಳುಹಿಸ ಬೇಕೆಂದು ಒಬ್ಬನಾದರೂ ಅವರಿಂದ ಅಂದರೆ ತನ್ನ ಸಹೋದರನಾದ ಯೆಹೂದ್ಯನಿಂದ ಸೇವೆ ತಕ್ಕೊಳ್ಳ ಬೇಡವೆಂದು ಅವರಿಗೆ ಬಿಡುಗಡೆಯನ್ನು ಸಾರಿದ ಮೇಲೆ ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವು.
- 10ಆಗ ಒಡಂಬಡಿಕೆಯಲ್ಲಿ ಸೇರಿದ ಪ್ರಧಾನರೆಲ್ಲರೂ ಜನರೆಲ್ಲರೂ ಒಬ್ಬೊಬ್ಬನು ತನ್ನ ತನ್ನ ದಾಸನನ್ನೂ ತನ್ನ ತನ್ನ ದಾಸಿಯನ್ನೂ ಬಿಡುಗಡೆಯಾಗಿ ಕಳುಹಿಸ ಬೇಕೆಂದೂ ಅವರಿಂದ ಸೇವೆ ತಕ್ಕೊಳ್ಳಬಾರದೆಂದೂ ಕೇಳಿದ ಮೇಲೆ ವಿಧೇಯರಾಗಿದ್ದು ಅವರನ್ನು ಕಳುಹಿಸಿ ಬಿಟ್ಟರು.
Cross references
- Leviticus 25:10 ಯಾಜಕಕಾಂಡ 25:10ಐವತ್ತ ನೆಯ ವರುಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೇ ವರುಷದ ವಾರ್ಷಿಕೋತ್ಸವವಾ ಗಿರಬೇಕು; ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಸ್ವಾಸ್ತ್ಯಕ್ಕೂ ಕುಟುಂಬಕ್ಕೂ ಹಿಂದಿರುಗಿ ಹೋಗಬೇಕು.
- 2 Kings 11:17 2 ಅರಸುಗಳು 11:17ಯೆಹೋಯಾದಾವನು ಕರ್ತನಿಗೂ ಅರಸನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು. ಆ ಸಮಯದಲ್ಲಿ ಕರ್ತನ ಜನರಾಗಿರುವ ಹಾಗೆ ಅರಸ ನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು.
- Jeremiah 34:17 ಯೆರೆಮೀಯ 34:17ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಸಹೋದರನಿಗೂ ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಕತ್ತಿ, ಬರ, ಜಾಡ್ಯ ಇವುಗಳಿಗಾಗಿ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಕರ್ತನು ಹೇಳುತ್ತಾನೆ. ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನು ತೆಗೆದು ಹಾಕುವಂತೆ ಮಾಡುವೆನು.
- 2 Kings 23:2–3 2 ಅರಸುಗಳು 23:2–3ಆಗ ಅರಸನೂ ಅವನ ಸಂಗಡ ಯೆಹೂದದ ಜನರೆಲ್ಲರೂ ಯೆರೂ ಸಲೇಮಿನ ನಿವಾಸಿಗಳೆಲ್ಲರೂ ಯಾಜಕರೂ ಪ್ರವಾದಿ ಗಳೂ ಹಿರಿಕಿರಿಯರಾದ ಎಲ್ಲಾ ಜನರೂ ಕರ್ತನ ಆಲಯಕ್ಕೆ ಹೋದರು. ಅವರು ಕೇಳುವ ಹಾಗೆ ಕರ್ತನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ಪುಸ್ತಕದ ಮಾತುಗಳನೆಲ್ಲಾ ಅವನು ಓದಿದನು. ಅರಸನು ಸ್ತಂಭದ ಬಳಿಯಲ್ಲಿ ನಿಂತು ಕರ್ತನನ್ನು ಹಿಂಬಾಲಿಸು ವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆ ಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣ ದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿ ರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವ ದಕ್ಕೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿ ದನು; ಜನರೆಲ್ಲರೂ ಒಡಂಬಡಿಕೆಗೆ ಒಪ್ಪಿದರು.
- Isaiah 61:1 ಯೆಶಾಯ 61:1ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
- Leviticus 25:39–46 ಯಾಜಕಕಾಂಡ 25:39–46ಇದಲ್ಲದೆ ನಿನ್ನೊಂದಿಗೆ ವಾಸಿಸುವ ನಿನ್ನ ಸಹೋದರನು ಬಡವನಾಗಿದ್ದು ನಿನಗೆ ಮಾರಲ್ಪಟ್ಟಿದ್ದರೆ ಅವನು ದಾಸನಂತೆ ನಿನಗೆ ಸೇವೆಮಾಡಲು ನೀನು ಅವನನ್ನು ಒತ್ತಾಯ ಮಾಡಬಾರದು. ಆದರೆ ಕೂಲಿ ಯಾಳಂತೆಯೂ ಪ್ರವಾಸಿಯಂತೆಯೂ ಅವನು ನಿನ್ನ ಬಳಿಯಲ್ಲಿ ಇರಲಿ. ಜೂಬಿಲಿ ಸಂವತ್ಸರದ ವರೆಗೆ ನಿನಗೆ ಸೇವೆಮಾಡಲಿ. ತರುವಾಯ ಅವನು ನಿನ್ನ ಬಳಿಯಿಂದ ತಾನು ತನ್ನ ಮಕ್ಕಳೊಂದಿಗೆ ಹೊರಟು ತನ್ನ ಕುಟುಂಬಕ್ಕೂ ತನ್ನ ಪಿತೃಗಳ ಸ್ವಾಸ್ತ್ಯಕ್ಕೂ ಅವನು ಹಿಂದಿರುಗಬೇಕು. ಐಗುಪ್ತದೇಶದೊಳಗಿಂದ ನಾನು ಹೊರಗೆ ಕರತಂದ ಅವರು ನನ್ನ ಸೇವಕರಾಗಿದ್ದಾರೆ; ಅವರು ದಾಸರಾಗಿ ಮಾರಲ್ಪಡಬಾರದು. ನೀನು ಕಠಿಣವಾಗಿ ಅವನ ಮೇಲೆ ದೊರೆತನ ಮಾಡಬಾರದು; ಆದರೆ ನಿನ್ನ ದೇವರಿಗೆ ಭಯಪಡಬೇಕು. ನಿನ್ನ ಸುತ್ತಲೂ ಇರುವ ಅನ್ಯಜನರು ನಿನಗೆ ದಾಸದಾಸಿಯ ರಾಗಿರುವಂತೆ ಅವರಿಂದ ದಾಸದಾಸಿಯರನ್ನು ನೀನು ಕೊಂಡುಕೊಳ್ಳಬೇಕು. ಇದಲ್ಲದೆ ನಿನ್ನ ಮಧ್ಯದೊಳ ಗಿರುವ ಪರಕೀಯ ಮತ್ತು ಪ್ರವಾಸಿಗಳ ಮಕ್ಕಳಿಂದ ನಿನ್ನ ಬಳಿಯಲ್ಲಿರುವ ಅವರ ಕುಟುಂಬಗಳಲ್ಲಿ ನಿನ್ನ ದೇಶದೊಳಗೆ ಅವರು ಪಡೆದಿರುವವರಿಂದ ನೀನು ಕೊಂಡುಕೊಳ್ಳಬಹುದು; ಅವರು ನಿನ್ನ ಸ್ವಾಸ್ತ್ಯವಾಗಿ ರುವರು. ನಿಮ್ಮ ತರುವಾಯ ಅವರನ್ನು ನಿಮ್ಮ ಮಕ್ಕಳಿಗೆ ಸ್ವಾಸ್ತ್ಯವಾಗಿರುವ ಬಾಧ್ಯತೆಯಾಗಿ ತೆಗೆದು ಕೊಳ್ಳಬೇಕು; ಅವರು ನಿರಂತರಕ್ಕೂ ನಿಮ್ಮ ದಾಸ ರಾಗಿರುವರು. ಆದರೆ ಇಸ್ರಾಯೇಲ್ ಮಕ್ಕಳಾದ ನಿಮ್ಮ ಸಹೋದರರಲ್ಲಿ ಒಬ್ಬರ ಮೇಲೊಬ್ಬರು ಕಠಿಣವಾದ ದೊರೆತನವನ್ನು ಮಾಡಬೇಡಿರಿ.
- Nehemiah 5:1–13 ನೆಹೆಮೀಯ 5:1–13ಆದರೆ ಜನರಿಂದಲೂ ಅವರ ಹೆಂಡತಿಯರಿಂದಲೂ ತಮ್ಮ ಸಹೋದರರಾದ ಯೆಹೂದ್ಯರ ಮೇಲೆ ದೊಡ್ಡ ಕೂಗು ಉಂಟಾಯಿತು. ಅವರಲ್ಲಿ ಕೆಲವರು--ನಾವೂ ನಮ್ಮ ಕುಮಾರರೂ ನಮ್ಮ ಕುಮಾರ್ತೆಯರೂ ಅನೇಕರಾದದರಿಂದ ನಾವು ಬದುಕುವ ಹಾಗೆ ಧಾನ್ಯವನ್ನು ತಕ್ಕೊಂಡೆವು ಅಂದರು. ಕೆಲವರು ಈ ಬರದಲ್ಲಿ ನಾವು ಧಾನ್ಯಕೊಂಡು ಕೊಳ್ಳುವ ಹಾಗೆ ನಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಮನೆಗಳನ್ನೂ ಒತ್ತೆ ಇಟ್ಟೆವು ಅಂದರು. ಇನ್ನು ಕೆಲವರು--ಅರಸನಿಗೆ ಕಪ್ಪವನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ ನಮ್ಮ ದ್ರಾಕ್ಷೇ ತೋಟಗಳ ಮೇಲೆಯೂ ಸಾಲವನ್ನು ತೆಗೆದು ಕೊಂಡಿದ್ದೇವೆ. ಆದರೂ ನಮ್ಮ ಶರೀರವು ನಮ್ಮ ಸಹೋದರರ ಶರೀರದ ಹಾಗೆ, ನಮ್ಮ ಮಕ್ಕಳು ಅವರ ಮಕ್ಕಳ ಹಾಗೆ ಆದರೆ ಇಗೋ, ಸೇವಕರಾಗಿರಲು ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ದಾಸರಾಗುವದಕ್ಕೆ ತಂದಿದ್ದೇವೆ. ನಮ್ಮ ಕುಮಾರ್ತೆ ಯರಲ್ಲಿ ಕೆಲವರು ಆಗಲೇ ದಾಸರಾದರು. ಅವರನ್ನು ಬಿಡಿಸಲು ನಮಗೆ ಶಕ್ತಿ ಇಲ್ಲ. ಯಾಕಂದರೆ ನಮ್ಮ ಹೊಲಗಳೂ ದ್ರಾಕ್ಷೇ ತೋಟಗಳೂ ಅನ್ಯರಿಗೆ ಸೇರಿ ದವು ಅಂದರು. ಅವರ ಕೂಗನ್ನೂ ಈ ಮಾತುಗಳನ್ನೂ ನಾನು ಕೇಳಿದಾಗ ಬಹಳ ಕೋಪಿಸಿಕೊಂಡೆನು. ಹೃದಯ ದಲ್ಲಿ ಯೋಚನೆ ಮಾಡಿಕೊಂಡು ಪ್ರಮುಖರನ್ನೂ ಅಧಿಕಾರಸ್ಥರನ್ನೂ ಗದರಿಸಿ ಅವರಿಗೆ--ನೀವು ಪ್ರತಿ ಮನುಷ್ಯನು ಅವನವನ ಸಹೋದರನಿಂದ ಬಡ್ಡಿಯನ್ನು ಒತ್ತಾಯದಿಂದ ತಕ್ಕೊಳ್ಳುತ್ತೀರಿ ಎಂದು ಹೇಳಿ ಅವರ ಮೇಲೆ ದೊಡ್ಡ ಸಭೆಯನ್ನು ನೇಮಿಸಿದನು. ಅವ ರಿಗೆ--ಅನ್ಯರಿಗೆ ಮಾರಲ್ಪಟ್ಟ ಯೆಹೂದ್ಯರಾದ ನಮ್ಮ ಸಹೋದರರನ್ನು ನಾವು ನಮಗೆ ಶಕ್ತಿ ಇದ್ದ ಹಾಗೆ ವಿಮೋಚಿಸಿದೆವು. ನೀವು ನಿಮ್ಮ ಸಹೋದರರನ್ನು ಮಾರಿ ಬಿಡುವಿರೋ? ಇಲ್ಲವೆ ಅವರು ನಮಗೆ ಮಾರ ಲ್ಪಡುವರೋ ಅಂದೆನು. ಆಗ ಅವರು ಮೌನವಾಗಿ ದ್ದರು; ಅವರಿಗೆ ಮಾತು ಇಲ್ಲದೆ ಹೋಯಿತು. ನಾನು ಅವರಿಗೆನೀವು ಮಾಡುವುದು ಒಳ್ಳೇದಲ್ಲ; ನಮ್ಮ ಶತ್ರುಗಳಾದ ಅನ್ಯರ ನಿಂದೆಯ ನಿಮಿತ್ತ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲಾ. ನಾನು ನನ್ನ ಸಹೋದರರೂ ನನ್ನ ಸೇವಕರೂ ಅವರಿಂದ ಹಣ ವನ್ನೂ ಧಾನ್ಯವನ್ನೂ ಒತ್ತಾಯದಿಂದ ತಕ್ಕೊಳ್ಳಬಹು ದಾಗಿತ್ತು. ದಯಮಾಡಿ ಈ ಬಡ್ಡಿಯನ್ನು ಬಿಟ್ಟು ಬಿಡೋಣ. ನೀವು ಅವರಿಂದ ಒತ್ತಾಯದಿಂದ ತೆಗೆದುಕೊಂಡ ಅವರ ಹೊಲಗಳನ್ನೂ ದ್ರಾಕ್ಷಾತೋಟಗಳನ್ನೂ ಇಪ್ಪೇ ತೋಪುಗಳನ್ನೂ ಮನೆಗಳನ್ನೂ ನೂರಕ್ಕೆ ಒಂದಾದ ಹಣವನ್ನೂ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೇಯನ್ನೂ ಇಂದು ಅವರಿಗೆ ತಿರಿಗಿಕೊಡಿರಿ ಎಂದು ಹೇಳಿದೆನು. ಅದಕ್ಕವರುನಾವು ತಿರಿಗಿ ಕೊಡುತ್ತೇವೆ; ಅವರಿಂದ ಏನೂ ಕೇಳು ವದಿಲ್ಲ. ನೀನು ಹೇಳಿದ ಹಾಗೆ ಮಾಡುತ್ತೇವೆ ಅಂದರು. ಆಗ ನಾನು ಯಾಜಕರನ್ನು ಕರೆದು ಅವರು ಈ ಮಾತಿನ ಪ್ರಕಾರ ಮಾಡುವ ಹಾಗೆ ಅವರಿಂದ ಪ್ರಮಾಣವನ್ನು ತಕ್ಕೊಂಡೆನು. ನಾನು ನನ್ನ ಬಟ್ಟೆಯನ್ನು ಝಾಡಿಸಿ -- ಈ ಮಾತಿನ ಪ್ರಕಾರ ಮಾಡದೆ ಇರುವ ಪ್ರತಿ ಮನುಷ್ಯನನ್ನು ದೇವರು ಅವನ ಮನೆಯಿಂದಲೂ ಅವನ ಕಷ್ಟಾರ್ಜಿತದಿಂದಲೂ ಝಾಡಿಸಲಿ. ಅವನು ಇದೇ ಪ್ರಕಾರ ಝಾಡಿಸಲ್ಪಟ್ಟು ಬರಿದಾಗಲಿ ಅಂದೆನು. ಅದಕ್ಕೆ ಸಭೆಯವರೆಲ್ಲರೂ--ಆಮೆನ್ ಎಂದು ಹೇಳಿ ಕರ್ತನನ್ನು ಸ್ತುತಿಸಿದರು. ನನ್ನ ದೇವರೇ, ಜನರು ಈ ಮಾತಿನ ಪ್ರಕಾರ ಮಾಡಿದರು.
- 2 Chronicles 29:10 2 ಪೂರ್ವಕಾಲವೃತ್ತಾಂತ 29:10ಈಗ ಇಸ್ರಾಯೇಲಿನ ದೇವರಾದ ಕರ್ತನ ಉಗ್ರಕೋಪವು ನಮ್ಮನ್ನು ಬಿಟ್ಟು ಹೋಗುವ ಹಾಗೆ ನಾನು ಆತನ ಸಂಗಡ ಒಡಂಬಡಿ ಕೆಯನ್ನು ಮಾಡಲು ಮನಸ್ಸುಳ್ಳವನಾಗಿದ್ದೇನೆ.
- 2 Chronicles 23:16 2 ಪೂರ್ವಕಾಲವೃತ್ತಾಂತ 23:16ಆಗ ಅವರು ಕರ್ತನ ಜನರಾಗಿರುವ ಹಾಗೆ ಯೆಹೋಯಾದನು ತನಗೂ ಸಮಸ್ತ ಜನರಿಗೂ ಅರಸ ನಿಗೂ ಒಡಂಬಡಿಕೆ ಮಾಡಿದನು.
- Exodus 21:2–4 ವಿಮೋಚನಕಾಂಡ 21:2–4ನೀನು ಇಬ್ರಿಯ ದಾಸನನ್ನು ಕೊಂಡುಕೊಂಡರೆ ಅವನು ಆರು ವರುಷ ನಿನಗೆ ಸೇವೆಮಾಡಬೇಕು; ಏಳನೆಯ ವರುಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಅವನು ಹೋಗಲಿ. ಅವನು ಒಬ್ಬನಾಗಿ ಬಂದಿದ್ದರೆ ಒಬ್ಬನಾಗಿಯೇ ಹೋಗ ಬೇಕು. ಅವನು ಮದುವೆಯಾದವನಾಗಿದ್ದರೆ ಅವನ ಹೆಂಡತಿಯು ಅವನ ಸಂಗಡ ಹೋಗಬೇಕು. ಅವನ ಯಜಮಾನನು ಅವನಿಗೆ ಕೊಟ್ಟ ಹೆಂಡತಿಯು ಅವನಿಗೆ ಕುಮಾರರನ್ನೂ ಕುಮಾರ್ತೆಯರನ್ನೂ ಹೆತ್ತಿದ್ದರೆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನವ ರಾಗಿರಬೇಕು. ಅವನು ಒಬ್ಬನಾಗಿಯೇ ಹೋಗಬೇಕು.
- Jeremiah 34:14–15 ಯೆರೆಮೀಯ 34:14–15ಏಳು ವರುಷಗಳ ಕಡೆಯಲ್ಲಿ ಒಬ್ಬೊಬ್ಬನು ತನಗೆ ಮಾರಲ್ಪಟ್ಟಿದ್ದ ತನ್ನ ಸಹೋದರನಾದ ಇಬ್ರಿಯನನ್ನು ಕಳುಹಿಸಬೇಕೆಂದೂ ಅವನು ನಿನಗೆ ಆರು ವರುಷ ಸೇವೆಮಾಡಿದ ಮೇಲೆ ನಿನ್ನ ಕಡೆಯಿಂದ ಅವನನ್ನು ಬಿಡುಗಡೆಯಾಗಿ ಕಳುಹಿಸಬೇಕೆಂದೂ ಹೇಳಿದೆನು; ನಿಮ್ಮ ಪಿತೃಗಳು ನನ್ನ ಮಾತಿಗೆ ಕಿವಿಗೊಡಲಿಲ್ಲ. ಈಗ ನೀವು ತಿರುಗಿ ಕೊಂಡು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಒಬ್ಬೊಬ್ಬನು ತನ್ನ ತನ್ನ ನೆರೆಯವನಿಗೆ ಬಿಡುಗಡೆಯನ್ನು ಸಾರಿದಿರಿ; ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಮನೆ ಯಲ್ಲಿ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಿರಿ.
- Exodus 23:10–11 ವಿಮೋಚನಕಾಂಡ 23:10–11ಆರು ವರುಷ ನಿನ್ನ ಭೂಮಿಗೆ ಬೀಜಹಾಕಿ ಅದರ ಬೆಳೆಯನ್ನು ಕೂಡಿಸಬೇಕು. ಏಳನೆಯ ವರುಷದಲ್ಲಿ ಅದಕ್ಕೆ ವಿಶ್ರಾಂತಿಯನ್ನು ಕೊಟ್ಟು ಅದನ್ನು ಬೀಳು ಬಿಡಬೇಕು. ಆಗ ನಿನ್ನ ಜನರಲ್ಲಿರುವ ಬಡವರು ಅದರಲ್ಲಿ ಬೆಳೆದದ್ದನ್ನು ತಿನ್ನಲಿ; ಅವರು ಬಿಟ್ಟದ್ದನ್ನು ಹೊಲದ ಪಶುಗಳು ತಿನ್ನಲಿ. ಹೀಗೆ ನಿನ್ನ ದ್ರಾಕ್ಷೇ ತೋಟದಲ್ಲಿಯೂ ಎಣ್ಣೇಮರಗಳ ತೋಪಿನಲ್ಲಿಯೂ ಮಾಡಬೇಕು.
Original words (Hebrew)
- word · H1697דָּבָר dâbâr
- Jeremiah · H3414יִרְמְיָה Yirmᵉyâh
- after · H310אַחַר ʼachar
- king · H4428מֶלֶךְ melek
- Zedekiah · H6667צִדְקִיָּה Tsidqîyâh
- made · H3772כָּרַת kârath
- covenant · H1285בְּרִית bᵉrîyth
- people · H5971עַם ʻam
- Jerusalem · H3389יְרוּשָׁלַ͏ִם Yᵉrûwshâlaim
- proclaim · H7121קָרָא qârâʼ
- liberty · H1865דְּרוֹר dᵉrôwr