Jeremiah · chapter 35 · verse 1
Jeremiah 35:1 in Kannada
ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ದಿನಗಳಲ್ಲಿ, ಕರ್ತನಿಂದ ಯೆರೆವಿಾಯನಿಗೆ ಉಂಟಾದ ವಾಕ್ಯವೇನಂದರೆ--
Yehoodada arasanaada yosheeyana maganaada yehoyaakeemana dinagalalli, kartaninda yereviాyanige untaada vaakyavenandare--
Jeremiah 35:1 in English
- King James Version (KJV)
- The word which came unto Jeremiah from the LORD in the days of Jehoiakim the son of Josiah king of Judah, saying,
- World English Bible (WEB)
- The word which came to Jeremiah from the LORD in the days of Jehoiakim the son of Josiah, king of Judah, saying,
- American Standard Version (ASV)
- The word which came unto Jeremiah from Jehovah in the days of Jehoiakim the son of Josiah, king of Judah, saying,
- Bible in Basic English (BBE)
- The word which came to Jeremiah from the Lord, in the days of Jehoiakim, the son of Josiah, king of Judah, saying,
- Darby Translation (DBY)
- The word that came to Jeremiah from Jehovah in the days of Jehoiakim the son of Josiah, the king of Judah, saying,
- Webster's Bible (WBS)
- The word which came to Jeremiah from the LORD in the days of Jehoiakim the son of Josiah king of Judah, saying,
- Young's Literal Translation (YLT)
- The word that hath been unto Jeremiah from Jehovah, in the days of Jehoiakim son of Josiah king of Judah, saying:
Read in context
- 1ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ದಿನಗಳಲ್ಲಿ, ಕರ್ತನಿಂದ ಯೆರೆವಿಾಯನಿಗೆ ಉಂಟಾದ ವಾಕ್ಯವೇನಂದರೆ--
- 2ರೇಕಾಬ್ಯರ ಮನೆಗೆ ಹೋಗಿ ಅವರ ಸಂಗಡ ಮಾತನಾಡಿ ಅವರನ್ನು ಕರ್ತನ ಆಲಯದ ಕೊಠಡಿಗಳಲ್ಲಿ ಒಂದಕ್ಕೆ ಕರೆದುಕೊಂಡು ಹೋಗಿ ಅವರಿಗೆ ದ್ರಾಕ್ಷಾರಸವನ್ನು ಕುಡಿಯ ಕೊಡು
- 3ಆಗ ನಾನು ಹಬಚ್ಚೆನ್ಯನ ಮಗನಾದ ಯೆರೆವಿಾಯನ ಮಗನಾದ ಯಾಜನ್ಯನನ್ನೂ ಅವನ ಸಹೋದರರನ್ನೂ ಕುಮಾರರೆಲ್ಲರನ್ನೂ ರೇಕಾಬ್ಯರ ಸಮಸ್ತ ಮನೆಯ ವರನೂ
Cross references
- 2 Kings 23:35 2 ಅರಸುಗಳು 23:35ಯೆಹೋಯಾಕೀ ಮನು ಬೆಳ್ಳಿಯನ್ನೂ ಬಂಗಾರವನ್ನೂ ಫರೋಹನಿಗೆ ಕೊಟ್ಟನು. ಫರೋಹನೆಕೋವಿನ ಆಜ್ಞೆಯ ಪ್ರಕಾರ ಅವನು ಹಣವನ್ನು ಕೊಡುವಂತೆ ದೇಶಕ್ಕೆ ಕಪ್ಪವನ್ನು ನಿಷ್ಕರ್ಷೆ ಮಾಡಿದನು. ಅವನು ಬೆಳ್ಳಿಯನ್ನೂ ಬಂಗಾರ ವನ್ನೂ ನೇಕೊವೆಂಬ ಫರೋಹನಿಗೆ ಕೊಡುವ ಹಾಗೆ ದೇಶದ ಜನರಿಂದ ಪ್ರತಿ ಮನುಷ್ಯನ ತೆರಿಗೆಯ ಪ್ರಕಾರ ಬಲವಂತವಾಗಿ ತಕ್ಕೊಂಡನು.
- Jeremiah 25:1 ಯೆರೆಮೀಯ 25:1ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮೊದಲನೇ ವರುಷವಾಗಿದ್ದ ಯೆಹೂ ದದ ಅರಸನಾದ ಯೋಷೀಯನ ಮಗನಾದ ಯೆಹೋ ಯಾಕೀಮನ ನಾಲ್ಕನೇ ವರುಷದಲ್ಲಿ ಯೆಹೂದದ ಸಮಸ್ತ ಜನರ ವಿಷಯ ಯೆರೆವಿಾಯನಿಗೆ ಉಂಟಾದ ವಾಕ್ಯವು.
- Jeremiah 1:3 ಯೆರೆಮೀಯ 1:3ಯೆಹೂದದ ಅರಸನಾದ ಯೋಷೀಯನ ಮಗನಾಗಿರುವ ಯೆಹೋಯಾ ಕೀಮನ ದಿನಗಳಲ್ಲಿಯೂ ಕೂಡ ಯೆಹೂದದ ಅರಸ ನಾದ ಯೋಷೀಯನ ಮಗನಾಗಿರುವ ಚಿದ್ಕೀಯನ ಹನ್ನೊಂದನೇ ವರುಷದ ಅಂತ್ಯದ ವರೆಗೂ ಐದನೇ ತಿಂಗಳಲ್ಲಿ ಯೆರೂಸಲೇಮು ಸೆರೆಯಾಗಿ ಒಯ್ಯಲ್ಪಡು ವವರೆಗೂ ಕರ್ತನ ವಾಕ್ಯವು ಉಂಟಾಯಿತು.
- 2 Kings 24:1–6 2 ಅರಸುಗಳು 24:1–6ಅವನ ದಿವಸಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚರನು ಬಂದನು. ಯೆಹೋಯಾಕೀಮನು ಮೂರು ವರುಷ ಅವನ ಸೇವಕನಾಗಿದ್ದು ತರುವಾಯ ಅವನ ಮೇಲೆ ತಿರುಗಿ ಬಿದ್ದನು. ಆದರೆ ಕರ್ತನು ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನ್ಯರ ಗುಂಪುಗಳನ್ನೂ ಅವನ ಮೇಲೆ ಕಳುಹಿಸಿದನು. ಕರ್ತನು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಮಾತಿನ ಪ್ರಕಾರ ಯೆಹೂದವನ್ನು ನಾಶ ಮಾಡುವಂತೆ ಅದರ ಮೇಲೆ ಅವರನ್ನು ಬರಮಾಡಿದನು. ನಿಶ್ಚಯವಾಗಿ ಕರ್ತನ ಅಪ್ಪಣೆಯಿಂದ ಇದು ಯೆಹೂದದ ಮೇಲೆ ಆಯಿತು. ಅದೇನಂದರೆ, ಮನಸ್ಸೆಯು ತನ್ನ ಎಲ್ಲಾ ಕೃತ್ಯಗಳಿಂದ ಮಾಡಿದ ಪಾಪಗಳ ನಿಮಿತ್ತ ಅವರನ್ನು ಆತನು ತನ್ನ ಸಮ್ಮುಖದಿಂದ ತೆಗೆದು ಹಾಕುವದಕ್ಕೋಸ್ಕರವೇ. ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು. ಯೆಹೋಯಾ ಕೀಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಯೆಹೋಯಾಕೀಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಯೆಹೋಯಾಖೀನನು ಅವನಿಗೆ ಬದಲಾಗಿ ಅರಸ ನಾದನು.
- Jeremiah 22:13–19 ಯೆರೆಮೀಯ 22:13–19ಅನೀತಿಯಿಂದ ತನ್ನ ಮನೆಯನ್ನು ಅನ್ಯಾಯದಿಂದ ತನ್ನ ಕೊಠಡಿಗಳನ್ನು ಕಟ್ಟಿಸಿಕೊಳ್ಳು ವವನಿಗೂ ಕೂಲಿಕೊಡದೆ ತನ್ನ ನೆರೆಯವನ ಕೈಯಿಂದ ಸುಮ್ಮನೆ ಕೆಲಸತಕ್ಕೊಳ್ಳುವವನಿಗೂ ಅಯ್ಯೋ! ಅವನು--ನಾನು ವಿಸ್ತಾರವಾದ ಮನೆಯನ್ನೂ ವಿಶಾಲವಾದ ಕೊಠಡಿಗಳನ್ನೂ ಕಟ್ಟಿಕೊಳ್ಳುವೆನೆಂದು ಹೇಳಿ ಕಿಟಕಿಗಳನ್ನು ಕೊರೆದು ದೇವದಾರಿನ ಹಲಿಗೆ ಗಳನ್ನು ಹಾಕಿ ಕೆಂಪು ಬಣ್ಣವನ್ನು ಹಚ್ಚುವವನಿಗೂ ಅಯ್ಯೋ! ನೀನು ದೇವದಾರಿನಲ್ಲಿ ನಿನ್ನನ್ನು ಮುಚ್ಚಿ ಕೊಳ್ಳುವದರಿಂದ ದೊರೆತನ ಮಾಡುವಿಯೋ? ನಿನ್ನ ತಂದೆ ಉಂಡು, ಕುಡಿದು, ನ್ಯಾಯವನ್ನೂ ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾ ಗಲಿಲ್ಲವೋ? ಬಡವನ ಮತ್ತು ದರಿದ್ರನ ನ್ಯಾಯ ವನ್ನು ತೀರಿಸಿದನು. ಆಗ ಒಳ್ಳೇದಾಯಿತು; ನನ್ನನ್ನು ತಿಳುಕೊಳ್ಳುವದು ಇದೇ ಅಲ್ಲವೋ ಎಂದು ಕರ್ತನು ಅನ್ನುತ್ತಾನೆ. ಆದರೆ ನಿನ್ನ ಕಣ್ಣುಗಳು ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ, ಅಪರಾಧವಿಲ್ಲದವನ ರಕ್ತ ಚೆಲ್ಲುವದರ ಮೇಲೆ ಮತ್ತು ಪೀಡೆಯನ್ನೂ ಬಲಾತ್ಕಾರವನ್ನೂ ಮಾಡುವದರ ಮೇಲೆಯೇ ಹೊರತು ಮತ್ತಾವದರ ಮೇಲೆಯೂ ಇರುವದಿಲ್ಲ. ಆದದ ರಿಂದ ಯೋಷೀಯನ ಮಗನಾದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೀಗೆ ಹೇಳುತ್ತಾನೆ--ಅವರು ಅವನನ್ನು ಕುರಿತು ಗೋಳಾಡಿ--ಹಾ, ನನ್ನ ಸಹೋದರನೇ, ಹಾ, ನನ್ನ ಸಹೋದರಿಯೇ ಎಂದು ಅನ್ನುವದಿಲ್ಲ; ಹಾ, ದೊರೆಯೇ, ಹಾ, ಅವನ ವೈಭವವೇ ಎಂದು ಅವನನ್ನು ಕುರಿತು ಗೋಳಾಡುವದಿಲ್ಲ. ಕತ್ತೆಯನ್ನು ಹೂಣಿಡುವ ಪ್ರಕಾರ ಅವನನ್ನು ಹೂಣಿಡುವರು; ಅವನನ್ನು ಎಳಕೊಂಡು ಹೋಗಿ ಯೆರೂಸಲೇಮಿನ ಬಾಗಿಲುಗಳ ಆಚೆಗೆ ಬಿಸಾಡುವರು.
- Jeremiah 36:1 ಯೆರೆಮೀಯ 36:1ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೇ ವರುಷದಲ್ಲಿ ಆದದ್ದೇನಂದರೆ--ಯೆರೆವಿಾಯ ನಿಗೆ ಕರ್ತನಿಂದ ಈ ವಾಕ್ಯ ಉಂಟಾಯಿತು, ಯಾವ ದಂದರೆ--
- Jeremiah 26:1 ಯೆರೆಮೀಯ 26:1ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಆಳ್ವಿಕೆ ಯ ಪ್ರಾರಂಭದಲ್ಲಿ ಈ ವಾಕ್ಯವು ಕರ್ತನಿಂದ ಉಂಟಾ ಯಿತು.
- Jeremiah 46:2 ಯೆರೆಮೀಯ 46:2ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೋಷೀಯನ ಮಗನಾದ ಯೆಹೋ ಯಾಕೀಮನ ನಾಲ್ಕನೇ ವರುಷದಲ್ಲಿ ಹೊಡೆದಂಥ ಐಗುಪ್ತದ ಅರಸನಾದ ಫರೋಹನೆಕೋವಿನ ದಂಡಿಗೆ ವಿರೋಧವಾಗಿ ಪ್ರವಾದಿಯಾದ ಯೆರೆವಿಾಯನಿಗೆ ಉಂಟಾದ ಕರ್ತನ ವಾಕ್ಯವು.
- Daniel 1:1 ದಾನಿಯೇಲನು 1:1ಯೆಹೂದದ ಅರಸನಾದ ಯೆಹೋಯಾ ಕೀಮನ ಆಳಿಕೆಯ ಮೂರನೆಯ ವರುಷ ದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೂ ಸಲೇಮಿಗೆ ಬಂದು ಮುತ್ತಿಗೆ ಹಾಕಿದನು.
- Jeremiah 36:29 ಯೆರೆಮೀಯ 36:29ಯೆಹೂದದ ಅರಸನಾದ ಯೆಹೋಯಾಕೀಮನಿಗೆ ನೀನು ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ಬಾಬೆಲಿನ ಅರಸನು ನಿಶ್ಚಯವಾಗಿ ಬಂದು ಈ ದೇಶವನ್ನು ನಾಶಮಾಡಿ ಮನುಷ್ಯರನ್ನೂ ಪ್ರಾಣ ಗಳನ್ನೂ ಅದರೊಳಗಿಂದ ಹಾಳು ಮಾಡುವದು ಖಂಡಿತ ಎಂದು ಇದರಲ್ಲಿ ಯಾಕೆ ಬರೆದಿದ್ದೀ ಎಂದು ಹೇಳಿ ನೀನು ಈ ಸುರಳಿಯನ್ನು ಸುಟ್ಟಿದ್ದೀ.
- Jeremiah 36:9 ಯೆರೆಮೀಯ 36:9ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾ ಕೀಮನ ಐದನೇ ವರುಷದ ಒಂಭತ್ತನೇ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿರುವ ಎಲ್ಲಾ ಜನರಿಗೂ ಯೆಹೂದದ ಪಟ್ಟಣಗಳಿಂದ ಯೆರೂಸಲೇಮಿಗೆ ಬಂದ ಜನರೆಲ್ಲರಿಗೂ ಕರ್ತನ ಸನ್ನಿಧಿಯಲ್ಲಿ ಉಪವಾಸವನ್ನು ಸಾರಿದರು.
- 2 Chronicles 36:5–8 2 ಪೂರ್ವಕಾಲವೃತ್ತಾಂತ 36:5–8ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಆದರೆ ತನ್ನ ದೇವ ರಾದ ಕರ್ತನ ಸಮ್ಮುಖದಲ್ಲಿ ಅವನು ಕೆಟ್ಟದ್ದನ್ನು ಮಾಡಿ ದನು. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬೆಲಿಗೆ ಒಯ್ಯುವ ಹಾಗೆ ಅವನಿಗೆ ಸಂಕೋಲೆಗಳನ್ನು ಹಾಕಿಸಿದನು. ಇದಲ್ಲದೆ ನೆಬೂಕದ್ನೆಚ್ಚರನು ಕರ್ತನ ಮನೆಯ ಪಾತ್ರೆಗಳಲ್ಲಿ ಕೆಲವನ್ನು ಬಾಬೆಲಿಗೆ ತಕ್ಕೊಂಡು ಹೋಗಿ ಬಾಬೆಲಿ ನಲ್ಲಿರುವ ತನ್ನ ಮಂದಿರದಲ್ಲಿ ಇರಿಸಿದನು. ಆದರೆ ಯೆಹೋಯಾಕೀಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಅಸಹ್ಯಗಳೂ ಅವನಲ್ಲಿ ಕಂಡು ಕೊಂಡದ್ದೂ ಇಗೋ, ಅವು ಇಸ್ರಾಯೇಲ್ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಆಳಿದನು.