Jeremiah · chapter 36 · verse 24
Jeremiah 36:24 in Kannada
ಆದಾಗ್ಯೂ ಈ ವಾಕ್ಯಗಳನ್ನೆಲ್ಲಾ ಕೇಳಿದ ಅರಸನಾದರೂ ಅವನ ಸೇವಕರಲ್ಲಿ ಒಬ್ಬನಾದರೂ ಹೆದರಲಿಲ್ಲ, ತಮ್ಮವಸ್ತ್ರ ಗಳನ್ನು ಹರಕೊಳ್ಳಲಿಲ್ಲ.
Aadaagyoo ee vaakyagalannellaa kelida arasanaadaroo avana sevakaralli obbanaadaroo hedaralilla, tammavastra galannu harakollalilla.
Jeremiah 36:24 in English
- King James Version (KJV)
- Yet they were not afraid, nor rent their garments, [neither] the king, nor any of his servants that heard all these words.
- World English Bible (WEB)
- The king and his servants who heard all these words were not afraid, and didn’t tear their garments.
- American Standard Version (ASV)
- And they were not afraid, nor rent their garments, neither the king, nor any of his servants that heard all these words.
- Bible in Basic English (BBE)
- But they had no fear and gave no signs of grief, not the king or any of his servants, after hearing all these words.
- Darby Translation (DBY)
- And they were not afraid, nor rent their garments, [neither] the king nor any of his servants that heard all these words.
- Webster's Bible (WBS)
- Yet they were not afraid, nor rent their garments, [neither] the king, nor any of his servants that heard all these words.
- Young's Literal Translation (YLT)
- And the king and all his servants who are hearing all these words have not been afraid, nor rent their garments.
Read in context
- 22ಆಗ ಒಂಭತ್ತನೇ ತಿಂಗಳಲ್ಲಿ ಅರಸನು ಚಳಿಗಾಲದ ಮನೆಯಲ್ಲಿ ಕೂತುಕೊಂಡಿದ್ದನು; ಅವನ ಮುಂದೆ ಅಗ್ಗಿಷ್ಟಿಕೆಯಲ್ಲಿ ಬೆಂಕಿ ಉರಿಯುತ್ತಿತ್ತು.
- 23ಆಗ ಆದದ್ದೇನಂದರೆ--ಯೆಹೂದಿಯು ಮೂರು ನಾಲ್ಕು ಪುಟಗಳನ್ನು ಓದಿದ ಮೇಲೆ ಅದನ್ನು ಚೂರಿ ಯಿಂದ ಕೊಯ್ದು ಅಗ್ಗಿಷ್ಟಿಕೆಯಲ್ಲಿದ್ದ ಬೆಂಕಿಯೊಳಗೆ ಸುರಳಿಯನ್ನೆಲ್ಲಾ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಸುಟ್ಟು ಹೋಗುವ ವರೆಗೂ ಹಾಕಿಬಿಟ್ಟನು.
- 24ಆದಾಗ್ಯೂ ಈ ವಾಕ್ಯಗಳನ್ನೆಲ್ಲಾ ಕೇಳಿದ ಅರಸನಾದರೂ ಅವನ ಸೇವಕರಲ್ಲಿ ಒಬ್ಬನಾದರೂ ಹೆದರಲಿಲ್ಲ, ತಮ್ಮವಸ್ತ್ರ ಗಳನ್ನು ಹರಕೊಳ್ಳಲಿಲ್ಲ.
- 25ಹೀಗಾದರೂ ಎಲ್ನಾಥಾ ನನೂ ದೆಲಾಯನೂ ಗೆಮರ್ಯನೂ ಆ ಸುರಳಿಯು ಸುಡಲ್ಪಡದ ಹಾಗೆ ಅರಸನಿಗೆ ಬಿನ್ನಹ ಮಾಡಿದರು; ಆದರೆ ಅವನು ಅವರಿಗೆ ಕಿವಿಗೊಡಲಿಲ್ಲ.
- 26ಅರಸನು ಎರಖ್ಮೆಯೆಲನ ಮಗನಾದ ಯೆರೆಮ್ಮೇಲನಿಗೂ ಅಜ್ರಿ ಯೇಲನ ಮಗನಾದ ಸೆರಾಯನಿಗೂ ಅಬ್ದೆಯೇಲನ ಮಗನಾದ ಶೆಲೆಮ್ಯನಿಗೂ ಲೇಖಕನಾದ ಬಾರೂಕ ನನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ಹಿಡಿಯ ಬೇಕೆಂದು ಆಜ್ಞಾಪಿಸಿದನು; ಆದರೆ ಕರ್ತನು ಅವರನ್ನು ಅಡಗಿಸಿದನು.
Cross references
- Jeremiah 36:16 ಯೆರೆಮೀಯ 36:16ಆಗ ಆದದ್ದೇನಂದರೆ--ಅವರು ಆ ವಾಕ್ಯಗಳನ್ನೆಲ್ಲಾ ಕೇಳಿದ ಮೇಲೆ ಒಬ್ಬರಿಗೊಬ್ಬರು ಹೆದರಿಕೊಂಡು--ನಾವು ನಿಶ್ಚಯವಾಗಿ ಈ ವಾಕ್ಯಗಳನ್ನೆಲ್ಲಾ ಅರಸನಿಗೆ ತಿಳಿಸುತ್ತೇ ವೆಂದು ಬಾರೂಕನಿಗೆ ಹೇಳಿದರು.
- Psalm 36:1 ಕೀರ್ತನೆಗಳು 36:1ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವದರಿಂದ ಅವನ ಕಣ್ಣೆದು ರಿಗೆ ದೇವರ ಭಯವೇ ಇಲ್ಲ.
- 2 Kings 19:1–2 2 ಅರಸುಗಳು 19:1–2ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಣೀತಟ್ಟಿನಿಂದ ತನ್ನನ್ನು ಮುಚ್ಚಿಕೊಂಡು ಕರ್ತನ ಮನೆಯಲ್ಲಿ ಪ್ರವೇಶಿಸಿದನು. ಇದಲ್ಲದೆ ಅವನು ಗೋಣೀತಟ್ಟನ್ನು ಮುಚ್ಚಿಕೊಂಡ ಮನೆವಾರ್ತೆಯವ ನಾದ ಎಲ್ಯಾಕೀಮನನ್ನೂ ಲೇಖಕನಾದ ಶೆಬ್ನನನ್ನೂ ಯಾಜಕರ ಹಿರಿಯರನ್ನೂ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನ ಬಳಿಗೆ ಕಳುಹಿಸಿದನು.
- Jonah 3:6 ಯೋನ 3:6ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು.
- 1 Kings 21:27 1 ಅರಸುಗಳು 21:27ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ ಏನಾಯಿತಂದರೆ, ಅವನು ತನ್ನ ವಸ್ತ್ರಗಳನ್ನು ಹರಿದು ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು ಉಪವಾಸಮಾಡಿ ಗೋಣಿಯಲ್ಲಿ ಮಲಗಿಕೊಂಡು ಮೆಲ್ಲಗೆ ನಡೆದನು.
- Psalm 64:5 ಕೀರ್ತನೆಗಳು 64:5ಕೆಟ್ಟಕಾರ್ಯದಲ್ಲಿ ಅವರು ತಮ್ಮನ್ನು ತಾವೇ ಪ್ರೋತ್ಸಾಹ ಮಾಡಿಕೊಳ್ಳುತ್ತಾರೆ; ಬಲೆಗಳನ್ನು ಒಡ್ಡು ವದಕ್ಕೆ ಮಾತನಾಡುತ್ತಾ--ನಮ್ಮನ್ನು ನೋಡುವವ ರಾರೆಂದು ಹೇಳುತ್ತಾರೆ.
- 2 Chronicles 34:19–31 2 ಪೂರ್ವಕಾಲವೃತ್ತಾಂತ 34:19–31ಅರಸನು ನ್ಯಾಯಪ್ರಮಾಣದ ವಾಕ್ಯಗಳನ್ನು ಕೇಳಿ ದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡನು. ಅರಸನು ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ ನಿಗೂ ವಿಾಕನ ಮಗನಾದ ಅಬ್ದೋನನಿಗೂ ರಾಯಸದ ವನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯ ನಿಗೂ ಆಜ್ಞಾಪಿಸಿ-- ನೀವು ಹೋಗಿ ನನಗೋಸ್ಕ ರವೂ ಇಸ್ರಾಯೇಲಿನಲ್ಲಿಯೂ ಯೆಹೂದದಲ್ಲಿಯೂ ಉಳಿದವರಿಗೋಸ್ಕರವೂ ಸಿಕ್ಕಿದ ಪುಸ್ತಕದ ಮಾತು ಗಳನ್ನು ಕುರಿತು ಕರ್ತನನ್ನು ವಿಚಾರಿಸಿರಿ. ಯಾಕಂದರೆ ನಮ್ಮ ಪಿತೃಗಳು ಈ ಪುಸ್ತಕದಲ್ಲಿ ಬರೆದ ಎಲ್ಲಾದರ ಪ್ರಕಾರ ಮಾಡಲು ಕರ್ತನ ವಾಕ್ಯವನ್ನು ಕೈಕೊಳ್ಳದೆ ಇದ್ದದರಿಂದ ನಮ್ಮ ಮೇಲೆ ಸುರಿದ ಕರ್ತನ ಕೋಪವು ದೊಡ್ಡದಾಗಿದೆ ಎಂದು ಹೇಳಿದನು. ಆಗ ಹಿಲ್ಕೀ ಯನೂ ಅರಸನಿಂದ ನೇಮಿಸಲ್ಪಟ್ಟವರೂ ಹಸ್ರನ ಮಗನೂ ತೊಕ್ಹತನ ಮಗನೂ ವಸ್ತ್ರಗಳ ಕಾವಲುಗಾ ರನೂ ಆದ ಶಲ್ಲೂಮನ ಹೆಂಡತಿಯಾಗಿರುವ ಪ್ರವಾದಿ ನಿಯಾದ ಹುಲ್ದಳ ಬಳಿಗೆ ಹೋಗಿ ಅವಳ ಸಂಗಡ ಅದನ್ನು ಕುರಿತು ಮಾತನಾಡಿದರು. (ಅವಳು ಯೆರೂ ಸಲೇಮಿನೊಳಗೆ ಮಹಾವಿದ್ಯಾಲಯದಲ್ಲಿ ವಾಸವಾಗಿ ದ್ದಳು.) ಆಗ ಅವಳು--ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಹೇಳಬೇಕಾದದ್ದೇನಂದರೆ ಇಗೋ, ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ ಯೆಹೂದದ ಅರಸನ ಮುಂದೆ ಅವರು ಓದಿದ ಪುಸ್ತಕದಲ್ಲಿ ಬರೆ ಯಲ್ಪಟ್ಟ ಎಲ್ಲಾ ಶಾಪಗಳನ್ನೂ ಬರಮಾಡುವೆನು. ಯಾಕಂದರೆ ತಮ್ಮ ಸಮಸ್ತ ಕೈ ಕ್ರಿಯೆಗಳಿಂದ ನನಗೆ ಕೋಪವನ್ನೆಬ್ಬಿಸುವ ಹಾಗೆ ಅವರು ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಸುರಿಸಲ್ಪಡುವದು; ಅದು ಆರಿಹೋಗುವದಿಲ್ಲ. ಆದರೆ ಕರ್ತನಿಂದ ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ--ನೀನು ಕೇಳಿದ ಮಾತುಗ ಳನ್ನು ಕುರಿತು ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ನೀನು ಈ ಸ್ಥಳಕ್ಕೆ ವಿರೋಧ ವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ಆತನ ಮುಂದೆ ನಿನ್ನನ್ನು ತಗ್ಗಿಸಿಕೊಂಡಿ. ನಿನ್ನನ್ನು ನನ್ನ ಮುಂದೆ ತಗ್ಗಿಸಿ ಕೊಂಡು ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದರಿಂದ ನಾನು ಅವನ ಮೊರೆಯನ್ನು ಕೇಳಿದೆನೆಂದು ಕರ್ತನು ಹೇಳುತ್ತಾನೆ. ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ಸಮಾಧಾನದಿಂದ ನಿನ್ನ ಸಮಾ ಧಿಗೆ ಸೇರಿಸಲ್ಪಡುವಿ. ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ನೋಡುವದಿಲ್ಲ ಎಂದು ಕರ್ತನು ಹೇಳುತ್ತಾನೆ ಎಂದು ಹೇಳಿದಳು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ಹೇಳಿದರು. ಆಗ ಅರಸನು ಕರೇ ಕಳುಹಿಸಿ ಯೆಹೂದದ ಯೆರೂಸಲೇಮಿನ ಹಿರಿಯರೆಲ್ಲರನ್ನು ತನ್ನ ಬಳಿಯಲ್ಲಿ ಕೂಡಿಸಿದನು. ಆಗ ಅರಸನೂ ಯೆಹೂದದ ಸಮಸ್ತ ಮನುಷ್ಯರೂ ಯೆರೂಸಲೇಮಿನ ನಿವಾಸಿಗಳೂ ಯಾಜ ಕರೂ ಲೇವಿಯರೂ ಹಿರಿಕಿರಿಯರಾದ ಸಮಸ್ತ ಜನರೂ ಕರ್ತನ ಆಲಯಕ್ಕೆ ಹೋದರು. ಅವನು ಕರ್ತನ ಆಲಯದಲ್ಲಿ ಕಂಡುಕೊಂಡ ಒಡಂಬಡಿಕೆಯ ಪುಸ್ತಕದ ಮಾತುಗಳನ್ನೆಲ್ಲಾ ಅವರು ಕೇಳುವ ಹಾಗೆ ಓದಿದನು. ಅರಸನು ತನ್ನ ಸ್ಥಳದಲ್ಲಿ ನಿಂತುಕೊಂಡು ಕರ್ತನನ್ನು ಹಿಂಬಾಲಿಸುವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನೂ ತನ್ನ ಪೂರ್ಣಹೃದಯದಿಂದಲೂ ತನ್ನ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳ ಹಾಗೆ ಮಾಡುವದಕ್ಕೂ ಕರ್ತನ ಮುಂದೆ ಒಡಂಬಡಿಕೆ ಮಾಡಿದನು.
- Genesis 37:29 ಆದಿಕಾಂಡ 37:29ರೂಬೇನನು ತಗ್ಗಿನ ಬಳಿಗೆ ತಿರಿಗಿ ಬಂದಾಗ ಇಗೋ, ಯೋಸೇಫನು ತಗ್ಗಿನಲ್ಲಿ ಇಲ್ಲದ್ದರಿಂದ ತನ್ನ ವಸ್ತ್ರಗಳನ್ನು ಹರಿದು ಕೊಂಡನು.
- Romans 3:18 ರೋಮಾಪುರದವರಿಗೆ 3:18ಅವರ ಕಣ್ಣೆದುರಿಗೆ ದೇವರ ಭಯವೇ ಇಲ್ಲ ಎಂಬವುಗಳೇ.
- Isaiah 26:11 ಯೆಶಾಯ 26:11ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
- Jeremiah 5:3 ಯೆರೆಮೀಯ 5:3ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.