Jeremiah · chapter 4 · verse 1
Jeremiah 4:1 in Kannada
ಓ ಇಸ್ರಾಯೇಲೇ, ನೀನು ತಿರುಗಿಕೊಂಡರೆ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ; ನೀನು ನಿನ್ನ ಅಸಹ್ಯಗಳನ್ನು ನನ್ನ ಎದುರಿನಿಂದ ತೊಲಗಿಸಿದರೆ ಕದಲದೆ ಇರುವಿ.
O israayele, neenu tirugikondare nanna balige tirugiko endu kartanu annuttaane; neenu ninna asahyagalannu nanna edurininda tolagisidare kadalade iruvi.
Jeremiah 4:1 in English
- King James Version (KJV)
- If thou wilt return, O Israel, saith the LORD, return unto me: and if thou wilt put away thine abominations out of my sight, then shalt thou not remove.
- World English Bible (WEB)
- “If you will return, Israel,” says the LORD, “if you will return to me, and if you will put away your abominations out of my sight; then you will not be removed;
- American Standard Version (ASV)
- If thou wilt return, O Israel, saith Jehovah, if thou wilt return unto me, and if thou wilt put away thine abominations out of my sight; then shalt thou not be removed;
- Bible in Basic English (BBE)
- If you will come back, O Israel, says the Lord, you will come back to me: and if you will put away your disgusting ways, you will not be sent away from before me.
- Darby Translation (DBY)
- If thou wilt return, O Israel, saith Jehovah, return unto me; and if thou wilt put away thine abominations out of my sight, then shalt thou not be a wanderer;
- Webster's Bible (WBS)
- If thou wilt return, O Israel, saith the LORD, return to me: and if thou wilt put away thy abominations out of my sight, then shalt thou not remove.
- Young's Literal Translation (YLT)
- If thou dost turn back, O Israel, An affirmation of Jehovah, unto Me turn back, And if thou dost turn aside Thine abominations from My face, Then thou dost not bemoan.
Read in context
- 1ಓ ಇಸ್ರಾಯೇಲೇ, ನೀನು ತಿರುಗಿಕೊಂಡರೆ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ; ನೀನು ನಿನ್ನ ಅಸಹ್ಯಗಳನ್ನು ನನ್ನ ಎದುರಿನಿಂದ ತೊಲಗಿಸಿದರೆ ಕದಲದೆ ಇರುವಿ.
- 2ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿ ಯಿಂದಲೂ ಕರ್ತನ ಜೀವದಾಣೆ ಎಂದು ಪ್ರಮಾಣಮಾಡುವಿ; ಆಗ ಜನಾಂಗಗಳು ಆತನಲ್ಲಿ ಆಶೀರ್ವದಿಸಿ ಕೊಳ್ಳುವವು; ಮತ್ತು ಆತನಲ್ಲಿ ಹೊಗಳಿಕೊಳ್ಳುವವು.
- 3ಕರ್ತನು ಯೆಹೂದದವರಿಗೂ ಯೆರೂಸಲೇಮಿ ನವರಿಗೂ ಹೀಗೆ ಹೇಳುತ್ತಾನೆ--ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನಿಮ್ಮ ಬಂಜರು ಭೂಮಿಯನ್ನು ಉಳಿರಿ; ಮುಳ್ಳುಗಳಲ್ಲಿ ಬೀಜ ಬಿತ್ತಬೇಡಿರಿ.
Cross references
- Joel 2:12 ಯೋವೇಲ 2:12ಹೀಗಿರುವದರಿಂದ ಈಗ ಕರ್ತನು ಅನ್ನುವದೇ ನಂದರೆ--ಪೂರ್ಣ ಹೃದಯದಿಂದಲೂ ಉಪವಾಸ ದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದ ಲೂ ನನ್ನ ಕಡೆಗೆ ತಿರುಗಿಕೊಳ್ಳಿರಿ.
- Jeremiah 3:22 ಯೆರೆಮೀಯ 3:22ಹಿಂಜರಿದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಹಿಂಜರಿಯುವಿಕೆಯನ್ನು ನಾನು ಸ್ವಸ್ಥಮಾಡುವೆನು ಎಂದು ಕರ್ತನು ಅನ್ನುತ್ತಾನೆ. ಇಗೋ, ನಿನ್ನ ಬಳಿಗೆ ಬರುತ್ತೇವೆ; ನೀನು ದೇವರಾದ ನಮ್ಮ ಕರ್ತನಾಗಿದ್ದೀ.
- Ezekiel 43:9 ಯೆಹೆಜ್ಕೇಲನು 43:9ಈಗ ಅವರು ಅವರ ವ್ಯಭಿಚಾರವನ್ನು ಮತ್ತು ಅವರ ಅರಸರ ಹೆಣಗಳನ್ನು ನನ್ನಿಂದ ದೂರವಾಗಿಡಲಿ, ನಾನು ಅವರ ಮಧ್ಯದಲ್ಲಿ ಎಂದೆಂದಿಗೂ ವಾಸಿಸುತ್ತೇನೆ ಅಂದನು.
- Genesis 35:2 ಆದಿಕಾಂಡ 35:2ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ--ನಿಮ್ಮ ಮಧ್ಯದಲ್ಲಿರುವ ಅನ್ಯದೇವ ರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ; ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ;
- Jeremiah 3:12 ಯೆರೆಮೀಯ 3:12ನೀನು ಹೋಗಿ ಉತ್ತರ ದಿಕ್ಕಿಗೆ ಈ ಮಾತುಗಳನ್ನು ಸಾರು; ಯಾವವಂದರೆ--ಹಿಂದಿ ರುಗಿದ ಇಸ್ರಾಯೇಲೇ, ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ. ನಾನು ನನ್ನ ಕೋಪವನ್ನು ನಿನ್ನ ಮೇಲೆ ಬೀಳ ಮಾಡುವದಿಲ್ಲ; ನಾನು ದಯಾಪರನು ಎಂದು ಕರ್ತನು ಅನ್ನುತ್ತಾನೆ, ಎಂದೆಂದಿಗೂ ಕೋಪವಿಟ್ಟು ಕೊಳ್ಳುವದಿಲ್ಲ.
- Jeremiah 25:5 ಯೆರೆಮೀಯ 25:5ಅವರು ಹೇಳಿದ್ದೇ ನಂದರೆ--ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನು ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ.
- Jeremiah 3:1 ಯೆರೆಮೀಯ 3:1ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಟ್ಟಾಗ ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನವಳಾದರೆ ಅವನು ಇನ್ನು ಅವಳ ಹತ್ತಿರ ಹಿಂತಿರುಗುವನೋ? ಆ ದೇಶವು ಬಹಳವಾಗಿ ಅಪವಿತ್ರವಾಗುವದಿಲ್ಲವೋ? ನೀನು ಅನೇಕ ಮಿಂಡರ ಸಂಗಡ ಸೂಳೆತನ ಮಾಡಿದ್ದೀ; ಆದಾಗ್ಯೂ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ.
- Judges 10:16 ನ್ಯಾಯಸ್ಥಾಪಕರು 10:16ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು.
- 2 Kings 23:13 2 ಅರಸುಗಳು 23:13ಇದಲ್ಲದೆ ಯೆರೂಸಲೇಮಿನ ಮುಂದೆ ಮೋಸದ ಬೆಟ್ಟದ ಬಲ ಪಾರ್ಶ್ವದಲ್ಲಿದ್ದ ಚೀದೋನ್ಯರ ಅಸಹ್ಯಕರವಾದ ಅಷ್ಟೋ ರೆತಿಗೂ ಮೋವಾಬ್ಯರ ಅಸಹ್ಯಕರವಾದ ಕೆಮೋಷ ನಿಗೂ ಅಮ್ಮೋನಿನ ಮಕ್ಕಳ ಅಸಹ್ಯಕರವಾದ ಮಿಲ್ಕೋ ಮ್ನಿಗೂ ಇಸ್ರಾಯೇಲಿನ ಅರಸನಾದ ಸೊಲೊ ಮೋನನು ಕಟ್ಟಿಸಿದ ಉನ್ನತ ಸ್ಥಳಗಳನ್ನೂ ಅರಸನು ಹೊಲೆಮಾಡಿ
- 1 Samuel 7:3 1 ಸಮುವೇಲನು 7:3ಆಗ ಸಮುವೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ--ನೀವು ನಿಮ್ಮ ಪೂರ್ಣಹೃದಯದಿಂದ ಕರ್ತನ ಕಡೆಗೆ ತಿರುಗಿ ನಿಮ್ಮಲ್ಲಿರುವ ಅನ್ಯದೇವರುಗಳನ್ನೂ ಅಷ್ಟೋ ರೆತ್ನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ ನಿಮ್ಮ ಹೃದಯವನ್ನು ಕರ್ತನಿಗೆ ಸಿದ್ಧಮಾಡಿ ಆತನೊಬ್ಬನನ್ನೇ ಸೇವಿಸಿದರೆ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಗಳೊ ಳಗಿಂದ ತಪ್ಪಿಸುವನು.
- 2 Kings 23:24 2 ಅರಸುಗಳು 23:24ಇದಲ್ಲದೆ ಯಾಜಕನಾದ ಹಿಲ್ಕೀಯನು ಕರ್ತನ ಮನೆಯಲ್ಲಿ ಕಂಡುಕೊಂಡ ಪುಸ್ತಕದಲ್ಲಿ ಬರೆಯಲ್ಪಟ್ಟ ನ್ಯಾಯ ಪ್ರಮಾಣದ ಮಾತುಗಳನ್ನು ಯೋಷೀಯನು ಈಡೇ ರಿಸುವ ಹಾಗೆ ಯೆಹೂದ ದೇಶದಲ್ಲಿಯೂ ಯೆರೂ ಸಲೇಮಿನಲ್ಲಿಯೂ ಕಂಡು ಹಿಡಿಯಲ್ಪಟ್ಟ ಯಕ್ಷಿಣಿ ಗಾರರನ್ನೂ ಮಂತ್ರಗಾರರನ್ನೂ ವಿಗ್ರಹಗಳನ್ನೂ ಮಣ್ಣು ದೇವರುಗಳನ್ನೂ ಎಲ್ಲಾ ಅಸಹ್ಯಕರವಾದವುಗಳನ್ನೂ ತೆಗೆದುಹಾಕಿ ಬಿಟ್ಟನು.
- Ephesians 4:22–31 ಎಫೆಸದವರಿಗೆ 4:22–31ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು. ನೀವು ನಿಮ್ಮ ಮನಸ್ಸಿನಭಾವದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ನೀತಿಯಲ್ಲಿಯೂ ನಿಜವಾದ ಪರಿಶುದ್ಧತೆಯಲ್ಲಿಯೂ ನಿರ್ಮಿಸಲ್ಪಟ್ಟಿದೆ. ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ. ಕೋಪಮಾಡಬೇಕಾದರೂ ಪಾಪ ಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ; ಸೈತಾನನಿಗೆ ಅವಕಾಶ ಕೊಡಲೇಬೇಡಿರಿ. ಕಳವು ಮಾಡುವವನು ಇನ್ನು ಮೇಲೆ ಕಳವು ಮಾಡದೆ ಕೈಯಿಂದ ಯಾವದಾದರೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕೊರತೆಯಲ್ಲಿರುವವರಿಗೆ ಕೊಡು ವದಕ್ಕೆ ಅವನಿಂದಾ ಗುವದು. ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ. ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ. ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರ ಮಾಡಿರಿ.ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.