Jeremiah · chapter 4 · verse 13
Jeremiah 4:13 in Kannada
ಇಗೋ, ಮೇಘಗಳ ಹಾಗೆ ಏರಿ ಬರುವನು; ಆತನ ರಥಗಳು ಬಿರುಗಾಳಿಯ ಹಾಗೆ ಇರುವವು, ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮಗೆ ಅಯ್ಯೋ, ಹಾಳಾದೆವು.
Igo, meghagala haage eri baruvanu; aatana rathagalu birugaaliya haage iruvavu, aatana kuduregalu haddugaliginta teevravaagive. Namage ayyo, haalaadevu.
Jeremiah 4:13 in English
- King James Version (KJV)
- Behold, he shall come up as clouds, and his chariots [shall be] as a whirlwind: his horses are swifter than eagles. Woe unto us! for we are spoiled.
- World English Bible (WEB)
- Behold, he will come up as clouds, and his chariots will be as the whirlwind. His horses are swifter than eagles. Woe to us! For we are ruined.
- American Standard Version (ASV)
- Behold, he shall come up as clouds, and his chariots [shall be] as the whirlwind: his horses are swifter than eagles. Woe unto us! for we are ruined.
- Bible in Basic English (BBE)
- See, he will come up like the clouds, and his war-carriages like the storm-wind: his horses are quicker than eagles. Sorrow is ours, for destruction has come on us.
- Darby Translation (DBY)
- Behold, he cometh up as clouds, and his chariots are as a whirlwind; his horses are swifter than eagles. Woe unto us! for we are destroyed.
- Webster's Bible (WBS)
- Behold, he shall come up as clouds, and his chariots [shall be] as a whirlwind: his horses are swifter than eagles. Woe to us! for we are laid waste.
- Young's Literal Translation (YLT)
- Lo, as clouds he cometh up, And as a hurricane his chariots, Lighter than eagles have been his horses, Woe to us, for we have been spoiled.
Read in context
- 11ಆ ಸಮಯದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಹೇಳಲ್ಪಡುವದೇನಂದರೆ--ಒಣ ಗಾಳಿಯು ಅರಣ್ಯದ ಉನ್ನತ ಸ್ಥಳಗಳಿಂದ ನನ್ನ ಜನರ ಕುಮಾರಿಯ ಕಡೆಗೆ ಬರುತ್ತದೆ. ಅದು ತೂರುವದಕ್ಕೂ ಶುದ್ಧಮಾಡುವದಕ್ಕೂ ಆಗತಕ್ಕದ್ದಲ್ಲ.
- 12ಅದಕ್ಕಿಂತ ತುಂಬ ಗಾಳಿ ಆ ಸ್ಥಳಗಳಿಂದ ನನ್ನ ಬಳಿಗೆ ಬರುವದು; ಈಗಲೂ ನಾನು ಅವರಿಗೆ ವಿರೋಧವಾಗಿ ನ್ಯಾಯ ತೀರ್ಪುಗಳನ್ನು ಕೊಡುವೆನು.
- 13ಇಗೋ, ಮೇಘಗಳ ಹಾಗೆ ಏರಿ ಬರುವನು; ಆತನ ರಥಗಳು ಬಿರುಗಾಳಿಯ ಹಾಗೆ ಇರುವವು, ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮಗೆ ಅಯ್ಯೋ, ಹಾಳಾದೆವು.
- 14ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
- 15ಒಂದು ಶಬ್ದವು ದಾನಿನಿಂದ ಪ್ರಕಟ ಮಾಡುತ್ತದೆ; ಎಫ್ರಾಯಾಮಿನ ಬೆಟ್ಟದಿಂದ ಆಪತ್ತನ್ನು ತಿಳಿಯಪಡಿಸುತ್ತದೆ.
Cross references
- Isaiah 19:1 ಯೆಶಾಯ 19:1ಐಗುಪ್ತ್ಯರ ವಿಷಯವಾದ ದೈವೋಕ್ತಿ; ಇಗೋ ಕರ್ತನು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಐಗುಪ್ತಕ್ಕೆ ಬರುತ್ತಾನೆ; ಆತನು ಸಮ್ಮುಖ ನಾದಾಗ ಐಗುಪ್ತದ ವಿಗ್ರಹಗಳು ನಡುಗುವವು, ಐಗುಪ್ತ್ಯರ ಹೃದಯವು ಅವರ ಮಧ್ಯೆ ಕರಗುವದು.
- Isaiah 66:15 ಯೆಶಾಯ 66:15ಇಗೋ, ಕರ್ತನು ಬೆಂಕಿಯೊಡನೆ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವವು; ಉಗ್ರದಿಂದ ತನ್ನ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತನ್ನ ಗದರಿಕೆ ಯನ್ನೂ ಸಲ್ಲಿಸುವದಕ್ಕಾಗಿಯೇ ಬರುವನು.
- Habakkuk 1:8 ಹಬಕ್ಕೂಕ 1:8ಅವರ ಕುದುರೆಗಳು ಸಹ ಚಿರತೆಗಳಿಗಿಂತ ವೇಗ ವಾಗಿಯೂ ಸಂಜೆಯ ತೋಳಗಳಿಗಿಂತ ಚುರುಕಾ ಗಿಯೂ ಅವೆ; ಅವರ ಕುದುರೆ ಸವಾರರು ತಾವೇ ಹರಡಿಕೊಳ್ಳುವರು; ಅವರ ಸವಾರರು ದೂರದಿಂದ ಬರುವರು; ತಿನ್ನುವದಕ್ಕೆ ತ್ವರೆಪಡುವ ಹದ್ದಿನಂತೆ ಹಾರಿಬರುವರು.
- Lamentations 4:19 ಪ್ರಲಾಪಗಳು 4:19ನಮ್ಮನ್ನು ಹಿಂಸಿಸುವವರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತ ತೀವ್ರ ವಾಗಿದ್ದಾರೆ; ಅವರು ಪರ್ವತಗಳ ಮೇಲೆ ನಮ್ಮನ್ನು ಹಿಂದಟ್ಟಿ ಅರಣ್ಯದಲ್ಲಿ ಹೊಂಚುಹಾಕಿದರು.
- Isaiah 5:28 ಯೆಶಾಯ 5:28ಅವರ ಬಾಣಗಳು ಹದವಾಗಿವೆ, ಅವರ ಬಿಲ್ಲುಗಳು ಬೊಗ್ಗಿವೆ, ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ ಅವರ ಚಕ್ರಗಳು ಬಿರು ಗಾಳಿಯಂತೆಯೂ ರಭಸವಾಗಿವೆ.
- Nahum 1:3 ನಹೂಮ 1:3ಕರ್ತನು ಕೋಪಿಸುವದರಲ್ಲಿ ನಿಧಾನ ಮಾಡುವವನಾದರೂ ಶಕ್ತಿಯಲ್ಲಿ ಮಹತ್ತಾದವನು; ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ನಿರ್ಮಲರೆಂದು ತೀರ್ಮಾನಿಸ ದವನು; ಕರ್ತನ ಮಾರ್ಗವು ಸುಳಿಗಾಳಿಯಲ್ಲಿಯೂ ಬಿರುಗಾಳಿಯಲ್ಲಿಯೂ ಉಂಟು; ಮೇಘಗಳು ಆತನ ಕಾಲುಗಳ ಧೂಳೇ.
- Deuteronomy 28:49 ಧರ್ಮೋಪದೇಶಕಾಂಡ 28:49ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ
- Isaiah 13:5 ಯೆಶಾಯ 13:5ಕರ್ತನೂ ಆತನ ರೋಷಕ್ಕೆ ಆಯುಧಗಳಾದವರೂ ದೂರ ದೇಶದಿಂದ, ಅಂದರೆ ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವದಕ್ಕಾಗಿ ಬರುತ್ತಾರೆ.
- Revelation 1:7 ಪ್ರಕಟನೆ 1:7ಇಗೋ ಆತನು ಮೇಘಗ ಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ಗೋಳಾಡುವರು. ಹೌದು, ಹಾಗೆಯೇ ಆಗುವದು. ಆಮೆನ್.
- Matthew 24:30 ಮತ್ತಾಯನು 24:30ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು.
- Jeremiah 4:31 ಯೆರೆಮೀಯ 4:31ಪ್ರಸವವೇದನೆ ಪಡುವವಳ ಸ್ವರಕ್ಕೂ ಚೊಚ್ಚಲನ್ನು ಹೆರುವವಳ ಸಂಕಟಕ್ಕೂ ಸಮಾನವಾಗಿ ರುವ ಚೀಯೋನಿನ ಮಗಳ ಸ್ವರವನ್ನು ಕೇಳಿದ್ದೇನೆ; ಆಕೆಯು ಗೋಳಾಡುತ್ತಾಳೆ, ಕೈಗಳನ್ನು ಚಾಚಿ--ನನಗೀಗ ಅಯ್ಯೋ, ಕೊಲೆಗಾರರ ನಿಮಿತ್ತ ನನ್ನ ಪ್ರಾಣವು ಬೇಸರಗೊಳ್ಳುತ್ತದೆ ಎಂದನ್ನುತ್ತಾಳೆ.
- Nahum 2:3–4 ನಹೂಮ 2:3–4ಆತನ ಬಲಾಢ್ಯದ ಡಾಲು ಕೆಂಪಾಗಿದೆ; ಶೂರರು ರಕ್ತವರ್ಣದವರಾಗಿದ್ದಾರೆ; ಆತನು ಸಿದ್ಧಮಾಡುವ ದಿನ ದಲ್ಲಿ ರಥಗಳು ಹೊಳೆಯುವ ದೀವಟಿಗೆಗಳ ಹಾಗೆ ಇರುವವು; ಸೈಪ್ರಸ್ ಮರಗಳು ಭಯಂಕರವಾಗಿ ಅಲ್ಲಾ ಡಿಸಲ್ಪಡುವವು. ರಥಗಳು ಬೀದಿಗಳಲ್ಲಿ ರಭಸವಾಗಿ ಓಡಾಡುವವು. ಹೆದ್ದಾರಿಗಳಲ್ಲಿ ಒಂದಕ್ಕೊಂದು ತಗಲು ವವು; ದೀವಟಿಗೆಗಳ ಹಾಗೆ ತೋರುವವು, ಮಿಂಚುಗಳ ಹಾಗೆ ಓಡುವವು.