Jeremiah · chapter 4 · verse 14
Jeremiah 4:14 in Kannada
ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
Yeroosaleme, neenu rakshisalpaduva haage ninna hrudayavannu kettatanadinda toleduko; ninna vyartha aalochanegalu eshtara varege ninnalli tanguvavu?
Jeremiah 4:14 in English
- King James Version (KJV)
- O Jerusalem, wash thine heart from wickedness, that thou mayest be saved. How long shall thy vain thoughts lodge within thee?
- World English Bible (WEB)
- Jerusalem, wash your heart from wickedness, that you may be saved. How long will your evil thoughts lodge within you?
- American Standard Version (ASV)
- O Jerusalem, wash thy heart from wickedness, that thou mayest be saved. How long shall thine evil thoughts lodge within thee?
- Bible in Basic English (BBE)
- O Jerusalem, make your heart clean from evil, so that you may have salvation. How long are evil purposes to have a resting-place in you?
- Darby Translation (DBY)
- Wash thy heart, Jerusalem, from wickedness, that thou mayest be saved. How long shall thy vain thoughts lodge within thee?
- Webster's Bible (WBS)
- O Jerusalem, wash thy heart from wickedness, that thou mayest be saved. How long shall thy vain thoughts lodge within thee?
- Young's Literal Translation (YLT)
- Wash from evil thy heart, O Jerusalem, That thou mayest be saved, Till when dost thou lodge in thy heart Thoughts of thy strength?
Read in context
- 12ಅದಕ್ಕಿಂತ ತುಂಬ ಗಾಳಿ ಆ ಸ್ಥಳಗಳಿಂದ ನನ್ನ ಬಳಿಗೆ ಬರುವದು; ಈಗಲೂ ನಾನು ಅವರಿಗೆ ವಿರೋಧವಾಗಿ ನ್ಯಾಯ ತೀರ್ಪುಗಳನ್ನು ಕೊಡುವೆನು.
- 13ಇಗೋ, ಮೇಘಗಳ ಹಾಗೆ ಏರಿ ಬರುವನು; ಆತನ ರಥಗಳು ಬಿರುಗಾಳಿಯ ಹಾಗೆ ಇರುವವು, ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮಗೆ ಅಯ್ಯೋ, ಹಾಳಾದೆವು.
- 14ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
- 15ಒಂದು ಶಬ್ದವು ದಾನಿನಿಂದ ಪ್ರಕಟ ಮಾಡುತ್ತದೆ; ಎಫ್ರಾಯಾಮಿನ ಬೆಟ್ಟದಿಂದ ಆಪತ್ತನ್ನು ತಿಳಿಯಪಡಿಸುತ್ತದೆ.
- 16ಜನಾಂಗಗಳಿಗೆ ತಿಳಿಸಿರಿ. ಇಗೋ, ಯೆರೂಸಲೇಮಿಗೆ ವಿರೋಧವಾಗಿ ತಿಳಿಯ ಪಡಿಸಿರಿ; ಏನಂದರೆ ಮುತ್ತಿಗೆ ಹಾಕುವವರು ದೂರ ದೇಶದಿಂದ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರೋಧವಾಗಿ ತಮ್ಮ ಸ್ವರವನ್ನೆತ್ತುತ್ತಾರೆ.
Cross references
- James 4:8 ಯಾಕೋಬನು 4:8ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.
- Isaiah 55:7 ಯೆಶಾಯ 55:7ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- Luke 11:39 ಲೂಕನು 11:39ಆಗ ಕರ್ತನು ಅವನಿಗೆ-- ಫರಿಸಾಯರಾದ ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನ ದಿಂದಲೂ ತುಂಬಿರುತ್ತದೆ
- Romans 1:21 ರೋಮಾಪುರದವರಿಗೆ 1:21ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.
- Acts 8:22 ಅಪೊಸ್ತಲರ ಕೃತ್ಯಗಳು 8:22ಆದದರಿಂದ ಈ ನಿನ್ನ ಕೆಟ್ಟತನದ ವಿಷಯವಾಗಿ ಮಾನಸಾಂತರಪಟ್ಟು ದೇವರನ್ನು ಬೇಡಿಕೋ, ಆಗ ನಿನ್ನ ಹೃದಯದ ಆಲೋಚನೆಯು ಕ್ಷಮಿಸಲ್ಪಡಬಹುದು.
- 1 Corinthians 3:20 1 ಕೊರಿಂಥದವರಿಗೆ 3:20ಜ್ಞಾನಿಗಳ ಯೋಚನೆಗಳು ನಿಷ್ಪಲವಾದವುಗಳೆಂದೂ ಕರ್ತನು ತಿಳುಕೊಳ್ಳುತ್ತಾನೆ ಬರೆದದೆಯಲ್ಲಾ;
- Matthew 12:33 ಮತ್ತಾಯನು 12:33ಮರವು ಒಳ್ಳೆಯದಾಗಿದ್ದರೆ ಅದರ ಫಲವೂ ಒಳ್ಳೆಯದೆಂದು ಎಣಿಸಿರಿ; ಇಲ್ಲವೇ ಮರವು ಕೆಟ್ಟದ್ದಾಗಿದ್ದರೆ ಅದರ ಫಲವೂ ಕೆಟ್ಟದ್ದೆಂದೆಣಿಸಿರಿ; ಯಾಕಂದರೆ ಮರವು ತನ್ನ ಫಲದಿಂದಲೇ ತಿಳಿಯಲ್ಪ ಡುವದು.
- Psalm 66:18 ಕೀರ್ತನೆಗಳು 66:18ನನ್ನ ಹೃದಯದಲ್ಲಿ ಅಪರಾಧವನ್ನು ನಾನು ಆಶಿಸಿದ್ದರೆ ಕರ್ತನು ನನ್ನ ಪ್ರಾರ್ಥನೆಯನ್ನು ಕೇಳುವದಿಲ್ಲ.
- Isaiah 1:16–19 ಯೆಶಾಯ 1:16–19ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ; ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ. ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು. ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ;
- Proverbs 1:22 ಜ್ಞಾನೋಕ್ತಿಗಳು 1:22ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
- Jeremiah 13:27 ಯೆರೆಮೀಯ 13:27ನಿನ್ನ ವ್ಯಭಿಚಾರಗಳನ್ನೂ ಬುಸುಗುಟ್ಟು ವಿಕೆಗಳನ್ನೂ ಸೂಳೆತನದ ದೋಷವನ್ನೂ ಹೊಲಗಳ ಲ್ಲಿರುವ ಗುಡ್ಡಗಳ ಮೇಲೆ ಆಗುವ ನಿನ್ನ ಅಸಹ್ಯಗಳನ್ನೂ ನೋಡಿದ್ದೇನೆ, ಓ ಯೆರೂಸಲೇಮೇ, ನಿನಗೆ ಅಯ್ಯೋ, ನೀನು ಶುದ್ಧವಾಗುವದಿಲ್ಲವೋ? ಒಂದು ಸಾರಿ ಇದು ಯಾವಾಗ ಆದೀತು?
- Matthew 23:26–27 ಮತ್ತಾಯನು 23:26–27ಕುರುಡನಾದ ಫರಿಸಾಯನೇ, ಮೊದಲು ಪಾತ್ರೆಯ ಮತ್ತು ತಟ್ಟೆಯ ಒಳಗಿನ ಭಾಗ ವನ್ನು ಶುಚಿಮಾಡು; ಆಗ ಅವುಗಳ ಹೊರ ಭಾಗವೂ ಶುಚಿಯಾಗುವದು. ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ.