Jeremiah · chapter 4 · verse 2
Jeremiah 4:2 in Kannada
ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿ ಯಿಂದಲೂ ಕರ್ತನ ಜೀವದಾಣೆ ಎಂದು ಪ್ರಮಾಣಮಾಡುವಿ; ಆಗ ಜನಾಂಗಗಳು ಆತನಲ್ಲಿ ಆಶೀರ್ವದಿಸಿ ಕೊಳ್ಳುವವು; ಮತ್ತು ಆತನಲ್ಲಿ ಹೊಗಳಿಕೊಳ್ಳುವವು.
Neenu satyadindaloo nyaayadindaloo neeti yindaloo kartana jeevadaane endu pramaanamaaduvi; aaga janaangagalu aatanalli aasheervadisi kolluvavu; mattu aatanalli hogalikolluvavu.
Jeremiah 4:2 in English
- King James Version (KJV)
- And thou shalt swear, The LORD liveth, in truth, in judgment, and in righteousness; and the nations shall bless themselves in him, and in him shall they glory.
- World English Bible (WEB)
- and you will swear, ‘As the LORD lives,’ in truth, in justice, and in righteousness. The nations will bless themselves in him, and they will glory in him.”
- American Standard Version (ASV)
- and thou shalt swear, As Jehovah liveth, in truth, in justice, and in righteousness; and the nations shall bless themselves in him, and in him shall they glory.
- Bible in Basic English (BBE)
- And you will take your oath, By the living Lord, in good faith and wisdom and righteousness; and the nations will make use of you as a blessing, and in you will they take a pride.
- Darby Translation (DBY)
- — and thou shalt in truth, in justice, and in righteousness swear, [As] Jehovah liveth! and the nations shall bless themselves in him, and in him shall they glory.
- Webster's Bible (WBS)
- And thou shalt swear, The LORD liveth, in truth, in judgment, and in righteousness; and the nations shall bless themselves in him, and in him shall they glory.
- Young's Literal Translation (YLT)
- And thou hast sworn — Jehovah liveth, In truth, in judgment, and in righteousness, And blessed themselves in Him have nations, And in Him they boast themselves.
Read in context
- 1ಓ ಇಸ್ರಾಯೇಲೇ, ನೀನು ತಿರುಗಿಕೊಂಡರೆ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ; ನೀನು ನಿನ್ನ ಅಸಹ್ಯಗಳನ್ನು ನನ್ನ ಎದುರಿನಿಂದ ತೊಲಗಿಸಿದರೆ ಕದಲದೆ ಇರುವಿ.
- 2ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿ ಯಿಂದಲೂ ಕರ್ತನ ಜೀವದಾಣೆ ಎಂದು ಪ್ರಮಾಣಮಾಡುವಿ; ಆಗ ಜನಾಂಗಗಳು ಆತನಲ್ಲಿ ಆಶೀರ್ವದಿಸಿ ಕೊಳ್ಳುವವು; ಮತ್ತು ಆತನಲ್ಲಿ ಹೊಗಳಿಕೊಳ್ಳುವವು.
- 3ಕರ್ತನು ಯೆಹೂದದವರಿಗೂ ಯೆರೂಸಲೇಮಿ ನವರಿಗೂ ಹೀಗೆ ಹೇಳುತ್ತಾನೆ--ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನಿಮ್ಮ ಬಂಜರು ಭೂಮಿಯನ್ನು ಉಳಿರಿ; ಮುಳ್ಳುಗಳಲ್ಲಿ ಬೀಜ ಬಿತ್ತಬೇಡಿರಿ.
- 4ಕರ್ತನಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ, ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸ ಕೂಡದ ಹಾಗೆ ಉರಿಯುವದು.
Cross references
- Isaiah 65:16 ಯೆಶಾಯ 65:16ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳು ವವನು ಸತ್ಯ ದೇವರಲ್ಲಿ ಆಶೀರ್ವದಿಸಿಕೊಳ್ಳುವನು. ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು; ಸತ್ಯದೇವರ ಮೇಲೆ ಆಣೆ ಇಟ್ಟುಕೊಳ್ಳುವನು; ಮುಂಚಿನ ಕಷ್ಟಗಳು ಮರೆತುಹೋಗಿವೆ ಮತ್ತು ಅವು ನನ್ನ ಕಣ್ಣುಗಳಿಗೆ ಮರೆಯಾಗಿವೆ.
- Genesis 22:18 ಆದಿಕಾಂಡ 22:18ನೀನು ನನ್ನ ಸ್ವರಕ್ಕೆ ವಿಧೇಯ ನಾದದ್ದರಿಂದ ಭೂಮಿಯ ಜನಾಂಗಗಳೆಲ್ಲಾ ನಿನ್ನ ಸಂತಾನದಲ್ಲಿ ಆಶೀರ್ವದಿಸಲ್ಪಡುವವು ಎಂಬದೇ.
- Jeremiah 9:24 ಯೆರೆಮೀಯ 9:24ಆದರೆ ಹೆಚ್ಚಳ ಪಡುವವನು ಇದರಲ್ಲಿ ಹೆಚ್ಚಳಪಡಲಿ; ಯಾವದರಲ್ಲಿ ಅಂದರೆ ಕರ್ತನಾದ ನಾನು ಭೂಮಿಯಲ್ಲಿ ಕೃಪೆಯನ್ನೂ ನ್ಯಾಯವನ್ನೂ ನೀತಿಯನ್ನೂ ನಡಿಸುವವನಾಗಿದ್ದೇ ನೆಂದು ನನ್ನನ್ನು ಗ್ರಹಿಸಿ ತಿಳುಕೊಳ್ಳುವದರಲ್ಲಿಯೇ; ಇವುಗಳಲ್ಲಿ ನಾನು ಸಂತೋಷ ಪಡುತ್ತೇನೆಂದು ಕರ್ತನು ಅನ್ನುತ್ತಾನೆ.
- Deuteronomy 10:20 ಧರ್ಮೋಪದೇಶಕಾಂಡ 10:20ನಿನ್ನ ಕರ್ತನಾದ ದೇವರಿಗೆ ನೀನು ಭಯಪಡಬೇಕು; ಆತನ ಸೇವೆಮಾಡಿ ಆತನಿಗೆ ಅಂಟಿಕೊಂಡು ಆತನ ಹೆಸರಿನಲ್ಲಿ ಪ್ರಮಾಣಮಾಡಬೇಕು.
- 1 Corinthians 1:31 1 ಕೊರಿಂಥದವರಿಗೆ 1:31ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
- 2 Corinthians 10:17 2 ಕೊರಿಂಥದವರಿಗೆ 10:17ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ.ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯ ನಲ್ಲ; ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.
- Galatians 3:8 ಗಲಾತ್ಯದವರಿಗೆ 3:8ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ.
- Isaiah 45:25 ಯೆಶಾಯ 45:25ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
- Psalm 72:17 ಕೀರ್ತನೆಗಳು 72:17ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
- Jeremiah 12:16 ಯೆರೆಮೀಯ 12:16ಬಾಳನ ಆಣೆ ಇಟ್ಟು ಕೊಳ್ಳುವದಕ್ಕೆ ಅವರು ನನ್ನ ಜನಕ್ಕೆ ಬೋಧಿಸಿದ ಪ್ರಕಾರ ಅವರು ಕರ್ತನ ಜೀವದಾಣೆ ಎಂದು ಹೇಳಿ ನನ್ನ ಹೆಸರಿನ ಆಣೆ ಇಟ್ಟುಕೊಳ್ಳುವದಕ್ಕೆ ನನ್ನ ಜನರ ಮಾರ್ಗ ಗಳನ್ನು ಜಾಗ್ರತೆಯಾಗಿ ಕಲಿತುಕೊಂಡರೆ ಆಗ ಅವರು ನನ್ನ ಜನರ ಮಧ್ಯದಲ್ಲಿ ಕಟ್ಟಲ್ಪಡುವರು.ಆದರೆ ಅವರು ಕೇಳದೆಹೋದರೆ, ಆ ಜನಾಂಗವನ್ನು ಸಂಪೂ ರ್ಣವಾಗಿ ಕಿತ್ತು ನಾಶಮಾಡುವೆನು ಎಂದು ಕರ್ತನು ಅನ್ನುತ್ತಾನೆ.
- Zechariah 8:8 ಜೆಕರ್ಯ 8:8ನಾನು ಅವರನ್ನು ತರುವೆನು; ಅವರು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವರು; ಅವರು ನನ್ನ ಜನರಾಗಿ ರುವರು; ನಾನು ಸತ್ಯದಲ್ಲಿಯೂ ನೀತಿಯಲ್ಲಿಯೂ ಅವರ ದೇವರಾಗಿರುವೆನು.
- 1 Kings 3:6 1 ಅರಸುಗಳು 3:6ಅದಕ್ಕೆ ಸೊಲೊಮೋನನು--ನನ್ನ ತಂದೆಯಾಗಿರುವ ನಿನ್ನ ಸೇವಕನಾದ ದಾವೀದನು ನಿನ್ನ ಮುಂದೆ ಸತ್ಯದಿಂದಲೂ ನೀತಿಯಿಂದಲೂ ಯಥಾರ್ಥವಾದ ಹೃದಯವುಳ್ಳವ ನಾಗಿಯೂ ನಡೆದದ್ದರಿಂದ ನೀನು ಅವನಿಗೆ ಬಹು ದಯೆತೋರಿಸಿ ಈ ಮಹಾಕರುಣೆಯನ್ನು ಅವನಿ ಗೋಸ್ಕರ ಕಾದಿಟ್ಟಿದ್ದೀ. ಈ ಹೊತ್ತಿರುವ ಹಾಗೆಯೇ ತನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಒಬ್ಬ ಮಗನನ್ನು ಕೊಟ್ಟಿದ್ದೀ.