Jeremiah · chapter 4 · verse 24
Jeremiah 4:24 in Kannada
ಬೆಟ್ಟಗಳನ್ನು ನೋಡಿದೆನು, ಇಗೋ, ಅವು ನಡುಗಿದವು; ಗುಡ್ಡಗಳು ಹೌರವಾಗಿ ಅದುರಿದವು.
Bettagalannu nodidenu, igo, avu nadugidavu; guddagalu hauravaagi aduridavu.
Jeremiah 4:24 in English
- King James Version (KJV)
- I beheld the mountains, and, lo, they trembled, and all the hills moved lightly.
- World English Bible (WEB)
- I saw the mountains, and behold, they trembled, and all the hills moved back and forth.
- American Standard Version (ASV)
- I beheld the mountains, and, lo, they trembled, and all the hills moved to and fro.
- Bible in Basic English (BBE)
- Looking at the mountains, I saw them shaking, and all the hills were moved about.
- Darby Translation (DBY)
- I beheld the mountains, and lo, they trembled, and all the hills shook violently.
- Webster's Bible (WBS)
- I beheld the mountains, and lo, they trembled, and all the hills moved lightly.
- Young's Literal Translation (YLT)
- I have looked [to] the mountains, And lo, they are trembling. And all the hills moved themselves lightly.
Read in context
- 22ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
- 23ನಾನು ಭೂಮಿಯನ್ನು ನೋಡಿದೆನು, ಇಗೋ, ಅದು ನಿರಾಕಾರವಾಗಿಯೂ ಹಾಳಾಗಿಯೂ ಶೂನ್ಯವಾಗಿಯೂ ಇತ್ತು; ಆಕಾಶಗಳನ್ನು ಸಹ ನೋಡಿದೆನು, ಅವುಗಳಿಗೆ ಬೆಳಕಿರಲಿಲ್ಲ.
- 24ಬೆಟ್ಟಗಳನ್ನು ನೋಡಿದೆನು, ಇಗೋ, ಅವು ನಡುಗಿದವು; ಗುಡ್ಡಗಳು ಹೌರವಾಗಿ ಅದುರಿದವು.
- 25ನಾನು ನೋಡಿದೆನು, ಇಗೋ, ಮನುಷ್ಯನು ಇರಲಿಲ್ಲ; ಆಕಾಶದ ಪಕ್ಷಿಗಳೆಲ್ಲಾ ಹಾರಿಹೋಗಿದ್ದವು.
- 26ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಅರಣ್ಯವಾಯಿತು; ಅದರ ಪಟ್ಟಣಗಳೆಲ್ಲಾ ಕರ್ತನ ಮುಂದೆಯೂ ಆತನ ಕೋಪದ ಉರಿಯ ಮುಂದೆಯೂ ಕೆಡವಲ್ಪಟ್ಟಿದ್ದವು.
Cross references
- Ezekiel 38:20 ಯೆಹೆಜ್ಕೇಲನು 38:20ಆಗ ಸಮುದ್ರದ ವಿಾನುಗಳು ಆಕಾಶದ ಪಕ್ಷಿಗಳು ಬಯಲಿನ ಮೃಗಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಎಲ್ಲಾ ಜಂತುಗಳು, ಭೂಮಿಯ ಎಲ್ಲಾ ಮನುಷ್ಯರ ಸಂಗಡ ನನ್ನ ಸಮ್ಮುಖದಲ್ಲಿ ನಡುಗುವವು; ಪರ್ವತಗಳು ಕೆಡವಲ್ಪಡುವವು, ಇಳಿ ಜಾರುಗಳು ಬೀಳುವವು, ಪ್ರತಿಯೊಂದು ಗೋಡೆಯೂ ನೆಲಕ್ಕೆ ಉರುಳುವವು.
- Jeremiah 10:10 ಯೆರೆಮೀಯ 10:10ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು.
- Nahum 1:5–6 ನಹೂಮ 1:5–6ಬೆಟ್ಟಗಳು ಆತನ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ ಹೌದು, ಲೋಕವೂ ಅದರಲ್ಲಿ ವಾಸಿಸು ವವರೆಲ್ಲರೂ ಆತನ ಮುಂದೆ ಸುಟ್ಟು ಹೋಗುವರು. ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
- Isaiah 5:25 ಯೆಶಾಯ 5:25ಆದಕಾರಣ ಕರ್ತನ ಕೋಪವು ಜನರಿಗೆ ವಿರೋ ಧವಾಗಿ ಉರಿಗೊಂಡು ಅವರ ಮೇಲೆ ತನ್ನ ಕೈಚಾಚಿ ಅವರನ್ನು ಹೊಡೆದಿದ್ದಾನೆ; ಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿ ರುವವು. ಇಷ್ಟೆಲ್ಲಾ ಆದರೂ ಆತನ ಕೋಪವು ಹಿಂತಿರುಗದೆ ಇನ್ನೂ ಕೈಚಾಚಿಯೇ ಇದೆ.
- Psalm 97:4 ಕೀರ್ತನೆಗಳು 97:4ಆತನ ಮಿಂಚುಗಳು ಲೋಕವನ್ನು ಬೆಳಗಿಸುತ್ತವೆ; ಭೂಮಿಯು ನೋಡಿ, ನಡುಗುತ್ತದೆ.
- 1 Kings 19:11 1 ಅರಸುಗಳು 19:11ಆಗ ಆತನು--ನೀನು ಹೊರಗೆ ಬಂದು ಬೆಟ್ಟದ ಮೇಲೆ ಕರ್ತನ ಮುಂದೆ ನಿಲ್ಲು ಅಂದನು. ಇಗೋ, ಕರ್ತನು ಹಾದುಹೋದನು; ಕರ್ತನ ಮುಂದೆ ಬೆಟ್ಟಗಳನ್ನು ಭೇದಿಸುವಂಥ, ಗುಡ್ಡ ಗಳನ್ನು ಒಡೆಯುವಂಥ ಮಹಾ ಬಲವಾದ ಗಾಳಿ; ಆ ಗಾಳಿಯಲ್ಲಿ ಕರ್ತನು ಇರಲಿಲ್ಲ. ಗಾಳಿಯ ತರು ವಾಯ ಭೂಕಂಪವು; ಆ ಭೂಕಂಪದಲ್ಲಿ ಕರ್ತನು ಇರಲಿಲ್ಲ.
- Judges 5:4–5 ನ್ಯಾಯಸ್ಥಾಪಕರು 5:4–5ಕರ್ತನೇ, ನೀನು ಸೇಯಾರಿನಿಂದ ಹೊರಟು ಎದೋ ಮಿನ ಹೊಲದಿಂದ ಮುನ್ನಡೆಯುವಾಗ ಭೂಮಿ ನಡುಗಿತು, ಆಕಾಶವು ಸುರಿಯಿತು; ಮೇಘಗಳು ಸಹ ನೀರು ಸುರಿದವು. ಕರ್ತನ ಮುಂದೆ ಬೆಟ್ಟಗಳು ಕರಗಿದವು; ಇಸ್ರಾಯೇಲಿನ ದೇವರಾದ ಕರ್ತನ ಮುಂದೆ ಸೀನಾಯಿ ಪರ್ವತವು ಸಹ ಕರಗಿತು.
- Micah 1:4 ಮೀಕ 1:4ಬೆಂಕಿಯ ಮುಂದೆ ಮೇಣದ ಹಾಗೆಯೂ ಇಳಿಜಾರಿನ ಸ್ಥಳದಲ್ಲಿ ಸುರಿಯುವ ನೀರಿನ ಹಾಗೆಯೂ ಬೆಟ್ಟಗಳು ಆತನ ಕೆಳಗೆ ಕರಗುವವು; ತಗ್ಗುಗಳು ಸೀಳುವವು.
- Psalm 114:4–7 ಕೀರ್ತನೆಗಳು 114:4–7ಬೆಟ್ಟಗಳು ಟಗರುಗಳ ಹಾಗೆಯೂ ಗುಡ್ಡಗಳು ಕುರಿಮರಿಗಳ ಹಾಗೆಯೂ ಹಾರಾಡಿದವು. ಸಮುದ್ರವೇ, ನಿನಗೆ ಏನಾಯಿತು? ಯಾಕೆ ಓಡಿ ಹೋಗುತ್ತೀ? ಯೊರ್ದನೇ, ಯಾಕೆ ಹಿಂದಿರುಗುತ್ತೀ? ಬೆಟ್ಟಗಳೇ, ಟಗರುಗಳ ಹಾಗೆಯೂ ಚಿಕ್ಕ ಗುಡ್ಡಗಳೇ, ನೀವು ಕುರಿಮರಿಗಳ ಹಾಗೆಯೂ ಹಾರಾಡುವದು ಯಾಕೆ? ಬಂಡೆಯನ್ನು ನೀರಿನ ಕೆರೆಗೂ ಬೆಣಚು ಕಲ್ಲನ್ನು ನೀರಿನ ಬುಗ್ಗೆಗೂ ಮಾರ್ಪಡಿಸುವಕರ್ತನ ಸನ್ನಿಧಿ ಯಲ್ಲಿಯೂ ಯಾಕೋಬನ ದೇವರ ಮುಂದೆಯೂ ಭೂಮಿಯೇ, ನಡುಗು.
- Psalm 18:7 ಕೀರ್ತನೆಗಳು 18:7ಆಗ ಆತನು ಕೋಪಗೊಂಡಿದ್ದನು. ಭೂಮಿಯು ಕದಲಿ ಕಂಪಿಸಿತು; ಪರ್ವತಗಳ ಅಸ್ತಿವಾರಗಳು ಸಹ ನಡುಗಿ ಕದಲಿದವು;
- Psalm 77:18 ಕೀರ್ತನೆಗಳು 77:18ನಿನ್ನ ಗುಡುಗಿನ ಶಬ್ದವು ಆಕಾಶ ಮಂಡಲದಲ್ಲಿ ಇತ್ತು; ಮಿಂಚುಗಳು ಜಗತ್ತನ್ನು ಬೆಳಗ ಮಾಡಿದವು; ಭೂಮಿಯು ನಡುಗಿ ಕದಲಿತು.
- Jeremiah 8:16 ಯೆರೆಮೀಯ 8:16ಅವನ ಕುದುರೆಗಳ ಶ್ವಾಸವು ದಾನಿನಿಂದ ಕೇಳಿಸಿತು, ಅವನ ಬಲವಾದವು ಗಳ ಕೆನೆತದ ಶಬ್ದದಿಂದ ದೇಶವೆಲ್ಲಾ ನಡುಗುತ್ತದೆ; ಯಾಕಂದರೆ ಅವರು ಬಂದರು; ದೇಶವನ್ನೂ ಅದರ ಲ್ಲಿರುವದೆಲ್ಲವನ್ನೂ ಪಟ್ಟಣವನ್ನೂ ಅದರ ನಿವಾಸಿ ಗಳನ್ನೂ ನುಂಗಿಬಿಟ್ಟಿದ್ದಾರೆ.