Jeremiah · chapter 4 · verse 9
Jeremiah 4:9 in Kannada
ಆ ದಿವಸದಲ್ಲಿ ಆಗುವದೇನಂದರೆ--ಅರಸನ ಹೃದಯವೂ ಸಾಮಂ ತರ ಹೃದಯವೂ ಹಾಳಾಗುವದು. ಯಾಜಕರು ಆಶ್ಚರ್ಯಪಡುವರು; ಪ್ರವಾದಿಗಳು ಭ್ರಮೆಗೊಳ್ಳು ವರು ಎಂದು ಕರ್ತನು ಅನ್ನುತ್ತಾನೆ.
Aa divasadalli aaguvadenandare--arasana hrudayavoo saamam tara hrudayavoo haalaaguvadu. Yaajakaru aashcharyapaduvaru; pravaadigalu bhramegollu varu endu kartanu annuttaane.
Jeremiah 4:9 in English
- King James Version (KJV)
- And it shall come to pass at that day, saith the LORD, [that] the heart of the king shall perish, and the heart of the princes; and the priests shall be astonished, and the prophets shall wonder.
- World English Bible (WEB)
- “It will happen at that day,” says the LORD, “that the heart of the king will perish, along with the heart of the princes. The priests will be astonished, and the prophets will wonder.”
- American Standard Version (ASV)
- And it shall come to pass at that day, saith Jehovah, that the heart of the king shall perish, and the heart of the princes; and the priests shall be astonished, and the prophets shall wonder.
- Bible in Basic English (BBE)
- And it will come about in that day, says the Lord, that the heart of the king will be dead in him, and the hearts of the rulers; and the priests will be overcome with fear, and the prophets with wonder.
- Darby Translation (DBY)
- And it shall come to pass in that day, saith Jehovah, that the heart of the king shall perish, and the heart of the princes; and the priests shall be astonished, and the prophets shall be amazed.
- Webster's Bible (WBS)
- And it shall come to pass at that day, saith the LORD, [that] the heart of the king shall perish, and the heart of the princes; and the priests shall be astonished, and the prophets shall wonder.
- Young's Literal Translation (YLT)
- And it hath come to pass, in that day, An affirmation of Jehovah: 'Perish doth the heart of the king, And the heart of the princes, And astonished have been the priests, And the prophets do wonder.'
Read in context
- 7ಸಿಂಹವು ತನ್ನ ಅಡವಿಯೊಳಗಿಂದ ಏರಿ ಬರುತ್ತದೆ, ಅನ್ಯ ಜನಾಂಗ ಗಳನ್ನು ನಾಶಮಾಡುವವನು ಹೊರಟಿದ್ದಾನೆ, ನಿನ್ನ ದೇಶವನ್ನು ಹಾಳು ಮಾಡುವದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ; ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವದು.
- 8ಇದಕ್ಕಾಗಿ ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಗೋಳಾಡಿರಿ; ಕರ್ತನ ಕೋಪದ ಉರಿಯು ನಮ್ಮಿಂದ ಹಿಂತಿರುಗಲಿಲ್ಲ.
- 9ಆ ದಿವಸದಲ್ಲಿ ಆಗುವದೇನಂದರೆ--ಅರಸನ ಹೃದಯವೂ ಸಾಮಂ ತರ ಹೃದಯವೂ ಹಾಳಾಗುವದು. ಯಾಜಕರು ಆಶ್ಚರ್ಯಪಡುವರು; ಪ್ರವಾದಿಗಳು ಭ್ರಮೆಗೊಳ್ಳು ವರು ಎಂದು ಕರ್ತನು ಅನ್ನುತ್ತಾನೆ.
- 10ಆಗ ನಾನು ಹೇಳಿದ್ದೇನಂದರೆ--ಹಾ! ಕರ್ತನೇ, ದೇವರೇ, ನಿಶ್ಚಯ ವಾಗಿ ನೀನು ಈ ಜನರಿಗೂ ಯೆರೂಸಲೇಮಿಗೂ-- ನಿಮಗೆ ಸಮಾಧಾನವಾಗುವದೆಂದು ಹೇಳಿ ಬಹಳ ಮೋಸಮಾಡಿದ್ದೀ; ಕತ್ತಿಯು ಪ್ರಾಣದ ವರೆಗೂ ತಾಕುತ್ತ ದಲ್ಲವೋ?
- 11ಆ ಸಮಯದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಹೇಳಲ್ಪಡುವದೇನಂದರೆ--ಒಣ ಗಾಳಿಯು ಅರಣ್ಯದ ಉನ್ನತ ಸ್ಥಳಗಳಿಂದ ನನ್ನ ಜನರ ಕುಮಾರಿಯ ಕಡೆಗೆ ಬರುತ್ತದೆ. ಅದು ತೂರುವದಕ್ಕೂ ಶುದ್ಧಮಾಡುವದಕ್ಕೂ ಆಗತಕ್ಕದ್ದಲ್ಲ.
Cross references
- Ezekiel 13:9–16 ಯೆಹೆಜ್ಕೇಲನು 13:9–16ವ್ಯರ್ಥವಾದದ್ದನ್ನು ದರ್ಶಿಸಿ, ಸುಳ್ಳು ಭವಿಷ್ಯಗಳನ್ನು ಹೇಳುವ ಪ್ರವಾದಿಗಳ ಮೇಲೆ ನನ್ನ ಕೈ ಮಾಡುವೆನು. ಅವರು ನನ್ನ ಜನರ ಸಭೆಯಲ್ಲಿ ಇರುವದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲ್ಪಡುವದೂ ಇಲ್ಲ; ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವದೂ ಇಲ್ಲ; ನಾನೇ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವಿರಿ. ಸಮಾಧಾನ ವಿಲ್ಲದಿರುವಾಗ ಅವರು ಸಮಾಧಾನವೆಂದು ಹೇಳಿದ್ದರಿಂ ದಲೂ ಮತ್ತು ಇಗೋ, ಒಬ್ಬನು ಗೋಡೆಯನ್ನು ಕಟ್ಟಿದರೆ ಮತ್ತೊಬ್ಬನು ಅದಕ್ಕೆ ಸುಣ್ಣ ಹಚ್ಚಿದ್ದರಿಂದಲೂ ಸುಣ್ಣ ಹಚ್ಚುತ್ತಿರುವವನಿಗೆ--ಅದು ಬೀಳುವದೆಂದು ಹೇಳು; ಅಲ್ಲಿ ವಿಪರೀತ ಮಳೆ ಬರುವದು ಮತ್ತು ದೊಡ್ಡ ಕಲ್ಮಳೆಯು ಬೀಳುವದು; ಬಿರುಗಾಳಿಯು ಅದನ್ನು ಸೀಳಿಬಿಡುವದು. ಇಗೋ, ಗೋಡೆ ಬಿದ್ದು ಹೋದಮೇಲೆ--ನೀವು ಹಚ್ಚಿದ ಸುಣ್ಣ ಎಲ್ಲಿ ಎಂದು ನಿಮಗೆ ಹೇಳುವರಲ್ಲಾ? ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅದನ್ನು ನನ್ನ ಉರಿಯಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶ ಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳೂ ಸುರಿಯುವವು; ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಈಗ ಕೆಡವಿ ನೆಲಸಮ ಮಾಡಿ ಅದರ ಅಸ್ತಿವಾರ ವನ್ನು ಕಾಣದ ಹಾಗೆ ಮಾಡುವೆನು. ಅದು ಬಿದ್ದು ಹೋಗುವದು, ನೀವು ಅದರಲ್ಲಿ ನಾಶ ಮಾಡಲ್ಪಡು ವಿರಿ. ಆಗ ನಾನೇ ಕರ್ತನೆಂದು ನಿಮಗೆ ತಿಳಿದು ಬರುವದು. ಹೀಗೆ ನಾನು ಗೋಡೆಯಲ್ಲಿಯೂ ಅದಕ್ಕೆ ಸುಣ್ಣ ಬಳಿದವರಲ್ಲಿಯೂ ರೋಷವನ್ನು ತೀರಿಸಿ ಕೊಂಡು ಇನ್ನು ಗೋಡೆಯಾದರೂ ಅದಕ್ಕೆ ಸುಣ್ಣ ಹಚ್ಚಿದವರಾದರೂ ಇಲ್ಲವೆಂದು ಯೆರೂಸಲೇಮಿನ ವಿಷಯ ಪ್ರವಾದಿಸಿ ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ನಿಮಗೆ ಇಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.
- Isaiah 29:9–10 ಯೆಶಾಯ 29:9–10ತಾಮಸಮಾಡಿ ಆಶ್ಚರ್ಯಪಡಿರಿ, ನೀವು ಕೂಗಿರಿ, ಕೂಗಾಡಿರಿ ಇವರು ಅಮಲೇರಿದ್ದಾರೆ; ಆದರೆ ದ್ರಾಕ್ಷಾ ರಸದಿಂದಲ್ಲ; ಅವರು ಕೂಗಾಡುತ್ತಾರೆ, ಆದರೆ ಮದ್ಯ ದಿಂದಲ್ಲ. ಕರ್ತನು ನಿಮ್ಮ ಮೇಲೆ ಗಾಢ ನಿದ್ರೆಯ ಆತ್ಮವನ್ನು ಹೊಯಿದು ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾನೆ; ಪ್ರವಾದಿಗಳನ್ನೂ ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನೂ ಮುಚ್ಚಿದ್ದಾನೆ.
- Isaiah 22:3–5 ಯೆಶಾಯ 22:3–5ನಿನ್ನ ಅಧಿಕಾರಸ್ಥರೆಲ್ಲರು ಒಟ್ಟಿಗೆ ಓಡಿ ಬಿಲ್ಲುಗಾರರಿಲ್ಲದೆ ಸೆರೆಯಾಗಿದ್ದಾರೆ. ದೂರದಿಂದ ಓಡಿಬಂದು ನಿನ್ನಲ್ಲಿ ಸಿಕ್ಕಿದವರೆಲ್ಲ ರೊಂದಿಗೆ ಕಟ್ಟುಬಿದ್ದಿದ್ದಾರೆ. ಹೀಗಿರಲು ನನ್ನ ಕಡೆ ಯಿಂದ ದೃಷ್ಟಿ ತಿರುಗಿಸಿರಿ. ಬಹುಸಂಕಟದಿಂದ ನಾನು ಅಳುವೆನು. ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವದಕ್ಕೆ ತವಕಗೊಳ್ಳದಿರಿ ಅಂದೆನು. ಸೈನ್ಯಗಳ ದೇವರಾದ ಕರ್ತನಿಗೆ ದರ್ಶ ನದ ತಗ್ಗಿನಲ್ಲಿ ಶ್ರಮೆಯ ತುಳಿದಾಟದ ಗಲಿಬಿಲಿಯ ದಿನವದೆ, ಗೋಡೆ ಒಡೆಯೋಣವು ಪರ್ವತದ ಕಡೆಗೆ ಹೋಗೋಣವು ಉಂಟಾಗುವದು.
- Jeremiah 37:19 ಯೆರೆಮೀಯ 37:19ಬಾಬೆಲಿನ ಅರಸನು ನಿಮ್ಮ ಮೇಲೆಯೂ ಈ ದೇಶದ ಮೇಲೆಯೂ ಬರುವದಿಲ್ಲವೆಂದು ನಿಮಗೆ ಪ್ರವಾದಿಸಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ? ಆದದರಿಂದ ಈಗ ಕಿವಿಗೊಡು,
- Jeremiah 5:31 ಯೆರೆಮೀಯ 5:31ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
- Jeremiah 39:4–5 ಯೆರೆಮೀಯ 39:4–5ಆಗ ಆದದ್ದೇನಂದರೆ--ಯೆಹೂ ದದ ಅರಸನಾದ ಚಿದ್ಕೀಯನೂ ಯುದ್ಧಸ್ಥರೆಲ್ಲರೂ ಅವರನ್ನು ನೋಡಿದಾಗ ಓಡಿಹೋಗಿ ರಾತ್ರಿಯಲ್ಲಿ ಪಟ್ಟಣವನ್ನು ಅರಸನ ತೋಟದ ಮಾರ್ಗದಿಂದ ಬಿಟ್ಟು ಎರಡು ಗೋಡೆಗಳ ಮಧ್ಯದಲ್ಲಿರುವ ಬಾಗಲಿನಿಂದ ಹೊರಟರು; ಅವನು ಬೈಲುಸೀಮೆಯ ಮಾರ್ಗ ವಾಗಿ ಹೊರಟನು. ಆದರೆ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಅವರು ಅವನನ್ನು ಹಿಡಿದು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು. ಅಲ್ಲಿ ಅವನು ಅವನಿಗೆ ನ್ಯಾಯತೀರಿಸಿದನು.
- Jeremiah 52:7 ಯೆರೆಮೀಯ 52:7ಆಗ ಪಟ್ಟಣವು ವಿಭಾಗವಾಯಿತು; ಯುದ್ಧಸ್ಥರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದ ಬಾಗಲಿನ ಮಾರ್ಗವಾಗಿ ರಾತ್ರಿಯಲ್ಲಿ ಪಟ್ಟಣವನ್ನು ಬಿಟ್ಟು ಹೊರಟು, ಬೈಲು ಸೀಮೆಯ ಮಾರ್ಗವಾಗಿ ಹೋದರು. ಆದರೆ ಕಸ್ದೀಯರು ಪಟ್ಟಣದ ಸುತ್ತಲೂ ಇದ್ದರು.
- Psalm 102:4 ಕೀರ್ತನೆಗಳು 102:4ನನ್ನ ಹೃದಯವು ಹೊಡೆಯಲ್ಪಟ್ಟ ಹುಲ್ಲಿನ ಹಾಗೆ ಒಣಗಿಹೋಗಿದೆ; ಆದದರಿಂದ ನಾನು ನನ್ನ ರೊಟ್ಟಿಯನ್ನು ತಿನ್ನುವದಕ್ಕೆ ಮರೆತುಬಿಡುತ್ತೇನೆ.
- Isaiah 19:11–12 ಯೆಶಾಯ 19:11–12ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ? ಅವರು ಎಲ್ಲಿದ್ದಾರೆ? ನಿನ್ನ ಜ್ಞಾನಿಗಳು ಎಲ್ಲಿ? ಅವರು ನಿನಗೆ ಹೇಳಲಿ. ಸೈನ್ಯಗಳ ಕರ್ತನು ಐಗುಪ್ತ್ಯರ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ತಿಳಿದು ಕೊಳ್ಳಲಿ.
- 1 Samuel 25:37–38 1 ಸಮುವೇಲನು 25:37–38ಉದಯದಲ್ಲಿ ನಾಬಾಲನಿಗೆ ದ್ರಾಕ್ಷಾರಸದ ಅಮಲು ಇಳಿದಾಗ ಅವನ ಹೆಂಡತಿಯು ಈ ಮಾತುಗಳನ್ನು ಅವನಿಗೆ ತಿಳಿಸಲು ಏನಾಯಿತಂದರೆ, ಅವನ ಹೃದಯವು ಅವನಲ್ಲಿ ಸತ್ತು ಅವನು ಕಲ್ಲಿನ ಹಾಗಾದನು. ಹೆಚ್ಚು ಕಡಿಮೆ ಹತ್ತು ದಿವಸಗಳಾದ ತರುವಾಯ ಏನಾಯಿತಂದರೆ, ಕರ್ತನು ನಾಬಾಲನನ್ನು ಹೊಡೆದದ್ದರಿಂದ ಅವನು ಸತ್ತನು.
- Isaiah 19:16 ಯೆಶಾಯ 19:16ಆ ದಿನದಲ್ಲಿ ಐಗುಪ್ತವು ಹೆಂಗಸರ ಹಾಗೆ ಇರು ವದು. ಸೈನ್ಯಗಳ ಕರ್ತನು ಅದರ ಮೇಲೆ ಆಡಿಸುವ ಕೈಯನ್ನು ಬೀಸುತ್ತಿರುವದರಿಂದ ಹೆದರಿ ಭಯಪಡು ವದು.
- 2 Kings 25:4 2 ಅರಸುಗಳು 25:4ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು.