Jeremiah · chapter 41 · verse 7
Jeremiah 41:7 in Kannada
ಆಗ ಆದದ್ದೇನಂದರೆ--ಅವರು ಪಟ್ಟಣದ ಮಧ್ಯಕ್ಕೆ ಬಂದಾಗ ನೆತನ್ಯನ ಮಗನಾದ ಇಷ್ಮಾಯೇಲನೂ ತನ್ನ ಸಂಗಡ ಇದ್ದ ಮನುಷ್ಯರೂ ಅವರನ್ನು ಕೊಂದು ಕುಣಿಯೊಳಗೆ ಹಾಕಿಬಿಟ್ಟರು.
Aaga aadaddenandare--avaru pattanada madhyakke bandaaga netanyana maganaada ishmaayelanoo tanna sangada idda manushyaroo avarannu kondu kuniyolage haakibittaru.
Jeremiah 41:7 in English
- King James Version (KJV)
- And it was [so], when they came into the midst of the city, that Ishmael the son of Nethaniah slew them, [and cast them] into the midst of the pit, he, and the men that [were] with him.
- World English Bible (WEB)
- It was so, when they came into the middle of the city, that Ishmael the son of Nethaniah killed them, and cast them into the middle of the pit, he, and the men who were with him.
- American Standard Version (ASV)
- And it was so, when they came into the midst of the city, that Ishmael the son of Nethaniah slew them, [and cast them] into the midst of the pit, he, and the men that were with him.
- Bible in Basic English (BBE)
- And when they came inside the town, Ishmael, the son of Nethaniah, and the men who were with him, put them to death and put their bodies into a deep hole.
- Darby Translation (DBY)
- And it was so, when they came into the midst of the city, that Ishmael the son of Nethaniah, he and the men that were with him, slew them, [and cast them] into the midst of the pit.
- Webster's Bible (WBS)
- And it was [so] , when they came into the midst of the city, that Ishmael the son of Nethaniah slew them, [and cast them] into the midst of the pit, he, and the men that [were] with him.
- Young's Literal Translation (YLT)
- And it cometh to pass, at their coming in unto the midst of the city, that Ishmael son of Nethaniah doth slaughter them, at the midst of the pit, he and the men who [are] with him.
Read in context
- 5ಶೆಕೆಮ್ನಿಂದಲೂ ಶಿಲೋವಿನಿಂದಲೂ ಸಮಾರ್ಯ ದಿಂದಲೂ ಎಂಭತ್ತು ಮಂದಿ ಮನುಷ್ಯರು ಗಡ್ಡವನ್ನು ಕ್ಷೌರಮಾಡಿದವರಾಗಿಯೂ ವಸ್ತ್ರಗಳನ್ನು ಹರಕೊಂಡವ ರಾಗಿಯೂ ತಮ್ಮನ್ನು ಕೊಯ್ದುಕೊಂಡವರಾಗಿಯೂ ಕರ್ತನ ಆಲಯಕ್ಕೆ ತರುವದಕ್ಕೋಸ್ಕರ ಕಾಣಿಕೆಯನ್ನೂ ಧೂಪವನ್ನೂ ಕೈಯಲ್ಲಿ ತಕ್ಕೊಂಡು ಬಂದರು.
- 6ಆಗ ನೆತನ್ಯನ ಮಗನಾದ ಇಷ್ಮಾಯೇಲನು ಮಿಚ್ಪದಿಂದ ಹೊರಟು, ಅಳುತ್ತಲೇ ಅವರ ಎದುರಿಗೆ ಹೋದನು; ಅವರನ್ನು ಎದುರುಗೊಂಡ ಮೇಲೆ ಅವರಿಗೆ--ಅಹೀಕಾ ಮನ ಮಗನಾದ ಗೆದಲ್ಯನ ಬಳಿಗೆ ಬನ್ನಿ ಅಂದನು.
- 7ಆಗ ಆದದ್ದೇನಂದರೆ--ಅವರು ಪಟ್ಟಣದ ಮಧ್ಯಕ್ಕೆ ಬಂದಾಗ ನೆತನ್ಯನ ಮಗನಾದ ಇಷ್ಮಾಯೇಲನೂ ತನ್ನ ಸಂಗಡ ಇದ್ದ ಮನುಷ್ಯರೂ ಅವರನ್ನು ಕೊಂದು ಕುಣಿಯೊಳಗೆ ಹಾಕಿಬಿಟ್ಟರು.
- 8ಆದರೆ--ನಮ್ಮನ್ನು ಕೊಂದುಹಾಕಬೇಡ; ಯಾಕಂದರೆ ನಮಗೆ ಹೊಲದಲ್ಲಿ, ಗೋಧಿ, ಜವೆಗೋಧಿ, ಎಣ್ಣೆ, ಜೇನು, ಇರುವ ನಿಕ್ಷೇಪಗ ಳುಂಟೆಂದು ಹೇಳಿದ ಹತ್ತು ಮಂದಿ ಮನುಷ್ಯರು ಅವರಲ್ಲಿ ಸಿಕ್ಕಿದರು; ಆದದರಿಂದ ಅವನು ಹಿಂತೆಗೆದು ಅವರನ್ನು ಅವರ ಸಹೋದರರ ಮಧ್ಯದಲ್ಲಿ ಕೊಂದು ಹಾಕಲಿಲ್ಲ.
- 9ಇಷ್ಮಾಯೇಲನು ಗೆದಲ್ಯನ ನಿಮಿತ್ತ ಕೊಂದು ಹಾಕಿದ ಮನುಷ್ಯರೆಲ್ಲರ ಹೆಣಗಳನ್ನು ಹಾಕಿದ ಕುಣಿಯು ಯಾವದಂದರೆ--ಅರಸನಾದ ಆಸನು ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ಮಾಡಿದ್ದೇ; ಇದನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ ವರಿಂದ ತುಂಬಿಸಿದನು.
Cross references
- Isaiah 59:7 ಯೆಶಾಯ 59:7ಅವರ ಕಾಲುಗಳು ಕೇಡಿಗೆ ಓಡುತ್ತವೆ; ಅಪರಾಧವಿಲ್ಲದ ರಕ್ತ ವನ್ನು ಚೆಲ್ಲುವದಕ್ಕೆ ತ್ವರೆಪಡುತ್ತವೆ. ಅವರ ಆಲೋ ಚನೆ ಗಳು ದುಷ್ಟತನದ ಆಲೋಚನೆಗಳೇ; ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿ ಅವೆ.
- Psalm 55:23 ಕೀರ್ತನೆಗಳು 55:23ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
- Ezekiel 22:27 ಯೆಹೆಜ್ಕೇಲನು 22:27ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ.
- Romans 3:15 ರೋಮಾಪುರದವರಿಗೆ 3:15ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರ ಪಡುತ್ತವೆ.
- 1 Kings 16:10–12 1 ಅರಸುಗಳು 16:10–12ಜಿಮ್ರಿಯು ಒಳಗೆ ಹೋಗಿ ಯೆಹೂದದ ಅರಸನಾದ ಆಸನ ಇಪ್ಪತ್ತೇಳನೇ ವರುಷದಲ್ಲಿ ಅವನನ್ನು ಹೊಡೆದು ಕೊಂದುಹಾಕಿ ಅವನಿಗೆ ಬದಲಾಗಿ ಆಳಿದನು. ಅವನು ಆಳಲು ಆರಂಭಿಸಿದಾಗ ಏನಾಯಿತಂದರೆ, ಅವನು ಸಿಂಹಾ ಸನದ ಮೇಲೆ ಕುಳಿತು ಕೊಳ್ಳುತ್ತಲೇ ಬಾಷನ ಮನೆ ಯವರನ್ನೆಲ್ಲಾ ಕೊಂದುಹಾಕಿದನು. ಅವನ ಬಂಧು ಗಳಲ್ಲಿಯೂ ಸ್ನೇಹಿತರಲ್ಲಿಯೂ ಗಂಡಸರಾದ ಒಬ್ಬ ನನ್ನೂ ಅವನಿಗೆ ಉಳಿಸಲಿಲ್ಲ. ಹೀಗೆ ಭಾಷನೂ ಅವನ ಮಗನಾದ ಏಲನೂ ತಮ್ಮ ಎಲ್ಲಾ ಪಾಪಗಳಿಂದ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿ ತಾವು ಮಾಡಿದ ಪಾಪಗಳಿಂದಲೂ ತಾವು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ್ದ ರಿಂದಲೂ
- 2 Kings 15:25 2 ಅರಸುಗಳು 15:25ಆದರೆ ಅವನ ಅಧಿಪತಿಯಾದಂಥ, ರೆಮಲ್ಯನ ಮಗನಾದ ಪೆಕಹನು ಅವನ ಮೇಲೆ ಒಳಸಂಚು ಮಾಡಿ ಅರ್ಗೋಬನ್ನೂ ಅರ್ಯೇಯನ್ನೂ ಗಿಲ್ಯಾದಿನ ಜನರಲ್ಲಿ ಐವತ್ತು ಮಂದಿಯನ್ನೂ ತನ್ನ ಸಂಗಡ ಕೂಡಿಸಿ ಕೊಂಡು ಸಮಾರ್ಯದಲ್ಲಿ ಅರಸನಿಗಿದ್ದ ಅರಮನೆ ಯೊಳಗೆ ಅವನನ್ನು ಕೊಂದುಹಾಕಿ ಅವನಿಗೆ ಬದಲಾಗಿ ಅರಸನಾದನು.
- Proverbs 1:16 ಜ್ಞಾನೋಕ್ತಿಗಳು 1:16ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತವನ್ನು ಸುರಿಸುವದಕ್ಕೆ ಆತುರ ಪಡುತ್ತವೆ.
- 1 Kings 15:28–29 1 ಅರಸುಗಳು 15:28–29ಯೆಹೂದದ ಅರಸನಾದ ಆಸನ ಮೂರ ನೇ ವರುಷದಲ್ಲಿ ಬಾಷನು ನಾದಾಬನನ್ನು ಕೊಂದು ಹಾಕಿ ಅವನಿಗೆ ಬದಲಾಗಿ ಆಳಿದನು. ಅವನು ಆಳುತ್ತಿರುವಾಗ ಏನಾಯಿತಂದರೆ, ಯಾರೊಬ್ಬಾಮನ ಮನೆಯನ್ನೆಲ್ಲಾ ಹೊಡೆದುಬಿಟ್ಟನು.
- Ezekiel 33:24–26 ಯೆಹೆಜ್ಕೇಲನು 33:24–26ಮನುಷ್ಯಪುತ್ರನೇ, ಇಸ್ರಾಯೇಲಿನ ದೇಶದ ಹಾಳು ಪ್ರದೇಶಗಳಲ್ಲಿ ವಾಸಿಸುವರು-- ಅಬ್ರಹಾಮನೇ ಒಬ್ಬನಾಗಿದ್ದು ದೇಶವನ್ನು ಸ್ವತಂತ್ರಿಸಿ ಕೊಂಡನು, ಆದರೆ ನಾವು ಬಹಳ ಜನರಾಗಿದ್ದು ದೇಶವು ನಮಗೆ ಸ್ವಾಸ್ತ್ಯವಾಗಿ ಕೊಡಲ್ಪಟ್ಟಿದೆ ಎಂದು ಹೇಳುತ್ತಾರೆ. ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುವರ ಲ್ಲವೇ? ನಿಮ್ಮ ಕಣ್ಣುಗಳು ವಿಗ್ರಹಗಳ ಕಡೆಗೆ ಎತ್ತಿ ರಕ್ತವನ್ನು ಚೆಲ್ಲುವ ನೀವು ದೇಶವನ್ನು ಸ್ವಾಧೀನಪಡಿಸಿ ಕೊಳ್ಳುವಿರೋ? ನೀವು ನಿಮ್ಮ ಕತ್ತಿಯ ಮೇಲೆ ನಿಂತು ಅಸಹ್ಯವಾದ ಕೆಲಸಗಳನ್ನು ಮಾಡುವಿರಿ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ನೆರೆಯವನ ಹೆಂಡತಿಯನ್ನು ಕೆಡಿಸುತ್ತಾನೆ; ಹೀಗಾದರೆ ನೀವು ದೇಶವನ್ನು ಸ್ವತಂತ್ರಿಸಿ ಕೊಳ್ಳಬಹುದೋ?
- 2 Kings 11:1–2 2 ಅರಸುಗಳು 11:1–2ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತು ಹೋದದ್ದನ್ನು ನೋಡಿ ಎದ್ದು ರಾಜ ಸಂತಾನದವರನ್ನೆಲ್ಲಾ ನಾಶಮಾಡಿದಳು. ಆದರೆ ಅರಸನಾದ ಯೆಹೋರಾಮನಿಗೆ ಮಗಳಾದ ಯೆಹೋಷೆಬಳು ಕೊಂದುಹಾಕಲ್ಪಟ್ಟ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೆಹೋವಾಷ ನನ್ನು ಕದ್ದುಕೊಂಡಳು. ಆದದರಿಂದ ಅವನು ಕೊಲ್ಲಲ್ಪ ಡದ ಹಾಗೆ ಅವನನ್ನೂ ಅವನ ದಾದಿಯನ್ನೂ ಅತಲ್ಯ ಳಿಗೆ ಕಾಣದ ಹಾಗೆ ಮಲಗುವ ಮನೆಯಲ್ಲಿ ಬಚ್ಚಿಟ್ಟಳು.