Jeremiah · chapter 42 · verse 10
Jeremiah 42:10 in Kannada
ನೀವು ಇನ್ನು ಈ ದೇಶದಲ್ಲಿ ವಾಸ ಮಾಡಿದರೆ ನಾನು ನಿಮ್ಮನ್ನು ಕೆಡವದೆ ಕಟ್ಟುವೆನು; ಕಿತ್ತುಹಾಕದೆ ನೆಡುವೆನು. ನಾನು ನಿಮಗೆ ಮಾಡಿರುವ ಕೇಡಿನ ವಿಷಯ ಪಶ್ಚಾತ್ತಾಪ ಪಡುತ್ತೇನೆ.
Neevu innu ee deshadalli vaasa maadidare naanu nimmannu kedavade kattuvenu; kittuhaakade neduvenu. Naanu nimage maadiruva kedina vishaya pashchaattaapa paduttene.
Jeremiah 42:10 in English
- King James Version (KJV)
- If ye will still abide in this land, then will I build you, and not pull [you] down, and I will plant you, and not pluck [you] up: for I repent me of the evil that I have done unto you.
- World English Bible (WEB)
- ‘If you will still live in this land, then I will build you, and not pull you down, and I will plant you, and not pluck you up; for I grieve over the distress that I have brought on you.
- American Standard Version (ASV)
- If ye will still abide in this land, then will I build you, and not pull you down, and I will plant you, and not pluck you up; for I repent me of the evil that I have done unto you.
- Bible in Basic English (BBE)
- If you still go on living in the land, then I will go on building you up and not pulling you down, planting you and not uprooting you: for my purpose of doing evil to you has been changed.
- Darby Translation (DBY)
- If ye will still abide in this land, then will I build you, and not overthrow [you], and I will plant you, and not pluck [you] up; for I repent me of the evil that I have done unto you.
- Webster's Bible (WBS)
- If ye will still abide in this land, then will I build you, and not pull [you] down, and I will plant you, and not pluck [you] up: for I repent of the evil that I have done to you.
- Young's Literal Translation (YLT)
- 'If ye do certainly dwell in this land, then I have builded you up, and I throw not down; and I have planted you, and I pluck not up; for I have repented concerning the evil that I have done to you.
Read in context
- 8ಆಗ ಅವನು ಕಾರೇಹನ ಮಗನಾದ ಯೋಹಾನಾನನ್ನೂ ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರನ್ನೂ ಕಿರಿಯರು ಮೊದಲುಗೊಂಡು ಹಿರಿಯರ ವರೆಗೆ ಜನರೆಲ್ಲರನ್ನೂ
- 9ಕರೆದು ಅವರಿಗೆ ಹೇಳಿದ್ದೇನಂದರೆ--ಯಾವಾತನ ಮುಂದೆ ನಿಮ್ಮ ವಿಜ್ಞಾ ಪನೆಯನ್ನು ತರುವದಕ್ಕೆ ನನ್ನನ್ನು ಕಳುಹಿಸಿದ್ದಿರೋ ಆ ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--
- 10ನೀವು ಇನ್ನು ಈ ದೇಶದಲ್ಲಿ ವಾಸ ಮಾಡಿದರೆ ನಾನು ನಿಮ್ಮನ್ನು ಕೆಡವದೆ ಕಟ್ಟುವೆನು; ಕಿತ್ತುಹಾಕದೆ ನೆಡುವೆನು. ನಾನು ನಿಮಗೆ ಮಾಡಿರುವ ಕೇಡಿನ ವಿಷಯ ಪಶ್ಚಾತ್ತಾಪ ಪಡುತ್ತೇನೆ.
- 11ನೀವು ಭಯ ಪಡುವ ಬಾಬೆಲಿನ ಅರಸನಿಗೆ ಹೆದರಬೇಡಿರಿ; ಅವನಿಗೆ ಭಯಪಡಬೇಡಿರೆಂದು ಕರ್ತನು ಅನ್ನುತ್ತಾನೆ; ನಿಮ್ಮನ್ನು ರಕ್ಷಿಸುವದಕ್ಕೂ ಅವನ ಕೈಗೆ ನಿಮ್ಮನ್ನು ತಪ್ಪಿಸುವದಕ್ಕೂ ನಾನು ನಿಮ್ಮ ಸಂಗಡ ಇದ್ದೇನೆ.
- 12ಇದಲ್ಲದೆ ನಾನು ನಿಮಗೆ ಕರುಣೆಯನ್ನು ತೋರಿಸುವೆನು; ಆಗ ಅವನು ಕರುಣಿಸಿ ನಿಮ್ಮನ್ನು ತಿರುಗಿ ನಿಮ್ಮ ಸ್ವದೇಶಕ್ಕೆ ಬರಮಾಡು ವನು.
Cross references
- Ezekiel 36:36 ಯೆಹೆಜ್ಕೇಲನು 36:36ಆಮೇಲೆ ನಿಮ್ಮ ಸುತ್ತಲೂ ಉಳಿದಿರುವ ಅನ್ಯಜನಾಂಗಗಳು ನಶಿಸಿ ಹೋಗಿರುವ ಸ್ಥಳಗಳನ್ನು ಮತ್ತು ಹಾಳಾಗಿರುವ ಸ್ಥಳದಲ್ಲಿ ಗಿಡ ನೆಟ್ಟ ವನು ಕರ್ತನಾದ ನಾನೇ ಎಂದು ತಿಳಿಯುವರು; ಕರ್ತನಾದ ನಾನೇ ಇದನ್ನು ಹೇಳಿದ್ದೇನೆ, ನಾನೇ ಇದನ್ನು ಮಾಡುತ್ತೇನೆ.
- Jeremiah 31:28 ಯೆರೆಮೀಯ 31:28ನಾನು ಕೀಳುವದಕ್ಕೂ ಮುರಿಯುವದಕ್ಕೂ ಕೆಡವುದಕ್ಕೂ ನಾಶಮಾಡು ವದಕ್ಕೂ ಕುಗ್ಗಿಸುವದಕ್ಕೂ ಅವರ ವಿಷಯ ಹೇಗೆ ಎಚ್ಚರವಾಗಿದ್ದೆನೋ ಹಾಗೆಯೇ ಕಟ್ಟುವದಕ್ಕೂ ನೆಡು ವದಕ್ಕೂ ಅವರನ್ನು ಕಾಯುವೆ ನೆಂದು ಕರ್ತನು ಅನ್ನುತ್ತಾನೆ.
- Jeremiah 24:6 ಯೆರೆಮೀಯ 24:6ನಾನು ನನ್ನ ಕಣ್ಣುಗಳನ್ನು ಅವರ ಮೇಲೆ ಒಳ್ಳೇದಕ್ಕಾಗಿ ಇಡುವೆನು. ಈ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು; ಕೆಡವಿ ಹಾಕದೆ ಅವರನ್ನು ಕಟ್ಟುವೆನು, ಕೀಳದೆ ಅವರನ್ನು ನೆಡುವೆನು.
- Joel 2:13 ಯೋವೇಲ 2:13ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ.
- Amos 7:6 ಆಮೋಸ 7:6ಕರ್ತನು ಇದಕ್ಕಾಗಿ ಪಶ್ಚಾತ್ತಾಪಪಟ್ಟು ಇವು ಸಹ ಆಗಬಾರದೆಂದು ಕರ್ತನಾದ ದೇವರು ಹೇಳುತ್ತಾನೆ.
- Jeremiah 33:7 ಯೆರೆಮೀಯ 33:7ಯೆಹೂದದ ಸೆರೆಯನ್ನೂ ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ ಅವರನ್ನು ಮುಂಚಿನ ಹಾಗೆ ಕಟ್ಟುವೆನು.
- Jeremiah 18:7–10 ಯೆರೆಮೀಯ 18:7–10ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವದಕ್ಕೂ ಕೆಡವುವ ದಕ್ಕೂ ನಾಶಮಾಡುವದಕ್ಕೂ ಮಾತಾಡುತ್ತೇನೋ ಆ ಜನಾಂಗಕ್ಕೆ ವಿರೋಧವಾಗಿ ನಾನು ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಪಶ್ಚಾ ತ್ತಾಪ ಪಡುವೆನು. ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವದಕ್ಕೂ ನೆಡುವದಕ್ಕೂ ಮಾತನಾಡುತ್ತೇನೋ ಅದು ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ ನಾನು ಅದಕ್ಕೆ ಮೇಲನ್ನು ಮಾಡುತ್ತೇನೆಂದು ಹೇಳಿದ ಒಳ್ಳೇದನ್ನು ಕುರಿತು ಪಶ್ಚಾತ್ತಾಪಪಡುವೆನು.
- Amos 7:3 ಆಮೋಸ 7:3ಕರ್ತನು ಇದನ್ನು ಕುರಿತು ಪಶ್ಚಾತ್ತಾಪಪಟ್ಟು ಇದು ಆಗ ಬಾರ ದೆಂದು ಹೇಳಿದನು.
- Exodus 32:14 ವಿಮೋಚನಕಾಂಡ 32:14ಆಗ ಕರ್ತನು ತನ್ನ ಜನರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿ ಕೊಂಡನು.
- Genesis 26:2–3 ಆದಿಕಾಂಡ 26:2–3ಆಗ ಕರ್ತನು ಅವನಿಗೆ ಕಾಣಿಸಿಕೊಂಡು--ಐಗುಪ್ತಕ್ಕೆ ಇಳಿದು ಹೋಗಬೇಡ. ನಾನು ನಿನಗೆ ಹೇಳುವ ದೇಶದಲ್ಲಿ ವಾಸವಾಗಿರು. ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.
- Jonah 4:2 ಯೋನ 4:2ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಓ ಕರ್ತನೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನೇ ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು; ನೀನು ಕರುಣೆಯೂ ಕನಿಕರವೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳದೇವರೆಂದೂ ಕೇಡಿನ ವಿಷಯವಾಗಿ ಪಶ್ಚಾತ್ತಾಪ ಪಡುವಾತನೆಂದೂ ನನಗೆ ತಿಳಿದಿತ್ತು.
- Hosea 11:8 ಹೋಶೇಯ 11:8ಎಫ್ರಾಯಾಮೇ, ನಾನು ನಿನ್ನನ್ನು ಬಿಟ್ಟು ಬಿಡುವದು ಹೇಗೆ? ಇಸ್ರಾಯೇಲೇ, ನಿನ್ನನ್ನು ನಾನು ಬಿಡಿಸುವದು ಹೇಗೆ? ನಾನು ನಿನ್ನನ್ನು ಅದ್ಮದ ಹಾಗೆ ಮಾಡುವದು ಹೇಗೆ? ನಾನು ನಿನ್ನನ್ನು ಜೆಬೋಯಾಮಿನ ಹಾಗೆ ಸ್ಥಾಪಿಸುವದು ಹೇಗೆ? ನನ್ನ ಹೃದಯವು ನನ್ನಲ್ಲಿ ತಿರುಗಿಕೊಂಡಿದೆ. ನನ್ನ ಪಶ್ಚಾತ್ತಾಪಗಳು ಒಟ್ಟಿಗೆ ಹತ್ತಿ ಕೊಂಡಿವೆ.