Jeremiah · chapter 43 · verse 9
Jeremiah 43:9 in Kannada
ಹೇಗಂದರೆ--ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತಕ್ಕೊಂಡು ತಹಪನೇಸಿನಲ್ಲಿರುವ ಫರೋಹನ ಮನೆಯ ಪ್ರವೇಶದಲ್ಲಿರುವ ಇಟ್ಟಿಗೆ ಭಟ್ಟಿಯ ಮಣ್ಣಿನಲ್ಲಿ ಯೆಹೂದದ ಮನುಷ್ಯರ ಮುಂದೆ ಬಚ್ಚಿಟ್ಟು ಅವರಿಗೆ ಹೇಳತಕ್ಕದ್ದೇನಂದರೆ--
Hegandare--ninna kaiyalli dodda kallugalannu takkondu tahapanesinalliruva pharohana maneya praveshadalliruva ittige bhattiya manninalli yehoodada manushyara munde bachchittu avarige helatakkaddenandare--
Jeremiah 43:9 in English
- King James Version (KJV)
- Take great stones in thine hand, and hide them in the clay in the brickkiln, which [is] at the entry of Pharaoh’s house in Tahpanhes, in the sight of the men of Judah;
- World English Bible (WEB)
- “Take great stones in your hand and hide them in mortar in the brick work which is at the entry of Pharaoh’s house in Tahpanhes, in the sight of the men of Judah.
- American Standard Version (ASV)
- Take great stones in thy hand, and hide them in mortar in the brickwork, which is at the entry of Pharaoh’s house in Tahpanhes, in the sight of the men of Judah;
- Bible in Basic English (BBE)
- Take in your hand some great stones, and put them in a safe place in the paste in the brickwork which is at the way into Pharaoh's house in Tahpanhes, before the eyes of the men of Judah;
- Darby Translation (DBY)
- Take great stones in thy hand, and hide them in the clay in the brick-kiln, which is at the entry of Pharaoh's house in Tahpanhes, in the sight of the Jews,
- Webster's Bible (WBS)
- Take great stones in thy hand, and hide them in the clay in the brick-kiln, which [is] at the entry of Pharaoh's house in Tahpanhes, in the sight of the men of Judah;
- Young's Literal Translation (YLT)
- 'Take in thy hand great stones, and thou hast hidden them, in the clay, in the brick-kiln, that [is] at the opening of the house of Pharaoh in Tahpanhes, before the eyes of the men of Judah,
Read in context
- 7ಅವರು ಕರ್ತನ ಮಾತಿಗೆ ಕಿವಿಗೊಡಲಿಲ್ಲ; ಹೀಗೆ ಅವರು ತಹಪನೇಸಿಗೆ ಬಂದರು.
- 8ಆಗ ತಹಪನೇಸಿನಲ್ಲಿ ಕರ್ತನ ವಾಕ್ಯವು ಯೆರೆವಿಾ ಯನಿಗೆ ಉಂಟಾಯಿತು.
- 9ಹೇಗಂದರೆ--ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತಕ್ಕೊಂಡು ತಹಪನೇಸಿನಲ್ಲಿರುವ ಫರೋಹನ ಮನೆಯ ಪ್ರವೇಶದಲ್ಲಿರುವ ಇಟ್ಟಿಗೆ ಭಟ್ಟಿಯ ಮಣ್ಣಿನಲ್ಲಿ ಯೆಹೂದದ ಮನುಷ್ಯರ ಮುಂದೆ ಬಚ್ಚಿಟ್ಟು ಅವರಿಗೆ ಹೇಳತಕ್ಕದ್ದೇನಂದರೆ--
- 10ಇಸ್ರಾ ಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಕಳುಹಿಸಿ ನನ್ನ ಸೇವಕನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಕರೆಯಿಸಿ ನಾನು ಬಚ್ಚಿಟ್ಟಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಇಡುವೆನು; ಅವನು ತನ್ನ ಮೇಲ್ಕಟ್ಟನ್ನು ಅವುಗಳ ಮೇಲೆ ಹಾಸುವನು.
- 11ಅವನು ಬಂದು ಐಗುಪ್ತದೇಶವನ್ನು ಹೊಡೆದು ಮರಣಕ್ಕೆ ಇರುವವರನ್ನು ಮರಣಕ್ಕೂ ಸೆರೆಗೆ ಇರುವವರನ್ನು ಸೆರೆಗೂ ಕತ್ತಿಗೆ ಇರುವವರನ್ನು ಕತ್ತಿಗೂ ಒಪ್ಪಿಸುವನು.
Cross references
- Jeremiah 19:1–15 ಯೆರೆಮೀಯ 19:1–15ಕರ್ತನು ಹೀಗೆ ಹೇಳುತ್ತಾನೆ--ಹೋಗಿ, ಕುಂಬಾರನ ಮಣ್ಣಿನ ಕೂಜೆಯನ್ನು ತಕ್ಕೊಂಡು, ಜನರ ಹಿರಿಯರಿಂದಲೂ ಯಾಜಕರ ಹಿರಿಯರಿಂದಲೂ ಕೆಲವರನ್ನು ಕರಕೊಂಡು ಮೂಡಣ ಬಾಗಿಲಿನ ಪ್ರವೇಶದ ಬಳಿಯಲ್ಲಿ ಹಿನ್ನೋಮನ ಮಗನ ತಗ್ಗಿಗೆ ಹೋಗಿ, ನಾನು ನಿನಗೆ ಹೇಳುವ ಮಾತುಗಳನ್ನು ಅಲ್ಲಿ ಸಾರಿ ಹೇಳು. ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗನ್ನುತ್ತಾನೆ--ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ; ಅದನ್ನು ಕೇಳುವವ ರೆಲ್ಲರ ಕಿವಿಗಳು ಗುಂಯ್ಗುಟ್ಟುವವು. ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಪರಸ್ಥಳ ಮಾಡಿ, ಅವರೂ ಅವರ ತಂದೆಗಳೂ ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪಸುಟ್ಟು ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತ ದಿಂದ ತುಂಬಿಸಿ ತಮ್ಮ ಮಕ್ಕಳನ್ನು ಬಾಳನಿಗೆ ದಹನ ಬಲಿಗಳಾಗಿ ಬೆಂಕಿಯಲ್ಲಿ ಸುಡುವದಕ್ಕೆ ಬಾಳನ ಉನ್ನತ ಸ್ಥಳಗಳನ್ನು ಕಟ್ಟಿದ್ದಾರೆ. ಇಂಥದ್ದನ್ನು ನಾನು ಆಜ್ಞಾ ಪಿಸಲಿಲ್ಲ, ನಾನು ಹೇಳಲಿಲ್ಲ, ನನ್ನ ಮನಸ್ಸಿಗೆ ಬರಲಿಲ್ಲ. ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಇಗೋ, ದಿನಗಳು ಬರುವವು; ಆಗ ಈ ಸ್ಥಳವು ಇನ್ನು ತೋಫೆತೆಂದು, ಹಿನ್ನೋಮನ ಮಗನ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲ್ಪಡುವದು. ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು; ಅವರ ಶತ್ರುಗಳ ಮುಂದೆಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಿಂದಲೂ ಅವರನ್ನು ಕತ್ತಿಯಿಂದ ಬೀಳು ವಂತೆ ಮಾಡುವೆನು; ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು. ಈ ಪಟ್ಟಣಗಳನ್ನು ಹಾಳಾಗಿಯೂ ತಿರಸ್ಕರಿಸಲ್ಪಡುವಂತೆಯೂ ಮಾಡುವೆನು; ಅದನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಹೊಂದಿ ಸಿಳ್ಳು ಹಾಕುವರು. ಅವರು ತಮ್ಮ ಕುಮಾರರ ಕುಮಾರ್ತೆಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು; ಮುತ್ತಿಗೆಯಲ್ಲಿ ಸಹ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು. ಆಗ ನೀನು ನಿನ್ನ ಸಂಗಡ ಬಂದ ಮನುಷ್ಯರ ಮುಂದೆ ಆ ಕೂಜೆಯನ್ನು ಒಡೆದು, ಅವರಿಗೆ ಹೇಳಬೇಕಾದದ್ದೇ ನಂದರೆ, ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಯಾವ ಪ್ರಕಾರ ಒಬ್ಬನು ಕುಂಬಾರನ ಪಾತ್ರೆಯನ್ನು ಅದು ತಿರಿಗಿ ಒಂದುಗೂಡದ ಹಾಗೆ ಒಡೆಯುತ್ತಾನೋ ಅದೇ ಪ್ರಕಾರ ನಾನು ಈ ಜನವನ್ನೂ ಈ ಪಟ್ಟಣ ವನ್ನೂ ಒಡೆದು ಬಿಡುವೆನು; ಆಗ ಹೂಣಿಡುವದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಣಿಡುವರು. ಹೀಗೆ ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ಮಾಡು ವೆನೆಂದು ಕರ್ತನು ಹೇಳುತ್ತಾನೆ; ಈ ಪಟ್ಟಣವನ್ನು ತೋಫೆತಿನ ಹಾಗೆಯೇ ಮಾಡುವೆನು. ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪಸುಟ್ಟು ಬೇರೆ ದೇವರುಗಳಿಗೆ ಪಾನದ ಅರ್ಪಣೆ ಗಳನ್ನು ಹೊಯ್ದಿದ್ದಾರೋ ಆ ಎಲ್ಲಾ ಮನೆಗಳ ನಿಮಿತ್ತ ವಾಗಿ ಯೆರೂಸಲೇಮಿನ ಮನೆಗಳೂ ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವವು. ಆಗ ಕರ್ತನು ಯೆರೆವಿಾಯನನ್ನು ಪ್ರವಾದಿಸು ವದಕ್ಕೆ ಕಳುಹಿಸಿದ ತೋಫೆತಿನಿಂದ ಬಂದು ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಜನರಿಗೆಲ್ಲಾ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣದ ಮೇಲೆಯೂ ಅದರ ಎಲ್ಲಾ ಊರುಗಳ ಮೇಲೆಯೂ ನಾನು ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ಬರ ಮಾಡುತ್ತೇನೆ; ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಕುತ್ತಿಗೆಗಳನ್ನು ಕಠಿಣ ಮಾಡಿಕೊಂಡಿದ್ದಾರೆ. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣದ ಮೇಲೆಯೂ ಅದರ ಎಲ್ಲಾ ಊರುಗಳ ಮೇಲೆಯೂ ನಾನು ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ಬರ ಮಾಡುತ್ತೇನೆ; ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಕುತ್ತಿಗೆಗಳನ್ನು ಕಠಿಣ ಮಾಡಿಕೊಂಡಿದ್ದಾರೆ.
- Jeremiah 51:63–64 ಯೆರೆಮೀಯ 51:63–64ನೀನು ಈ ಪುಸ್ತಕವನ್ನು ಓದಿ ಮುಗಿಸಿದ ಮೇಲೆ ಅದಕ್ಕೆ ಕಲ್ಲುಕಟ್ಟಿ ಅದನ್ನು ಯೂಫ್ರೇಟೀಸಿನ ಮಧ್ಯದಲ್ಲಿ ಬಿಸಾಡಿ ಹೀಗೆ ಹೇಳು--ಈ ಪ್ರಕಾರ ಬಾಬೆಲ್ ಮುಳುಗಿಹೋಗುವದು;ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು, ಅವರು ಆಯಾಸ ಪಡುವರು. ಇಲ್ಲಿಯ ತನಕ ಯೆರೆವಿಾಯನ ವಾಕ್ಯಗಳು. ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು, ಅವರು ಆಯಾಸ ಪಡುವರು. ಇಲ್ಲಿಯ ತನಕ ಯೆರೆವಿಾಯನ ವಾಕ್ಯಗಳು.
- Jeremiah 18:2–12 ಯೆರೆಮೀಯ 18:2–12ಎದ್ದು ಕುಂಬಾರನ ಮನೆಗೆ ಇಳಿದು ಹೋಗು; ಅಲ್ಲಿ ನಿನಗೆ ನನ್ನ ವಾಕ್ಯಗಳನ್ನು ಕೇಳಮಾಡುವೆನು ಎಂಬದೇ. ಆಗ ನಾನು ಕುಂಬಾರನ ಮನೆಗೆ ಇಳಿದುಹೋದೆನು; ಇಗೋ, ಅವನು ಚಕ್ರದ ಮೇಲೆ ಕೆಲಸಮಾಡುತ್ತಿದ್ದನು. ಅವನು ಮಣ್ಣಿನಿಂದ ಮಾಡಿದ ಪಾತ್ರೆ ಕುಂಬಾರನ ಕೈಯಲ್ಲಿ ಕೆಟ್ಟುಹೋಯಿತು; ಆಗ ಕುಂಬಾರನಿಗೆ ಒಳ್ಳೇದೆಂದು ತೋರುವ ಪ್ರಕಾರ ಅದನ್ನು ಮತ್ತೊಂದು ಪಾತ್ರೆ ಯನ್ನಾಗಿ ಮಾಡಿದನು. ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ-- ಓ ಇಸ್ರಾಯೇಲಿನ ಮನೆತನದ ವರೇ, ನಾನು ಈ ಕುಂಬಾರನ ಹಾಗೆ ನಿಮಗೆ ಮಾಡ ಕೂಡದೋ ಎಂದು ಕರ್ತನು ಅನ್ನುತ್ತಾನೆ. ಇಗೋ, ಕುಂಬಾರನ ಕೈಯಲ್ಲಿ ಮಣ್ಣು ಹೇಗೋ ಹಾಗೆಯೇ ಓ ಇಸ್ರಾಯೇಲಿನ ಮನೆತನದವರೇ, ನನ್ನ ಕೈಯಲ್ಲಿ ನೀವು ಇದ್ದೀರಿ. ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವದಕ್ಕೂ ಕೆಡವುವ ದಕ್ಕೂ ನಾಶಮಾಡುವದಕ್ಕೂ ಮಾತಾಡುತ್ತೇನೋ ಆ ಜನಾಂಗಕ್ಕೆ ವಿರೋಧವಾಗಿ ನಾನು ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಪಶ್ಚಾ ತ್ತಾಪ ಪಡುವೆನು. ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವದಕ್ಕೂ ನೆಡುವದಕ್ಕೂ ಮಾತನಾಡುತ್ತೇನೋ ಅದು ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ ನಾನು ಅದಕ್ಕೆ ಮೇಲನ್ನು ಮಾಡುತ್ತೇನೆಂದು ಹೇಳಿದ ಒಳ್ಳೇದನ್ನು ಕುರಿತು ಪಶ್ಚಾತ್ತಾಪಪಡುವೆನು. ಹೀಗಿರುವದರಿಂದ ಈಗ ಯೆಹೂದದ ಮನುಷ್ಯ ರಿಗೂ ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ; ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ; ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂತಿರುಗಿರಿ, ನಿಮ್ಮ ಮಾರ್ಗಗಳನ್ನೂ ಕ್ರಿಯೆಗಳನ್ನೂ ಒಳ್ಳೇದಾಗ ಮಾಡಿರಿ ಎಂಬದು. ಆದರೆ ಅವರು--ನಿರೀಕ್ಷೆಯಿಲ್ಲ; ಸ್ವಂತ ಆಲೋಚನೆಗಳ ಪ್ರಕಾರ ನಡೆದುಕೊಳ್ಳುವೆವು; ನಮ್ಮ ನಮ್ಮ ಕೆಟ್ಟ ಹೃದಯಗಳ ಕಲ್ಪನೆಯ ಪ್ರಕಾರ ಮಾಡುವೆವು ಅಂದರು.
- Nahum 3:14 ನಹೂಮ 3:14ಮುತ್ತಿಗೆಗೋಸ್ಕರ ನೀರನ್ನು ಸೇದು ನಿನ್ನ ಬಲವಾದ ಕೋಟೆಗಳನ್ನು ಭದ್ರ ಮಾಡು; ಕೆಸರಿನಲ್ಲಿ ಸೇರು ಮಣ್ಣನ್ನು ತುಳಿ, ಇಟ್ಟಿಗೆ ಗೂಡನ್ನು ಬಲಪಡಿಸು.
- Jeremiah 13:1–11 ಯೆರೆಮೀಯ 13:1–11ಕರ್ತನು ನನಗೆ--ನೀನು ಹೋಗಿ ನಾರಿನ ದಟ್ಟಿಯನ್ನು ತೆಗೆದುಕೊಂಡು ನಿನ್ನ ನಡುವಿಗೆ ಕಟ್ಟು, ಆದರೆ ಅದನ್ನು ನೀರಿನಲ್ಲಿ ಹಾಕಬೇಡ ಅಂದನು; ಆಗ ಕರ್ತನ ಮಾತಿನ ಪ್ರಕಾರ ನಾನು ಆ ದಟ್ಟಿಯನ್ನು ತಕ್ಕೊಂಡು ನನ್ನ ನಡುವಿಗೆ ಕಟ್ಟಿಕೊಂಡೆನು. ಆಗ ಕರ್ತನ ವಾಕ್ಯವು ನನಗೆ ಎರಡನೇ ಸಾರಿ ಉಂಟಾಗಿ ಹೇಳಿದ್ದೆನಂದರೆ--ನೀನು ನಿನ್ನ ನಡುವಿನಲ್ಲಿರುವ ದಟ್ಟಿಯನ್ನು ತಕ್ಕೊಂಡು ಎದ್ದು ಯೂಫ್ರೇಟೀಸ್ಗೆ ಹೋಗಿ ಅದನ್ನು ಅಲ್ಲಿ ಬಂಡೆಯ ಬಿರುಕಿನಲ್ಲಿ ಅಡಗಿಸು ಎಂದಿತು. ಆಗ ನಾನು ಹೋಗಿ ಕರ್ತನು ನನಗೆ ಆಜ್ಞಾಪಿಸಿದ ಪ್ರಕಾರ ಅದನ್ನು ಯೂಫ್ರೇಟೀಸ್ ಬಳಿ ಯಲ್ಲಿ ಅಡಗಿಸಿದೆನು. ಬಹಳ ದಿವಸಗಳಾದ ಮೇಲೆ ಕರ್ತನು ನನಗೆ--ನೀನು ಎದ್ದು ಯೂಫ್ರೆಟೀ ಸ್ಗೆ ಹೋಗಿ ಅಲ್ಲಿ ಅಡಗಿಸಬೇಕೆಂದು ನಾನು ಆಜ್ಞಾಪಿಸಿದ ದಟ್ಟಿಯನ್ನು ಅಲ್ಲಿಂದ ತಕ್ಕೋ ಅಂದನು. ಆಗ ನಾನು ಯೂಫ್ರೇಟೀಸಿಗೆ ಹೋಗಿ ಅಗೆದು ಆ ದಟ್ಟಿಯನ್ನು ನಾನು ಅಡಗಿಸಿದ್ದಲ್ಲಿಂದ ತೆಗೆದೆನು; ಇಗೋ, ಆ ದಟ್ಟಿಯು ಯಾವ ಕೆಲಸಕ್ಕಾದರೂ ಬಾರದೆ ಕೆಟ್ಟು ಹೋಗಿತ್ತು. ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ-- ಕರ್ತನು ಹೀಗೆ ಹೇಳುತ್ತಾನೆ --ಈ ಪ್ರಕಾರ ನಾನು ಯೆಹೂದದ ಗರ್ವವನ್ನೂ ಯೆರೂಸಲೇಮಿನ ದೊಡ್ಡ ಗರ್ವವನ್ನೂ ಕೆಡಿಸುವೆನು. ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡಕೊಂಡು ಬೇರೆ ದೇವರುಗಳನ್ನು ಸೇವಿಸುವದಕ್ಕೂ ಅವುಗಳನ್ನು ಆರಾಧಿಸುವದಕ್ಕೂ ಹಿಂಬಾಲಿಸುವ ಈ ಕೆಟ್ಟ ಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು. ಯಾವ ಪ್ರಕಾರ ದಟ್ಟಿಯು ಮನುಷ್ಯನ ನಡುವಿಗೆ ಹತ್ತಿಕೊ ಳ್ಳುವದೋ ಅದೇ ಪ್ರಕಾರ ನಾನು ಇಸ್ರಾಯೇಲಿನ ಮನೆತನವನ್ನೆಲ್ಲವನ್ನೂ ಯೆಹೂದದ ಮನೆತನವ ನ್ನೆಲ್ಲವನ್ನೂ ನನಗೆ ಜನರೂ ಹೆಸರೂ ಸ್ತೋತ್ರವೂ ಮಹಿಮೆಯೂ ಆಗುವ ಹಾಗೆ ನನಗೆ ಹತ್ತಿಕೊಳ್ಳುವಂತೆ ಮಾಡಿದೆನು; ಆದರೆ ಅವರು ಕೇಳಲಿಲ್ಲ.
- Acts 21:11 ಅಪೊಸ್ತಲರ ಕೃತ್ಯಗಳು 21:11ಅವನು ನಮ್ಮ ಬಳಿಗೆ ಬಂದು ಪೌಲನ ನಡುಕಟ್ಟನ್ನು ತೆಗೆದು ತನ್ನ ಸ್ವಂತ ಕೈಕಾಲುಗಳನ್ನು ಕಟ್ಟಿಕೊಂಡು--ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಯೆರೂಸಲೇಮಿನಲ್ಲಿ ಹೀಗೆ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸುವರು ಎಂದು ಪವಿತ್ರಾತ್ಮನು ಹೇಳುತ್ತಾನೆ ಅಂದ
- 2 Samuel 12:31 2 ಸಮುವೇಲನು 12:31ಆದರೆ ಅದರಲ್ಲಿದ್ದ ಜನರನ್ನು ಅವನು ಹೊರಗೆ ತಂದು ಅವರನ್ನು ಗರಗಸ ಸಲಿಕೆ ಕೊಡ್ಲಿಯ ಕೆಲಸಕ್ಕೂ ಇಟ್ಟಿಗೆ ಭಟ್ಟಿಯ ಕೆಲಸಕ್ಕೂ ಇಟ್ಟನು. ಈ ಪ್ರಕಾರವೇ ಅಮ್ಮೊನನ ಮಕ್ಕಳ ಎಲ್ಲಾ ಪಟ್ಟಣಗಳಿಗೂ ಮಾಡಿ ದಾವೀದನೂ ಜನರೆಲ್ಲರೂ ಯೆರೂಸಲೇಮಿಗೆ ತಿರಿಗಿ ಬಂದರು.
- Isaiah 20:1–4 ಯೆಶಾಯ 20:1–4ತರ್ತಾನನು ಅಶ್ಶೂರಿನ ಅರಸನಾದ ಸರ್ಗೋನನು ಅವನನ್ನು ಕಳುಹಿಸಿದ್ದದ ರಿಂದ ಅಷ್ಡೋದಿಗೆ ಬಂದ ವರ್ಷದಲ್ಲಿ ಅವನು ಅಷ್ಡೋದಿಗೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದಾಗ, ಅದೇ ಸಮಯದಲ್ಲಿ ಕರ್ತನು ಆಮೋ ಚನ ಮಗನಾದ ಯೆಶಾಯನಿಗೆ ಹೋಗಿ ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು, ನಿನ್ನ ಪಾದಗಳ ಲ್ಲಿರುವ ಕೆರಗಳನ್ನು ತೆಗೆದಿಡು ಎಂದು ಹೇಳಿದನು. ಅವನು ಹಾಗೆ ಮಾಡಿ ಬೆತ್ತಲೆಯಾಗಿ ಕೆರವಿಲ್ಲದೆ ತಿರು ಗುತ್ತಿದ್ದನು. ಕರ್ತನು ಹೇಳಿದ್ದೇನಂದರೆ, ನನ್ನ ಸೇವಕ ನಾದ ಯೆಶಾಯನು ಐಗುಪ್ತಕ್ಕೂ ಐಥಿಯೋಪಿ ಯಕ್ಕೂ ಗುರುತಾಗಿಯೂ ಆಶ್ಚರ್ಯವಾಗಿಯೂ ಹೀಗೆ ಮೂರು ವರ್ಷ ಬೆತ್ತಲೆಯಾಗಿ ಕೆರವಿಲ್ಲದೆ ನಡೆದನು. ಹಾಗೆಯೇ ಅಶ್ಶೂರಿನ ಅರಸನು ಐಗುಪ್ತ್ಯರನ್ನು ಬಂಧಿಸಿ ಐಥಿಯೋಪಿಯಾದ ಕೈದಿಗಳನ್ನು ಅವರು ದೊಡ್ಡವರಾಗಲಿ ಸಣ್ಣವರಾಗಲಿ ಬಟ್ಟೆ ಕೆರಗಳಿಲ್ಲದೆ ಬರಿ ಕುಂಡಿಯವರಾಗಿ ಐಗುಪ್ತದ ಮಾನಭಂಗಕ್ಕೋ ಸ್ಕರ ಸೆರೆಗೆ ನಡೆಯುವಂತೆ ಮಾಡುವನು.
- Hosea 12:10 ಹೋಶೇಯ 12:10ನಾನು ಪ್ರವಾದಿಗಳ ಮುಖಾಂತರ ಸಹ ನಿನ್ನೊಂದಿಗೆ ಮಾತನಾಡಿದ್ದೇನೆ, ನಾನು ದರ್ಶನಗಳನ್ನು ಹೆಚ್ಚಿಸಿದ್ದೇನೆ, ಇದಲ್ಲದೆ ಪ್ರವಾದಿಗಳ ಸೇವೆಯ ಮುಖಾಂತರ ಸಾಮ್ಯಗಳನ್ನು ಉಪಯೋಗಿಸಿದ್ದೇನೆ.
- Revelation 18:21 ಪ್ರಕಟನೆ 18:21ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.
- 1 Kings 11:29–31 1 ಅರಸುಗಳು 11:29–31ಆ ಕಾಲದಲ್ಲಿ ಏನಾಯಿತಂದರೆ, ಯಾರೊಬ್ಬಾಮನು ಯೆರೊಸಲೇಮಿ ನೊಳಗಿಂದ ಹೊರಟು ಹೋಗುವಾಗ ಶೀಲೋನ್ಯ ನಾದ ಅಹೀಯನೆಂಬ ಪ್ರವಾದಿಯು ಅವನನ್ನು ಹಾದಿ ಯಲ್ಲಿ ಕಂಡನು. ಅವನು ಹೊಸ ವಸ್ತ್ರವನ್ನು ಹೊದ್ದು ಕೊಂಡಿದ್ದನು. ಅವರಿಬ್ಬರೂ ಹೊಲದಲ್ಲಿ ಒಂಟಿಯಾ ಗಿದ್ದರು. ಆಗ ಅಹೀಯನು ತನ್ನ ಮೇಲೆ ಇರುವ ವಸ್ತ್ರವನ್ನು ಹಿಡಿದು ಹನ್ನೆರಡು ತುಂಡುಗಳಾಗಿ ಹರಿದು ಯಾರೊಬ್ಬಾಮನಿಗೆ--ಈ ಹತ್ತು ತುಂಡುಗಳನ್ನು ನೀನು ತೆಗೆದುಕೋ. ಇದಕ್ಕೆ ಇಸ್ರಾಯೇಲಿನ ದೇವರಾದ ಕರ್ತನು--ಇಗೋ, ನಾನು ಸೊಲೊಮೋನನ ಕೈ ಯಿಂದ ರಾಜ್ಯವನ್ನು ಕಿತ್ತುಕೊಂಡು ಹತ್ತು ಗೋತ್ರ ಗಳನ್ನು ನಿನಗೆ ಕೊಡುವೆನು.
- Ezekiel 4:1–17 ಯೆಹೆಜ್ಕೇಲನು 4:1–17ಇದಲ್ಲದೆ ಮನುಷ್ಯಪುತ್ರನೇ, ನೀನು ಒಂದು ಹಂಚನ್ನು ತೆಗೆದುಕೊಂಡು ನಿನ್ನ ಮುಂದಿಟ್ಟು ಅದರ ಮೇಲೆ ಯೆರೂಸಲೇಮ್ ನಗರದ ನಕ್ಷೆಯನ್ನು ಬರೆ. ಅದಕ್ಕೆ ಮುತ್ತಿಗೆ ಹಾಕಿ ಎದುರಾಗಿ ಒಂದು ಕೋಟೆಯನ್ನು ಕಟ್ಟು. ಇದಲ್ಲದೆ ಎದುರಾಗಿ ಒಂದು ದಿಬ್ಬವನ್ನು ಕಟ್ಟು; ಎದುರಾಗಿ ಒಂದು ದಂಡನ್ನು ಇರಿಸಿ ವಿರೋಧವಾಗಿ ಸುತ್ತಲೂ ಭಿತ್ತಿಭೇದಕ ಮಾಡು ವಂಥ ಆಯುಧಗಳನ್ನು ಇಡು. ಇದಾದ ಮೇಲೆ ನೀನು ಒಂದು ಕಬ್ಬಿಣದ ತಟ್ಟೆಯನ್ನು ತೆಗೆದುಕೊಂಡು ಅದನ್ನು ಕಬ್ಬಿಣದ ಗೋಡೆಯೆಂದು ತಿಳಿದು ನಿನಗೂ ನಗರಕ್ಕೂ ಮಧ್ಯದಲ್ಲಿ ಇರಿಸು. ಆಮೇಲೆ ಅದಕ್ಕೆ ಎದುರಾಗಿ ನಿನ್ನ ಮುಖವನ್ನು ಇಡು. ಆಗ ಅದು ಮುತ್ತಲ್ಪಡುವದು; ನೀನು ಅದಕ್ಕೆ ಎದುರಾಗಿ ಮುತ್ತಿ ದಂತಾಗುವದು. ಇದು ಇಸ್ರಾಯೇಲ್ ಮನೆತನದ ಗುರುತಾಗಿರುವದು. ನೀನು ನಿನ್ನ ಎಡಪಾರ್ಶ್ವದಲ್ಲಿ ಮಲಗಿ ಇಸ್ರಾ ಯೇಲ್ ವಂಶದವರ ಅಕ್ರಮಗಳನ್ನು ಅದರ ಮೇಲಿಡ ಬೇಕು; ನೀನು ಅದರ ಮೇಲೆ ಮಲಗುವ ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮಗಳನ್ನು ಹೊತ್ತುಕೊಂಡಿ ರಬೇಕು. ನಾನು ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮದ ವರ್ಷಗಳನ್ನು ನಿನಗೆ ನೇಮಿಸಿದ್ದೇನೆ. ಅವು ಮುನ್ನೂರತೊಂಭತ್ತು ದಿವಸಗಳಾಗಿವೆ; ಹೀಗೆ ನೀನು ಇಸ್ರಾಯೇಲ್ಯರ ಮನೆತನದವರ ಅಕ್ರಮಗಳನ್ನು ಹೊರಬೇಕು. ನೀನು ಇವುಗಳನ್ನು ಮಾಡಿದ ಮೇಲೆ ಇನ್ನೊಂದು ಸಾರಿ ಬಲಪಾರ್ಶ್ವದಲ್ಲಿ ಮಲಗಿ ಯೆಹೂ ದನ ಮನೆಯ ಅಕ್ರಮವನ್ನು ನಲವತ್ತು ದಿವಸ ಹೊರಬೇಕು; ನಾನು ನಿನಗೆ ಒಂದೊಂದು ದಿನವನ್ನು ಒಂದೊಂದು ವರ್ಷಕ್ಕೆ ನೇಮಿಸಿದ್ದೇನೆ. ಆದದರಿಂದ ಯೆರೂಸಲೇಮಿನ ಮುತ್ತಿಗೆಯ ಕಡೆಗೆ ನಿನ್ನ ಮುಖವನ್ನು ಇಡಬೇಕು; ನಿನ್ನ ಭುಜವನ್ನು ನೀನು ಬರಿದುಮಾಡಿ ಕೊಂಡು ಅದಕ್ಕೆ ವಿರೋಧವಾಗಿ ಪ್ರವಾದಿಸಬೇಕು. ಇಗೋ, ನಾನು ನಿನ್ನ ಮೇಲೆ ಬಂಧನಗಳನ್ನು ಇಡು ತ್ತೇನೆ. ನೀನು ನಿನ್ನ ಮುತ್ತಿಗೆಯ ದಿವಸಗಳು ಮುಗಿ ಯುವವರೆಗೂ ಒಂದು ಪಾರ್ಶ್ವದಿಂದ ಮತ್ತೊಂದು ಪಾರ್ಶ್ವಕ್ಕೆ ತಿರುಗಿಕೊಳ್ಳಬಾರದು. ಇದಲ್ಲದೆ ನೀನು ಗೋಧಿ, ಬಾರ್ಲಿ, ಅವರೆ, ಅಲ ಸಂದಿ, ನವಣೆ, ಸಜ್ಜೆಗಳನ್ನು ತೆಗೆದುಕೊಂಡು ಅವುಗಳನ್ನು ಒಂದು ಮಡಿಕೆಯಲ್ಲಿಟ್ಟು ನೀನು ನಿನ್ನ ಪಾರ್ಶ್ವದಲ್ಲಿ ಮಲಗುವ ದಿವಸಗಳ ಲೆಕ್ಕದ ಪ್ರಕಾರ ನಿನಗಾಗಿ ರೊಟ್ಟಿಯನ್ನು ಮಾಡಿಕೊಂಡು ಮುನ್ನೂರ ತೊಂಭತ್ತು ದಿನಗಳು ಅದರಿಂದಲೇ ತಿನ್ನಬೇಕು. ನೀನು ತಿನ್ನುವ ಆಹಾರದ ತೂಕದ ಪ್ರಕಾರ ಅದು ಒಂದು ದಿನಕ್ಕೆ ಇಪ್ಪತ್ತು ಶೇಕೆಲುಗಳಾಗಿರಬೇಕು. ಕಾಲಕಾಲಕ್ಕೆ ಸರಿಯಾಗಿ ಅದನ್ನು ತಿನ್ನಬೇಕು. ನೀನು ನೀರನ್ನು ಸಹ ಅಳತೆಯ ಪ್ರಕಾರ ಕುಡಿಯಬೇಕು. ಹಿನ್ನಿನ ಆರನೆಯ ಪಾಲನ್ನು ಕಾಲಕಾಲಕ್ಕೆ ಸರಿಯಾಗಿ ಕುಡಿಯಬೇಕು. ಇದಲ್ಲದೆ ನೀನು ಆಹಾರವನ್ನು ಬಾರ್ಲಿಯ ರೊಟ್ಟಿಗಳಂತೆ ತಿನ್ನಬೇಕು; ಮತ್ತು ಅದನ್ನು ಮನುಷ್ಯನೊಳಗಿಂದ ಬರುವ ಮಲದಿಂದ ಅವರ ಕಣ್ಣುಗಳ ಮುಂದೆ ಅಡಿಗೆಮಾಡಬೇಕು; ಕರ್ತನು ಹೇಳಿದ್ದೇನಂದರೆ -- ಹೀಗೆಯೇ ಇಸ್ರಾಯೇಲ್ಯರ ಮಕ್ಕಳು ತಮ್ಮ ಅಶುದ್ಧವಾದ ರೊಟ್ಟಿಯನ್ನು ಅನ್ಯ ಜನಾಂಗಗಳೊಳಗೆ ತಿನ್ನುವರು. ಆಗ ನಾನು ಅವರನ್ನು ಓಡಿಸಿ ಬಿಡುತ್ತೇನೆ. ಆಮೇಲೆ ನಾನು--ಹಾ! ದೇವ ರಾದ ಕರ್ತನೇ, ಇಗೋ, ನನ್ನ ಪ್ರಾಣವು ಅಶುದ್ಧವಾಗ ಲಿಲ್ಲ, ಯಾಕಂದರೆ ನಾನು ಚಿಕ್ಕಂದಿನಿಂದ ಇಷ್ಟರವರೆಗೂ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನು ಅಥವಾ ಹರಿದು ಚೂರು ಚೂರಾಗಿರುವದನ್ನು ತಿನ್ನಲಿಲ್ಲ; ಇಲ್ಲವೆ ಅಸಹ್ಯ ವಾದ ಮಾಂಸವನ್ನಾದರೂ ನನ್ನ ಬಾಯಿಯ ಹತ್ತಿರ ತಂದಿಲ್ಲ ಎಂದೆನು. ಆಗ ಆತನು ನನಗೆ--ಇಗೋ, ಮನುಷ್ಯನ ಮಲಕ್ಕೆ ಬದಲಾಗಿ ಹಸುವಿನ ಸಗಣಿಯನ್ನು ನಿನಗೆ ಕೊಟ್ಟಿದ್ದೇನೆ; ಅದರಿಂದ ನೀನು ರೊಟ್ಟಿಯನ್ನು ತಯಾರಿಸಬಹುದು ಅಂದನು. ಇದಾದ ಮೇಲೆ ಆತನು ನನಗೆ ಮನುಷ್ಯ ಪುತ್ರನೇ, ಇಗೋ, ನಾನು ಯೆರೂಸಲೇಮಿನಲ್ಲಿ ಅನ್ನದಾನವನ್ನು ಮುರಿಯುವೆನು. ಅವರು ತೂಕದ ಪ್ರಕಾರ ಜಾಗರೂಕತೆಯಿಂದ ರೊಟ್ಟಿಯನ್ನು ತಿನ್ನುವರು. ನೀರನ್ನು ಅಳತೆಯ ಪ್ರಕಾರ ಆಶ್ಚರ್ಯದಿಂದ ಕುಡಿಯುವರು.ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಆಶ್ಚರ್ಯಪಟ್ಟು ಒಬ್ಬರ ಸಂಗಡ ಒಬ್ಬರು ತಮ್ಮ ಅಕ್ರಮಗಳಿಗಾಗಿ ಕ್ಷಯಿಸಿ ಹೋಗುವರು. ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಆಶ್ಚರ್ಯಪಟ್ಟು ಒಬ್ಬರ ಸಂಗಡ ಒಬ್ಬರು ತಮ್ಮ ಅಕ್ರಮಗಳಿಗಾಗಿ ಕ್ಷಯಿಸಿ ಹೋಗುವರು.
Original words (Hebrew)
- Take · H3947לָקַח lâqach
- great · H1419גָּדוֹל gâdôwl
- stones · H68אֶבֶן ʼeben
- hand · H3027יָד yâd
- hide · H2934טָמַן ṭâman
- clay · H4423מֶלֶט meleṭ
- brickkiln · H4404מַלְבֵּן malbên
- entry · H6607פֶּתַח pethach
- Pharaoh’s · H6547פַּרְעֹה Parʻôh
- house · H1004בַּיִת bayith
- Tahpanhes · H8471תַּחְפַּנְחֵס Tachpanchêç
- sight · H5869עַיִן ʻayin
- men · H582אֱנוֹשׁ ʼĕnôwsh
- Judah · H3064יְהוּדִי Yᵉhûwdîy