Jeremiah · chapter 44 · verse 10
Jeremiah 44:10 in Kannada
ಈ ದಿನದ ವರೆಗೂ ಅವರು ತಗ್ಗಿಸಿಕೊಳ್ಳಲಿಲ್ಲ, ಭಯಪಡಲಿಲ್ಲ; ನಾನು ನಿಮ್ಮ ಮುಂದೆಯೂ ನಿಮ್ಮ ತಂದೆಗಳ ಮುಂದೆಯೂ ಇಟ್ಟ ನನ್ನ ನ್ಯಾಯ ಪ್ರಮಾಣದಲ್ಲಿಯೂ ನನ್ನ ನಿಯಮಗಳಲ್ಲಿಯೂ ನಡೆಯಲಿಲ್ಲ.
Ee dinada varegoo avaru taggisikollalilla, bhayapadalilla; naanu nimma mundeyoo nimma tandegala mundeyoo itta nanna nyaaya pramaanadalliyoo nanna niyamagalalliyoo nadeyalilla.
Jeremiah 44:10 in English
- King James Version (KJV)
- They are not humbled [even] unto this day, neither have they feared, nor walked in my law, nor in my statutes, that I set before you and before your fathers.
- World English Bible (WEB)
- They are not humbled even to this day, neither have they feared, nor walked in my law, nor in my statutes, that I set before you and before your fathers.’
- American Standard Version (ASV)
- They are not humbled even unto this day, neither have they feared, nor walked in my law, nor in my statutes, that I set before you and before your fathers.
- Bible in Basic English (BBE)
- Even to this day their hearts are not broken, and they have no fear, and have not gone in the way of my law or of my rules which I gave to you and to your fathers.
- Darby Translation (DBY)
- They are not humbled unto this day, neither have they feared, nor walked in my law, nor in my statutes which I set before you and before your fathers.
- Webster's Bible (WBS)
- They are not humbled [even] to this day, neither have they feared, nor walked in my law, nor in my statutes, that I set before you and before your fathers.
- Young's Literal Translation (YLT)
- They have not been humbled unto this day, nor have they been afraid, nor have they walked in My law, and in My statutes, that I have set before you and before your fathers.
Read in context
- 8ಯಾಕೆ ನೀವು ನೀವೇ ನಿರ್ಮೂಲರಾಗುವ ಹಾಗೆಯೂ ನೀವು ಭೂಮಿಯ ಎಲ್ಲಾ ಜನಾಂಗಗಳಲ್ಲಿ ಶಾಪವೂ ನಿಂದೆಯೂ ಆಗುವ ಹಾಗೆಯೂ ನೀವು ತಂಗುವದಕ್ಕೆ ಹೋಗಿರುವ ಐಗುಪ್ತದೇಶದಲ್ಲಿ ಬೇರೆ ದೇವರುಗಳಿಗೆ ಧೂಪಸುಟ್ಟು, ನನಗೆ ಕೋಪವನ್ನು ಎಬ್ಬಿಸುತ್ತೀರಿ?
- 9ಯೆಹೂದದ ದೇಶದಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಅವರು ಮಾಡಿದಂಥ, ನಿಮ್ಮ ತಂದೆಗಳ ಕೆಟ್ಟತನಗಳನ್ನೂ ಯೆಹೂದದ ಅರಸರ ಕೆಟ್ಟತನಗಳನ್ನೂ ಅವರ ಹೆಂಡತಿಯರ ಕೆಟ್ಟತನಗಳನ್ನೂ ನಿಮ್ಮ ಸ್ವಂತ ಕೆಟ್ಟತನಗಳನ್ನೂ ನಿಮ್ಮ ಹೆಂಡತಿಯರ ಕೆಟ್ಟತನಗಳನ್ನೂ ಮರೆತು ಬಿಟ್ಟಿದ್ದೀರೋ?
- 10ಈ ದಿನದ ವರೆಗೂ ಅವರು ತಗ್ಗಿಸಿಕೊಳ್ಳಲಿಲ್ಲ, ಭಯಪಡಲಿಲ್ಲ; ನಾನು ನಿಮ್ಮ ಮುಂದೆಯೂ ನಿಮ್ಮ ತಂದೆಗಳ ಮುಂದೆಯೂ ಇಟ್ಟ ನನ್ನ ನ್ಯಾಯ ಪ್ರಮಾಣದಲ್ಲಿಯೂ ನನ್ನ ನಿಯಮಗಳಲ್ಲಿಯೂ ನಡೆಯಲಿಲ್ಲ.
- 11ಆದದ ರಿಂದ ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದವನ್ನೆಲ್ಲಾ ಕಡಿದು ಬಿಡುವದಕ್ಕೆ ನನ್ನ ದೃಷ್ಟಿ ಯನ್ನು ಕೇಡಿಗಾಗಿ ನಿಮಗೆ ವಿರೋಧವಾಗಿ ಇಡುತ್ತೇನೆ.
- 12ಐಗುಪ್ತದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ತಿರುಗಿಸಿರುವ ಯೆಹೂದದಲ್ಲಿ ಉಳಿದಿರುವವರನ್ನು ತಕ್ಕೊಳ್ಳುತ್ತೇನೆ; ಅವರೆಲ್ಲರೂ ಕಡಿದು ಬಿಡಲ್ಪಟ್ಟ ಐಗುಪ್ತದೇಶದಲ್ಲಿ ಬೀಳುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಕಡಿದು ಬಿಡಲ್ಪಡು ವರು; ಚಿಕ್ಕವನು ಮೊದಲುಗೊಂಡು ದೊಡ್ಡವನ ವರೆಗೂ ಕತ್ತಿಯಿಂದಲೂ ಕ್ಷಾಮದಿಂದಲೂ ಸಾಯು ವರು. ಅವರು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವರು.
Cross references
- Proverbs 28:14 ಜ್ಞಾನೋಕ್ತಿಗಳು 28:14ಯಾವಾಗಲೂ ಭಯದಿಂದ ಇರು ವವನು ಧನ್ಯನು; ತನ್ನ ಹೃದಯವನ್ನು ಕಠಿಣಪಡಿಸಿ ಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.
- Jeremiah 8:12 ಯೆರೆಮೀಯ 8:12ಇಲ್ಲ, ಸ್ವಲ್ಪ ವಾದರೂ ನಾಚಿಕೆಪಡಲಿಲ್ಲ; ಇಲ್ಲವೆ ಅವರು ಲಜ್ಜೆ ಯನ್ನು ಅರಿಯರು. ಆದದರಿಂದ ಬೀಳುವವರೊಳಗೆ ಅವರು ಬೀಳುವರು; ಅವರು ವಿಚಾರಿಸಲ್ಪಡುವ ಕಾಲದಲ್ಲಿ ಕೆಳಗೆ ಹಾಕಲ್ಪಡು ವರು ಎಂದು ಕರ್ತನು ಹೇಳುತ್ತಾನೆ.
- Revelation 15:4 ಪ್ರಕಟನೆ 15:4ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
- 1 Peter 5:6 1 ಪೇತ್ರನು 5:6ಹೀಗಿರುವದರಿಂದ ದೇವರ ತ್ರಾಣವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ತರುವನು.
- Malachi 4:2 ಮಲಾಕಿಯ 4:2ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
- Proverbs 14:16 ಜ್ಞಾನೋಕ್ತಿಗಳು 14:16ಜ್ಞಾನಿ ಯು ಭಯಪಟ್ಟು ಕೆಟ್ಟತನದಿಂದ ಹೊರಟುಹೋಗು ವನು; ಬುದ್ಧಿಹೀನನು ಕೋಪಿಸಿಕೊಂಡು ಧೈರ್ಯದಿಂದ ಇರುತ್ತಾನೆ.
- Jeremiah 10:7 ಯೆರೆಮೀಯ 10:7ಓ ಜನಾಂಗಗಳ ಅರಸನೇ, ನಿನಗೆ ಭಯಪಡದವ ನಾರು? ಅದು ನಿನಗೆ ಸಲ್ಲತಕ್ಕದ್ದು; ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ ಅವುಗಳ ಎಲ್ಲಾ ರಾಜ್ಯಗ ಳಲ್ಲಿಯೂ ನಿನ್ನ ಹಾಗೆ ಯಾರೂ ಇಲ್ಲ.
- Daniel 5:20–22 ದಾನಿಯೇಲನು 5:20–22ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು; ಅವನು ಮನುಷ್ಯರ ಮಕ್ಕಳೊಳಗಿಂದ ತೆಗೆಯಲ್ಪಟ್ಟನು; ಮಹೋನ್ನತನಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾನೆಂದೂ ಅವನು ತಿಳಿಯುವ ತನಕ ಬೇಕಾದವರನ್ನು ಅದಕ್ಕೆ ನೇಮಿಸುತ್ತಾನೆಂದೂ ಅವನು ತಿಳಿಯುವಷ್ಟರಲ್ಲಿ ಅವನ ಹೃದಯವು ಮೃಗಗಳ ಹೃದಯದಂತಾಯಿತು, ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು; ಅವನಿಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸಿದರು; ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು. ಅವನ ಮಗನಾದ ಓ ಬೇಲ್ಯಚ್ಚರನೇ--ನೀನು ಇದನ್ನೆಲ್ಲಾ ತಿಳಿದರೂ ನಿನ್ನ ಹೃದಯವನ್ನು ತಗ್ಗಿಸದೆ
- James 4:6–10 ಯಾಕೋಬನು 4:6–10ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ. ಹೀಗಿರಲಾಗಿ ದೇವರಿಗೆ ಒಳಗಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು. ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ. ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗೆಯು ದುಃಖಕ್ಕೂ ನಿಮ್ಮ ಸಂತೋಷವು ವ್ಯಥೆಗೂ ತಿರುಗಿಕೊಳ್ಳಲಿ. ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿ ಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆತ್ತುವನು.
- Exodus 10:3 ವಿಮೋಚನಕಾಂಡ 10:3ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು.
- Proverbs 16:6 ಜ್ಞಾನೋಕ್ತಿಗಳು 16:6ಕನಿಕರ ಮತ್ತು ಸತ್ಯದಿಂದ ಅಕ್ರಮವು ಶುದ್ಧೀಕರಿಸಲ್ಪಡುತ್ತದೆ; ಕರ್ತನ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.
- 2 Chronicles 34:27 2 ಪೂರ್ವಕಾಲವೃತ್ತಾಂತ 34:27ನೀನು ಈ ಸ್ಥಳಕ್ಕೆ ವಿರೋಧ ವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ಆತನ ಮುಂದೆ ನಿನ್ನನ್ನು ತಗ್ಗಿಸಿಕೊಂಡಿ. ನಿನ್ನನ್ನು ನನ್ನ ಮುಂದೆ ತಗ್ಗಿಸಿ ಕೊಂಡು ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದರಿಂದ ನಾನು ಅವನ ಮೊರೆಯನ್ನು ಕೇಳಿದೆನೆಂದು ಕರ್ತನು ಹೇಳುತ್ತಾನೆ.