Jeremiah · chapter 44 · verse 2
Jeremiah 44:2 in Kannada
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಯೆರೂಸಲೇಮಿನ ಮೇಲೆಯೂ ಯೆಹೂದದ ಎಲ್ಲಾ ಪಟ್ಟಣಗಳ ಮೇಲೆಯೂ ಬರಮಾಡಿದ ಎಲ್ಲಾ ಕೇಡನ್ನು ನೀವು ನೋಡಿದ್ದೀರಿ.
Israayelina devaraada sainyagala kartanu heege heluttaane--naanu yeroosalemina meleyoo yehoodada ellaa pattanagala meleyoo baramaadida ellaa kedannu neevu nodiddeeri.
Jeremiah 44:2 in English
- King James Version (KJV)
- Thus saith the LORD of hosts, the God of Israel; Ye have seen all the evil that I have brought upon Jerusalem, and upon all the cities of Judah; and, behold, this day they [are] a desolation, and no man dwelleth therein,
- World English Bible (WEB)
- “The LORD of Armies, the God of Israel, says: ‘You have seen all the evil that I have brought on Jerusalem, and on all the cities of Judah. Behold, today they are a desolation, and no man dwells in them,
- American Standard Version (ASV)
- Thus saith Jehovah of hosts, the God of Israel: Ye have seen all the evil that I have brought upon Jerusalem, and upon all the cities of Judah; and, behold, this day they are a desolation, and no man dwelleth therein,
- Bible in Basic English (BBE)
- The Lord of armies, the God of Israel, has said: You have seen all the evil which I have sent on Jerusalem and on all the towns of Judah; and now, this day they are waste and unpeopled;
- Darby Translation (DBY)
- Thus saith Jehovah of hosts, the God of Israel: Ye have seen all the evil that I have brought upon Jerusalem, and upon all the cities of Judah; and behold they are, this day, a waste, and no man dwelleth therein,
- Webster's Bible (WBS)
- Thus saith the LORD of hosts, the God of Israel; Ye have seen all the evil that I have brought upon Jerusalem, and upon all the cities of Judah; and behold, this day they [are] a desolation, and no man dwelleth in them.
- Young's Literal Translation (YLT)
- 'Thus said Jehovah of Hosts, God of Israel: Ye — ye have seen all the evil that I have brought in on Jerusalem, and on all the cities of Judah, and lo, they [are] a waste this day, and there is none dwelling in them,
Read in context
- 1ಐಗುಪ್ತದ ಮಿಗ್ದೋಲ್ನಲ್ಲಿಯೂ ತಹಪನೇಸನಲ್ಲಿಯೂ ನೋಫನಲ್ಲಿಯೂ ಪತ್ರೋಸ್ ದೇಶದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆರೆವಿಾಯನಿಗೆ ಉಂಟಾದ ವಾಕ್ಯವು ಏನಂದರೆ--
- 2ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಯೆರೂಸಲೇಮಿನ ಮೇಲೆಯೂ ಯೆಹೂದದ ಎಲ್ಲಾ ಪಟ್ಟಣಗಳ ಮೇಲೆಯೂ ಬರಮಾಡಿದ ಎಲ್ಲಾ ಕೇಡನ್ನು ನೀವು ನೋಡಿದ್ದೀರಿ.
- 3ಅವರು ನನಗೆ ಕೋಪವನ್ನು ಎಬ್ಬಿಸುವ ಹಾಗೆ ತಾವೂ ತಮ್ಮ ತಂದೆಗಳೂ ಅರಿಯದ ಬೇರೆ ದೇವರುಗಳನ್ನು ಸೇವಿಸಿ ಧೂಪಸುಟ್ಟು ಮಾಡಿದ ಕೆಟ್ಟತನದ ನಿಮಿತ್ತ ಇಗೋ, ಅವು ಈ ಹೊತ್ತು ಹಾಳಾಗಿವೆ; ಅವುಗಳಲ್ಲಿ ವಾಸಮಾಡುವವರು ಯಾರೂ ಇಲ್ಲ.
- 4ಆದಾಗ್ಯೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಬೆಳಿಗ್ಗೆ ಎದ್ದು ಕಳುಹಿಸಿ--ಓ, ನಾನು ಹಗೆಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇ ಬೇಡಿರೆಂದು ಹೇಳಿದೆನು.
Cross references
- Isaiah 6:11 ಯೆಶಾಯ 6:11ಆಗ ನಾನು ಕರ್ತನೇ, ಇದು ಎಷ್ಟರ ವರೆಗೆ ಅಂದೆನು. ಅದಕ್ಕೆ ಆತನು--ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯ ನಿಲ್ಲದೆ ದೇಶವು ಸಂಪೂರ್ಣವಾಗಿ ಹಾಳಾಗುವ ವರೆಗೆ
- Jeremiah 34:22 ಯೆರೆಮೀಯ 34:22ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.
- Jeremiah 9:11 ಯೆರೆಮೀಯ 9:11ಇದಲ್ಲದೆ ಯೆರೂಸಲೇಮನ್ನು ದಿಬ್ಬೆಗಳಾಗಿಯೂ ನರಿಗಳ ಸ್ಥಾನವಾಗಿಯೂ ಮಾಡು ತ್ತೇನೆ; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳುಮಾಡುತ್ತೇನೆ.
- Micah 3:12 ಮೀಕ 3:12ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
- Jeremiah 4:7 ಯೆರೆಮೀಯ 4:7ಸಿಂಹವು ತನ್ನ ಅಡವಿಯೊಳಗಿಂದ ಏರಿ ಬರುತ್ತದೆ, ಅನ್ಯ ಜನಾಂಗ ಗಳನ್ನು ನಾಶಮಾಡುವವನು ಹೊರಟಿದ್ದಾನೆ, ನಿನ್ನ ದೇಶವನ್ನು ಹಾಳು ಮಾಡುವದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ; ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವದು.
- Leviticus 26:32–33 ಯಾಜಕಕಾಂಡ 26:32–33ನಾನು ದೇಶವನ್ನು ಹಾಳುಮಾಡುವೆನು; ಅದರಲ್ಲಿ ವಾಸ ವಾಗುವ ನಿಮ್ಮ ಶತ್ರುಗಳು ಅದಕ್ಕೆ ಆಶ್ಚರ್ಯಪಡುವರು. ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು.
- 2 Kings 21:13 2 ಅರಸುಗಳು 21:13ನಾನು ಯೆರೂಸಲೇಮಿನ ಮೇಲೆ ಸಮಾರ್ಯದ ನೂಲನ್ನೂ ಅಹಾಬನ ಮನೆಯ ಗಟ್ಟಿ ತೂಕವನ್ನೂ ಗುಂಡನ್ನೂ ಚಾಚುವೆನು; ತಟ್ಟೆ ಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿಬಿಡುವೆನು.
- Exodus 19:4 ವಿಮೋಚನಕಾಂಡ 19:4ನಾನು ಐಗುಪ್ತ್ಯರಿಗೆ ಮಾಡಿದ್ದನ್ನು ನೀವು ನೋಡಿದ್ದೀರಿ; ನಿಮ್ಮನ್ನು ಹದ್ದುಗಳ ರೆಕ್ಕೆಗಳ ಮೇಲೆ ನಾನು ಹೇಗೆ ಹೊತ್ತುಕೊಂಡು ನನ್ನ ಬಳಿಗೆ ಬರಮಾಡಿದೆನೆಂಬದನ್ನೂ ನೀವು ನೋಡಿದ್ದೀರಿ;
- Lamentations 1:16 ಪ್ರಲಾಪಗಳು 1:16ಇವುಗಳ ನಿಮಿತ್ತ ನಾನು ಅಳುತ್ತೇನೆ; ಕಣ್ಣೀರು ಧಾರೆಧಾರೆಯಾಗಿ ಸುರಿಯುವದು, ನನ್ನನ್ನು ಆದರಿಸುವಾತನೂ ನನ್ನ ಪ್ರಾಣವನ್ನು ಬದುಕಿಸುವ ಆದರಿಕನೂ ನನ್ನಿಂದ ದೂರವಾಗಿದ್ದಾನೆ; ನನ್ನ ಮಕ್ಕಳು ಹಾಳಾಗಿದ್ದಾರೆ, ನನ್ನ ಶತ್ರುವು ಗೆದ್ದಿದ್ದಾನೆ.
- Jeremiah 7:34 ಯೆರೆಮೀಯ 7:34ಆಗ ನಾನು ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಮದಲಗಿತ್ತಿಯ ಸ್ವರವನ್ನೂ ನಿಲ್ಲಿಸುವೆನು; ಯಾಕಂದರೆ ದೇಶವು ಹಾಳಾಗುವದು.
- Leviticus 26:43 ಯಾಜಕಕಾಂಡ 26:43ಅವರು ದೇಶದೊಳಗಿಂದ ಹೊರಡಿಸಲ್ಪಟ್ಟು ಅವರಿಲ್ಲದೆ ಹಾಳಾದ ವೇಳೆಯಲ್ಲಿ ಅದು ತನ್ನ ಸಬ್ಬತ್ತು ಗಳನ್ನು ಅನುಭವಿಸುವದು; ಅವರು ತಮ್ಮ ಅಕ್ರಮ ದಿಂದಾದ ಶಿಕ್ಷೆಗೆ ಒಪ್ಪಿಕೊಳ್ಳುವರು; ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ಅಸಹ್ಯಿಸಿದ್ದರಿಂದಲೇ.
- Jeremiah 25:11 ಯೆರೆಮೀಯ 25:11ಈ ದೇಶವೆಲ್ಲಾ ಹಾಳಾಗಿ ವಿಸ್ಮಯಕ್ಕೆ ಗುರಿಯಾಗುವದು; ಈ ಜನಾಂಗಗಳು ಬಾಬೆಲಿನ ಅರಸನನ್ನು ಎಪ್ಪತ್ತು ವರುಷ ಸೇವಿಸುವರು.
Original words (Hebrew)
- saith · H559אָמַר ʼâmar
- hosts · H6635צָבָא tsâbâʼ
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- seen · H7200רָאָה râʼâh
- evil · H7451רַע raʻ
- brought · H935בּוֹא bôwʼ
- Jerusalem · H3389יְרוּשָׁלַ͏ִם Yᵉrûwshâlaim
- cities · H5892עִיר ʻîyr
- Judah · H3063יְהוּדָה Yᵉhûwdâh
- day · H3117יוֹם yôwm
- desolation · H2723חׇרְבָּה chorbâh
- dwelleth · H3427יָשַׁב yâshab