Jeremiah · chapter 44 · verse 3
Jeremiah 44:3 in Kannada
ಅವರು ನನಗೆ ಕೋಪವನ್ನು ಎಬ್ಬಿಸುವ ಹಾಗೆ ತಾವೂ ತಮ್ಮ ತಂದೆಗಳೂ ಅರಿಯದ ಬೇರೆ ದೇವರುಗಳನ್ನು ಸೇವಿಸಿ ಧೂಪಸುಟ್ಟು ಮಾಡಿದ ಕೆಟ್ಟತನದ ನಿಮಿತ್ತ ಇಗೋ, ಅವು ಈ ಹೊತ್ತು ಹಾಳಾಗಿವೆ; ಅವುಗಳಲ್ಲಿ ವಾಸಮಾಡುವವರು ಯಾರೂ ಇಲ್ಲ.
Avaru nanage kopavannu ebbisuva haage taavoo tamma tandegaloo ariyada bere devarugalannu sevisi dhoopasuttu maadida kettatanada nimitta igo, avu ee hottu haalaagive; avugalalli vaasamaaduvavaru yaaroo illa.
Jeremiah 44:3 in English
- King James Version (KJV)
- Because of their wickedness which they have committed to provoke me to anger, in that they went to burn incense, [and] to serve other gods, whom they knew not, [neither] they, ye, nor your fathers.
- World English Bible (WEB)
- because of their wickedness which they have committed to provoke me to anger, in that they went to burn incense, to serve other gods that they didn’t know, neither they, nor you, nor your fathers.
- American Standard Version (ASV)
- because of their wickedness which they have committed to provoke me to anger, in that they went to burn incense, [and] to serve other gods, that they knew not, neither they, nor ye, nor your fathers.
- Bible in Basic English (BBE)
- Because of the evil which they have done, moving me to wrath by burning perfumes in worship to other gods, who were not their gods or yours or the gods of their fathers.
- Darby Translation (DBY)
- because of their wickedness which they have committed to provoke me to anger, in that they went to burn incense to serve other gods which they knew not, they, [nor] ye, nor your fathers.
- Webster's Bible (WBS)
- Because of their wickedness which they have committed to provoke me to anger, in that they went to burn incense, [and] to serve other gods, whom they knew not, [neither] they, ye, nor your fathers.
- Young's Literal Translation (YLT)
- because of their wickedness that they have done, by provoking Me to anger, by going to make perfume, by serving other gods, that they knew not, they, ye, and your fathers.
Read in context
- 1ಐಗುಪ್ತದ ಮಿಗ್ದೋಲ್ನಲ್ಲಿಯೂ ತಹಪನೇಸನಲ್ಲಿಯೂ ನೋಫನಲ್ಲಿಯೂ ಪತ್ರೋಸ್ ದೇಶದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆರೆವಿಾಯನಿಗೆ ಉಂಟಾದ ವಾಕ್ಯವು ಏನಂದರೆ--
- 2ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಯೆರೂಸಲೇಮಿನ ಮೇಲೆಯೂ ಯೆಹೂದದ ಎಲ್ಲಾ ಪಟ್ಟಣಗಳ ಮೇಲೆಯೂ ಬರಮಾಡಿದ ಎಲ್ಲಾ ಕೇಡನ್ನು ನೀವು ನೋಡಿದ್ದೀರಿ.
- 3ಅವರು ನನಗೆ ಕೋಪವನ್ನು ಎಬ್ಬಿಸುವ ಹಾಗೆ ತಾವೂ ತಮ್ಮ ತಂದೆಗಳೂ ಅರಿಯದ ಬೇರೆ ದೇವರುಗಳನ್ನು ಸೇವಿಸಿ ಧೂಪಸುಟ್ಟು ಮಾಡಿದ ಕೆಟ್ಟತನದ ನಿಮಿತ್ತ ಇಗೋ, ಅವು ಈ ಹೊತ್ತು ಹಾಳಾಗಿವೆ; ಅವುಗಳಲ್ಲಿ ವಾಸಮಾಡುವವರು ಯಾರೂ ಇಲ್ಲ.
- 4ಆದಾಗ್ಯೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಬೆಳಿಗ್ಗೆ ಎದ್ದು ಕಳುಹಿಸಿ--ಓ, ನಾನು ಹಗೆಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇ ಬೇಡಿರೆಂದು ಹೇಳಿದೆನು.
- 5ಆದರೆ ಅವರು ಕೇಳಲಿಲ್ಲ; ತಮ್ಮ ಕೆಟ್ಟತನದಿಂದ ತಿರುಗದೆಯೂ, ಬೇರೆ ದೇವರುಗಳಿಗೆ ಧೂಪಸುಡು ವದನ್ನು ಬಿಡದೆಯೂ ಇದ್ದರು; ನನ್ನ ಮಾತಿಗೆ ಕಿವಿ ಗೊಡಲಿಲ್ಲ.
Cross references
- Deuteronomy 29:26 ಧರ್ಮೋಪದೇಶಕಾಂಡ 29:26ಹೋಗಿ ಬೇರೆ ದೇವರುಗಳನ್ನೂ ತಮಗೆ ತಿಳಿಯದಂಥ, ಆತನು ತಮಗೆ ನೇಮಿಸದಂಥ ದೇವರುಗಳನ್ನೂ ಸೇವಿಸಿ ಅಡ್ಡಬಿದ್ದ ದರಿಂದ
- Deuteronomy 13:6 ಧರ್ಮೋಪದೇಶಕಾಂಡ 13:6ನಿನ್ನ ತಾಯಿಯ ಮಗನಾದ ನಿನ್ನ ಸಹೋದರ ನಾಗಲಿ ಮಗನಾಗಲಿ ಮಗಳಾಗಲಿ ಮಗ್ಗುಲಲ್ಲಿರುವ ಹೆಂಡತಿಯಾಗಲಿ ನಿನ್ನ ಪ್ರಾಣದಂತೆ ನಿನಗಿರುವ ಸ್ನೇಹಿತ ನಾಗಲಿ ನೀನೂ ನಿನ್ನ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು
- Deuteronomy 32:17 ಧರ್ಮೋಪದೇಶಕಾಂಡ 32:17ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು.
- Daniel 9:5 ದಾನಿಯೇಲನು 9:5ನಾವು ಪಾಪ ಅಕ್ರಮವನ್ನು ಮಾಡಿದ್ದೇವೆ; ಇದಲ್ಲದೆ ಕೆಟ್ಟವರಾಗಿ ನಡೆದು ತಿರುಗಿಬಿದ್ದಿದ್ದೇವೆ; ಅಂದರೆ ನಿನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಬಿಟ್ಟುಹೋಗಿದ್ದೇವೆ.
- Nehemiah 9:33 ನೆಹೆಮೀಯ 9:33ಆದರೆ ನೀನು ನಮ್ಮ ಮೇಲೆ ಬರಮಾಡಿದ ಎಲ್ಲಾದರಲ್ಲಿ ನೀತಿಪರನಾಗಿದ್ದಿ. ಯಾಕಂದರೆ ನೀನು ಮಾಡಿದ್ದು ಸತ್ಯವಾದದ್ದು; ಆದರೆ ನಾವು ದುಷ್ಟರಾಗಿ ನಡೆದೆವು.
- Jeremiah 2:17–19 ಯೆರೆಮೀಯ 2:17–19ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡಿ ಅಲ್ಲವೋ? ಈಗ ಸಿಹೋರಿನ ನೀರು ಕುಡಿಯುವದಕ್ಕಾಗಿ ಐಗುಪ್ತದ ದಾರಿಯಲ್ಲಿ ನಿನಗೇನು ಕೆಲಸ? ಇಲ್ಲವೆ ನದಿಯ ನೀರು ಕುಡಿ ಯುವದಕ್ಕಾಗಿ ಅಶ್ಶೂರಿನ ದಾರಿಯಲ್ಲಿ ನಿನಗೇನು ಕೆಲಸ? ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.
- Jeremiah 44:8 ಯೆರೆಮೀಯ 44:8ಯಾಕೆ ನೀವು ನೀವೇ ನಿರ್ಮೂಲರಾಗುವ ಹಾಗೆಯೂ ನೀವು ಭೂಮಿಯ ಎಲ್ಲಾ ಜನಾಂಗಗಳಲ್ಲಿ ಶಾಪವೂ ನಿಂದೆಯೂ ಆಗುವ ಹಾಗೆಯೂ ನೀವು ತಂಗುವದಕ್ಕೆ ಹೋಗಿರುವ ಐಗುಪ್ತದೇಶದಲ್ಲಿ ಬೇರೆ ದೇವರುಗಳಿಗೆ ಧೂಪಸುಟ್ಟು, ನನಗೆ ಕೋಪವನ್ನು ಎಬ್ಬಿಸುತ್ತೀರಿ?
- Ezekiel 8:17–18 ಯೆಹೆಜ್ಕೇಲನು 8:17–18ಆಗ ಆತನು ನನಗೆ--ಓ ಮನುಷ್ಯಪುತ್ರನೇ, ನೋಡಿ ದೆಯಾ? ಅವರು ಇಲ್ಲಿ ಮಾಡುವ ಅಸಹ್ಯವಾದವುಗಳು ಯೆಹೂದನ ಮನೆತನದವರಿಗಲ್ಲವೇ? ಅವರು ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ ನನ್ನನ್ನು ಕೆಣಕಬೇಕೆಂದು ಮತ್ತೆ ಯತ್ನಿಸುತ್ತಿದ್ದಾರೆ. ನೋಡು, ಅವರ ಮೂಗಿಗೆ ಕೊಂಬೆಗಳನ್ನಿಟ್ಟು ಕೊಳ್ಳುತ್ತಾರೆ.ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ. ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
- Jeremiah 5:29 ಯೆರೆಮೀಯ 5:29ಇವುಗಳ ನಿಮಿತ್ತ ನಾನು ವಿಚಾರಿಸುವದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.
- Lamentations 1:8 ಪ್ರಲಾಪಗಳು 1:8ಯೆರೂಸ ಲೇಮು ಘೋರವಾಗಿ ಪಾಪಮಾಡಿದೆ; ಆದದರಿಂದ ಅವಳು ತೆಗೆದುಹಾಕಲ್ಪಟ್ಟಿದ್ದಾಳೆ; ಅವಳನ್ನು ಸನ್ಮಾನಿಸಿ ದವರೆಲ್ಲರೂ ಅವಳನ್ನು ಹೀನೈಸುತ್ತಾರೆ; ಅವರು ಅವಳ ಬೆತ್ತಲೆತನವನ್ನು ನೋಡಿದ್ದಾರೆ; ಹೌದು, ಅವಳು ನಿಟ್ಟುಸಿರಿಟ್ಟು ಹಿಂದಕ್ಕೆ ತಿರುಗುತ್ತಾಳೆ.
- Zechariah 7:12–13 ಜೆಕರ್ಯ 7:12–13ಹೌದು, ಅವರು ನ್ಯಾಯಪ್ರಮಾಣ ವನ್ನೂ ಸೈನ್ಯಗಳ ಕರ್ತನು ತನ್ನ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯ ಗಳನ್ನೂ ಕೇಳದ ಹಾಗೆ ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಮಾಡಿಕೊಂಡರು. ಆದದರಿಂದ ಸೈನ್ಯಗಳ ಕರ್ತನಿಂದ ಮಹಾರೋಷವು ಬಂತು. ಆಗ ಆದದ್ದೇ ನಂದರೆ--ಅವನು ಕೂಗಲು ಅವರು ಕೇಳದೆ ಇದ್ದ ಪ್ರಕಾರ ಅವರು ಕೂಗಲು ನಾನು ಕೇಳದೆ ಇದ್ದೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
- Jeremiah 22:9 ಯೆರೆಮೀಯ 22:9ಆಗ ಅವರು--ತಮ್ಮ ದೇವರಾದ ಕರ್ತನ ಒಡಂಬಡಿಕೆಯನ್ನು ಬಿಟ್ಟು, ಬೇರೆ ದೇವರುಗಳಿಗೆ ನಮ ಸ್ಕರಿಸಿ ಸೇವಿಸಿದ್ದರಿಂದಲೇ ಎಂದು ಅವರು ಉತ್ತರ ಕೊಡುವರು.