Jeremiah · chapter 45 · verse 3
Jeremiah 45:3 in Kannada
ಕರ್ತನು ನನ್ನ ವ್ಯಥೆಗೆ ದುಃಖವನ್ನು ಕೂಡಿಸಿದ್ದಾನೆ; ನಿಟ್ಟುಸುರು ಬಿಡುವದರಿಂದ ದಣಿದಿ ದ್ದೇನೆ; ವಿಶ್ರಾಂತಿಯನ್ನು ಕಾಣೆನೆಂದು ನೀನು ಹೇಳಿದಿ ಯಲ್ಲಾ.
Kartanu nanna vyathege duhkhavannu koodisiddaane; nittusuru biduvadarinda danidi ddene; vishraantiyannu kaanenendu neenu helidi yallaa.
Jeremiah 45:3 in English
- King James Version (KJV)
- Thou didst say, Woe is me now! for the LORD hath added grief to my sorrow; I fainted in my sighing, and I find no rest.
- World English Bible (WEB)
- ‘You said, “Woe is me now! For the LORD has added sorrow to my pain! I am weary with my groaning, and I find no rest.”’
- American Standard Version (ASV)
- Thou didst say, Woe is me now! for Jehovah hath added sorrow to my pain; I am weary with my groaning, and I find no rest.
- Bible in Basic English (BBE)
- You said, Sorrow is mine! for the Lord has given me sorrow in addition to my pain; I am tired with the sound of my sorrow, and I get no rest.
- Darby Translation (DBY)
- Thou didst say, Woe unto me! for Jehovah hath added grief to my sorrow; I am weary with my sighing, and I find no rest.
- Webster's Bible (WBS)
- Thou didst say, Woe is me now! for the LORD hath added grief to my sorrow; I fainted in my sighing, and I find no rest.
- Young's Literal Translation (YLT)
- 'Thou hast said, Woe to me, now, for Jehovah hath added sorrow to my pain, I have been wearied with my sighing, and rest I have not found.
Read in context
- 1ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೇ ವರುಷದಲ್ಲಿ ನೇರೀಯನ ಮಗನಾದ ಬಾರೂಕನ ಈ ಮಾತುಗಳನ್ನು ಯೆರೆವಿಾಯನ ಬಾಯಿಂದ ಬಂದ ಹಾಗೆ ಪುಸ್ತಕದಲ್ಲಿ ಬರೆದ ಮೇಲೆ ಯೆರೆವಿಾಯನು ಅವನಿಗೆ ಹೇಳಿದ ವಾಕ್ಯವೆನಂದರೆ,
- 2ಬಾರೂಕನೇ, ಇಸ್ರಾಯೇಲಿನ ದೇವರಾದ ಕರ್ತನು ನಿನ್ನನ್ನು ಕುರಿತು ಹೀಗೆ ಹೇಳುತ್ತಾನೆ--ಈಗ ನನಗೆ ಅಯ್ಯೋ!
- 3ಕರ್ತನು ನನ್ನ ವ್ಯಥೆಗೆ ದುಃಖವನ್ನು ಕೂಡಿಸಿದ್ದಾನೆ; ನಿಟ್ಟುಸುರು ಬಿಡುವದರಿಂದ ದಣಿದಿ ದ್ದೇನೆ; ವಿಶ್ರಾಂತಿಯನ್ನು ಕಾಣೆನೆಂದು ನೀನು ಹೇಳಿದಿ ಯಲ್ಲಾ.
- 4ನೀನು ಅವನಿಗೆ ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ; ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.
- 5ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.
Cross references
- 2 Corinthians 4:16 2 ಕೊರಿಂಥದವರಿಗೆ 4:16ಈ ಕಾರಣದಿಂದ ನಾವು ಧೈರ್ಯಗೆಡುವದಿಲ್ಲ; ಆದರೆ ನಮ್ಮ ಹೊರಮನುಷ್ಯನು ನಾಶವಾಗುತಾ ಇದ್ದರೂ ನಮ್ಮ ಒಳಮನುಷ್ಯನು ದಿನೇದಿನೇ ಹೊಸಬ ನಾಗುತ್ತಾ ಇರುವನು.
- Galatians 6:9 ಗಲಾತ್ಯದವರಿಗೆ 6:9ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.
- 2 Corinthians 4:1 2 ಕೊರಿಂಥದವರಿಗೆ 4:1ಆದದರಿಂದ ನಾವು ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಡುವದಿಲ್ಲ.
- Numbers 11:11–15 ಅರಣ್ಯಕಾಂಡ 11:11–15ಆದದರಿಂದ ಮೋಶೆಯು ಕರ್ತನಿಗೆ ಹೇಳಿದ್ದೇ ನಂದರೆ--ಈ ಸಮಸ್ತ ಜನರ ಭಾರವನ್ನು ನನ್ನ ಮೇಲೆ ಹಾಕುವದಕ್ಕೆ ನೀನು ನಿನ್ನ ಸೇವಕನಿಗೆ ಯಾಕೆ ಉಪದ್ರ ಮಾಡಿದ್ದೀ? ನಿನ್ನ ದೃಷ್ಟಿಯಲ್ಲಿ ನನಗೆ ಯಾಕೆ ದಯೆ ದೊರಕಲಿಲ್ಲ? ತನ್ನ ಮೊಲೆಯ ಕೂಸನ್ನು ಎತ್ತುವಂತೆ ನೀನು ಈ ಜನರನ್ನು ಎದೆಯಲ್ಲಿ ಹೊತ್ತು ಕೊಂಡು ಅವರ ತಂದೆಗಳಿಗೆ ಪ್ರಮಾಣಮಾಡಿದ ದೇಶಕ್ಕೆ ತಕ್ಕೊಂಡು ಹೋಗು ಎಂದು ನೀನು ನನಗೆ ಹೇಳುತ್ತೀ. ಹೀಗೆ ನಾನು ಮಾಡುವದಕ್ಕೆ ಈ ಸಮಸ್ತ ಜನರನ್ನು ಗರ್ಭಧರಿಸಿಕೊಂಡೆನೋ? ನಾನೇ ಅವರನ್ನು ಹೆತ್ತೆನೋ? ಈ ಸಮಸ್ತ ಜನರಿಗೆ ಕೊಡಲು ಮಾಂಸವು ನನಗೆ ಎಲ್ಲಿಂದ ದೊರಕುವದು? ಯಾಕಂದರೆ--ತಿನ್ನುವ ಹಾಗೆ ನಮಗೆ ಮಾಂಸವನ್ನು ಕೊಡು ಎಂದು ನನ್ನ ಬಳಿಯಲ್ಲಿ ಅಳುತ್ತಾರೆ. ಒಬ್ಬಂಟಿ ಗನಾಗಿ ಈ ಸಮಸ್ತ ಜನರನ್ನು ಹೊತ್ತುಕೊಳ್ಳುವದಕ್ಕೆ ನಾನು ಶಕ್ತನಲ್ಲ, ಅದು ನನಗೆ ಅತಿ ದೊಡ್ಡ ಭಾರ ವಾಗಿದೆ. ನೀನು ಈ ಪ್ರಕಾರ ನನಗೆ ಮಾಡುವದಾ ಗಿದ್ದು ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದಿದವ ನಾದರೆ ನನ್ನ ಕೇಡನ್ನು ನೋಡದಂತೆ ನನ್ನನ್ನು ಕೊಂದುಬಿಡು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
- Joshua 7:7–9 ಯೆಹೋಶುವ 7:7–9ಇದಲ್ಲದೆ ಯೆಹೋಶುವನು--ಅಯ್ಯೋ, ಓ ಕರ್ತನಾದ ದೇವರೇ, ನಮ್ಮನ್ನು ನಾಶಮಾಡುವ ಹಾಗೆ ಅಮೋರಿ ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕಾಗಿ ನೀನು ಈ ಜನರು ಯೊರ್ದನನ್ನು ದಾಟಮಾಡಿದ್ದೇನು? ನಮಗೆ ಇಷ್ಟೇ ಸಾಕೆಂದು ನಾವು ಯೊರ್ದನಿನ ಆಚೆಯಲ್ಲಿ ಇದ್ದರೆ ಒಳ್ಳೇದಾಗಿತ್ತು. ಓ ಕರ್ತನೇ, ಈಗ ನಾನೇನು ಹೇಳಲಿ? ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಬೆನ್ನು ತಿರುಗಿಸಿದ್ದಾರಲ್ಲಾ. ಯಾಕಂದರೆ ಕಾನಾನ್ಯರೂ ದೇಶ ವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿ ಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದು ಬಿಡುವರು; ಆಗ ನಿನ್ನ ಮಹತ್ತಾದ ಹೆಸರಿಗೆ ಏನು ಮಾಡುವಿ ಅಂದನು.
- 2 Thessalonians 3:13 2 ಥೆಸಲೊನೀಕದವರಿಗೆ 3:13ಸಹೋ ದರರೇ, ನೀವಾದರೋ ಒಳ್ಳೆಯದನ್ನು ಮಾಡುವದರಲ್ಲಿ ಬೇಸರಗೊಳ್ಳಬೇಡಿರಿ.
- Jeremiah 15:10–21 ಯೆರೆಮೀಯ 15:10–21ನನ್ನ ತಾಯಿಯೇ, ನನಗೆ ಅಯ್ಯೋ, ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ ಇಲ್ಲವೆ ಮನುಷ್ಯರು ಬಡ್ಡಿಗಾಗಿ ನನಗೆ ಸಾಲ ಕೊಡಲಿಲ್ಲ. ಆದಾಗ್ಯೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ. ಕರ್ತನು ಹೇಳುವದೇನಂದರೆ --ನಿಶ್ಚಯವಾಗಿ ನಿನ್ನ ಶೇಷಕ್ಕೆ ಅದು ಒಳ್ಳೆಯ ದಾಗಿರುವದು; ಕೇಡಿನ ಕಾಲದಲ್ಲಿಯೂ ಇಕ್ಕಟ್ಟಿನ ಕಾಲದಲ್ಲಿಯೂ ನಿಶ್ಚಯವಾಗಿ ನಿನ್ನ ಶತ್ರುವನ್ನು ನಿನ ಗೋಸ್ಕರ ಬೇಡಿಕೊಳ್ಳುವಂತೆ ಮಾಡಲಿಲ್ಲವೇ? ಕಬ್ಬಿ ಣವು ಉತ್ತರದ ಕಬ್ಬಿಣವನ್ನೂ ಉಕ್ಕನ್ನೂ ಮುರಿಯ ಬಲ್ಲದೇ? ನಿನ್ನ ಆಸ್ತಿಯನ್ನೂ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ನಿನ್ನ ಎಲ್ಲಾ ಪಾಪಗಳ ನಿಮಿತ್ತ ಕ್ರಯವಿಲ್ಲದೆ ಕೊಳ್ಳೆಯಾಗಿ ಕೊಟ್ಟುಬಿಡುವೆನು. ನಿನ್ನನ್ನು ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗ ಳೊಂದಿಗೆ ಹಾದುಹೋಗುವಂತೆ ಮಾಡುವೆನು. ಯಾಕಂದರೆ ನನ್ನ ಕೋಪದಲ್ಲಿ ಬೆಂಕಿ ಹತ್ತಿದೆ, ಅದು ನಿಮ್ಮ ಮೇಲೆ ಉರಿಯುವದು. ಓ ಕರ್ತನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕ ಮಾಡಿ ವಿಚಾರಿಸಿ ನನ್ನನ್ನು ಹಿಂಸಿಸುವವರಿಗೆ ನನಗೋ ಸ್ಕರ ಮುಯ್ಯಿಗೆ ಮುಯ್ಯಿ ತೀರಿಸು; ನಿನ್ನ ದೀರ್ಘ ಶಾಂತಿಯಲ್ಲಿ ನನ್ನನ್ನು ತೆಗೆದುಬಿಡಬೇಡ; ನಿನ್ನ ನಿಮಿತ್ತ ನಾನು ಗದರಿಸಲ್ಪಡುವೆನೆಂದು ತಿಳಿದುಕೋ. ನಿನ್ನ ವಾಕ್ಯಗಳು ಸಿಕ್ಕಿದವು, ಅವುಗಳನ್ನು ತಿಂದೆನು. ನಿನ್ನ ವಾಕ್ಯವು ನನ್ನ ಹೃದಯಕ್ಕೆ ಉಲ್ಲಾಸವೂ ಸಂತೋಷವೂ ಆಗಿತ್ತು; ಓ ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದ್ದೇನೆ. ನಾನು ಹಾಸ್ಯಗಾರರ ಕೂಟದಲ್ಲಿ ಕೂತುಕೊಂಡು ಉತ್ಸಾಹಪಡಲಿಲ್ಲ, ನಿನ್ನ ಕೈ ನಿಮಿತ್ತ ಒಂಟಿಯಾಗಿ ಕೂತುಕೊಂಡಿದ್ದೇನೆ; ನನ್ನನ್ನು ಉಗ್ರತೆಯಿಂದ ತುಂಬಿಸಿದ್ದೀ. ಏಕೆ ನನ್ನ ನೋವು ನಿತ್ಯವಾಗಿಯೂ ನನ್ನ ಗಾಯವು ವಾಸಿಯಾಗಲೊ ಲ್ಲದೆಯೂ ಸ್ವಸ್ಥವಾಗದೆಯೂ ಇದೆ? ನೀನು ನನಗೆ ಒಟ್ಟಾರೆ ನೀರು ಬತ್ತುವ ಕಳ್ಳ ತೊರೆಯಂತೆಯೂ ಸ್ಥಿರ ವಿಲ್ಲದ ನೀರಿನಂತೆಯೂ ಇರಬೇಕೋ. ಆದದರಿಂದ ಕರ್ತನು -- ನೀನು ಹಿಂತಿರುಗಿ ಕೊಂಡರೆ ನಾನು ನಿನ್ನನ್ನು ತಿರುಗಿ ತರುವೆನು; ಆಗ ನೀನು ನನ್ನ ಮುಂದೆ ನಿಲ್ಲುವಿ; ನೀನು ಅಮೂಲ್ಯವಾದ ದ್ದನ್ನು ನೀಚವಾದದರೊಳಗಿಂದ ಹೊರಗೆ ತಂದರೆ ನನ್ನ ಬಾಯಿಯ ಹಾಗಿರುವಿ; ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂತಿರುಗಬೇಡ. ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ತಾಮ್ರದ ಗೋಡೆಯಾಗಮಾಡುತ್ತೇನೆ; ನಿನಗೆ ವಿರೋಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಜಯಿಸಲಾರರು; ನಾನೇ ನಿನ್ನನ್ನು ರಕ್ಷಿಸುವದಕ್ಕೂ ತಪ್ಪಿಸು ವದಕ್ಕೂ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ. ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.
- Lamentations 3:32 ಪ್ರಲಾಪಗಳು 3:32ಆತನು ದುಃಖಪಡಿಸಿದರೂ ತನ್ನ ಕೃಪಾತಿಶಯದಿಂದ ಕನಿಕರಿಸುವನು.
- Psalm 77:3–4 ಕೀರ್ತನೆಗಳು 77:3–4ನಾನು ವ್ಯಥೆಪಡುತ್ತಾ ದೇವರನ್ನು ಜ್ಞಾಪಕಮಾಡಿಕೊಂಡೆನು. ನಾನು ಚಿಂತಿ ಸುವದರಿಂದ ನನ್ನ ಆತ್ಮವು ಬಳಲಿ ಹೋಗಿದೆ ಸೆಲಾ. ನನ್ನ ಕಣ್ಣುಗಳನ್ನು ಮುಚ್ಚದಂತೆ ನೀನು ಹಿಡಿಯುತ್ತೀ; ನಾನು ಮಾತಾಡದಂತೆ ಕಳವಳಪಟ್ಟಿದ್ದೇನೆ.
- Genesis 37:34–35 ಆದಿಕಾಂಡ 37:34–35ಆಗ ಯಾಕೋಬನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗೋಸ್ಕರ ಬಹುದಿನ ದುಃಖಪಟ್ಟನು. ಅವನ ಕುಮಾರ ಕುಮಾರ್ತೆಯರೆಲ್ಲಾ ಅವನನ್ನು ಆದರಿಸಿದಾಗ್ಯೂ ಅವನು ಆದರಣೆ ಹೊಂದಲೊಲ್ಲದೆ--ನನ್ನ ಮಗನ ಬಳಿಗೆ ಸಮಾಧಿಗೆ ದುಃಖದಿಂದಲೇ ಇಳಿದು ಹೋಗು ವೆನು ಅಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.
- Genesis 42:36–38 ಆದಿಕಾಂಡ 42:36–38ಆಗ ಅವರ ತಂದೆಯಾದ ಯಾಕೋಬನು ಅವರಿಗೆ--ನನ್ನನ್ನು ಮಕ್ಕಳಿಲ್ಲದವ ನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾವಿಾನನ್ನೂ ಕರಕೊಂಡು ಹೋಗುವದಕ್ಕಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ ಅಂದನು. ರೂಬೇನನು ತನ್ನ ತಂದೆಗೆ--ನಾನು ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ನನ್ನ ಇಬ್ಬರು ಕುಮಾರರನ್ನು ಕೊಂದುಬಿಡು. ನೀನು ಅವನನ್ನು ನನ್ನ ಕೈಯಲ್ಲಿ ಒಪ್ಪಿಸು. ನಾನು ಅವನನ್ನು ನಿನ್ನ ಬಳಿಗೆ ತಿರಿಗಿ ತರುವೆನು ಅಂದನು.ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು. ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.
- Psalm 27:13 ಕೀರ್ತನೆಗಳು 27:13ಜೀವಿತರ ದೇಶದಲ್ಲಿ ಕರ್ತನ ಒಳ್ಳೇತನ ವನ್ನು ನೋಡುವೆನೆಂದು ನಾನು ನಂಬದೆ ಹೋಗಿದ್ದರೆ ಮೂರ್ಛೆ ಹೋಗುತ್ತಿದ್ದೆನು.ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.