Jeremiah 45:4 in Kannada
ನೀನು ಅವನಿಗೆ ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ; ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.
Neenu avanige helatakkaddenandare--kartanu heege heluttaane--igo, kattiddannu kedavibiduttene; naanu nettaddannu kittu haakuttene; haudu, ee samasta deshavanne naashamaaduttene.haagaadare neenu ninagoskara mahattaadavu galannu hudukutteeyo? Hudukabeda; igo, naanu ellaa shareerada mele kedannu taruttenendu kartanu annuttaane; aadaroo neenu hoguva ellaa sthalagalalli ninna praanavannu ninage kolleyaagi koduttene.
Jeremiah 45:4 in English
- King James Version (KJV)
- Thus shalt thou say unto him, The LORD saith thus; Behold, [that] which I have built will I break down, and that which I have planted I will pluck up, even this whole land.
- World English Bible (WEB)
- “You shall tell him, the LORD says: ‘Behold, that which I have built, I will break down, and that which I have planted I will pluck up; and this in the whole land.
- American Standard Version (ASV)
- Thus shalt thou say unto him, Thus saith Jehovah: Behold, that which I have built will I break down, and that which I have planted I will pluck up; and this in the whole land.
- Bible in Basic English (BBE)
- This is what you are to say to him: The Lord has said, Truly, the building which I put up will be broken down, and that which was planted by me will be uprooted, and this through all the land;
- Darby Translation (DBY)
- Thus shalt thou say unto him, Thus saith Jehovah: Behold, what I have built do I overthrow, and what I have planted I pluck up, even this whole land.
- Webster's Bible (WBS)
- Thus shalt thou say to him, The LORD saith thus; Behold, [that] which I have built I will break down, and that which I have planted I will pluck up, even this whole land.
- Young's Literal Translation (YLT)
- Thus dost thou say unto him: Thus said Jehovah: Lo, that which I have built I am throwing down, and that which I have planted I am plucking up, even the whole land itself.
Read in context
- 2ಬಾರೂಕನೇ, ಇಸ್ರಾಯೇಲಿನ ದೇವರಾದ ಕರ್ತನು ನಿನ್ನನ್ನು ಕುರಿತು ಹೀಗೆ ಹೇಳುತ್ತಾನೆ--ಈಗ ನನಗೆ ಅಯ್ಯೋ!
- 3ಕರ್ತನು ನನ್ನ ವ್ಯಥೆಗೆ ದುಃಖವನ್ನು ಕೂಡಿಸಿದ್ದಾನೆ; ನಿಟ್ಟುಸುರು ಬಿಡುವದರಿಂದ ದಣಿದಿ ದ್ದೇನೆ; ವಿಶ್ರಾಂತಿಯನ್ನು ಕಾಣೆನೆಂದು ನೀನು ಹೇಳಿದಿ ಯಲ್ಲಾ.
- 4ನೀನು ಅವನಿಗೆ ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ; ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.
- 5ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.
Cross references
- Jeremiah 31:28 ಯೆರೆಮೀಯ 31:28ನಾನು ಕೀಳುವದಕ್ಕೂ ಮುರಿಯುವದಕ್ಕೂ ಕೆಡವುದಕ್ಕೂ ನಾಶಮಾಡು ವದಕ್ಕೂ ಕುಗ್ಗಿಸುವದಕ್ಕೂ ಅವರ ವಿಷಯ ಹೇಗೆ ಎಚ್ಚರವಾಗಿದ್ದೆನೋ ಹಾಗೆಯೇ ಕಟ್ಟುವದಕ್ಕೂ ನೆಡು ವದಕ್ಕೂ ಅವರನ್ನು ಕಾಯುವೆ ನೆಂದು ಕರ್ತನು ಅನ್ನುತ್ತಾನೆ.
- Jeremiah 18:7–10 ಯೆರೆಮೀಯ 18:7–10ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವದಕ್ಕೂ ಕೆಡವುವ ದಕ್ಕೂ ನಾಶಮಾಡುವದಕ್ಕೂ ಮಾತಾಡುತ್ತೇನೋ ಆ ಜನಾಂಗಕ್ಕೆ ವಿರೋಧವಾಗಿ ನಾನು ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಪಶ್ಚಾ ತ್ತಾಪ ಪಡುವೆನು. ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವದಕ್ಕೂ ನೆಡುವದಕ್ಕೂ ಮಾತನಾಡುತ್ತೇನೋ ಅದು ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ ನಾನು ಅದಕ್ಕೆ ಮೇಲನ್ನು ಮಾಡುತ್ತೇನೆಂದು ಹೇಳಿದ ಒಳ್ಳೇದನ್ನು ಕುರಿತು ಪಶ್ಚಾತ್ತಾಪಪಡುವೆನು.
- Jeremiah 1:10 ಯೆರೆಮೀಯ 1:10ನೋಡು, ನಿನ್ನನ್ನು ಕೀಳುವದಕ್ಕೂ ಕೆಳಗೆ ಹಾಕಿ ಬಿಡುವದಕ್ಕೂ ನಾಶಮಾಡುವದಕ್ಕೂ ಕೆಡವಿಹಾಕುವದಕ್ಕೂ ಕಟ್ಟುವದಕ್ಕೂ ನೆಡುವದಕ್ಕೂ ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ಈ ದಿನ ನಿನ್ನನ್ನು ನೇಮಿಸಿದ್ದೇನೆ ಅಂದನು.
- Psalm 80:8–16 ಕೀರ್ತನೆಗಳು 80:8–16ನೀನು ದ್ರಾಕ್ಷೇಗಿಡವನ್ನು ಐಗುಪ್ತದಿಂದ ತಂದಿ; ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿ. ಅದರ ಮುಂದೆ ಸ್ಥಳ ಸಿದ್ಧಮಾಡಿದಿ; ಆಗ ಅದು ಬೇರೂರಿ ದೇಶವನ್ನು ತುಂಬಿತು. ಅದರ ನೆರಳಿನಿಂದ ಬೆಟ್ಟ ಗಳೂ ಕೊಂಬೆಗಳಿಂದ ದೇವದಾರುಗಳೂ ಮುಚ್ಚಲ್ಪ ಟ್ಟವು. ಅದು ತನ್ನ ರೆಂಬೆಗಳನ್ನು ಸಮುದ್ರದ ವರೆಗೂ ತನ್ನ ಬಳ್ಳಿಗಳನ್ನು ನದಿಗೂ ಹರಡಿಸಿತು. ಮಾರ್ಗ ದಲ್ಲಿ ಹಾದು ಹೋಗುವವರೆಲ್ಲರು ಅದನ್ನು ಕೀಳುವ ಹಾಗೆ ಯಾಕೆ ಅದರ ಬೇಲಿಗಳನ್ನು ನೀನು ಮುರಿದು ಬಿಟ್ಟಿದ್ದೀ? ಅಡವಿಯಿಂದ ಬಂದ ಹಂದಿಯು ಅದನ್ನು ಹಾಳುಮಾಡುತ್ತದೆ ಕಾಡಿನ ಮೃಗವು ಅದನ್ನು ಮೇಯ್ದು ಬಿಡುತ್ತದೆ. ಓ ಸೈನ್ಯಗಳ ದೇವರೇ, ತಿರುಗಿಕೋ ಎಂದು ನಾವು ನಿನ್ನನ್ನು ಬೇಡುತ್ತೇವೆ. ಆಕಾಶದಿಂದ ದೃಷ್ಟಿಸಿ ನೋಡು; ಈ ದ್ರಾಕ್ಷೇಗಿಡವನ್ನೂ ನಿನ್ನ ಬಲಗೈ ನೆಟ್ಟ ಸಸಿಯನ್ನೂ ನೀನು ನಿನಗೆ ಬಲಪಡಿಸಿ ಕೊಂಡ ಕೊಂಬೆಯನ್ನೂ ಪರಾಮರಿಸು. ಅದು ಈಗ ಕೊಯ್ಯಲ್ಪಟ್ಟು ಬೆಂಕಿಯಿಂದ ಸುಡಲ್ಪಟ್ಟಿದೆ; ನಿನ್ನ ಬಾಯಿ ಗದರಿಕೆಯಿಂದ ಅವರು ನಾಶವಾಗುತ್ತಾರೆ.
- Isaiah 5:2–7 ಯೆಶಾಯ 5:2–7ಅವನು ಅದಕ್ಕೆ ಬೇಲಿ ಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದು ಹಾಕಿ ಒಳ್ಳೇ ದ್ರಾಕ್ಷೆಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷೇ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆ ದ್ರಾಕ್ಷೇ ಹಣ್ಣನ್ನು ಕೊಡುವದೆಂದು ಎದುರು ನೋಡು ತ್ತಿರಲು, ಅದು ಕಾಡುಹಣ್ಣನ್ನು ಬಿಟ್ಟಿತು. ಓ ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷೆಯ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಪ್ರಾರ್ಥಿಸುತ್ತೇನೆ. ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ? ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು. ಅದನ್ನು ನಾನು ಹಾಳಾಗಲು ಬಿಡುವೆನು: ಅದನ್ನು ಯಾರೂ ಕುಡಿ ಕತ್ತರಿಸುವದಿಲ್ಲ; ಅಗೆಯುವದೂ ಇಲ್ಲ. ಆದರೆ ಅಲ್ಲಿ ಮುಳ್ಳುಪೊದೆಗಳು ಬೆಳೆಯುವವು; ಅಲ್ಲದೆ ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾ ಪಿಸುವೆನು. ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು.
- Jeremiah 11:17 ಯೆರೆಮೀಯ 11:17ಇಸ್ರಾಯೇಲಿನ ಮನೆಯವರೂ ಯೆಹೂದದ ಮನೆಯವರೂ ನನಗೆ ಕೋಪವನ್ನೆಬ್ಬಿಸುವ ಹಾಗೆ ಬಾಳನಿಗೆ ಧೂಪವನ್ನರ್ಪಿಸಿ ತಮಗೆ ವಿರೋಧವಾಗಿ ಮಾಡಿಕೊಂಡ ಕೇಡಿನ ನಿಮಿತ್ತ ನಿನ್ನನ್ನು ನೆಟ್ಟ ಸೈನ್ಯ ಗಳ ಕರ್ತನು ನಿನ್ನ ಮೇಲೆ ಕೆಡುಕಾಗಲಿ ಎಂದು ಪ್ರಕಟಿಸಿದ್ದಾನೆ.
- Genesis 6:6–7 ಆದಿಕಾಂಡ 6:6–7ಕರ್ತನು ಭೂಮಿಯ ಮೇಲೆ ಮನುಷ್ಯನನ್ನು ಉಂಟುಮಾಡಿದ್ದಕ್ಕೋಸ್ಕರ ಪಶ್ಚಾತ್ತಾಪ ಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು. ಇದಲ್ಲದೆ ಕರ್ತನು--ನಾನು ಸೃಷ್ಟಿಸಿದ ಮನುಷ್ಯ ನನ್ನೂ ಮನುಷ್ಯನ ಸಂಗಡ ಸಕಲ ಮೃಗ, ಕ್ರಿಮಿ, ಆಕಾಶದ ಪಕ್ಷಿಗಳನ್ನೂ ಭೂಮುಖದಿಂದ ನಾಶಮಾಡು ವೆನು; ನಾನು ಅವರನ್ನು ಉಂಟುಮಾಡಿದ್ದಕ್ಕೆ ಅದು ಪಶ್ಚಾತ್ತಾಪಪಡುವಂತೆ ಆಯಿತು ಅಂದನು.