Jeremiah · chapter 46 · verse 1
Jeremiah 46:1 in Kannada
ಜನಾಂಗಗಳಿಗೆ ವಿರೋಧವಾಗಿಯೂ ಐಗುಪ್ತಕ್ಕೆ ವಿರೋಧವಾಗಿಯೂ ಯೂಫ್ರೇ ಟೀಸ್ ನದಿಯ ಬಳಿಯಲ್ಲಿ ಕರ್ಕೆವಿಾಷಿನಲ್ಲಿ ಇದ್ದಂಥ
Janaangagalige virodhavaagiyoo aiguptakke virodhavaagiyoo yoophre tees nadiya baliyalli karkeviాshinalli iddantha
Jeremiah 46:1 in English
- King James Version (KJV)
- The word of the LORD which came to Jeremiah the prophet against the Gentiles;
- World English Bible (WEB)
- The LORD’s word which came to Jeremiah the prophet concerning the nations.
- American Standard Version (ASV)
- The word of Jehovah which came to Jeremiah the prophet concerning the nations.
- Bible in Basic English (BBE)
- The word of the Lord which came to Jeremiah the prophet about the nations.
- Darby Translation (DBY)
- The word of Jehovah that came to Jeremiah the prophet concerning the nations.
- Webster's Bible (WBS)
- The word of the LORD which came to Jeremiah the prophet against the Gentiles;
- Young's Literal Translation (YLT)
- That which hath been the word of Jehovah unto Jeremiah the prophet concerning the nations,
Read in context
- 1ಜನಾಂಗಗಳಿಗೆ ವಿರೋಧವಾಗಿಯೂ ಐಗುಪ್ತಕ್ಕೆ ವಿರೋಧವಾಗಿಯೂ ಯೂಫ್ರೇ ಟೀಸ್ ನದಿಯ ಬಳಿಯಲ್ಲಿ ಕರ್ಕೆವಿಾಷಿನಲ್ಲಿ ಇದ್ದಂಥ
- 2ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೋಷೀಯನ ಮಗನಾದ ಯೆಹೋ ಯಾಕೀಮನ ನಾಲ್ಕನೇ ವರುಷದಲ್ಲಿ ಹೊಡೆದಂಥ ಐಗುಪ್ತದ ಅರಸನಾದ ಫರೋಹನೆಕೋವಿನ ದಂಡಿಗೆ ವಿರೋಧವಾಗಿ ಪ್ರವಾದಿಯಾದ ಯೆರೆವಿಾಯನಿಗೆ ಉಂಟಾದ ಕರ್ತನ ವಾಕ್ಯವು.
- 3ಗುರಾಣಿಯನ್ನೂ ಖೇಡ್ಯವನ್ನೂ ಸಿದ್ಧಮಾಡಿರಿ; ಯುದ್ಧಕ್ಕೆ ಸವಿಾಪಿಸಿರಿ;
Cross references
- Jeremiah 1:10 ಯೆರೆಮೀಯ 1:10ನೋಡು, ನಿನ್ನನ್ನು ಕೀಳುವದಕ್ಕೂ ಕೆಳಗೆ ಹಾಕಿ ಬಿಡುವದಕ್ಕೂ ನಾಶಮಾಡುವದಕ್ಕೂ ಕೆಡವಿಹಾಕುವದಕ್ಕೂ ಕಟ್ಟುವದಕ್ಕೂ ನೆಡುವದಕ್ಕೂ ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ಈ ದಿನ ನಿನ್ನನ್ನು ನೇಮಿಸಿದ್ದೇನೆ ಅಂದನು.
- Zechariah 2:8 ಜೆಕರ್ಯ 2:8ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.
- Jeremiah 4:7 ಯೆರೆಮೀಯ 4:7ಸಿಂಹವು ತನ್ನ ಅಡವಿಯೊಳಗಿಂದ ಏರಿ ಬರುತ್ತದೆ, ಅನ್ಯ ಜನಾಂಗ ಗಳನ್ನು ನಾಶಮಾಡುವವನು ಹೊರಟಿದ್ದಾನೆ, ನಿನ್ನ ದೇಶವನ್ನು ಹಾಳು ಮಾಡುವದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ; ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವದು.
- Genesis 10:5 ಆದಿಕಾಂಡ 10:5ಇವರು ಜನಾಂಗಗಳ ದ್ವೀಪಗಳಲ್ಲಿ ಅವರವರ ದೇಶಗಳಲ್ಲಿ ಅವರವರ ಭಾಷೆಗಳ ಪ್ರಕಾರ ಅವರವರ ಕುಟುಂಬಗಳ ಪ್ರಕಾರ ಅವರವರ ಜನಾಂಗಗಳಲ್ಲಿ ವಿಭಾಗಿಸಲ್ಪಟ್ಟರು.
- Romans 3:29 ರೋಮಾಪುರದವರಿಗೆ 3:29ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿ ದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು, ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ;
- Numbers 23:9 ಅರಣ್ಯಕಾಂಡ 23:9ಬಂಡೆಗಳ ತುದಿಯಿಂದ ಅವನನ್ನು ನೋಡು ತ್ತೇನೆ; ಗುಡ್ಡಗಳಿಂದ ಅವನನ್ನು ದೃಷ್ಟಿಸಿದ್ದೇನೆ; ಇಗೋ, ಆ ಜನಾಂಗವು ಒಂಟಿಯಾಗಿ ವಾಸಿಸುವದು, ಜನಾಂಗ ಗಳಲ್ಲಿ ಅದು ಎಣಿಸಲ್ಪಡುವದಿಲ್ಲ.
- Jeremiah 25:15–38 ಯೆರೆಮೀಯ 25:15–38ಇಸ್ರಾಯೇಲಿನ ದೇವರಾದ ಕರ್ತನು ನನಗೆ ಹೀಗೆ ಹೇಳುತ್ತಾನೆ--ಈ ರೌದ್ರದ ದ್ರಾಕ್ಷಾರಸ ಪಾತ್ರೆ ಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತಕ್ಕೋ. ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತ ಕದಲಿ ಹುಚ್ಚರಾಗುವರು ಅಂದನು. ಆಗ ನಾನು ಪಾತ್ರೆಯನ್ನು ಕರ್ತನ ಕೈಯಿಂದ ತಕ್ಕೊಂಡು ಕರ್ತನು ನನ್ನನ್ನು ಕಳುಹಿಸಿದ ಎಲ್ಲಾ ಜನಾಂಗಗಳಿಗೆ ಕುಡಿಸಿದೆನು. ಯೆರೂಸ ಲೇಮಿಗೂ ಯೆಹೂದದ ಪಟ್ಟಣಗಳಿಗೂ ಅದರ ಅರಸುಗಳಿಗೂ ಪ್ರಭುಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳುಮಾಡಿ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ಶಾಪಕ್ಕೂ ಗುರಿಮಾಡುವ ಹಾಗೆ ಕುಡಿಸಿದೆನು. ಐಗುಪ್ತದ ಅರಸನಾದ ಫರೋಹನಿಗೂ ಅವನ ಸೇವಕರಿಗೂ ಅವನ ಪ್ರಭುಗಳಿಗೂ ಅವನ ಎಲ್ಲಾ ಜನರಿಗೂ ಮಿಶ್ರವಾದ ಜನರೆಲ್ಲರಿಗೂ ಊಚ್ ದೇಶದ ಅರಸರೆಲ್ಲರಿಗೂ ಫಿಲಿಷ್ಟಿಯ ದೇಶದ ಅರಸರೆಲ್ಲರಿಗೂ ಅಷ್ಕೆಲೋನಿಗೂ ಗಾಜಾಕ್ಕೂ ಎಕ್ರೋನಿಗೂ ಅಷ್ಡೋ ದಿನ ಉಳಿದವರಿಗೂ ಎದೋಮಿಗೂ ಮೋವಾ ಬಿಗೂ ಅಮ್ಮೋನನ ಮಕ್ಕಳಿಗೂ ತೂರಿನ ಅರಸರೆ ಲ್ಲರಿಗೂ ಚೀದೋನಿನ ಅರಸರೆಲ್ಲರಿಗೂ ಸಮುದ್ರದ ಆಚೆಯಲ್ಲಿರುವ ದ್ವೀಪದ ಅರಸರಿಗೂ ದೆದಾನಿಗೂ ತೇಮಾಗೂ ಬೂಜಿಗೂ ಕಟ್ಟಕಡೆಯ ಮೂಲೆಯ ವರೆಗೂ ಅರಬಿಯದ ಅರಸರೆಲ್ಲರಿಗೂ ಅರಣ್ಯದಲ್ಲಿ ವಾಸಿಸುವ ಮಿಶ್ರವಾದ ಜನರ ಅರಸರೆಲ್ಲರಿಗೂ ಜಿಮ್ರಿಯ ಅರಸರೆಲ್ಲರಿಗೂ ಏಲಾಮಿನ ಅರಸರೆ ಲ್ಲರಿಗೂ ಮೇದ್ಯದ ಅರಸರೆಲ್ಲರಿಗೂ ಹತ್ತಿರದ ಲ್ಲಿಯೂ ದೂರದಲ್ಲಿಯೂ ಒಬ್ಬರ ಬಳಿಯಲ್ಲಿ ಒಬ್ಬರಿ ರುವ ಉತ್ತರದಿಕ್ಕಿನ ಅರಸರೆಲ್ಲರಿಗೂ ಭೂಮಿಯ ಮೇಲ್ಭಾಗದಲ್ಲಿರುವಂಥ ಲೋಕದ ಎಲ್ಲಾ ರಾಜ್ಯ ಗಳಿಗೂ ಕುಡಿಸಿದೆನು; ಶೇಷಕಿನ ಅರಸನು ಅವರ ತರುವಾಯ ಕುಡಿಯುವನು. ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರ್ರಿ. ಅವರು ಪಾತ್ರೆಯನ್ನು ನಿನ್ನ ಕೈಯಿಂದ ತಕ್ಕೊಂಡು ಕುಡಿಯಲು ತಿರಸ್ಕರಿಸಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವು ನಿಶ್ಚಯವಾಗಿ ಕುಡಿಯಬೇಕು. ಇಗೋ, ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವದಕ್ಕೆ ಆರಂಭಮಾಡುತ್ತೇನೆ; ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿ ಕೊಳ್ಳುವದಿಲ್ಲ: ನಾನು ಭೂನಿವಾಸಿಗಳೆಲ್ಲರ ಮೇಲೆ ಕತ್ತಿಯನ್ನು ಕರೆಯುತ್ತೇನೆಂದು ಸೈನ್ಯಗಳ ಕರ್ತನು ಅನ್ನು ತ್ತಾನೆ. ಆದದರಿಂದ ನೀನು ಅವರಿಗೆ ವಿರೋಧವಾಗಿ ಈ ವಾಕ್ಯಗಳನ್ನೆಲ್ಲಾ ಪ್ರವಾದಿಸಿ ಅವರಿಗೆ ಹೇಳತಕ್ಕದ್ದೇ ನಂದರೆ--ಕರ್ತನು ಉನ್ನತದಿಂದ ಘರ್ಜಿಸಿ ತನ್ನ ಪರಿಶುದ್ಧ ನಿವಾಸದೊಳಗಿಂದ ತನ್ನ ಶಬ್ದವನ್ನು ಕೊಡು ವನು ತನ್ನ ನಿವಾಸದ ಮೇಲೆ ಗಟ್ಟಿಯಾಗಿ ಘರ್ಜಿಸಿ ದ್ರಾಕ್ಷೇ ತುಳಿಯುವವರ ಹಾಗೆ ಆರ್ಭಟವನ್ನು ಭೂನಿವಾಸಿಗಳೆಲ್ಲರಿಗೆ ವಿರೋಧವಾಗಿ ಎತ್ತುವನು. ಭೂಮಿಯ ಅಂತ್ಯಗಳ ವರೆಗೆ ಘೋಷವು ಬರು ವದು; ಕರ್ತನಿಗೆ ಜನಾಂಗಗಳ ಸಂಗಡ ವ್ಯಾಜ್ಯವದೆ; ಆತನು ಎಲ್ಲಾ ಮನುಷ್ಯರ ಸಂಗಡ ವಾದಿಸುವನು; ದುಷ್ಟರನ್ನು ಕತ್ತಿಗೆ ಒಪ್ಪಿಸುವೆನೆಂದು ಕರ್ತನು ಅನ್ನುತ್ತಾನೆ. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಜನಾಂಗದಿಂದ ಜನಾಂಗಕ್ಕೆ ಕೇಡು ಹೊರಡುವದು; ಭೂಮಿಯ ಮೇರೆಗಳಿಂದ ಮಹಾಬಿರುಗಾಳಿ ಎಬ್ಬಿಸ ಲ್ಪಡುವದು. ಆ ದಿವಸದಲ್ಲಿ ಭೂಮಿಯ ಈ ಮೇರೆಯಿಂದ ಭೂಮಿಯ ಆ ಮೇರೆಯ ವರೆಗೆ ಕರ್ತ ನಿಂದ ಕೊಂದುಹಾಕಲ್ಪಟ್ಟವರು ಇರುವರು; ಅವರಿ ಗೋಸ್ಕರ ಗೋಳಾಡುವದಿಲ್ಲ; ಅವರನ್ನು ಕೂಡಿಸುವ ದಿಲ್ಲ; ಅವರನ್ನು ಹೂಣಿಡುವದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು. ಓ ಕುರುಬರೇ, ಗೋಳಿಟ್ಟುಕೂಗಿರಿ; ಮಂದೆಯಲ್ಲಿ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ; ನಿಮ್ಮನ್ನು ಕೊಲ್ಲುವದಕ್ಕೂ ಚದರಿಸುವದಕ್ಕೂ ದಿನಗಳು ತುಂಬಿ ಅವೆ; ಆಗ ನೀವು ರಮ್ಯವಾದ ಪಾತ್ರೆಯ ಹಾಗೆ ಬೀಳುವಿರಿ. ಆಗ ಕುರುಬರಿಗೆ ಓಡಿಹೋಗುವದಕ್ಕೂ ಮಂದೆಯ ಪ್ರಮುಖರಿಗೆ ತಪ್ಪಿಸಿಕೊಳ್ಳುವದಕ್ಕೂ ಮಾರ್ಗವಿಲ್ಲದೆ ಹೋಗುವದು. ಕುರುಬರ ಕೂಗಿನ ಶಬ್ದವೂ ಮಂದೆಯ ಗೋಳಾಡುವಿಕೆಯೂ ಪ್ರಮುಖರಿಗೆ ಕೇಳ ಲ್ಪಡುವದು. ಕರ್ತನು ಅವರ ಮೇವಿನ ಸ್ಥಳವನ್ನು ಹಾಳುಮಾಡಿದ್ದಾನೆ. ಸಮಾಧಾನವುಳ್ಳ ನಿವಾಸಗಳು ಕರ್ತನ ಕೋಪದ ಉರಿಯಿಂದ ಕೆಡವಲ್ಪಟ್ಟವು.ಆತನು ಸಿಂಹದಂತೆ ತನ್ನ ಮರೆಯನ್ನು ತೊರೆದು ಬಿಟ್ಟಿದ್ದಾನೆ; ಉಪದ್ರಪಡಿಸುವವನ ಉರಿಯ ನಿಮಿ ತ್ತವೂ ಆತನ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು. ಆತನು ಸಿಂಹದಂತೆ ತನ್ನ ಮರೆಯನ್ನು ತೊರೆದು ಬಿಟ್ಟಿದ್ದಾನೆ; ಉಪದ್ರಪಡಿಸುವವನ ಉರಿಯ ನಿಮಿ ತ್ತವೂ ಆತನ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.