Jeremiah · chapter 46 · verse 11
Jeremiah 46:11 in Kannada
ಐಗುಪ್ತದ ಮಗಳಾದ ಕನ್ಯಾಸ್ತ್ರೀಯೇ, ಗಿಲ್ಯಾದಿಗೆ ಹೋಗಿ ತೈಲವನ್ನು ತಕ್ಕೋ! ನೀನು ಬಹಳ ಮದ್ದು ತಕ್ಕೊಳ್ಳುವದು ವ್ಯರ್ಥವಾಗಿದೆ; ನಿನಗೆ ಗುಣವಾಗು ವದಿಲ್ಲ.
Aiguptada magalaada kanyaastreeye, gilyaadige hogi tailavannu takko! Neenu bahala maddu takkolluvadu vyarthavaagide; ninage gunavaagu vadilla.
Jeremiah 46:11 in English
- King James Version (KJV)
- Go up into Gilead, and take balm, O virgin, the daughter of Egypt: in vain shalt thou use many medicines; [for] thou shalt not be cured.
- World English Bible (WEB)
- Go up into Gilead, and take balm, virgin daughter of Egypt. You use many medicines in vain. There is no healing for you.
- American Standard Version (ASV)
- Go up into Gilead, and take balm, O virgin daughter of Egypt: in vain dost thou use many medicines; there is no healing for thee.
- Bible in Basic English (BBE)
- Go up to Gilead and take sweet oil, O virgin daughter of Egypt: there is no help in all your medical arts; nothing will make you well.
- Darby Translation (DBY)
- Go up to Gilead, and fetch balm, O virgin-daughter of Egypt! In vain shalt thou multiply remedies: there is no healing for thee.
- Webster's Bible (WBS)
- Go up into Gilead, and take balm, O virgin, the daughter of Egypt: in vain shalt thou use many medicines; [for] thou shalt not be cured.
- Young's Literal Translation (YLT)
- Go up to Gilead, and take balm, O virgin daughter of Egypt, In vain thou hast multiplied medicines, Healing there is none for thee.
Read in context
- 9ಕುದುರೆಗಳೇ, ಬನ್ನಿರಿ; ರಥಗಳೇ, ಓಡಾಡಿರಿ; ಪರಾಕ್ರಮಶಾಲಿಗಳು ಹೊರಗೆ ಬರಲಿ; ಗುರಾಣಿಯನ್ನು ಹಿಡಿಯುವ ಕೂಷ್ಯರೂ ಫೊಟ್ಯರು ಬಿಲ್ಲನ್ನು ಹಿಡಿದು ಬೊಗ್ಗಿಸುವ ಲೂದ್ಯರೂ ಹೊರಗೆ ಬರಲಿ.
- 10ಇದು ಸೈನ್ಯಗಳ ಕರ್ತನಾದ ದೇವರ ದಿನವೇ; ಆತನು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ದಿನವು ಕತ್ತಿಯು ಸಂಹರಿಸಿ ಅವರ ರಕ್ತದಿಂದ ತೃಪ್ತಿಯಾಗಿ ಮತ್ತವಾಗುವದು; ಉತ್ತರ ದೇಶದಲ್ಲಿ ಯೂಫ್ರೇಟೀಸ್ ನದಿಯ ಬಳಿಯಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ಬಲಿ ಆಗುತ್ತದೆ.
- 11ಐಗುಪ್ತದ ಮಗಳಾದ ಕನ್ಯಾಸ್ತ್ರೀಯೇ, ಗಿಲ್ಯಾದಿಗೆ ಹೋಗಿ ತೈಲವನ್ನು ತಕ್ಕೋ! ನೀನು ಬಹಳ ಮದ್ದು ತಕ್ಕೊಳ್ಳುವದು ವ್ಯರ್ಥವಾಗಿದೆ; ನಿನಗೆ ಗುಣವಾಗು ವದಿಲ್ಲ.
- 12ಜನಾಂಗಗಳು ನಿನ್ನ ಮಾನಭಂಗವನ್ನು ಕುರಿತು ಕೇಳಿಯವೆ, ನಿನ್ನ ಕೂಗು ದೇಶವನ್ನು ತುಂಬಿಸಿ ಯದೆ; ಪರಾಕ್ರಮಶಾಲಿಯು ಪರಾಕ್ರಮಶಾಲಿಯ ಮೇಲೆ ವಿರೋಧವಾಗಿ ಎಡವಿದ್ದಾರೆ; ಏಕವಾಗಿ ಬಿದ್ದುಹೋಗಿದ್ದಾರೆ.
- 13ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದು ಐಗುಪ್ತದೇಶವನ್ನು ಹೇಗೆ ಹೊಡೆಯುವನೆಂಬದರ ವಿಷಯ ಕರ್ತನು ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ ವಾಕ್ಯವು.
Cross references
- Jeremiah 8:22 ಯೆರೆಮೀಯ 8:22ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಮಗಳಿಗೆ ಯಾಕೆ ಸ್ವಸ್ಥವಾಗಲಿಲ್ಲ?
- Micah 1:9 ಮೀಕ 1:9ಅದರ ಗಾಯವು ಗುಣವಾಗ ದಂಥದ್ದು, ಯಾಕಂದರೆ ಅದು ಯೆಹೂದಕ್ಕೆ ಬಂತು; ನನ್ನ ಜನರ ಬಾಗಲಿಗೂ ಯೆರೂಸಲೇಮಿನ ಮಟ್ಟಿಗೂ ಮುಟ್ಟಿದ್ದಾನೆ.
- Nahum 3:19 ನಹೂಮ 3:19ನಿನ್ನ ಗಾಯವು ಗುಣಹೊಂದದು; ನಿನ್ನ ಗಾಯ ಕಠಿಣ ವಾದದ್ದು; ನಿನ್ನ ಸುದ್ದಿಯನ್ನು ಕೇಳುವವರೆಲ್ಲರು ನಿನಗೆ ಚಪ್ಪಾಳೆ ಹೊಡೆಯುವರು; ನಿನ್ನ ಕೆಟ್ಟತನವು ನಿತ್ಯವಾಗಿ ಯಾರ ಮೇಲೆ ಹಾದುಹೋಗದೆ ಇತ್ತು?
- Luke 8:43–44 ಲೂಕನು 8:43–44ಆಗ ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದು ತನ್ನ ಜೀವನಕ್ಕೆ ಇದ್ದದ್ದನ್ನು ವೈದ್ಯರಿಗೆ ವೆಚ್ಚಮಾಡಿದ್ದಾಗ್ಯೂ ಯಾರಿಂದಲೂ ವಾಸಿಯಾಗದೆ ಇದ್ದ ಒಬ್ಬ ಸ್ತ್ರೀಯು ಆತನ ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು; ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋಯಿತು.
- Isaiah 47:1 ಯೆಶಾಯ 47:1ಬಾಬೆಲಿನ ಕುಮಾರ್ತೆಯಾದ ಓ ಕನ್ಯಾ ಸ್ತ್ರೀಯೇ, ಕೆಳಕ್ಕೆ ಇಳಿದು ಬಂದು ದೂಳಿ ನಲ್ಲಿ ಕುಳಿತುಕೋ, ಓ ಕಸ್ದೀಯರ ಕುಮಾರಿಯೇ ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ. ಯಾಕಂದರೆ ಇನ್ನು ಮೇಲೆ ನೀನು ಕೋಮಲೆ ಮತ್ತು ನಾಜೂಕಾದವಳು ಎಂದು ಕರೆಯಲ್ಪಡುವದಿಲ್ಲ.
- Jeremiah 14:17 ಯೆರೆಮೀಯ 14:17ಆದದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು.
- Ezekiel 27:17 ಯೆಹೆಜ್ಕೇಲನು 27:17ಯೆಹೂದವೂ ಇಸ್ರಾಯೇಲ್ ದೇಶವೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋಧಿಯಿಂದಲೂ ಕಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧ ತೈಲ ದಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡೆಸಿದರು.
- Jeremiah 30:12–15 ಯೆರೆಮೀಯ 30:12–15ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಗಾಯವು ಗುಣಹೊಂದದು ನಿನ್ನ ಬಾಸುಂಡೆಯು ಅಘೋರ ವಾದದ್ದು. ಅದನ್ನು ನಿನಗೆ ಕಟ್ಟುವ ಹಾಗೆ ನಿನಗೋ ಸ್ಕರ ವಾದಿಸುವವರು ಯಾರೂ ಇರುವದಿಲ್ಲ. ವಾಸಿ ಮಾಡುವ ಔಷಧಗಳು ನಿನಗೆ ಇಲ್ಲ. ನಿನ್ನನ್ನು ಪ್ರೀತಿ ಮಾಡುವವರೆಲ್ಲರು ನಿನ್ನನ್ನು ಮರೆತುಬಿಟ್ಟಿದ್ದಾರೆ, ನಿನ್ನನ್ನು ಹುಡುಕುವದಿಲ್ಲ; ನಿನ್ನ ಅಕ್ರಮಗಳು ಬಹಳವೂ ನಿನ್ನ ಪಾಪಗಳು ಪ್ರಬಲವೂ ಆಗಿರುವದರಿಂದ ಶತ್ರುವಿನ ಗಾಯದಿಂದಲೂ ಕ್ರೂರನ ಶಿಕ್ಷೆಯಿಂದಲೂ ನಾನು ನಿನ್ನನ್ನು ಗಾಯಪಡಿಸಿದ್ದೇನೆ. ನಿನ್ನ ಗಾಯದ ನೋವಿನ ನಿಮಿತ್ತ ಯಾಕೆ ಕೂಗುತ್ತೀ? ನಿನ್ನ ದುಃಖವು ಗುಣವಾಗ ದಂಥದ್ದೇ; ನಿನ್ನ ಅಕ್ರಮಗಳು ಬಹಳವಾಗಿರುವದ ರಿಂದಲೂ ನಿನ್ನ ಪಾಪಗಳು ಪ್ರಬಲವಾಗಿರುವದ ರಿಂದಲೂ ಇವುಗಳನ್ನು ನಿನಗೆ ಮಾಡಿದ್ದೇನೆ.
- Genesis 37:25 ಆದಿಕಾಂಡ 37:25ಅವರು ಊಟಕ್ಕೆ ಕೂತುಕೊಂಡಾಗ ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಇಷ್ಮಾಯೇಲ್ಯರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ ಸುಗಂಧತೈಲ ರಕ್ತಬೋಳಗಳನ್ನು ಹೊರು ತ್ತಿದ್ದವು. ಅವರು ಅವುಗಳನ್ನು ಐಗುಪ್ತಕ್ಕೆ ತೆಗೆದು ಕೊಂಡು ಹೋಗುತ್ತಿದ್ದರು.
- Matthew 5:26 ಮತ್ತಾಯನು 5:26ನಾನು ನಿನಗೆ ನಿಜವಾಗಿ ಹೇಳುವದೇನಂದರೆ--ನೀನು ಕೊನೆಯ ಕಾಸನ್ನು ಸಲ್ಲಿಸುವ ತನಕ ಯಾವ ವಿಧದಿಂದಲೂ ಅಲ್ಲಿಂದ ಹೊರಗೆ ಬರುವದೇ ಇಲ್ಲ.
- Ezekiel 30:21–25 ಯೆಹೆಜ್ಕೇಲನು 30:21–25ಮನುಷ್ಯ ಪುತ್ರನೇ, ನಾನು ಐಗುಪ್ತದ ಅರಸ ನಾದ ಫರೋಹನ ತೋಳನ್ನು ಮುರಿದು ಹಾಕಿದ್ದೇನೆ; ಇಗೋ, ಅದು ಕಟ್ಟಲ್ಪಡುವ ಹಾಗೆ ವಾಸಿಯಾಗುವದೇ ಇಲ್ಲ, ಅದು ಕತ್ತಿಯನ್ನು ಹಿಡಿಯುವ ಹಾಗೆಯೇ ಅದಕ್ಕೆ ಬಲಬರುವ ಹಾಗೆ ಪಟ್ಟಿ ಬಿಗಿಸಲ್ಪಡುವದಿಲ್ಲ. ಆದ ದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ಐಗುಪ್ತದೇಶದ ಅರಸನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಬಲವುಳ್ಳದ್ದೂ ಮುರಿದದ್ದೂ ಆಗಿರುವ ಅವನ ತೋಳುಗಳನ್ನು ಮುರಿ ಯುತ್ತೇನೆ; ಅವನ ಕೈಯಿಂದ ಕತ್ತಿಯನ್ನು ಬೀಳಿಸುತ್ತೇನೆ. ಐಗುಪ್ತರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಹರಡುವೆನು. ಬಾಬೆಲಿನ ಅರಸನ ತೋಳು ಗಳನ್ನು ನಾನು ಬಲಪಡಿಸುವೆನು; ಅವನ ಕೈಯಲ್ಲಿ ನನ್ನ ಕತ್ತಿಯನ್ನಿಡುವೆನು; ಫರೋಹನ ತೋಳನ್ನು ಮುರಿಯುವೆನು, ಅವನು ಗಾಯದಿಂದ ಸಾಯುವ ಹಾಗೆ ಅವನ ಮುಂದೆ ನರಳಾಡುವನು. ನಾನು ಬಾಬೆಲಿನ ಅರಸನ ತೋಳುಗಳಿಗೆ ಬಲ ಕೊಡುವೆನು, ಫರೋಹನ ತೋಳುಗಳು ಬಿದ್ದು ಹೋಗುವವು; ಯಾವಾಗ ನಾನು ನನ್ನ ಕತ್ತಿಯನ್ನು ಬಾಬೆಲಿನ ಅರಸನ ಕೈಗೆ ಕೊಡುವೆನೋ ಅದನ್ನು ಐಗುಪ್ತದೇಶದಿಂದ ಹೊರಗೆ ಚಾಚುವೆನೋ ಆಗ ನಾನೇ ಕರ್ತನೆಂದು ಅವರಿಗೆ ಗೊತ್ತಾಗುವದು.ನಾನು ಐಗುಪ್ತರನ್ನು ಜನಾಂಗಗಳೊಳಗೆ ಚದರಿಸಿ ದೇಶಗಳಲ್ಲಿ ಹರಡಿಸು ತ್ತೇನೆ; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Genesis 43:11 ಆದಿಕಾಂಡ 43:11ಆಗ ಅವರ ತಂದೆಯಾದ ಇಸ್ರಾಯೇಲನು ಅವರಿಗೆ--ನೀವು ಹೀಗೆ ಮಾಡಿರಿ, ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮ ಸಾಮಾನು ಗಳಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆ ಯಾಗಿ ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಅಕ್ರೋಡು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.