Jeremiah · chapter 46 · verse 24
Jeremiah 46:24 in Kannada
ಐಗುಪ್ತದ ಮಗಳು ನಾಚಿಕೆಪಡುವಳು, ಉತ್ತರದ ಜನರ ಕೈಯಲ್ಲಿ ಒಪ್ಪಿಸಲ್ಪಡುವಳು.
Aiguptada magalu naachikepaduvalu, uttarada janara kaiyalli oppisalpaduvalu.
Jeremiah 46:24 in English
- King James Version (KJV)
- The daughter of Egypt shall be confounded; she shall be delivered into the hand of the people of the north.
- World English Bible (WEB)
- The daughter of Egypt will be disappointed; she will be delivered into the hand of the people of the north.”
- American Standard Version (ASV)
- The daughter of Egypt shall be put to shame; she shall be delivered into the hand of the people of the north.
- Bible in Basic English (BBE)
- The daughter of Egypt will be put to shame; she will be given up into the hands of the people of the north.
- Darby Translation (DBY)
- The daughter of Egypt is put to shame; she is delivered into the hand of the people of the north.
- Webster's Bible (WBS)
- The daughter of Egypt shall be confounded; she shall be delivered into the hand of the people of the north.
- Young's Literal Translation (YLT)
- Ashamed hath been the daughter of Egypt, She hath been given into the hand of the people of the north.
Read in context
- 22ಅದರ ಶಬ್ದವು ಸರ್ಪದಂತೆ ಹೊರಡುವದು; ಅವರು ದಂಡಿನ ಸಂಗಡ ಸಂಚರಿಸಿ ಕಟ್ಟಿಗೆ ಕಡಿಯುವವರ ಹಾಗೆ ಕೊಡಲಿಗಳ ಸಂಗಡ ಅದಕ್ಕೆ ವಿರೋಧವಾಗಿ ಬರುವರು.
- 23ಆದರೆ ಅಡವಿ ಯನ್ನು ಅದು ಶೋಧಿಸ ಕೂಡದ್ದಾಗಿದ್ದರೂ ಕಡಿದು ಹಾಕುವರೆಂದು ಕರ್ತನು ಅನ್ನುತ್ತಾನೆ; ಅವರು ಮಿಡಿತೆ ಗಳಿಗಿಂತ ಹೆಚ್ಚಾಗಿ ಲೆಕ್ಕವಿಲ್ಲದೆ ಇದ್ದಾರೆ.
- 24ಐಗುಪ್ತದ ಮಗಳು ನಾಚಿಕೆಪಡುವಳು, ಉತ್ತರದ ಜನರ ಕೈಯಲ್ಲಿ ಒಪ್ಪಿಸಲ್ಪಡುವಳು.
- 25ಇಸ್ರಾಯೇಲಿನ ದೇವರಾದ ಸೈನ್ಯ ಗಳ ಕರ್ತನು ಹೇಳುವದೇನಂದರೆ--ಇಗೋ, ನಾನು ನೋಡುವ ಸಮೂಹವನ್ನೂ ಫರೋಹನನ್ನೂ ಐಗುಪ್ತ ವನ್ನೂ ಅದರ ದೇವರುಗಳನ್ನೂ ಅದರ ಅರಸರನ್ನೂ ಅಂತೂ ಫರೋಹನನ್ನೂ ಅವನಲ್ಲಿ ನಂಬಿಕೆಯಿಡುವ ಎಲ್ಲರನ್ನೂ ದಂಡಿಸುತ್ತೇನೆ;
- 26ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಅವನ ಸೇವಕರ ಕೈಯಲ್ಲಿಯೂ ಅವರನ್ನು ನಾನು ಒಪ್ಪಿಸುತ್ತೇನೆ. ಅದರ ತರುವಾಯ ಅದು ಪೂರ್ವದ ಕಾಲಗಳಂತೆ ನಿವಾಸ ವಾಗುವದೆಂದು ಕರ್ತನು ಅನ್ನುತ್ತಾನೆ.
Cross references
- Jeremiah 1:15 ಯೆರೆಮೀಯ 1:15ಇಗೋ, ನಾನು ಉತ್ತರದಲ್ಲಿರುವ ರಾಜ್ಯಗಳ ಕುಟುಂಬಗಳನ್ನೆಲ್ಲಾ ಕರೆಯುತ್ತೇನೆಂದು ಕರ್ತನು ಅನ್ನು ತ್ತಾನೆ; ಅವರು ಬಂದು ತಮ್ಮ ತಮ್ಮ ಸಿಂಹಾಸನಗಳನ್ನು ಯೆರೂಸಲೇಮಿನ ಬಾಗಿಲುಗಳ ಪ್ರವೇಶದಲ್ಲಿಯೂ ಅದರ ಸುತ್ತಲಾಗಿರುವ ಗೋಡೆಗಳಿಗೆ ಎದುರಾಗಿಯೂ ಯೆಹೂದದ ಎಲ್ಲಾ ಪಟ್ಟಣಗಳಿಗೆ ಎದುರಾಗಿಯೂ ಇರಿಸುವರು.
- Ezekiel 29:1–21 ಯೆಹೆಜ್ಕೇಲನು 29:1–21ಹತ್ತನೇ ವರುಷದ ಹತ್ತನೇ ತಿಂಗಳಿನ, ಹನ್ನೆರಡನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಹೇಳಿದ್ದೇನಂದರೆ-- ಮನುಷ್ಯಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ಕಡೆಗೆ ಮುಖ ಮಾಡಿ ಅವನಿಗೂ ಸಮಸ್ತ ಐಗುಪ್ತಕ್ಕೂ ವಿರೋಧವಾಗಿ ಪ್ರವಾದಿಸು. ನೀನು ಮಾತನಾಡಿ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಐಗುಪ್ತದ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು--ಈ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿ ಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟ ಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ. ಆದರೆ ನಿನ್ನ ದವಡೆಗಳಲ್ಲಿ ಗಾಳಗಳನ್ನು ಹಾಕಿ, ನದಿಗಳ ವಿಾನುಗಳನ್ನು ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ ನಿನ್ನನ್ನು ನಿನ್ನ ನದಿಗಳೊಳಗಿಂದ ಮೇಲೆ ಎಳೆದು ನಿನ್ನ ವಿಾನುಗಳು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡುವೆನು. ನಿನ್ನನ್ನೂ ನಿನ್ನ ನದಿಗಳ ವಿಾನುಗಳನ್ನೂ ಅರಣ್ಯದಲ್ಲಿ ಹಾಕುವೆನು; ನೀನು ಬಯಲುಗಳ ಮೇಲೆ ಬಿದ್ದಿರುವಿ; ನಿನ್ನನ್ನು ಯಾರೂ ಒಟ್ಟುಗೂಡಿಸುವದು ಇಲ್ಲ, ಸೇರಿಸುವದೂ ಇಲ್ಲ. ಭೂಮಿಯ ಮೇಲಿರುವ ಮೃಗಗಳಿಗೂ ಆಕಾಶದ ಪಕ್ಷಿಗಳಿಗೂ ನಿನ್ನನ್ನು ಆಹಾರ ವನ್ನಾಗಿ ಕೊಟ್ಟಿದ್ದೇನೆ. ಆಗ ಎಲ್ಲಾ ಐಗುಪ್ತದ ನಿವಾಸಿಗಳು ನಾನೇ ಕರ್ತನೆಂದು ತಿಳಿಯುವರು; ಅವರು ಇಸ್ರಾಯೇಲ್ಯರ ಮನೆತನದವರಿಗೆ ದಂಟಿನ ಊರು ಗೋಲಾಗಿದ್ದರು. ಇಸ್ರಾಯೇಲ್ಯರು ನಿನ್ನ ಮೇಲೆ ಕೈಯಿಡಲು ನೀನು ಮುರಿದು ಅವರ ಹೆಗಲನ್ನು ಚುಚ್ಚಿದಿ; ಅವರು ನಿನ್ನನ್ನು ಊರಿಕೊಂಡಾಗ ನೀನು ಒಡೆದು ಅದರ ನಡುವುಗಳನ್ನೆಲ್ಲಾ ನಿಲ್ಲಿಸಿಬಿಟ್ಟೆ. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ನಿನ್ನ ಮೇಲೆ ಕತ್ತಿಯನ್ನು ತರುತ್ತೇನೆ. ಮನುಷ್ಯರನ್ನೂ ಮೃಗಗಳನ್ನೂ ನಿನ್ನೊಳಗಿಂದ ಕಡಿದುಬಿಡುತ್ತೇನೆ. ಅವನು--ಆ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು ಹೇಳಿಕೊಂಡದ್ದ ರಿಂದ ಐಗುಪ್ತ ದೇಶವು ಹಾಳು ಅರಣ್ಯವಾಗುವದು; ಆಗ ನಾನೇ ಕರ್ತನೆಂದು ಅವರು ತಿಳಿಯುವರು. ಆದದರಿಂದ ಇಗೋ, ನಾನು ನಿನಗೆ ವಿರೋಧ ವಾಗಿಯೂ ನಿನ್ನ ನದಿಗಳಿಗೆ ವಿರುದ್ಧವಾಗಿಯೂ ಇದ್ದೇನೆ. ಐಗುಪ್ತದೇಶವನ್ನು ಸೆವೇನೆಯ ಗೋಪುರ ಮೊದಲುಗೊಂಡು ಕೂಷಿನ ಪ್ರಾಂತ್ಯದವರೆಗೂ ಸಂಪೂರ್ಣವಾಗಿ ಕಾಡಾಗಿಯೂ ಹಾಳಾಗಿಯೂ ಮಾಡುತ್ತೇನೆ. ಯಾವ ಮನುಷ್ಯನ ಪಾದವಾದರೂ ಮೃಗಗಳ ಪಾದವಾದರೂ ಅದರಲ್ಲಿ ಹಾದುಹೋಗುವ ದಿಲ್ಲ ಅಥವಾ ನಾಲ್ವತ್ತು ವರ್ಷಗಳ ಕಾಲ ಅದರಲ್ಲಿ ವಾಸಮಾಡುವವರೇ ಇರುವದಿಲ್ಲ. ನಾನು ಐಗುಪ್ತ ದೇಶದವನ್ನು ಹಾಳಾದ ದೇಶಗಳ ಮಧ್ಯದಲ್ಲಿ ಹಾಳು ಮಾಡುವೆನು; ಅದರ ಪಟ್ಟಣಗಳು ಕಾಡಾಗಿರುವ ಪಟ್ಟಣಗಳ ಮಧ್ಯದಲ್ಲಿ ನಾಲ್ವತ್ತು ವರ್ಷಗಳು ಹಾಳಾಗಿರುವವು; ನಾನು ಐಗುಪ್ತರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳಲ್ಲಿ ಹರಡಿಸಿಬಿಡುವೆನು. ಆದರೂ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾಲ್ವತ್ತು ವರ್ಷಗಳ ಕೊನೆಯಲ್ಲಿ ನಾನು ಐಗುಪ್ತರಲ್ಲಿ ಚದರಿರುವ ಜನಾಂಗಗಳಲ್ಲಿ ಕೂಡಿಸುವೆನು. ನಾನು ಐಗುಪ್ತರನ್ನು ಸೆರೆಯಿಂದ ತಿರುಗಿ ಬಿಡಿಸಿ ಅವರನ್ನು ಪತ್ರೋಸಿನ ದೇಶಕ್ಕೆ ಅಂದರೆ ಅವರ ಜನ್ಮದೇಶಕ್ಕೆ ಮತ್ತೆ ಬರಮಾಡು ವೆನು; ಅಲ್ಲಿ ಅವರು ಕನಿಷ್ಠ ರಾಜ್ಯದವರಾಗಿರುವರು. ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠ ರಾಜ್ಯವೆನಿ ಸಿಕೊಳ್ಳುವದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ಮೇಲೆ ತಲೆ ಎತ್ತದು; ಅದು ಜನಾಂಗಗಳ ಮೇಲೆ ದೊರೆತನ ಮಾಡಲಾಗ ದಂತೆ ಅದನ್ನು ಕ್ಷೀಣಗತಿಗೆ ತರುವೆನು. ಇನ್ನು ಅದು ಇಸ್ರಾಯೇಲ್ ವಂಶದವರ ಭರವಸವಾಗದೆ, ಇವರು ಅವರ ಕಡೆಗೆ ನೋಡಿದಾಗ ಅಕ್ರಮವನ್ನು ಜ್ಞಾಪಕಕ್ಕೆ ತರಬೇಕಾಗಿರುವದಿಲ್ಲ; ಆಗ ನಾನೇ ದೇವ ರಾದ ಕರ್ತನೆಂದು ಅವರಿಗೆ ತಿಳಿಯುವದು. ಇಪ್ಪತ್ತೇಳನೇ ವರುಷದ ಮೊದಲನೇ ತಿಂಗಳಿನ, ಮೊದಲನೇ ದಿನದಲ್ಲಿ ಆದದ್ದೇನಂದರೆ ಕರ್ತನ ವಾಕ್ಯವು ನನಗೆ ಬಂದು ಹೀಗೆ ಹೇಳಿತು. ಮನುಷ್ಯ ಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆ ಹಾಕಿ ತನ್ನ ಸೈನಿಕರಿಂದ ಅತಿಶ್ರಮ ವಾದ ಸೇವೆಯನ್ನು ಮಾಡಿಸಿದನು. ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲೂ ಸುಲಿದು ಹೋಗಿದೆ. ಆದರೆ ಅವನು ಆ ಮುತ್ತಿಗೆಯಲ್ಲಿ ಪಟ್ಟ ಶ್ರಮಕ್ಕೆ ಅವನಿಗಾಗಲೀ ಅವನ ಸೈನಿಕರಿಗಾಗಲೀ ತೂರ್ನಿಂದ ಪ್ರತಿಫಲವೇನೂ ದೊರೆಯಲಿಲ್ಲ. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತದೇಶವನ್ನು ಕೊಡುತ್ತೇನೆ, ಅವನು ಅದರ ಜನಸಮೂಹವನ್ನೂ ಕೊಳ್ಳೆಯನ್ನೂ ಸುಲಿಗೆಯನ್ನು ಸೂರೆಮಾಡುವನು. ಇದೇ ಅವನ ದಂಡು ಪಟ್ಟ ಶ್ರಮಕ್ಕೆ ಪ್ರತಿಫಲವಾಗುವದು. ಅವನು ಅದಕ್ಕೆ ವಿರುದ್ಧವಾಗಿ ಪಟ್ಟ ಕಷ್ಟಗಳಿಗೋಸ್ಕರ ನಾನು ಅವನಿಗೆ ಐಗುಪ್ತದೇಶವನ್ನು ಕೊಟ್ಟಿದ್ದೇನೆ; ನನಗೋಸ್ಕರ ಅದನ್ನು ಮಾಡಿದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.ಆ ದಿನದಲ್ಲಿ ನಾನು ಇಸ್ರಾಯೇಲ್ಯರ ಮನೆ ತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯ ದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ನಾನೇ ಕರ್ತನೆಂದು ಅವರು ತಿಳಿಯುವರು. ಆ ದಿನದಲ್ಲಿ ನಾನು ಇಸ್ರಾಯೇಲ್ಯರ ಮನೆ ತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯ ದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ನಾನೇ ಕರ್ತನೆಂದು ಅವರು ತಿಳಿಯುವರು.
- Jeremiah 46:11 ಯೆರೆಮೀಯ 46:11ಐಗುಪ್ತದ ಮಗಳಾದ ಕನ್ಯಾಸ್ತ್ರೀಯೇ, ಗಿಲ್ಯಾದಿಗೆ ಹೋಗಿ ತೈಲವನ್ನು ತಕ್ಕೋ! ನೀನು ಬಹಳ ಮದ್ದು ತಕ್ಕೊಳ್ಳುವದು ವ್ಯರ್ಥವಾಗಿದೆ; ನಿನಗೆ ಗುಣವಾಗು ವದಿಲ್ಲ.
- Jeremiah 46:19–20 ಯೆರೆಮೀಯ 46:19–20ಓ ಐಗುಪ್ತದ ಯುವತಿಯಾದ ನಿವಾಸಿಯೇ, ಸೆರೆಯ ಸಾಮಾನುಗಳನ್ನು ಸಜ್ಜು ಗೊಳಿಸಿಕೋ; ನೋಫ್ಹಾಳಾಗುವದು; ನಿವಾಸಿ ಗಳಿಲ್ಲದ ಬೀಡಾಗುವದು. ಐಗುಪ್ತವು ಬಹಳ ಚೆಲುವಾದ ಕಡಸಾಗಿದೆ; ಆದರೆ ಉತ್ತರದಿಂದ ನಾಶ ನವು ಬಂದೇ ಬರುತ್ತದೆ.
- Psalm 137:8 ಕೀರ್ತನೆಗಳು 137:8ಹಾಳಾಗಲಿಕ್ಕಿರುವ ಬಾಬೆಲಿನ ಮಗಳೇ, ನೀನು ನಮಗೆ ಮಾಡಿದ ಕಾರ್ಯಕ್ಕೆ ಪ್ರತೀಕಾರ ವನ್ನು ನಿನಗೆ ಸಲ್ಲಿಸುವವನು ಧನ್ಯನು.ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.