Jeremiah · chapter 46 · verse 7
Jeremiah 46:7 in Kannada
ಹೊಳೆಗಳ ಹಾಗೆ ಕದಲುವ ನೀರುಗಳಂತಿದ್ದು ಪ್ರಳಯದ ಹಾಗೆ ಬರುವವನು ಯಾರು?
Holegala haage kadaluva neerugalantiddu pralayada haage baruvavanu yaaru?
Jeremiah 46:7 in English
- King James Version (KJV)
- Who [is] this [that] cometh up as a flood, whose waters are moved as the rivers?
- World English Bible (WEB)
- “Who is this who rises up like the Nile, like rivers whose waters surge?
- American Standard Version (ASV)
- Who is this that riseth up like the Nile, whose waters toss themselves like the rivers?
- Bible in Basic English (BBE)
- Who is this coming up like the Nile, whose waters are lifting their heads like the rivers?
- Darby Translation (DBY)
- Who is this [that] riseth up as the Nile, whose waters toss themselves like the rivers?
- Webster's Bible (WBS)
- Who [is] this [that] cometh up as a flood, whose waters are moved as the rivers?
- Young's Literal Translation (YLT)
- Who is this? as a flood he cometh up, As rivers do his waters shake themselves!
Read in context
- 5ಅವರು ದಿಗಿಲುಪಟ್ಟು ಹಿಂತಿರುಗಿದ್ದನ್ನು ನಾನು ಕಂಡದ್ದೇನು? ಅವರ ಪರಾಕ್ರಮಶಾಲಿಗಳು ಬಡಿಯಲ್ಪಟ್ಟಿದ್ದಾರೆ; ಹಿಂದೆ ನೋಡದೆ ಓಡಿಹೋಗು ತ್ತಾರೆ; ಸುತ್ತಲು ಅಂಜಿಕೆ ಇದೆ ಎಂದು ಕರ್ತನು ಅನ್ನುತ್ತಾನೆ.
- 6ವೇಗಶಾಲಿಗಳು ಓಡಿಹೋಗದಿರಲಿ; ಪರಾಕ್ರಮಶಾಲಿಗಳು ತಪ್ಪಿಸಿಕೊಳ್ಳದಿರಲಿ; ಉತ್ತರದಲ್ಲಿ ಯೂಫ್ರೇಟೀಸ್ ನದಿಯ ತೀರದಲ್ಲಿ ಅವರು ಎಡವಿ ಬೀಳುವರು.
- 7ಹೊಳೆಗಳ ಹಾಗೆ ಕದಲುವ ನೀರುಗಳಂತಿದ್ದು ಪ್ರಳಯದ ಹಾಗೆ ಬರುವವನು ಯಾರು?
- 8ಐಗುಪ್ತವು ಪ್ರಳಯದ ಹಾಗೆ ಏರುತ್ತದೆ; ಅದರ ನೀರುಗಳು ಹೊಳೆಗಳ ಹಾಗೆ ಕದಲುತ್ತವೆ; ನಾನು ಏರುತ್ತೇನೆ, ಭೂಮಿಯನ್ನು ಮುಚ್ಚುತ್ತೇನೆ, ಪಟ್ಟಣವನ್ನೂ ಅದರ ನಿವಾಸಿಗಳನ್ನೂ ನಾಶಮಾಡುತ್ತೇನೆ ಎಂದು ಆತನು ಹೇಳುತ್ತಾನೆ.
- 9ಕುದುರೆಗಳೇ, ಬನ್ನಿರಿ; ರಥಗಳೇ, ಓಡಾಡಿರಿ; ಪರಾಕ್ರಮಶಾಲಿಗಳು ಹೊರಗೆ ಬರಲಿ; ಗುರಾಣಿಯನ್ನು ಹಿಡಿಯುವ ಕೂಷ್ಯರೂ ಫೊಟ್ಯರು ಬಿಲ್ಲನ್ನು ಹಿಡಿದು ಬೊಗ್ಗಿಸುವ ಲೂದ್ಯರೂ ಹೊರಗೆ ಬರಲಿ.
Cross references
- Jeremiah 47:2 ಯೆರೆಮೀಯ 47:2ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಪ್ರವಾಹಗಳು ಉತ್ತರದಿಂದ ಬರು ತ್ತವೆ, ಅವು ತುಂಬಿ ತುಳುಕುವ ಪ್ರಳಯವಾಗುವದು; ದೇಶವನ್ನೂ ಅದರಲ್ಲಿರುವ ಸಮಸ್ತವನ್ನೂ ಪಟ್ಟಣವನ್ನೂ ಅದರ ನಿವಾಸಿಗಳನ್ನೂ ಆಕ್ರಮಿಸುವವು, ಆಗ ಮನು ಷ್ಯರು ಕೂಗುವರು, ದೇಶದ ನಿವಾಸಿಗಳೆಲ್ಲರೂ ಗೋಳಾ ಡುವರು.
- Isaiah 8:7–8 ಯೆಶಾಯ 8:7–8ಇಗೋ, ಕರ್ತನು ಎಲ್ಲಾ ಮಹಿಮೆಯಿಂದ ಕೂಡಿದ ಅಶ್ಯೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು; ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ವಿಾರಿ ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಓ ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು.
- Daniel 11:22 ದಾನಿಯೇಲನು 11:22ಪ್ರವಾಹದಂತಿರುವ ಆ ವ್ಯೂಹಗಳೂ ಒಡಂಬಡಿಕೆಯ ಪ್ರಧಾನನೂ ಅವನ ರಭಸಕ್ಕೆ ಸಿಕ್ಕಿ ಒಡೆದುಕೊಂಡು ಹೋಗಿ ಮುರಿದು ಹೋಗುವರು.
- Revelation 12:15 ಪ್ರಕಟನೆ 12:15ಆ ಸ್ತ್ರೀಯನ್ನು ಪ್ರವಾಹವು ಬಡಕೊಂಡು ಹೋಗ ಬೇಕೆಂದು ಆಕೆಯ ಹಿಂದೆ ಸರ್ಪವು ತನ್ನ ಬಾಯೊಳಗಿಂದ ನೀರನ್ನು ಪ್ರವಾಹದಂತೆ ಬಿಟ್ಟಿತು.
- Isaiah 63:1 ಯೆಶಾಯ 63:1ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ.
- Song of Solomon 3:6 ಪರಮಗೀತೆ 3:6ರಕ್ತಬೋಳ ಸಾಂಬ್ರಾಣಿಗಳಿಂದಲೂ ವರ್ತಕರ ಸಕಲ ಸುಗಂಧ ದ್ರವ್ಯಗಳಿಂದಲೂ ಧೂಮ ಸ್ತಂಭ ಗಳ ಹಾಗೆಯೂ ಅಡವಿಯಿಂದ ಬರುವ ಇವಳಾರು?
- Daniel 9:26 ದಾನಿಯೇಲನು 9:26ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
- Amos 8:8 ಆಮೋಸ 8:8ಇದಕ್ಕಾಗಿ ದೇಶವು ನಡುಗುವದಿಲ್ಲವೇ? ಅದರಲ್ಲಿ ವಾಸಿಸುವವರೆಲ್ಲರೂ ಗೋಳಾಡುವದಿಲ್ಲವೇ? ಅದು ಪ್ರವಾಹದಂತೆ ಉಬ್ಬಿ ಐಗುಪ್ತದ ಪ್ರವಾಹದಂತೆ ಬಡುಕೊಂಡು ಇಳಿಯು ವದು.
- Song of Solomon 8:5 ಪರಮಗೀತೆ 8:5ತನ್ನ ಪ್ರಿಯನ ಮೇಲೆ ಆತುಕೊಂಡು ಅರಣ್ಯದಿಂದ ಬರುವ ಇವಳು ಯಾರು? ಸೇಬು ಗಿಡದ ಕೆಳಗೆ ನಿನ್ನನ್ನು ಎಚ್ಚರಿಸಿದೆನು; ಅಲ್ಲಿ ನಿನ್ನ ತಾಯಿ ನಿನ್ನನ್ನು ಪಡೆದಳು; ಅಲ್ಲಿ ನಿನ್ನನ್ನು ಹೆತ್ತವಳು ನಿನ್ನನ್ನು ಪಡೆದಳು.