Jeremiah · chapter 48 · verse 10
Jeremiah 48:10 in Kannada
ಕರ್ತನ ಕೆಲಸವನ್ನು ಮೋಸವಾಗಿ ನಡಿಸುವವನು ಶಾಪಗ್ರಸ್ತ ನಾಗಲಿ; ರಕ್ತದಿಂದ ತನ್ನ ಕತ್ತಿಯನ್ನು ಹಿಂತೆಗೆಯುವವನಿಗೆ ಶಾಪವಾಗಲಿ.
Kartana kelasavannu mosavaagi nadisuvavanu shaapagrasta naagali; raktadinda tanna kattiyannu hintegeyuvavanige shaapavaagali.
Jeremiah 48:10 in English
- King James Version (KJV)
- Cursed [be] he that doeth the work of the LORD deceitfully, and cursed [be] he that keepeth back his sword from blood.
- World English Bible (WEB)
- “Cursed is he who does the work of the LORD negligently; and cursed is he who keeps back his sword from blood.
- American Standard Version (ASV)
- Cursed be he that doeth the work of Jehovah negligently; and cursed be he that keepeth back his sword from blood.
- Bible in Basic English (BBE)
- Let him be cursed who does the Lord's work half-heartedly; let him be cursed who keeps back his sword from blood.
- Darby Translation (DBY)
- Cursed be he that doeth the work of Jehovah negligently, and cursed be he that keepeth back his sword from blood!
- Webster's Bible (WBS)
- Cursed [be] he that doeth the work of the LORD deceitfully, and cursed [be] he that keepeth back his sword from blood.
- Young's Literal Translation (YLT)
- Cursed [is] he who is doing the work of Jehovah slothfully, And cursed [is] he Who is withholding his sword from blood.
Read in context
- 8ಒಂದೊಂದು ಪಟ್ಟಣದ ಮೇಲೆ ಸೂರೆಗೊಳ್ಳುವವನು ಬರುವನು; ಕರ್ತನು ಹೇಳಿದ ಹಾಗೆಯೇ ಒಂದು ಪಟ್ಟಣವಾದರೂ ತಪ್ಪಿಸಿಕೊಳ್ಳ ಲಾರದು, ತಗ್ಗೂ ನಾಶವಾಗುವದು; ಬೈಲು ಹಾಳಾಗುವದು.
- 9ಹಾರಿಹೋಗುವ ಹಾಗೆ ಮೋವಾಬಿಗೆ ರೆಕ್ಕೆಗಳನ್ನು ಕೊಡಿರಿ; ಅದರ ಪಟ್ಟಣಗಳು ಹಾಳಾಗು ವವು; ಅವುಗಳಲ್ಲಿ ನಿವಾಸಿಗಳಿರುವದಿಲ್ಲ.
- 10ಕರ್ತನ ಕೆಲಸವನ್ನು ಮೋಸವಾಗಿ ನಡಿಸುವವನು ಶಾಪಗ್ರಸ್ತ ನಾಗಲಿ; ರಕ್ತದಿಂದ ತನ್ನ ಕತ್ತಿಯನ್ನು ಹಿಂತೆಗೆಯುವವನಿಗೆ ಶಾಪವಾಗಲಿ.
- 11ಮೋವಾಬು ತನ್ನ ಚಿಕ್ಕಂದಿನಿಂದ ಸುಖವಾಗಿತ್ತು; ಅದು ತನ್ನ ಮಡ್ಡಿಯ ಮೇಲೆ ಸುಮ್ಮನೆ ಇತ್ತು; ಒಂದು ಪಾತ್ರೆಯೊಳಗಿಂದ ಮತ್ತೊಂದು ಪಾತ್ರೆಗೆ ಹೊಯ್ಯ ಲ್ಪಡಲಿಲ್ಲ; ಸೆರೆಗೆ ಹೋಗಲಿಲ್ಲ; ಆದದರಿಂದ ಅದರ ರುಚಿ ಅದರಲ್ಲಿ ಉಂಟು; ಅದರ ವಾಸನೆ ಬೇರೆ ಆಗಲಿಲ್ಲ.
- 12ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಅದರ ಬಳಿಗೆ ಅಲೆದಾಡುವವರನ್ನು ಕಳುಹಿಸುವೆನು; ಅವರು ಅದು ಅಲೆದಾಡುವಂತೆ ಮಾಡುವರು, ಅದರ ಪಾತ್ರೆಗಳನ್ನು ಬರಿದುಮಾಡಿ ತಮ್ಮ ಬುದ್ದಲಿಗಳನ್ನು ಒಡೆಯುವರು.
Cross references
- 1 Kings 20:42 1 ಅರಸುಗಳು 20:42ಇವನು ಅವನಿಗೆ--ಕರ್ತನು ಹೇಳುವ ದೇನಂದರೆ--ನಾನು ಪೂರ್ಣನಾಶಕ್ಕೆ ಒಪ್ಪಿಸಿದ ಮನು ಷ್ಯನನ್ನು ನೀನು ಕೈಬಿಟ್ಟು ಹೋಗಗೊಡಿಸಿದ ಕಾರಣ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವೂ ಅವನ ಜನಕ್ಕೆ ಬದಲಾಗಿ ನಿನ್ನ ಜನವೂ ಹೋಗುವದು ಅಂದನು.ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.
- 1 Samuel 15:3 1 ಸಮುವೇಲನು 15:3ಈಗ ನೀನು ಹೋಗಿ ಆ ಅಮಾಲೇಕ್ಯರನ್ನು ಹೊಡೆದು ಅವರಿಗೆ ಇದ್ದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿ ಅವರನ್ನು ಕನಿಕರಿಸದೆ ಪುರುಷರನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಮೊಲೆ ಕೂಸುಗಳನ್ನೂ ದನ ಕುರಿ ಒಂಟೆ ಕತ್ತೆಗಳನ್ನೂ ಕೊಂದುಹಾಕು ಎಂಬದು.
- 1 Samuel 15:9 1 ಸಮುವೇಲನು 15:9ಸೌಲನು ಮತ್ತು ಜನರು ಅಗಾಗನನ್ನೂ ಪಶುಕುರಿಗಳಲ್ಲಿ ಮೇಲ್ತರವಾದ ವುಗಳನ್ನೂ ಉತ್ತಮವಾದ ಸಮಸ್ತವನ್ನೂ ಕನಿಕರಿಸಿದರು. ಅವುಗಳನ್ನು ಸಂಪೂರ್ಣ ನಾಶಮಾಡಲು ಮನಸ್ಸಿಲ್ಲದೆ ಇದ್ದನು. ಆದರೆ ತಿರಸ್ಕರಿಸಲ್ಪಡತಕ್ಕ ಕನಿಷ್ಠವಾದವು ಗಳನ್ನೆಲ್ಲಾ ಸಂಪೂರ್ಣ ನಾಶಮಾಡಿದರು.
- Judges 5:23 ನ್ಯಾಯಸ್ಥಾಪಕರು 5:23ನೀವು ಮೇರೋಜನ್ನು ಶಪಿಸಿರಿ; ಅದರ ನಿವಾಸಿಗಳನ್ನು ಕಠಿಣವಾಗಿ ಶಪಿಸಿರಿ ಎಂದು ಕರ್ತನ ದೂತನು ಹೇಳುತ್ತಾನೆ; ಯಾಕಂದರೆ ಅವರು ಕರ್ತನ ಸಹಾಯಕ್ಕೂ ಪರಾಕ್ರಮಶಾಲಿಗಳಿಗೆ ವಿರೋ ಧವಾಗಿ ಕರ್ತನ ಸಹಾಯಕ್ಕೂ ಬಾರದೆ ಹೋದರು.
- 2 Kings 13:19 2 ಅರಸುಗಳು 13:19ಆಗ ಅವನು ಮೂರು ಸಾರಿ ಹೊಡೆದು ನಿಂತನು. ಆದರೆ ದೇವರ ಮನುಷ್ಯನು ಅವನ ಮೇಲೆ ರೌದ್ರವುಳ್ಳವನಾಗಿ--ನೀನು ಐದಾರು ಸಾರಿ ಹೊಡೆ ಯಬೇಕಾಗಿತ್ತು; ಆಗ ಅರಾಮ್ಯರನ್ನು ನಾಶಮಾಡುವ ವರೆಗೂ ಹೊಡೆಯುತ್ತಿದ್ದಿ; ಆದರೆ ಈಗ ಅರಾಮ್ಯರನ್ನು ಮೂರು ಸಾರಿ ಹೊಡೆಯುವಿ ಅಂದನು.
- Numbers 31:14–18 ಅರಣ್ಯಕಾಂಡ 31:14–18ಆದರೆ ಮೋಶೆಯು ಯುದ್ಧದಿಂದ ಬಂದ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಆಗಿರುವವರ ಮೇಲೆ ಕೋಪಗೊಂಡು ಅವರಿಗೆ--ಹೆಂಗಸರನ್ನೆಲ್ಲಾ ಉಳಿಸಿದಿರೋ? ಇಗೋ, ಇವರೇ ಬಿಳಾಮನ ಮಾತಿನಿಂದ ಪೆಗೋರನ ಕಾರ್ಯದಲ್ಲಿ ಕರ್ತನಿಗೆ ವಿರೋಧವಾಗಿ ದ್ರೋಹ ಮಾಡುವದಕ್ಕೆ ಇಸ್ರಾ ಯೇಲ್ ಮಕ್ಕಳಿಗೆ ಕಾರಣವಾಗಿದ್ದರು. ಕರ್ತನ ಸಭೆ ಯೊಳಗೆ ಇವರಿಂದಲೇ ವ್ಯಾಧಿಯಾಯಿತು. ಆದ ಕಾರಣ ಈಗ ಚಿಕ್ಕವರೊಳಗೆ ಎಲ್ಲಾ ಗಂಡಸರನ್ನೂ ಕೊಂದು, ಪುರುಷ ಸಂಗಮ ಮಾಡಿದ ಎಲ್ಲಾ ಸ್ತ್ರೀಯರನ್ನು ಕೊಂದುಹಾಕಿರಿ. ಆದರೆ ಪುರುಷ ಸಂಗಮ ಮಾಡದಿರುವ ಎಲ್ಲಾ ಹೆಣ್ಣು ಮಕ್ಕಳನ್ನು ನಿಮಗೆ ಉಳಿಸಿಕೊಳ್ಳಿರಿ.
- Jeremiah 50:25 ಯೆರೆಮೀಯ 50:25ಕರ್ತನು ತನ್ನ ಆಯುಧ ಶಾಲೆಯನ್ನು ತೆರೆದು, ರೋಷದ ಆಯುಧಗಳನ್ನು ಹೊರಗೆ ತಂದಿದ್ದಾನೆ; ಕಸ್ದೀಯರ ದೇಶದಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ನಿರ್ವಹಿಸ ಬೇಕಾದ ಕಾರ್ಯವುಂಟು.
- 1 Samuel 15:13–35 1 ಸಮುವೇಲನು 15:13–35ಸಮುವೇಲನು ಸೌಲನ ಬಳಿಗೆ ಬಂದಾಗ ಸೌಲನು ಅವನಿಗೆ--ನಿನಗೆ ಕರ್ತನ ಆಶೀರ್ವಾದವಾಗಲಿ; ನಾನು ಕರ್ತನ ಆಜ್ಞೆಯನ್ನು ಈಡೇರಿಸಿದೆನು ಅಂದನು. ಆಗ ಸಮುವೇಲನು ಅವನಿಗೆ--ನನ್ನ ಕಿವಿಗಳಲ್ಲಿ ಬೀಳುವ ಆ ಕುರಿಗಳ ಶಬ್ದವೇನು? ನಾನು ಕೇಳುವ ಪಶುಗಳ ಶಬ್ದವೇನು ಅಂದನು. ಅದಕ್ಕೆ ಸೌಲನು--ಜನರು ಅಮಾಲೇಕ್ಯರ ಬಳಿಯಿಂದ ತಕ್ಕೊಂಡು ಬಂದವುಗಳು; ನಿನ್ನ ದೇವ ರಾದ ಕರ್ತನಿಗೆ ಬಲಿಯನ್ನು ಅರ್ಪಿಸುವದಕ್ಕೋಸ್ಕರ ಮೇಲ್ತರವಾದ ಪಶು ಕುರಿಗಳನ್ನು ಉಳಿಸಿಟ್ಟು ಮಿಕ್ಕಾದ ವುಗಳನ್ನೆಲ್ಲಾ ಸಂಪೂರ್ಣ ನಾಶಮಾಡಿಬಿಟ್ಟೆವು ಅಂದನು. ಆಗ ಸಮುವೇಲನು ಸೌಲನಿಗೆಅದಿರಲಿ ಕರ್ತನು ಈ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ನಿನಗೆ ತಿಳಿಸುವೆನು ಅಂದನು. ಅದಕ್ಕವನು--ಹೇಳು ಅಂದನು. ಸಮುವೇಲನು--ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಇಸ್ರಾಯೇಲ್ ಗೋತ್ರಗಳ ಮೇಲೆ ಯಜಮಾನನಾಗಿ ಮಾಡಲ್ಪಟ್ಟಿಯಲ್ಲವೋ? ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿ ಅಭಿಷೇಕಿಸಿ ದನಲ್ಲವೋ? ಪಾಪಿಷ್ಠರಾದ ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿ ಅವರು ತೀರಿಹೋಗುವ ವರೆಗೂ ಅವರ ಸಂಗಡ ಯುದ್ಧಮಾಡಬೇಕೆಂದು ಕರ್ತನು ನಿನ್ನನ್ನು ಕಳುಹಿಸಿದನು. ಹೀಗಿರುವಾಗ ನೀನು ಯಾಕೆ ಕರ್ತನ ಮಾತಿಗೆ ವಿಧೇಯನಾಗದೆ ಕೊಳ್ಳೆಯ ಮೇಲೆ ಬಿದ್ದು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ ಅಂದನು. ಆಗ ಸೌಲನು ಸಮುವೇಲನಿಗೆ--ಹೌದು, ನಾನು ಕರ್ತನ ಮಾತಿಗೆ ವಿಧೇಯನಾಗಿ, ಕರ್ತನು ನನ್ನನ್ನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರ ಅರಸನಾದ ಅಗಾಗನನ್ನು ಹಿಡಿದುಕೊಂಡು ಬಂದು ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿದೆನು. ಆದರೆ ಜನರು ನಿನ್ನ ದೇವರಾದ ಕರ್ತನಿಗೆ ಗಿಲ್ಗಾಲಿ ನಲ್ಲಿ ಬಲಿ ಕೊಡುವದಕ್ಕಾಗಿ ಕೊಳ್ಳೆಯಲ್ಲಿ ಸಂಪೂರ್ಣ ವಾಗಿ ನಾಶಮಾಡಬೇಕೆಂದಿರುವ ಕುರಿ ಪಶುಗಳಲ್ಲಿ ಮೇಲ್ತರವಾದವುಗಳನ್ನು ಹಿಡುಕೊಂಡು ಬಂದರು ಅಂದನು. ಅದಕ್ಕೆ ಸಮುವೇಲನು--ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ? ಇಗೋ, ಬಲಿಗಿಂತ ವಿಧೇಯವಾಗುವದು ಟಗರುಗಳ ಕೊಬ್ಬಿಗಿಂತ ಆಲೈಸುವದು ಉತ್ತಮವಾಗಿರುವದು. ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು. ಆಗ ಸೌಲನು ಸಮುವೇಲನಿಗೆ--ನಾನು ಕರ್ತನ ವಾಕ್ಯವನ್ನೂ ನಿನ್ನ ಮಾತುಗಳನ್ನೂ ವಿಾರಿ ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು. ಆದದರಿಂದ ಈಗ ದಯಮಾಡಿ ನನ್ನ ಪಾಪವನ್ನು ಕ್ಷಮಿಸಿ ನಾನು ಕರ್ತನನ್ನು ಆರಾಧಿಸುವ ಹಾಗೆ ನನ್ನ ಸಂಗಡ ತಿರಿಗಿ ಬಾ ಎಂದು ಬೇಡಿಕೊಂಡನು. ಆದಕ್ಕೆ ಸಮುವೇಲನು ಸೌಲನಿಗೆ--ನಾನು ನಿನ್ನ ಸಂಗಡ ಹಿಂತಿರುಗಿ ಬರುವದಿಲ್ಲ; ಯಾಕಂದರೆ ನೀನು ಕರ್ತನ ವಾಕ್ಯವನ್ನು ತಿರಸ್ಕಾರಮಾಡಿದಿ; ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿರದ ಹಾಗೆ ತಿರ ಸ್ಕಾರ ಮಾಡಿಬಿಟ್ಟನು. ಸಮುವೇಲನು ಹೋಗುವದ ಕ್ಕೋಸ್ಕರ ತಿರುಗಿಕೊಳ್ಳುವಾಗ ಸೌಲನು ಅವನ ವಸ್ತ್ರದ ಕೊನೆಯನ್ನು ಹಿಡುಕೊಂಡನು. ಆಗ ಅದು ಹರಿದು ಹೋಯಿತು. ಆಗ ಸಮುವೇಲನು ಅವನಿಗೆನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಕರ್ತನು ಈ ಹೊತ್ತು ಕಿತ್ತು ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟನು. ಇಸ್ರಾ ಯೇಲಿನ ನಿತ್ಯ ಬಲವಾದಾತನು ಸುಳ್ಳು ಹೇಳುವಾತ ನಲ್ಲ, ಪಶ್ಚಾತ್ತಾಪಪಡುವಾತನೂ ಅಲ್ಲ. ಯಾಕಂದರೆ ಆತನು ಪಶ್ಚಾತ್ತಾಪಪಡುವಂತೆ ಮನುಷ್ಯನಲ್ಲ ಅಂದನು. ಅದಕ್ಕವನು--ನಾನು ಪಾಪವನ್ನು ಮಾಡಿದೆನು; ಆದರೆ ಈಗ ನೀನು ದಯಮಾಡಿ ನನ್ನ ಜನರ ಹಿರಿಯರ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನನ್ನು ಗೌರವಿಸು ನಾನು ನಿನ್ನ ದೇವರಾದ ಕರ್ತನನ್ನು ಆರಾಧಿಸುವ ಹಾಗೆ ನೀನು ನನ್ನ ಸಂಗಡ ಹಿಂದಿರುಗಿ ಬಾ ಅಂದನು. ಹಾಗೆಯೇ ಸಮುವೇಲನು ತಿರಿಗಿ ಸೌಲನ ಹಿಂದೆ ಹೋದನು; ಸೌಲನು ಕರ್ತನನ್ನು ಆರಾಧಿಸಿದನು. ಸಮುವೇಲನು--ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ತನ್ನಿರಿ ಅಂದನು. ಅಗಾಗನು ಆನಂದವಾಗಿ ಅವನ ಬಳಿಗೆ ಹೋಗಿ--ನಿಶ್ಚಯವಾಗಿ ಮರಣದ ಕಹಿ ತಪ್ಪಿಹೋಯಿತೆಂದು ಅಂದು ಕೊಂಡನು. ಆದರೆ ಸಮುವೇಲನು ಅವನಿಗೆನಿನ್ನ ಕತ್ತಿಯು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗ ಮಾಡಿತೋ ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು ಎಂದು ಹೇಳಿ ಸಮುವೇಲನು ಗಿಲ್ಗಾಲಿನಲ್ಲಿ ಕರ್ತನ ಮುಂದೆ ಅಗಾಗನನ್ನು ತುಂಡು ತುಂಡಾಗಿ ಮಾಡಿಬಿಟ್ಟನು. ಸಮುವೇಲನು ರಾಮಕ್ಕೆ ಹೋದನು; ಆದರೆ ಸೌಲನು ತನ್ನ ಊರಾದ ಗಿಬೆಯ ದಲ್ಲಿರುವ ತನ್ನ ಮನೆಗೆ ಹೋದನು.ಸಮುವೇಲನು ತಾನು ಸಾಯುವ ದಿವಸದ ವರೆಗೂ ಸೌಲನನ್ನು ತಿರಿಗಿ ನೋಡಲು ಬರಲಿಲ್ಲ. ಆದರೆ ಸಮುವೇಲನು ಅವನಿಗೋಸ್ಕರ ದುಃಖಪಟ್ಟನು. ಇದಲ್ಲದೆ ಅವನನ್ನು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿದ್ದ ಕೋಸ್ಕರ ಕರ್ತನು ಪಶ್ಚಾತ್ತಾಪಪಟ್ಟನು. ಸಮುವೇಲನು ತಾನು ಸಾಯುವ ದಿವಸದ ವರೆಗೂ ಸೌಲನನ್ನು ತಿರಿಗಿ ನೋಡಲು ಬರಲಿಲ್ಲ. ಆದರೆ ಸಮುವೇಲನು ಅವನಿಗೋಸ್ಕರ ದುಃಖಪಟ್ಟನು. ಇದಲ್ಲದೆ ಅವನನ್ನು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿದ್ದ ಕೋಸ್ಕರ ಕರ್ತನು ಪಶ್ಚಾತ್ತಾಪಪಟ್ಟನು.
- Jeremiah 47:6 ಯೆರೆಮೀಯ 47:6ಕರ್ತನ ಕತ್ತಿಯೇ, ಎಷ್ಟರ ವರೆಗೆ ವಿಶ್ರಮಿಸಿಕೊಳ್ಳದೆ ಇರುವಿ? ನಿನ್ನ ಒರೆಯಲ್ಲಿ ಅಡಗಿಕೋ! ವಿಶ್ರಮಿಸಿಕೋ, ಸುಮ್ಮನಿರು.ಅದು ಹೇಗೆ ಸುಮ್ಮನಿರುವದು? ಅಷ್ಕೆಲೋನಿಗೆ ವಿರೋಧವಾಗಿಯೂ ಸಮುದ್ರತೀರಕ್ಕೆ ವಿರೋಧ ವಾಗಿಯೂ ಕರ್ತನು ಅದಕ್ಕೆ ಆಜ್ಞೆ ಕೊಟ್ಟಿದ್ದಾನಲ್ಲಾ; ಅಲ್ಲಿ ಅದನ್ನು ನೇಮಿಸಿದ್ದಾನೆ.