Jeremiah · chapter 48 · verse 17
Jeremiah 48:17 in Kannada
ಅದರ ಸುತ್ತಲಿರುವವರೆಲ್ಲರೇ, ಅದಕ್ಕೆ ಗೋಳಾಡಿರಿ; ಅದರ ಹೆಸರನ್ನು ಬಲ್ಲವರೆಲ್ಲರೇ-- ಬಲವಾದ ಕೋಲೂ ಸೌಂದರ್ಯವಾದ ಬೆತ್ತವೂ ಹೇಗೆ ಮುರಿದು ಹೋಯಿತು! ಎಂದು ಹೇಳಿರಿ.
Adara suttaliruvavarellare, adakke golaadiri; adara hesarannu ballavarellare-- balavaada koloo saundaryavaada bettavoo hege muridu hoyitu! Endu heliri.
Jeremiah 48:17 in English
- King James Version (KJV)
- All ye that are about him, bemoan him; and all ye that know his name, say, How is the strong staff broken, [and] the beautiful rod!
- World English Bible (WEB)
- All you who are around him, bemoan him; and all you who know his name, say, ‘How the strong staff is broken, the beautiful rod!’
- American Standard Version (ASV)
- All ye that are round about him, bemoan him, and all ye that know his name; say, How is the strong staff broken, the beautiful rod!
- Bible in Basic English (BBE)
- All you who are round about him, give signs of grief for him, and all you who have knowledge of his name, say, How is the strong rod broken, even the beautiful branch!
- Darby Translation (DBY)
- All ye that are about him, bemoan him; and all ye that know his name, say, How is the strong staff broken, the beautiful rod!
- Webster's Bible (WBS)
- All ye that are about him bemoan him; and all ye that know his name, say, How is the strong staff broken, [and] the beautiful rod!
- Young's Literal Translation (YLT)
- Bemoan for him, all ye round about him, And all knowing his name, say ye: How hath it been broken, the staff of strength, The rod of beauty.
Read in context
- 15ಮೋವಾಬು ಸೂರೆ ಯಾಯಿತು, ಅದರ ಪಟ್ಟಣಗಳು ಏರಿ ಹೋದವು, ಅದರ ಆಯಲ್ಪಟ್ಟ ಯೌವನಸ್ಥರು ಕೊಲೆಗೆ ಇಳಿದು ಹೋದರು ಎಂದು ಸೈನ್ಯಗಳ ಕರ್ತನೆಂಬ ಹೆಸರುಳ್ಳ ಅರಸನು ಅನ್ನುತ್ತಾನೆ.
- 16ಮೋವಾಬಿನ ಆಪತ್ತು ಬರುವದಕ್ಕೆ ಸವಿಾಪವಾಯಿತು. ಅದರ ಕೇಡು ಬಹು ತ್ವರೆಪಡುತ್ತದೆ.
- 17ಅದರ ಸುತ್ತಲಿರುವವರೆಲ್ಲರೇ, ಅದಕ್ಕೆ ಗೋಳಾಡಿರಿ; ಅದರ ಹೆಸರನ್ನು ಬಲ್ಲವರೆಲ್ಲರೇ-- ಬಲವಾದ ಕೋಲೂ ಸೌಂದರ್ಯವಾದ ಬೆತ್ತವೂ ಹೇಗೆ ಮುರಿದು ಹೋಯಿತು! ಎಂದು ಹೇಳಿರಿ.
- 18ದೀಬೋನಿನ ನಿವಾಸಿಯಾದ ಮಗಳೇ, ನಿನ್ನ ವೈಭವದಿಂದ ಇಳಿದು ಬಾ; ದಾಹವಾಗಿ ಕೂತುಕೋ, ಮೋವಾಬನ್ನು ಸೂರೆ ಮಾಡುವವನು ನಿನ್ನ ಮೇಲೆ ಬರುವನು, ನಿನ್ನ ಬಲವಾದ ಕೋಟೆಗಳನ್ನು ಕೆಡಿಸಿ ಬಿಡುವನು.
- 19ಅರೋಯೇರಿನ ನಿವಾಸಿಯೇ, ದಾರಿಯ ಬಳಿಯಲ್ಲಿ ನಿಂತು ದೃಷ್ಟಿಸು; ಓಡಿಹೋಗು ವವನನ್ನೂ ತಪ್ಪಿಸಿಕೊಳ್ಳುವವನನ್ನೂ ಕೇಳು, ಏನಾಯಿ ತೆಂದು ಹೇಳು.
Cross references
- Isaiah 9:4 ಯೆಶಾಯ 9:4ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ.
- Jeremiah 48:39 ಯೆರೆಮೀಯ 48:39ಅದು ಹೇಗೆ ಮುರಿದು ಹೋಯಿತು! ಮೋವಾಬು ಹೇಗೆ ನಾಚಿಕೆಪಟ್ಟು ಬೆನ್ನು ತಿರುಗಿಸಿತು ಎಂದು ಗೋಳಿಡುವರು. ಹೀಗೆ ಮೋವಾಬು ಅದರ ಸುತ್ತಲಿರು ವವರೆಲ್ಲರಿಗೆ ಹಾಸ್ಯಕ್ಕೂ ಹೆದರಿಕೆಗೂ ಆಗುವದು.
- Jeremiah 9:17–20 ಯೆರೆಮೀಯ 9:17–20ಸೈನ್ಯಗಳ ಕರ್ತನು ಹೇಳುವದೇನಂದರೆ --ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೇ ಕಳುಹಿಸಿರಿ, ಅವರು ಬರಲಿ. ಅವರು ತ್ವರೆಪಟ್ಟು ನಮಗೋಸ್ಕರ ಗೋಳಾಟವನ್ನು ಎತ್ತಲಿ; ನಮ್ಮ ಕಣ್ಣು ಗಳು ಕಣ್ಣೀರು ಸುರಿಸಲಿ; ನಮ್ಮ ರೆಪ್ಪೆಗಳು ನೀರು ಎರೆಯಲಿ. ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆಪಡುತ್ತೇವೆ ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿ ಬಂತು. ಆದಾಗ್ಯೂ ಓ ಸ್ತ್ರೀಯರೇ, ಕರ್ತನ ವಾಕ್ಯವನ್ನು ಕೇಳಿರಿ. ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ; ನಿಮ್ಮ ಕುಮಾರ್ತೆಯರಿಗೆ ಗೋಳಾಟವನ್ನೂ ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ.
- Revelation 18:14–20 ಪ್ರಕಟನೆ 18:14–20ನಿನ್ನ ಜೀವವು ಅಪೇಕ್ಷಿಸಿದ ಹಣ್ಣು ಗಳು ನಿನ್ನನ್ನು ಬಿಟ್ಟು ಹೋದವು; ಸೊಗಸಾಗಿಯೂ ಶೋಭಾಯಮಾನವಾಗಿಯೂ ಇರುವವುಗಳೆಲ್ಲವೂ ನಿನ್ನನ್ನು ಬಿಟ್ಟು ಹೋದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವದೇ ಇಲ್ಲ. ಅವಳಿಂದ ಐಶ್ವರ್ಯವಂತ ರಾದ ಈ ಸರಕುಗಳ ವರ್ತಕರು ಅವಳ ಯಾತನೆಗೆ ಭಯಪಟ್ಟು ದೂರದಲ್ಲಿ ನಿಂತು ಅಳುತ್ತಾ ಗೋಳಾ ಡುತ್ತಾ-- ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ, ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು ಅವಳ ದಹನದ ಹೊಗೆಯನ್ನು ನೋಡುತ್ತಾ--ಈ ಮಹಾ ಪಟ್ಟಣಕ್ಕೆ ಸಮಾನವಾದ ಪಟ್ಟಣವು ಯಾವದು ಎಂದು ಕೂಗಿ ಹೇಳಿದರು. ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.
- Isaiah 16:8 ಯೆಶಾಯ 16:8ಹೆಷ್ಬೋನಿನ ಹೊಲ ಗಳೂ, ಸಿಬ್ಮದ ದ್ರಾಕ್ಷೆಯೂ ನಿಸ್ಸಾರವಾಗಿವೆ; ಅನ್ಯ ಜನಗಳ ಪ್ರಭುಗಳು ಅದರ ಮುಖ್ಯವಾದ ಗಿಡಗಳನ್ನು ಮುರಿದುಹಾಕಿದ್ದಾರೆ; ಅವರು ಯಜ್ಜೇರಿನ ವರೆಗೂ ಬಂದರು; ಅಡವಿಯಲ್ಲಿ ಅವರು ಸಂಚರಿಸಿದರು. ಅವಳ ಕೊಂಬೆಗಳು ಚಾಚಲ್ಪಟ್ಟವು ಅವರು ಸಮುದ್ರದ ಮೇಲೆ ಹೋದರು.
- Zechariah 11:10–14 ಜೆಕರ್ಯ 11:10–14ಆಗ ಸೌಂದರ್ಯವೆಂಬ ನನ್ನ ಕೋಲನ್ನು ತಕ್ಕೊಂಡು ಅದನ್ನು ಮುರಿದುಬಿಟ್ಟೆನು; ಹೀಗೆ ಜನರೆಲ್ಲರ ಸಂಗಡ ನಾನು ಮಾಡಿದ್ದ ನನ್ನ ಒಡಂಬಡಿಕೆಯನ್ನು ಮುರಿದುಬಿಟ್ಟೆನು, ಅದೇ ದಿನದಲ್ಲಿ ಅದು ಮುರಿಯಲ್ಪಟ್ಟಿತು; ಆಗ ನನ್ನಲ್ಲಿ ನಿರೀಕ್ಷೆಯಿಟ್ಟ ಬಡ ಕುರಿಮಂದೆಯು ಅದು ಕರ್ತನ ವಾಕ್ಯವೆಂದು ತಿಳಿದುಕೊಂಡಿತು. ಆಗ ನಾನು ಅವರಿಗೆ--ನಿಮ್ಮ ಕಣ್ಣುಗಳಲ್ಲಿ ಒಳ್ಳೇದಾಗಿ ತೋರಿದರೆ ನನ್ನ ಸಂಬಳವನ್ನು ಕೊಡಿರಿ, ಇಲ್ಲದಿದ್ದರೆ ಬಿಡಿರಿ ಅಂದೆನು. ಆಗ ಅವರು ನನ್ನ ಸಂಬಳಕ್ಕಾಗಿ ಮೂವತ್ತು ರೂಪಾಯಿಗಳನ್ನು ತೂಕಮಾಡಿದರು. ಆಗ ಕರ್ತನು ನನಗೆ--ಅದನ್ನು ಕುಂಬಾರನಿಗೆ ಹಾಕು; ನಾನು ಅವರಿಂದ ಬೆಲೆ ಮಾಡಲ್ಪಟ್ಟದ್ದು ಸರಿಯಾದ ಬೆಲೆ ಅಲ್ಲವೋ ಅಂದನು; ಆಗ ನಾನು ಆ ಮೂವತ್ತು ರೂಪಾಯಿಗಳನ್ನು ತಕ್ಕೊಂಡು ಕರ್ತನ ಆಲಯದಲ್ಲಿ ಅವುಗಳನ್ನು ಕುಂಬಾರನಿಗೆ ಹಾಕಿದೆನು. ಆಗ ನನ್ನ ಎರಡನೇ ಕೋಲಾದ ಬಂಧಗಳನ್ನು ಮುರಿದುಬಿಟ್ಟೆನು; ಹೀಗೆ ಯೆಹೂದಕ್ಕೂ ಇಸ್ರಾಯೇ ಲಿಗೂ ಮಧ್ಯೆ ಇರುವ ಸಹೋದರತನವನ್ನು ಇಲ್ಲದ ಹಾಗೆ ಮಾಡಿದೆನು.
- Isaiah 10:5 ಯೆಶಾಯ 10:5ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ.
- Isaiah 14:4–5 ಯೆಶಾಯ 14:4–5ಹೀಗೆ ಹಿಂಸಕನು ಕೊನೆ ಗೊಂಡನು, ಬಂಗಾರದ ಪಟ್ಟಣವು ಸುಮ್ಮನೆ ಇದೆ. ಜನರನ್ನು ಉಗ್ರಕೋಪದಿಂದ ಎಡೆಬಿಡದೆ ಹೊಡೆ ದು ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ
- Jeremiah 48:31–33 ಯೆರೆಮೀಯ 48:31–33ಆದದರಿಂದ ನಾನು ಮೋವಾಬಿನ ನಿಮಿತ್ತ ಗೋಳಿಡುವೆನು; ಸಮಸ್ತ ಮೋವಾಬಿನ ನಿಮಿತ್ತ ಕೂಗುವೆನು; ಕೀರ್ ಹೆರೆಸಿನ ಮನುಷ್ಯರ ನಿಮಿತ್ತ ನನ್ನ ಹೃದಯವು ದುಃಖಿಸುವದು. ಸಿಬ್ಮದ ದ್ರಾಕ್ಷೇಗಿಡವೇ, ಯಜ್ಜೇರಿನ ಅಳುವಿಕೆ ಯೊಂದಿಗೆ ನಿನ್ನ ನಿಮಿತ್ತ ಅಳುವೆನು; ನಿನ್ನ ಬಳ್ಳಿಗಳು ಸಮುದ್ರವನ್ನು ದಾಟಿದವು. ಯಜ್ಜೇರಿನ ಸಮುದ್ರಕ್ಕೆ ಮುಟ್ಟಿದವು; ನಿನ್ನ ಹಣ್ಣುಗಳ ಮೇಲೆಯೂ ನಿನ್ನ ದ್ರಾಕ್ಷೇ ಸುಗ್ಗಿಯ ಮೇಲೆಯೂ ಸೂರೆ ಮಾಡುವ ವನು ಬಿದ್ದಿದ್ದಾನೆ. ಫಲವುಳ್ಳ ಹೊಲದಿಂದಲೂ ಮೋವಾಬಿನ ದೇಶದಿಂದಲೂ ಸಂತೋಷವೂ ಉಲ್ಲಾ ಸವೂ ತೆಗೆಯಲ್ಪಟ್ಟಿವೆ; ದ್ರಾಕ್ಷೇಯಾಲೆಗಳೊಳಗಿಂದ ದ್ರಾಕ್ಷಾರಸವನ್ನು ನಿಲ್ಲಿಸಿದ್ದೇನೆ; ಅವರ ಅರ್ಭಟದ ಸಂಗಡ ಅವರು ಯಾರೂ ತುಳಿಯುವದಿಲ್ಲ; ಆರ್ಭ ಟವೇ ಆರ್ಭಟವಾಗುವದಿಲ್ಲ.
- Ezekiel 19:11–14 ಯೆಹೆಜ್ಕೇಲನು 19:11–14ಆಳುವವರ ರಾಜದಂಡ ಗಳಿಗೆ ತಕ್ಕ ಬಲವುಳ್ಳ ಬಳ್ಳಿಗಳು ಅದರಲ್ಲಿವೆ; ಅದರ ಉದ್ದವು ಎಲ್ಲಾ ರೆಂಬೆಗಳಿಗಿಂತ ಹೆಚ್ಚಾಗಿವೆ; ಹಾಗೆಯೇ ಅದು ತನ್ನ ಎತ್ತರಕ್ಕೆ ಬಹು ಕೊಂಬೆಗಳ ಮಧ್ಯದಲ್ಲಿ ಉದ್ದವಾಗಿ ಕಾಣಬರುತ್ತಿದೆ. ಆದರೆ ಅದು ರೋಷ ದಲ್ಲಿ ಕೀಳಲ್ಪಟ್ಟು ನೆಲಕ್ಕೆ ಹಾಕಲ್ಪಟ್ಟಿತು; ಮೂಡಣ ಗಾಳಿಯು ಅದರ ಫಲವನ್ನು ಒಣಗಿಸಿತು; ಬಲವಾದ ಬಳ್ಳಿಗಳು ಮುರಿಯಲ್ಪಟ್ಟು ಒಣಗಿ ಹೋದವು; ಬೆಂಕಿಯು ಅವುಗಳನ್ನು ಸುಟ್ಟುಹಾಕಿತು. ಈಗ ಅದು ಅರಣ್ಯದಲ್ಲಿ ಒಣಗಿ ನೀರಿಲ್ಲದಂಥ ಪ್ರದೇಶದಲ್ಲಿ ನೆಡಲ್ಪಟ್ಟಿದೆ.ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು ಅದರಲ್ಲಿ ಫಲವನ್ನು ತಿಂದು ಬಿಟ್ಟಿದೆ; ಅದರಲ್ಲಿ ಆಳುವದಕ್ಕೆ ರಾಜದಂಡಕ್ಕಾಗಿ ತಕ್ಕದಾದ ಬಲವುಳ್ಳ ಬಳ್ಳಿಯು ಈಗ ಇಲ್ಲ; ಇದು ಪ್ರಲಾಪವಾಗಿದೆ; ಪ್ರಲಾಪಕ್ಕಾಗಿಯೇ ಇದೆ. ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು ಅದರಲ್ಲಿ ಫಲವನ್ನು ತಿಂದು ಬಿಟ್ಟಿದೆ; ಅದರಲ್ಲಿ ಆಳುವದಕ್ಕೆ ರಾಜದಂಡಕ್ಕಾಗಿ ತಕ್ಕದಾದ ಬಲವುಳ್ಳ ಬಳ್ಳಿಯು ಈಗ ಇಲ್ಲ; ಇದು ಪ್ರಲಾಪವಾಗಿದೆ; ಪ್ರಲಾಪಕ್ಕಾಗಿಯೇ ಇದೆ.