Jeremiah · chapter 48 · verse 20
Jeremiah 48:20 in Kannada
ಮೋವಾಬು ನಾಚಿಕೆಪಡುತ್ತದೆ; ಮುರಿದು ಹೋಯಿತು; ಗೋಳಾಡಿರಿ, ಕೂಗಿರಿ; ಮೋವಾಬು ಸೂರೆಯಾಯಿತೆಂದು ಅರ್ನೋನಿನಲ್ಲಿ ಅದನ್ನು ತಿಳಿಸಿರಿ.
Movaabu naachikepaduttade; muridu hoyitu; golaadiri, koogiri; movaabu sooreyaayitendu arnoninalli adannu tilisiri.
Jeremiah 48:20 in English
- King James Version (KJV)
- Moab is confounded; for it is broken down: howl and cry; tell ye it in Arnon, that Moab is spoiled,
- World English Bible (WEB)
- Moab is disappointed; for it is broken down. Wail and cry! Tell it by the Arnon, that Moab is laid waste.
- American Standard Version (ASV)
- Moab is put to shame; for it is broken down: wail and cry; tell ye it by the Arnon, that Moab is laid waste.
- Bible in Basic English (BBE)
- Moab has been put to shame, she is broken: make loud sounds of grief, crying out for help; give the news in Arnon, that Moab has been made waste.
- Darby Translation (DBY)
- Moab is put to shame; for he is broken down: howl and cry; tell it in Arnon, that Moab is laid waste.
- Webster's Bible (WBS)
- Moab is confounded; for it is broken down: howl and cry; tell ye it in Arnon, that Moab is laid waste.
- Young's Literal Translation (YLT)
- Put to shame hath been Moab, For it hath been broken down, Howl and cry, declare ye in Arnon, For spoiled is Moab,
Read in context
- 18ದೀಬೋನಿನ ನಿವಾಸಿಯಾದ ಮಗಳೇ, ನಿನ್ನ ವೈಭವದಿಂದ ಇಳಿದು ಬಾ; ದಾಹವಾಗಿ ಕೂತುಕೋ, ಮೋವಾಬನ್ನು ಸೂರೆ ಮಾಡುವವನು ನಿನ್ನ ಮೇಲೆ ಬರುವನು, ನಿನ್ನ ಬಲವಾದ ಕೋಟೆಗಳನ್ನು ಕೆಡಿಸಿ ಬಿಡುವನು.
- 19ಅರೋಯೇರಿನ ನಿವಾಸಿಯೇ, ದಾರಿಯ ಬಳಿಯಲ್ಲಿ ನಿಂತು ದೃಷ್ಟಿಸು; ಓಡಿಹೋಗು ವವನನ್ನೂ ತಪ್ಪಿಸಿಕೊಳ್ಳುವವನನ್ನೂ ಕೇಳು, ಏನಾಯಿ ತೆಂದು ಹೇಳು.
- 20ಮೋವಾಬು ನಾಚಿಕೆಪಡುತ್ತದೆ; ಮುರಿದು ಹೋಯಿತು; ಗೋಳಾಡಿರಿ, ಕೂಗಿರಿ; ಮೋವಾಬು ಸೂರೆಯಾಯಿತೆಂದು ಅರ್ನೋನಿನಲ್ಲಿ ಅದನ್ನು ತಿಳಿಸಿರಿ.
- 21ಇದಲ್ಲದೆ ಬೈಲು ಸೀಮೆಯ ಮೇಲೆ ನ್ಯಾಯತೀರ್ವಿಕೆ ಬಂತು; ಹೋಲೋನಿನ ಮೇಲೆಯೂ ಯಾಚದ ಮೇಲೆಯೂ ಮೆಫಾತ್ನ ಮೇಲೆಯೂ
- 22ದೀಬೋನಿನ ಮೇಲೆಯೂ ನೇಬೋನಿನ ಮೇಲೆಯೂ ಬೇತ್ದಿಬ್ಲಾತಯಿಮ್ನ ಮೇಲೆಯೂ
Cross references
- Isaiah 16:2 ಯೆಶಾಯ 16:2ಗೂಡಿನಿಂದ ಹೊರಗೆ ಬಂದ ಹಕ್ಕಿಗಳು ಅಲೆದಾಡುವ ಹಾಗೆ ಮೋವಾಬಿನ ಕುಮಾರ್ತೆಯರು ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಇರುವರು.
- Numbers 21:26–28 ಅರಣ್ಯಕಾಂಡ 21:26–28ಹೆಷ್ಬೋನು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು; ಅವನು ಮೋವಾಬ್ಯರ ಪೂರ್ವದ ಅರಸನ ಸಂಗಡ ಯುದ್ಧಮಾಡಿ ಅವನ ಸಮಸ್ತ ದೇಶವನ್ನು ಅರ್ನೋನ್ ನದಿಯ ಪರ್ಯಂತರ ಅವನಿಂದ ವಶಪಡಿಸಿಕೊಂಡನು. ಅವರು ಸಾಮತಿ ಗಳಲ್ಲಿ ಮಾತನಾಡಿ -- ಹೆಷ್ಬೋನಿಗೆ ಬನ್ನಿರಿ; ಸೀಹೋನನ ಪಟ್ಟಣವು ತಿರಿಗಿ ಕಟ್ಟಲ್ಪಟ್ಟು ಸಿದ್ಧವಾಗಲಿ. ಬೆಂಕಿ ಹೆಷ್ಬೋನಿನಿಂದಲೂ ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು ಮೋವಾಬಿನ ಆರ್ ಎಂಬ ಪಟ್ಟಣವನ್ನೂ ಅರ್ನೋನಿನ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು.
- Judges 11:18 ನ್ಯಾಯಸ್ಥಾಪಕರು 11:18ಅರಣ್ಯದಲ್ಲಿ ನಡೆದು ಎದೋಮ್ ದೇಶವನ್ನೂ ಮೋವಾಬ್ ದೇಶವನ್ನೂ ಸುತ್ತಿಕೊಂಡು ಹೋಗಿ ಮೋವಾಬ್ ದೇಶದ ಪೂರ್ವ ದಿಕ್ಕಿಗೆ ಬಂದು ಮೋವಾಬಿನ ಮೇರೆಯೊಳಗೆ ಪ್ರವೇಶಿಸದೆ ಮೋವಾ ಬಿನ ಮೇರೆಯಾದ ಅರ್ನೋನಿನ ಆಚೆಯಲ್ಲಿ ಇಳು ಕೊಂಡರು.
- Isaiah 15:8 ಯೆಶಾಯ 15:8ಕೂಗಾಟವು ಮೋವಾಬಿನ ಎಲ್ಲೆ ಗಳ ತನಕ ಹಬ್ಬಿದೆ, ಅದರ ಕಿರಿಚಾಟ ಎಗ್ಲಯಿಮಿನ ವರೆಗೆ ಬೆಯೇರ್ ಏಲೀಮಿನ ವರೆಗೂ ವ್ಯಾಪಿಸಿದೆ.ದೀಮೋನಿನ ನೀರೆಲ್ಲಾ ರಕ್ತವಾಯಿತು; ದೀಮೋ ನಿನ ಮೇಲೆ ಹೆಚ್ಚಾದದ್ದನ್ನು ತರುವೆನು; ಮೋವಾ ಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ ದೇಶ ದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು.
- Isaiah 15:1–5 ಯೆಶಾಯ 15:1–5ಮೋವಾಬಿನ ವಿಷಯವಾದ ದೈವೋಕ್ತಿ. ಆ ರಾತ್ರಿಯಲ್ಲಿ ಮೋವಾಬಿನ ಆರ್ ಹಾಳಾಗಿ ನಿಶ್ಯಬ್ದವಾಯಿತು; ಆ ರಾತ್ರಿಯಲ್ಲಿ ಮೋವಾ ಬಿನ ಕಿರ್ ಹಾಳಾಗಿ ನಿಶ್ಯಬ್ಧವಾಯಿತು ಬಯಿತ್ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು. ಅವರು ತಮ್ಮ ಬೀದಿಗಳಲ್ಲಿ ಗೋಣೀತಟ್ಟನ್ನು ತಾವೇ ಸುತ್ತಿ ಕೊಳ್ಳುವರು; ಪ್ರತಿಯೊಬ್ಬನು ತಮ್ಮ ಮನೆಗಳ ಮೇಲೆ ಯೂ ಬೀದಿಗಳಲ್ಲಿಯೂ ಅರಚುತ್ತಾ ಬಹುಶೋಕ ದಿಂದ ಗೋಳಾಡುವನು. ಹೆಷ್ಬೋನ್ ಮತ್ತು ಎಲೆ ಯಾಲೆ ಕೂಗುತ್ತವೆ; ಅವುಗಳ ಸ್ವರವು ಯಹಜಿನ ವರೆಗೂ ಕೇಳಿಸುತ್ತದೆ; ಆದಕಾರಣ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುವರು; ಅವನ ಪ್ರಾಣವು ತನ್ನೊಳಗೆ ತತ್ತರಿಸುತ್ತದೆ. ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗು ತ್ತದೆ; ಅಲ್ಲಿಂದ ಪಲಾಯನವಾದವರು ಮೂರು ವರುಷದ ಕಡಸಿನಂತೆ ಚೋಯರಿಗೆ ಓಡಿಹೋಗು ವರು; ಲೂಹೀಥ್ ದಿಣ್ಣೆಯನ್ನು ಅಳುತ್ತಾ ಹತ್ತುತ್ತಾರೆ; ಯಾಕಂ ದರೆ ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಸ್ವರಗೈಯು ತ್ತಾರೆ.
- Numbers 21:13–14 ಅರಣ್ಯಕಾಂಡ 21:13–14ಅಲ್ಲಿಂದ ಹೊರಟು ಅಮೋರಿ ಯರ ಮೇರೆಯಿಂದ ಹೊರಗೆ ಬರುವ ಅರಣ್ಯದಲ್ಲಿ ರುವ ಅರ್ನೋನಿನ ಈಚೆಯಲ್ಲಿ ಇಳುಕೊಂಡರು; ಅರ್ನೋನು ಮೋವಾಬ್ಯರಿಗೂ ಅಮೋರಿಯರಿಗೂ ಮಧ್ಯವಾದ ಮೋವಾಬಿನ ಮೇರೆಯಾಗಿದೆ. ಆದ ಕಾರಣ ಕರ್ತನ ಯುದ್ಧಗಳ ಪುಸ್ತಕದಲ್ಲಿ ಆತನು ಕೆಂಪು ಸಮುದ್ರದಲ್ಲಿಯೂ ಅರ್ನೋನಿನ ಹಳ್ಳಗಳಲ್ಲಿಯೂ
- Joshua 13:9 ಯೆಹೋಶುವ 13:9ಅರ್ನೋನ್ ನದೀ ತೀರದಲ್ಲಿರುವ ಅರೋಯೇರ್ ನದಿಯ ಮಧ್ಯಭಾಗ ದಲ್ಲಿರುವ ಪಟ್ಟಣವು ಮೊದಲುಗೊಂಡು ದಿಬೋನಿನ ವರೆಗೆ ಮೇದೆಬದ ಸಮನಾದ ಭೂಮಿಯೂ
- Deuteronomy 2:36 ಧರ್ಮೋಪದೇಶಕಾಂಡ 2:36ಅರ್ನೋನಿನ ತೀರದಲ್ಲಿರುವ ಅರೋ ಯೇರ್ ಮತ್ತು ಆ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನ ವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ; ನಮ್ಮ ದೇವರಾದ ಕರ್ತನು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದನು.ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.
- Jeremiah 48:1–5 ಯೆರೆಮೀಯ 48:1–5ಮೋವಾಬಿಗೆ ವಿರೋಧವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅಯ್ಯೋ ನೆಬೋ ಸೂರೆಯಾಯಿತು; ಕಿರ್ಯಾತಯಿಮು ನಾಚಿಕೆಹೊಂದಿ ಹಿಡಿಯಲ್ಪಟ್ಟಿತು; ಮಿಸ್ಗಾಬ್ ನಾಚಿಕೆಹೊಂದಿ ಹೆದರಿಕೊಂಡಿತು. ಮೋವಾಬಿನ ಕೀರ್ತಿ ಇನ್ನು ಮೇಲೆ ಇರುವದೇ ಇಲ್ಲ; ಹೆಷ್ಬೋನಿನಲ್ಲಿ ಅದಕ್ಕೆ ವಿರೋಧವಾಗಿ ಕೇಡನ್ನು ಆಲೋಚಿಸಿದ್ದಾರೆ; ಬನ್ನಿ, ಜನಾಂಗವಿಲ್ಲದ ಹಾಗೆ ಅದನ್ನು ಕಡಿದುಬಿಡೋಣ, ಮದ್ಮೆನೇ, ನೀನು ಸಹ ಕಡಿಯಲ್ಪಡುವಿ; ಕತ್ತಿಯು ನಿನ್ನನ್ನು ಹಿಂದಟ್ಟುವದು. ಹೊರೊನಯಿಮಿನಿಂದ ಕೂಗುವ ಸ್ವರವು, ಸೂರೆಯು, ದೊಡ್ಡ ನಾಶನವು, ಹೊರಡುವದು. ಮೋವಾಬು ನಾಶವಾಯಿತು; ಅದರ ಚಿಕ್ಕವರು ಕೂಗನ್ನು ಕೇಳುವಂತೆ ಮಾಡಿದರು. ಲೂಹೀತ್ ದಿಣ್ಣೆಯನ್ನು ಅಳುತ್ತಲೇ ಹತ್ತುವರು; ಹೊರೊನಯಿಮಿನ ಇಳಿಜಾರಿನಲ್ಲಿ ಶತ್ರುಗಳು ನಾಶನದ ಶಬ್ದವನ್ನು ಕೇಳಿದ್ದಾರೆ.
- Isaiah 16:7–11 ಯೆಶಾಯ 16:7–11ಆದದರಿಂದ ಮೋವಾಬಿನ ನಿಮಿತ್ತ ಮೋವಾಬೇ ಗೋಳಾಡುವದು, ಪ್ರತಿಯೊ ಬ್ಬನೂ ಗೋಳಾಡುವನು; ಕೀರ್ ಹರೆಷೆಥಿನ ಅಸ್ತಿವಾರ ಗಳಿಗೋಸ್ಕರ ನೀವು ದುಃಖಿಸುವಿರಿ; ನಿಜವಾಗಿಯೂ ಅವರು ನೊಂದುಹೋಗಿದ್ದಾರೆ. ಹೆಷ್ಬೋನಿನ ಹೊಲ ಗಳೂ, ಸಿಬ್ಮದ ದ್ರಾಕ್ಷೆಯೂ ನಿಸ್ಸಾರವಾಗಿವೆ; ಅನ್ಯ ಜನಗಳ ಪ್ರಭುಗಳು ಅದರ ಮುಖ್ಯವಾದ ಗಿಡಗಳನ್ನು ಮುರಿದುಹಾಕಿದ್ದಾರೆ; ಅವರು ಯಜ್ಜೇರಿನ ವರೆಗೂ ಬಂದರು; ಅಡವಿಯಲ್ಲಿ ಅವರು ಸಂಚರಿಸಿದರು. ಅವಳ ಕೊಂಬೆಗಳು ಚಾಚಲ್ಪಟ್ಟವು ಅವರು ಸಮುದ್ರದ ಮೇಲೆ ಹೋದರು. ಆದಕಾರಣ ಸಿಬ್ಮದ ದ್ರಾಕ್ಷಾ ಲತೆಯ ನಿಮಿತ್ತ ಯಜ್ಜೇರಿನೊಂದಿಗೆ ಅಳುವೆನು; ಓ ಹೆಷ್ಬೋನೇ, ಎಲೆಯಾಲೇ, ನಿನ್ನನ್ನು ನನ್ನ ಕಣ್ಣೀರಿ ನಿಂದ ತೋಯಿಸುವೆನು; ಬಿದ್ದುಹೋದ ನಿನ್ನ ಬೇಸಿ ಗೆಯ ಫಲಗಳಿಗೂ ಬೆಳೆಗಳಿಗೂ ಆರ್ಭಟಿಸುವರು. ಸಮೃದ್ಧಿಯಾದ ಹೊಲಗಳಿಂದ ಸಂತೋಷವು ಮತ್ತು ಆನಂದವು ತೆಗೆಯಲ್ಪಡುವವು; ದ್ರಾಕ್ಷೇತೋಟಗ ಳಲ್ಲಿ ಕೀರ್ತನೆಗಳಾಗಲಿ ಆರ್ಭಟವಾಗಲಿ ಇರುವದಿಲ್ಲ; ದ್ರಾಕ್ಷೇತೋಟಗಳಲ್ಲಿ ಇನ್ನು ದ್ರಾಕ್ಷಾರಸವನ್ನು ತುಳಿದು ತೆಗೆಯುವದಿಲ್ಲ; ಅವರ ಕೂಗಾಟವನ್ನು ನಿಲ್ಲಿಸಿಬಿಟ್ಟಿ ದ್ದೇನೆ. ಆದದರಿಂದ ಮೋವಾಬಿನ ನಿಮಿತ್ತ ನನ್ನ ಕರುಳುಗಳು ಮತ್ತು ಕೀರ್ ಹರೇಷೆಥಿನ ನಿಮಿತ್ತ ನನ್ನ ಅಂತರಿಂದ್ರಿಯಗಳು ಕಿನ್ನರಿಯಂತೆ ಸ್ವರಗೈಯುವವು.