Jeremiah · chapter 48 · verse 25
Jeremiah 48:25 in Kannada
ಮೋವಾಬಿನ ಕೊಂಬು ಕಡಿದು ಹಾಕಲ್ಪಟ್ಟಿದೆ; ಅದರ ತೋಳು ಮುರಿಯಲ್ಪಟ್ಟಿದೆ ಎಂದು ಕರ್ತನು ಅನ್ನುತ್ತಾನೆ.
Movaabina kombu kadidu haakalpattide; adara tolu muriyalpattide endu kartanu annuttaane.
Jeremiah 48:25 in English
- King James Version (KJV)
- The horn of Moab is cut off, and his arm is broken, saith the LORD.
- World English Bible (WEB)
- The horn of Moab is cut off, and his arm is broken,” says the LORD.
- American Standard Version (ASV)
- The horn of Moab is cut off, and his arm is broken, saith Jehovah.
- Bible in Basic English (BBE)
- The horn of Moab is cut off, and his arm is broken, says the Lord.
- Darby Translation (DBY)
- The horn of Moab is cut off, and his arm is broken, saith Jehovah.
- Webster's Bible (WBS)
- The horn of Moab is cut off, and his arm is broken, saith the LORD.
- Young's Literal Translation (YLT)
- Cut down hath been the horn of Moab, And his arm hath been broken, An affirmation of Jehovah.
Read in context
- 23ಕಿರ್ಯಾತಯಾಮಿನ ಮೇಲೆಯೂ ಬೇತ್ಗಾಮುಲಿನ ಮೇಲೆಯೂ ಬೇತ್ಮೆಯೋನಿನ ಮೇಲೆಯೂ
- 24ಕೆರೀಯೋತ್ನ ಮೇಲೆಯೂ ಬೊಚ್ರದ ಮೇಲೆಯೂ ಸವಿಾಪದಲ್ಲಾಗಲಿ ದೂರ ದಲ್ಲಾಗಲಿ ಇರುವ, ಮೋವಾಬಿನ ಸಮಸ್ತ ಪಟ್ಟಣಗಳ ಮೇಲೆಯೂ ಬಂತು.
- 25ಮೋವಾಬಿನ ಕೊಂಬು ಕಡಿದು ಹಾಕಲ್ಪಟ್ಟಿದೆ; ಅದರ ತೋಳು ಮುರಿಯಲ್ಪಟ್ಟಿದೆ ಎಂದು ಕರ್ತನು ಅನ್ನುತ್ತಾನೆ.
- 26ಅದನ್ನು ನೀವು ಅಮಲೇರಿಸಿರಿ; ಕರ್ತನಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡಿದೆ; ಮೋವಾಬು ಸಹ ತಾನೇ ಕಾರಿದ್ದ ರಲ್ಲಿ ಹೊರಳಾಡುವದು; ಅದೇ ಹಾಸ್ಯಕ್ಕಾಗಿರುವದು.
- 27ನಿನ್ನೊಳಗೆ ಇಸ್ರಾಯೇಲೂ ಹಾಸ್ಯಕಾಗಿರಲಿಲ್ಲವೋ? ಅದು ಕಳ್ಳರೊಳಗೆ ಸಿಕ್ಕಿತೇನೋ, ನೀನು ಅವರ ವಿಷಯ ಯಾವಾಗ ಮಾತನಾಡಿದಂದಿನಿಂದ ಸಂತೋಷಕ್ಕಾಗಿ ತಲೆ ಅಲ್ಲಾಡಿಸಿದಿಯಲ್ಲಾ.
Cross references
- Psalm 75:10 ಕೀರ್ತನೆಗಳು 75:10ದುಷ್ಟರ ಕೊಂಬುಗಳನ್ನೆಲ್ಲಾ ಕಡಿದುಬಿಡುವೆನು; ಆದರೆ ನೀತಿವಂತರ ಕೊಂಬುಗಳು ಎತ್ತಲ್ಪಡುವವು.
- Psalm 10:15 ಕೀರ್ತನೆಗಳು 10:15ದುಷ್ಟನ ಮತ್ತು ಕೆಡುಕನ ತೋಳನ್ನು ಮುರಿ; ಅದು ಸಿಕ್ಕದೆ ಹೋಗುವ ವರೆಗೂ ಅವನ ದುಷ್ಟತ್ವ ವನ್ನು ನೀನು ಹುಡುಕು.
- Job 22:9 ಯೋಬನು 22:9ವಿಧವೆಯರನ್ನು ಬರಿದಾಗಿ ಕಳುಹಿಸಿದಿ; ದಿಕ್ಕಿಲ್ಲದ ವರ ತೋಳುಗಳನ್ನು ಜಜ್ಜಿದಿ.
- Zechariah 1:19–21 ಜೆಕರ್ಯ 1:19–21ಆಗ ನನ್ನ ಕೂಡ ಮಾತನಾಡಿದ ದೂತನಿಗೆ ನಾನು--ಇದೇನು ಅಂದೆನು. ಅದಕ್ಕೆ ಅವನು ನನಗೆ ಉತ್ತರಕೊಟ್ಟು--ಇವು ಯೆಹೂದವನ್ನೂ ಇಸ್ರಾಯೇಲನ್ನೂ ಯೆರೂಸ ಲೇಮನ್ನೂ ಚದರಿಸಿದ ಕೊಂಬುಗಳು ಅಂದನು. ಆಗ ಕರ್ತನು ನನಗೆ ನಾಲ್ಕು ಬಡಗಿಯವರನ್ನು ತೋರಿಸಿದನು.ಆಗ ನಾನು--ಇವರು ಏನು ಮಾಡುವದಕ್ಕೆ ಬರುತ್ತಾರೆ ಅಂದೆನು. ಅದಕ್ಕೆ ಆತನು ಮಾತನಾಡಿ ಹೇಳಿದ್ದೇನಂದರೆ--ಯಾವನಾದರೂ ತಲೆಯನ್ನು ಎತ್ತದ ಹಾಗೆ ಯೆಹೂದವನ್ನು ಚದರಿಸಿದ ಕೊಂಬುಗಳು. ಆದರೆ ಇವರು ಅವರನ್ನು ಹೆದರಿಸಿ ಯೆಹೂದ ದೇಶದ ಮೇಲೆ ಅದನ್ನು ಚದರಿಸುವದಕ್ಕೆ ಕೊಂಬನ್ನು ಎತ್ತಿದ ಅನ್ಯಜನಾಂಗಗಳ ಕೊಂಬುಗಳನ್ನು ಕೆಳಗೆ ಹಾಕುವದಕ್ಕೆ ಬಂದಿದ್ದಾರೆ ಅಂದನು. ಆಗ ನಾನು--ಇವರು ಏನು ಮಾಡುವದಕ್ಕೆ ಬರುತ್ತಾರೆ ಅಂದೆನು. ಅದಕ್ಕೆ ಆತನು ಮಾತನಾಡಿ ಹೇಳಿದ್ದೇನಂದರೆ--ಯಾವನಾದರೂ ತಲೆಯನ್ನು ಎತ್ತದ ಹಾಗೆ ಯೆಹೂದವನ್ನು ಚದರಿಸಿದ ಕೊಂಬುಗಳು. ಆದರೆ ಇವರು ಅವರನ್ನು ಹೆದರಿಸಿ ಯೆಹೂದ ದೇಶದ ಮೇಲೆ ಅದನ್ನು ಚದರಿಸುವದಕ್ಕೆ ಕೊಂಬನ್ನು ಎತ್ತಿದ ಅನ್ಯಜನಾಂಗಗಳ ಕೊಂಬುಗಳನ್ನು ಕೆಳಗೆ ಹಾಕುವದಕ್ಕೆ ಬಂದಿದ್ದಾರೆ ಅಂದನು.
- Numbers 32:37 ಅರಣ್ಯಕಾಂಡ 32:37ರೂಬೇನನ ಮಕ್ಕಳು ಹೆಷ್ಬೋನ್, ಎಲೀಯಾಲೆ, ಕಿರ್ಯಾತಯಿಮ್,
- Daniel 8:7–9 ದಾನಿಯೇಲನು 8:7–9ಅದು ಟಗರಿನ ಹತ್ತಿರ ಬರುವದನ್ನು ನಾನು ನೋಡಿದೆನು. ಅದರ ಮೇಲಿನ ಕ್ರೋಧದಿಂದ ಅದನ್ನು ಹಾದು ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಅದರ ಮುಂದೆ ನಿಲ್ಲುವದಕ್ಕೆ ಟಗರಿಗೆ ಏನೂ ಶಕ್ತಿಯಿ ರಲಿಲ್ಲ, ಆದರೆ ಅದು ಟಗರನ್ನು ನೆಲಕ್ಕೆ ಉರುಳಿಸಿ ತುಳಿಯಿತು. ಟಗರನ್ನು ಅದರ ಕೈಯಿಂದ ಬಿಡಿಸುವವನು ಯಾರೂ ಇರಲಿಲ್ಲ. ಆದದರಿಂದ ಆ ಹೋತವು ಬಹಳವಾಗಿ ಹೆಚ್ಚಿಕೊಂಡಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದ ಮೇಲೆ ಅದರ ದೊಡ್ಡ ಕೊಂಬು ಮುರಿದು ಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಆಕಾಶದ ಚತುರ್ದಿಕ್ಕಿಗೆ ಚಾಚಿಕೊಂಡವು. ಅವುಗಳಲ್ಲಿ ಒಂದರೊಳಗಿಂದ ಚಿಕ್ಕ ಕೊಂಬು ಮೊಳೆತು, ಬಹಳ ದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ ಪೂರ್ವದ ಕಡೆಗೂ ರಮ್ಯ ದೇಶದ ಕಡೆಗೂ ಪ್ರಬಲವಾಯಿತು.
- Psalm 37:17 ಕೀರ್ತನೆಗಳು 37:17ದುಷ್ಟರ ತೋಳುಗಳು ಮುರಿದು ಹೋಗು ವವು; ಆದರೆ ನೀತಿವಂತರನ್ನು ಕರ್ತನು ಉದ್ಧಾರ ಮಾಡುತ್ತಾನೆ.
- Lamentations 2:3 ಪ್ರಲಾಪಗಳು 2:3ಆತನು ತನ್ನ ತೀಕ್ಷ್ಣ ಕೋಪದಲ್ಲಿ ಇಸ್ರಾಯೇಲಿನ ಕೊಂಬುಗಳನ್ನೆಲ್ಲಾ ಕಡಿದು ಹಾಕಿದ್ದಾನೆ. ಆತನು ಶತ್ರುವಿನ ಎದುರಿನಿಂದ ತನ್ನ ಬಲಗೈಯನ್ನು ಹಿಂತೆಗೆದುಕೊಂಡಿದ್ದಾನೆ. ಆತನು ಸುತ್ತಲೂ ಪ್ರಜ್ವಲಿಸಿ ದಹಿಸುವ ಬೆಂಕಿಯ ಹಾಗೆ ಯಾಕೋಬನಿಗೆ ವಿರುದ್ಧ ವಾಗಿ ದಹಿಸಿಬಿಟ್ಟಿದ್ದಾನೆ.
- Ezekiel 30:21–25 ಯೆಹೆಜ್ಕೇಲನು 30:21–25ಮನುಷ್ಯ ಪುತ್ರನೇ, ನಾನು ಐಗುಪ್ತದ ಅರಸ ನಾದ ಫರೋಹನ ತೋಳನ್ನು ಮುರಿದು ಹಾಕಿದ್ದೇನೆ; ಇಗೋ, ಅದು ಕಟ್ಟಲ್ಪಡುವ ಹಾಗೆ ವಾಸಿಯಾಗುವದೇ ಇಲ್ಲ, ಅದು ಕತ್ತಿಯನ್ನು ಹಿಡಿಯುವ ಹಾಗೆಯೇ ಅದಕ್ಕೆ ಬಲಬರುವ ಹಾಗೆ ಪಟ್ಟಿ ಬಿಗಿಸಲ್ಪಡುವದಿಲ್ಲ. ಆದ ದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ಐಗುಪ್ತದೇಶದ ಅರಸನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಬಲವುಳ್ಳದ್ದೂ ಮುರಿದದ್ದೂ ಆಗಿರುವ ಅವನ ತೋಳುಗಳನ್ನು ಮುರಿ ಯುತ್ತೇನೆ; ಅವನ ಕೈಯಿಂದ ಕತ್ತಿಯನ್ನು ಬೀಳಿಸುತ್ತೇನೆ. ಐಗುಪ್ತರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಹರಡುವೆನು. ಬಾಬೆಲಿನ ಅರಸನ ತೋಳು ಗಳನ್ನು ನಾನು ಬಲಪಡಿಸುವೆನು; ಅವನ ಕೈಯಲ್ಲಿ ನನ್ನ ಕತ್ತಿಯನ್ನಿಡುವೆನು; ಫರೋಹನ ತೋಳನ್ನು ಮುರಿಯುವೆನು, ಅವನು ಗಾಯದಿಂದ ಸಾಯುವ ಹಾಗೆ ಅವನ ಮುಂದೆ ನರಳಾಡುವನು. ನಾನು ಬಾಬೆಲಿನ ಅರಸನ ತೋಳುಗಳಿಗೆ ಬಲ ಕೊಡುವೆನು, ಫರೋಹನ ತೋಳುಗಳು ಬಿದ್ದು ಹೋಗುವವು; ಯಾವಾಗ ನಾನು ನನ್ನ ಕತ್ತಿಯನ್ನು ಬಾಬೆಲಿನ ಅರಸನ ಕೈಗೆ ಕೊಡುವೆನೋ ಅದನ್ನು ಐಗುಪ್ತದೇಶದಿಂದ ಹೊರಗೆ ಚಾಚುವೆನೋ ಆಗ ನಾನೇ ಕರ್ತನೆಂದು ಅವರಿಗೆ ಗೊತ್ತಾಗುವದು.ನಾನು ಐಗುಪ್ತರನ್ನು ಜನಾಂಗಗಳೊಳಗೆ ಚದರಿಸಿ ದೇಶಗಳಲ್ಲಿ ಹರಡಿಸು ತ್ತೇನೆ; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Daniel 7:8 ದಾನಿಯೇಲನು 7:8ಆ ಕೊಂಬುಗಳ ಬಗ್ಗೆ ನಾನು ಆಲೋಚಿಸು ತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿತ್ತು. ಇದರ ಮುಂದೆ ಮೊದ ಲಿನ ಕೊಂಬುಗಳಲ್ಲಿ ಮೂರು ಬೇರುಸಹಿತ ಕೀಳಲ್ಪ ಟ್ಟಿವೆ ಮತ್ತು ಇಗೋ, ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ ಬಡಾಯಿಕೊಚ್ಚುವ ಬಾಯಿಯೂ ಇದ್ದವು.
- Daniel 8:21 ದಾನಿಯೇಲನು 8:21ಆ ಒರಟು ಹೋತವು ಗ್ರೀಕ್ನ ಅರಸನು ಮತ್ತು ಕಣ್ಣುಗಳ ಮಧ್ಯೆ ಇದ್ದ ಆ ದೊಡ್ಡ ಕೊಂಬು ಮೊದಲನೆಯ ಅರಸನು.