Jeremiah · chapter 48 · verse 26
Jeremiah 48:26 in Kannada
ಅದನ್ನು ನೀವು ಅಮಲೇರಿಸಿರಿ; ಕರ್ತನಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡಿದೆ; ಮೋವಾಬು ಸಹ ತಾನೇ ಕಾರಿದ್ದ ರಲ್ಲಿ ಹೊರಳಾಡುವದು; ಅದೇ ಹಾಸ್ಯಕ್ಕಾಗಿರುವದು.
Adannu neevu amalerisiri; kartanige virodhavaagi tannannu hechchisikondide; movaabu saha taane kaaridda ralli horalaaduvadu; ade haasyakkaagiruvadu.
Jeremiah 48:26 in English
- King James Version (KJV)
- Make ye him drunken: for he magnified [himself] against the LORD: Moab also shall wallow in his vomit, and he also shall be in derision.
- World English Bible (WEB)
- “Make him drunk, for he magnified himself against the LORD. Moab will wallow in his vomit, and he also will be in derision.
- American Standard Version (ASV)
- Make ye him drunken; for he magnified himself against Jehovah: and Moab shall wallow in his vomit, and he also shall be in derision.
- Bible in Basic English (BBE)
- Make him full of wine, for his heart has been lifted up against the Lord: and Moab will be rolling in the food he was not able to keep down, and everyone will be making sport of him.
- Darby Translation (DBY)
- Make him drunken, for he magnified himself against Jehovah; and Moab shall wallow in his vomit, and he also shall be in derision.
- Webster's Bible (WBS)
- Make ye him drunken; for he magnified [himself] against the LORD: Moab also shall wallow in his vomit, and he also shall be in derision.
- Young's Literal Translation (YLT)
- Declare ye him drunk, For against Jehovah he made himself great And Moab hath stricken in his vomit, And he hath been for a derision — even he.
Read in context
- 24ಕೆರೀಯೋತ್ನ ಮೇಲೆಯೂ ಬೊಚ್ರದ ಮೇಲೆಯೂ ಸವಿಾಪದಲ್ಲಾಗಲಿ ದೂರ ದಲ್ಲಾಗಲಿ ಇರುವ, ಮೋವಾಬಿನ ಸಮಸ್ತ ಪಟ್ಟಣಗಳ ಮೇಲೆಯೂ ಬಂತು.
- 25ಮೋವಾಬಿನ ಕೊಂಬು ಕಡಿದು ಹಾಕಲ್ಪಟ್ಟಿದೆ; ಅದರ ತೋಳು ಮುರಿಯಲ್ಪಟ್ಟಿದೆ ಎಂದು ಕರ್ತನು ಅನ್ನುತ್ತಾನೆ.
- 26ಅದನ್ನು ನೀವು ಅಮಲೇರಿಸಿರಿ; ಕರ್ತನಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡಿದೆ; ಮೋವಾಬು ಸಹ ತಾನೇ ಕಾರಿದ್ದ ರಲ್ಲಿ ಹೊರಳಾಡುವದು; ಅದೇ ಹಾಸ್ಯಕ್ಕಾಗಿರುವದು.
- 27ನಿನ್ನೊಳಗೆ ಇಸ್ರಾಯೇಲೂ ಹಾಸ್ಯಕಾಗಿರಲಿಲ್ಲವೋ? ಅದು ಕಳ್ಳರೊಳಗೆ ಸಿಕ್ಕಿತೇನೋ, ನೀನು ಅವರ ವಿಷಯ ಯಾವಾಗ ಮಾತನಾಡಿದಂದಿನಿಂದ ಸಂತೋಷಕ್ಕಾಗಿ ತಲೆ ಅಲ್ಲಾಡಿಸಿದಿಯಲ್ಲಾ.
- 28ಮೋವಾಬಿನಲ್ಲಿ ವಾಸ ವಾಗಿರುವವರೇ, ಪಟ್ಟಣಗಳನ್ನು ಬಿಟ್ಟು ಬಂಡೆಯಲ್ಲಿ ವಾಸವಾಗಿರ್ರಿ; ಸಂದುಗಳ ಬಾಯಿಯ ಪಕ್ಕಗಳಲ್ಲಿ ಗೂಡುಕಟ್ಟುವ ಪಾರಿವಾಳದ ಹಾಗಿರ್ರಿ.
Cross references
- Isaiah 19:14 ಯೆಶಾಯ 19:14ಕರ್ತನು ಅದರ ಮಧ್ಯದಲ್ಲಿ ವಕ್ರವಾದ ಆತ್ಮವನ್ನು ಕಲ್ಪಿಸಿದ್ದಾನೆ (ಬೆರೆಸಿದ್ದಾನೆ). ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾನೆ.
- Isaiah 29:9 ಯೆಶಾಯ 29:9ತಾಮಸಮಾಡಿ ಆಶ್ಚರ್ಯಪಡಿರಿ, ನೀವು ಕೂಗಿರಿ, ಕೂಗಾಡಿರಿ ಇವರು ಅಮಲೇರಿದ್ದಾರೆ; ಆದರೆ ದ್ರಾಕ್ಷಾ ರಸದಿಂದಲ್ಲ; ಅವರು ಕೂಗಾಡುತ್ತಾರೆ, ಆದರೆ ಮದ್ಯ ದಿಂದಲ್ಲ.
- Jeremiah 48:42 ಯೆರೆಮೀಯ 48:42ಮೋವಾಬು ಕರ್ತನಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡದ್ದರಿಂದ ಜನಾಂಗವಲ್ಲದ ಹಾಗೆ ನಾಶವಾಗುವದು.
- Jeremiah 51:39 ಯೆರೆಮೀಯ 51:39ಅವರ ಉರಿಯಲ್ಲಿ ನಾನು ಅವರ ಔತಣವನ್ನು ಸಿದ್ಧಮಾಡುವೆನು; ಅವರು ಉಲ್ಲಾಸಿಸಿ ನಿತ್ಯವಾದ ನಿದ್ರೆಯನ್ನು ಮಾಡಿ ಎಚ್ಚರವಾಗದ ಹಾಗೆ ಅವರಿಗೆ ಅಮಲೇರಿಸುವೆನೆಂದು ಕರ್ತನು ಅನ್ನುತ್ತಾನೆ.
- Jeremiah 48:39 ಯೆರೆಮೀಯ 48:39ಅದು ಹೇಗೆ ಮುರಿದು ಹೋಯಿತು! ಮೋವಾಬು ಹೇಗೆ ನಾಚಿಕೆಪಟ್ಟು ಬೆನ್ನು ತಿರುಗಿಸಿತು ಎಂದು ಗೋಳಿಡುವರು. ಹೀಗೆ ಮೋವಾಬು ಅದರ ಸುತ್ತಲಿರು ವವರೆಲ್ಲರಿಗೆ ಹಾಸ್ಯಕ್ಕೂ ಹೆದರಿಕೆಗೂ ಆಗುವದು.
- Jeremiah 51:7 ಯೆರೆಮೀಯ 51:7ಬಾಬೆಲ್ ಕರ್ತನ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿ ಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದದರಿಂದ ಜನಾಂಗ ಗಳು ಹುಚ್ಚರಾದರು.
- Lamentations 4:21 ಪ್ರಲಾಪಗಳು 4:21ಎದೋಮಿನ ಮಗಳೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು, ಸಂತೋಷಪಡು; ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವದು, ನೀನು ಕುಡಿದು ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.
- Daniel 5:23 ದಾನಿಯೇಲನು 5:23ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.
- Exodus 5:2 ವಿಮೋಚನಕಾಂಡ 5:2ಫರೋಹನು--ನಾನು ಆತನ ಸ್ವರಕ್ಕೆ ವಿಧೇಯನಾಗಿ ಇಸ್ರಾಯೇಲ್ಯರನ್ನು ಕಳುಹಿಸಿ ಬಿಡುವಂತೆ ಆ ಕರ್ತನು ಯಾರು? ಆ ಕರ್ತನನ್ನು ನಾನರಿಯೆನು ಮತ್ತು ಇಸ್ರಾಯೇಲ್ಯರನ್ನು ಕಳುಹಿಸುವದಿಲ್ಲ ಅಂದನು.
- Lamentations 1:21 ಪ್ರಲಾಪಗಳು 1:21ನಾನು ನಿಟ್ಟುಸಿರಿಡುವದನ್ನು ಅವರು ಕೇಳಿದರೂ ನನ್ನನ್ನು ಆದರಿ ಸಲು ಯಾರೂ ಅಲ್ಲಿರಲಿಲ್ಲ; ನನ್ನ ಶತ್ರುಗಳೆಲ್ಲಾ ನನ್ನ ಕಷ್ಟದ ವಿಷಯವನ್ನು ಕೇಳಿದರು; ನೀನು ಹಾಗೆ ಮಾಡಿದೆಯೆಂದು ಅವರು ಸಂತೋಷಪಟ್ಟರು. ನೀನು ತಿಳಿಸಿದ ಆ ದಿನವು ಬರಲು ಅವರು ನನ್ನ ಹಾಗೆಯೇ ಆಗುವರು.ಅವರ ಕೆಡುಕೆಲ್ಲಾ ನಿನ್ನ ಮುಂದೆ ಬರಲಿ; ನನ್ನ ಎಲ್ಲಾ ದ್ರೋಹಗಳ ನಿಮಿತ್ತ ನೀನು ನನಗೆ ಮಾಡಿದ ಪ್ರಕಾರವೇ ಅವರಿಗೆ ಮಾಡು; ನನ್ನ ನಿಟ್ಟು ಸಿರುಗಳು ಅನೇಕವಾಗಿವೆ; ನನ್ನ ಹೃದಯವು ಕುಂದಿದೆ.
- Revelation 16:19 ಪ್ರಕಟನೆ 16:19ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು.
- Jeremiah 25:15–17 ಯೆರೆಮೀಯ 25:15–17ಇಸ್ರಾಯೇಲಿನ ದೇವರಾದ ಕರ್ತನು ನನಗೆ ಹೀಗೆ ಹೇಳುತ್ತಾನೆ--ಈ ರೌದ್ರದ ದ್ರಾಕ್ಷಾರಸ ಪಾತ್ರೆ ಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತಕ್ಕೋ. ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತ ಕದಲಿ ಹುಚ್ಚರಾಗುವರು ಅಂದನು. ಆಗ ನಾನು ಪಾತ್ರೆಯನ್ನು ಕರ್ತನ ಕೈಯಿಂದ ತಕ್ಕೊಂಡು ಕರ್ತನು ನನ್ನನ್ನು ಕಳುಹಿಸಿದ ಎಲ್ಲಾ ಜನಾಂಗಗಳಿಗೆ ಕುಡಿಸಿದೆನು.