Jeremiah · chapter 48 · verse 38
Jeremiah 48:38 in Kannada
ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ ಅದರ ಎಲ್ಲಾ ಬೀದಿಗಳಲ್ಲಿಯೂ ಗೋಳಾಟ ತುಂಬಿರು ವದು. ಮೆಚ್ಚದ ಪಾತ್ರೆಯ ಹಾಗೆ ಮೋವಾಬನ್ನು ನಾನು ಒಡೆದುಬಿಟ್ಟಿದ್ದೇನೆಂದು ಕರ್ತನು ಅನ್ನುತ್ತಾನೆ.
Movaabina ellaa maaligegala meleyoo adara ellaa beedigalalliyoo golaata tumbiru vadu. Mechchada paatreya haage movaabannu naanu odedubittiddenendu kartanu annuttaane.
Jeremiah 48:38 in English
- King James Version (KJV)
- [There shall be] lamentation generally upon all the housetops of Moab, and in the streets thereof: for I have broken Moab like a vessel wherein [is] no pleasure, saith the LORD.
- World English Bible (WEB)
- On all the housetops of Moab, and in its streets, there is lamentation everywhere; for I have broken Moab like a vessel in which no one delights,” says the LORD.
- American Standard Version (ASV)
- On all the housetops of Moab and in the streets thereof there is lamentation every where; for I have broken Moab like a vessel wherein none delighteth, saith Jehovah.
- Bible in Basic English (BBE)
- On all the house-tops of Moab and in its streets there is weeping everywhere; for Moab has been broken like a vessel in which there is no pleasure, says the Lord.
- Darby Translation (DBY)
- It is wholly lamentation upon all the housetops of Moab, and in the public places thereof; for I have broken Moab, like a vessel wherein is no pleasure, saith Jehovah.
- Webster's Bible (WBS)
- [There shall be] lamentation generally upon all the house-tops of Moab, and in its streets: for I have broken Moab like a vessel in which [is] no pleasure, saith the LORD.
- Young's Literal Translation (YLT)
- On all roofs of Moab, and in her broad-places, All of it — [is] lamentation, For I have broken Moab as a vessel in which there is no pleasure, An affirmation of Jehovah.
Read in context
- 36ಆದದರಿಂದ ನನ್ನ ಹೃದಯವು ಮೋವಾಬಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡುವದು, ನನ್ನ ಹೃದಯವು ಕೀರ್ ಹೆರೆಸಿನ ಮನುಷ್ಯರಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡು ವದು. ಅವನು ಮಾಡಿಕೊಂಡ ದ್ರವ್ಯನಾಶವಾಯಿತು.
- 37ಎಲ್ಲಾ ತಲೆಗಳು ಬೋಳಾಗುವವು; ಎಲ್ಲಾ ಗಡ್ಡಗಳು ಕ್ಷೌರವಾಗುವವು; ಎಲ್ಲಾ ಕೈಗಳ ಮೇಲೆ ಗಾಯಗಳೂ ಸೊಂಟಗಳ ಮೇಲೆ ಗೋಣಿತಟ್ಟು ಇರುವವು.
- 38ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ ಅದರ ಎಲ್ಲಾ ಬೀದಿಗಳಲ್ಲಿಯೂ ಗೋಳಾಟ ತುಂಬಿರು ವದು. ಮೆಚ್ಚದ ಪಾತ್ರೆಯ ಹಾಗೆ ಮೋವಾಬನ್ನು ನಾನು ಒಡೆದುಬಿಟ್ಟಿದ್ದೇನೆಂದು ಕರ್ತನು ಅನ್ನುತ್ತಾನೆ.
- 39ಅದು ಹೇಗೆ ಮುರಿದು ಹೋಯಿತು! ಮೋವಾಬು ಹೇಗೆ ನಾಚಿಕೆಪಟ್ಟು ಬೆನ್ನು ತಿರುಗಿಸಿತು ಎಂದು ಗೋಳಿಡುವರು. ಹೀಗೆ ಮೋವಾಬು ಅದರ ಸುತ್ತಲಿರು ವವರೆಲ್ಲರಿಗೆ ಹಾಸ್ಯಕ್ಕೂ ಹೆದರಿಕೆಗೂ ಆಗುವದು.
- 40ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವನು ಹದ್ದಿನ ಹಾಗೆ ಹಾರಿ ಮೋವಾಬಿನ ಮೇಲೆ ತನ್ನ ರೆಕ್ಕೆಗಳನ್ನು ಚಾಚುವೆನು.
Cross references
- Jeremiah 22:28 ಯೆರೆಮೀಯ 22:28ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದು ಹೋದ ವಿಗ್ರಹವೋ? ಮೆಚ್ಚಿಕೆ ಇಲ್ಲದ ಪಾತ್ರೆಯೋ? ಯಾಕೆ ಅವನೂ ಅವನ ಸಂತಾನವೂ ಬಿಸಾಡಲ್ಪಟ್ಟು ತಮಗೆ ತಿಳಿಯದ ದೇಶಕ್ಕೆ ಹಾಕಲ್ಪಟ್ಟರು?
- Jeremiah 25:34 ಯೆರೆಮೀಯ 25:34ಓ ಕುರುಬರೇ, ಗೋಳಿಟ್ಟುಕೂಗಿರಿ; ಮಂದೆಯಲ್ಲಿ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ; ನಿಮ್ಮನ್ನು ಕೊಲ್ಲುವದಕ್ಕೂ ಚದರಿಸುವದಕ್ಕೂ ದಿನಗಳು ತುಂಬಿ ಅವೆ; ಆಗ ನೀವು ರಮ್ಯವಾದ ಪಾತ್ರೆಯ ಹಾಗೆ ಬೀಳುವಿರಿ.
- Isaiah 22:1 ಯೆಶಾಯ 22:1ದಿವ್ಯ ದರ್ಶನದ ತಗ್ಗಿನ ವಿಷಯವಾದ ದೈವೋಕ್ತಿ, ನಿನ್ನವರೆಲ್ಲರು ಮಾಳಿಗೆಗಳ ಮೇಲೆ ಏರುವ ಹಾಗೆ, ಈಗ ನಿನಗೆ ಏನಾಯಿತು?
- Isaiah 30:14 ಯೆಶಾಯ 30:14ಉರಿಯಿಂದ ಕೆಂಡವನ್ನು ತೆಗೆಯುವದಕ್ಕಾಗಲಿ ಬಾವಿಯಿಂದ ನೀರನ್ನು ತೆಗೆಯುವದಕ್ಕಾಗಲಿ ಬೋಕಿ ಯ ತುಂಡುಗಳಲ್ಲಿ ಒಂದೂ ಉಳಿಯದಂತೆ ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದು ಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ಒಡೆದುಬಿಡುವನು.
- Revelation 2:27 ಪ್ರಕಟನೆ 2:27ನಾನು ನನ್ನ ತಂದೆಯಿಂದ ಹೊಂದಿದ ಪ್ರಕಾ ರವೇ ಅವನು ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳುವನು; ಅವರು ಕುಂಬಾರನ ಮಡಿಕೆಗಳಂತೆ ಒಡೆದು ಚೂರಾಗುವರು.
- 2 Timothy 2:20–21 2 ತಿಮೊಥೆಯನಿಗೆ 2:20–21ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ ಮರದ ಪಾತ್ರೆಗಳೂ ಮಣ್ಣಿನ ಪಾತ್ರೆಗಳೂ ಇರುತ್ತವೆ; ಕೆಲವು ಗೌರವಕ್ಕೂ ಕೆಲವು ಅಗೌರವಕ್ಕೂ ಇರುತ್ತವೆ. ಒಬ್ಬನು ತನ್ನನ್ನು ಇಂಥವುಗಳಿಂದ ಶುದ್ಧಪಡಿಸಿಕೊಂಡರೆ ಅವನು ಪ್ರತಿಷ್ಠಿತನೂ ಯಜಮಾನನ ಬಳಿಕೆಗೆ ಯೋಗ್ಯನೂ ಸಕಲಸತ್ಕಾರ್ಯಕ್ಕೆ ಸಿದ್ಧನೂ ಆಗಿದ್ದು ಗೌರವಕ್ಕೆ ಪಾತ್ರೆಯಾಗಿರುವನು.
- Hosea 8:8 ಹೋಶೇಯ 8:8ಇಸ್ರಾಯೇಲು ನುಂಗಲ್ಪಟ್ಟಿದೆ; ಅವರು ಅನ್ಯಜನಾಂಗಗಳಲ್ಲಿ ಮೆಚ್ಚಿಕೆಯಿಲ್ಲದ ಪಾತ್ರೆಯ ಹಾಗೆ ಇದ್ದಾರೆ.
- Romans 9:21–22 ರೋಮಾಪುರದವರಿಗೆ 9:21–22ಒಂದು ಪಾತ್ರೆಯನ್ನು ಗೌರ ವಕ್ಕೂ ಇನ್ನೊಂದನ್ನು ಅಗೌರವಕ್ಕೂ ಒಂದೇ ಮುದ್ದೆ ಯಿಂದ ಮಾಡುವದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ? ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು
- Psalm 2:9 ಕೀರ್ತನೆಗಳು 2:9ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ.
- Isaiah 15:3 ಯೆಶಾಯ 15:3ಅವರು ತಮ್ಮ ಬೀದಿಗಳಲ್ಲಿ ಗೋಣೀತಟ್ಟನ್ನು ತಾವೇ ಸುತ್ತಿ ಕೊಳ್ಳುವರು; ಪ್ರತಿಯೊಬ್ಬನು ತಮ್ಮ ಮನೆಗಳ ಮೇಲೆ ಯೂ ಬೀದಿಗಳಲ್ಲಿಯೂ ಅರಚುತ್ತಾ ಬಹುಶೋಕ ದಿಂದ ಗೋಳಾಡುವನು.