Jeremiah · chapter 49 · verse 18
Jeremiah 49:18 in Kannada
ಸೊದೋಮ್ ಗೊಮೋರ ಅವುಗಳ ಸವಿಾಪ ದಲ್ಲಿದ್ದ ಪಟ್ಟಣಗಳೂ ಕೆಡವಲ್ಪಟ್ಟಾಗ ಹಾಗೆಯೇ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ, ಅದರಲ್ಲಿ ಯಾವ ಮನುಷ್ಯನ ಪುತ್ರನಾದರೂ ತಂಗುವದಿಲ್ಲವೆಂದು ಕರ್ತನು ಅನ್ನುತ್ತಾನೆ.
Sodom gomora avugala saviాpa dallidda pattanagaloo kedavalpattaaga haageye alli yaava manushyanaadaroo vaasamaaduvadilla, adaralli yaava manushyana putranaadaroo tanguvadillavendu kartanu annuttaane.
Jeremiah 49:18 in English
- King James Version (KJV)
- As in the overthrow of Sodom and Gomorrah and the neighbour [cities] thereof, saith the LORD, no man shall abide there, neither shall a son of man dwell in it.
- World English Bible (WEB)
- As in the overthrow of Sodom and Gomorrah and its neighbor cities,” says the LORD, “no man will dwell there, neither will any son of man live therein.
- American Standard Version (ASV)
- As in the overthrow of Sodom and Gomorrah and the neighbor cities thereof, saith Jehovah, no man shall dwell there, neither shall any son of man sojourn therein.
- Bible in Basic English (BBE)
- As at the downfall of Sodom and Gomorrah and their neighbouring towns, says the Lord, no man will be living in it, no son of man will have a resting-place there.
- Darby Translation (DBY)
- As in the overthrow of Sodom and Gomorrah, and their neighbour cities, saith Jehovah, no one shall dwell there, neither shall a son of man sojourn therein.
- Webster's Bible (WBS)
- As in the overthrow of Sodom and Gomorrah and the neighboring [cities] , saith the LORD, no man shall abide there, neither shall a son of man dwell in it.
- Young's Literal Translation (YLT)
- As the overthrow of Sodom and Gomorrah, And its neighbours, said Jehovah, No one doth dwell there, Nor sojourn in her doth a son of man.
Read in context
- 16ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ ಗುಡ್ಡದ ಕೊನೆಯನ್ನು ಹಿಡಿಯುವವನೇ, ನಿನ್ನ ಭಯಂಕರತ್ವವೂ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದವು; ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಮಾಡಿದರೂ ಅಲ್ಲಿಂದ ನಿನ್ನನ್ನು ಇಳಿಸುತ್ತೇನೆಂದು ಕರ್ತನು ಅನ್ನುತ್ತಾನೆ.
- 17ಎದೋಮು ಸಹ ಹಾಳಾಗುವದು; ಅದರ ಬಳಿಯಲ್ಲಿ ಹಾದು ಹೋಗುವವರೆಲ್ಲರೂ ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.
- 18ಸೊದೋಮ್ ಗೊಮೋರ ಅವುಗಳ ಸವಿಾಪ ದಲ್ಲಿದ್ದ ಪಟ್ಟಣಗಳೂ ಕೆಡವಲ್ಪಟ್ಟಾಗ ಹಾಗೆಯೇ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ, ಅದರಲ್ಲಿ ಯಾವ ಮನುಷ್ಯನ ಪುತ್ರನಾದರೂ ತಂಗುವದಿಲ್ಲವೆಂದು ಕರ್ತನು ಅನ್ನುತ್ತಾನೆ.
- 19ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಬ್ಬುವಿಕೆಯಿಂದ ಬಲವಾದ ನಿವಾಸಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಅವನನ್ನು ಕ್ಷಣಮಾತ್ರದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು. ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ನನಗೆ ಕಾಲವನ್ನು ನೇಮಿಸು ವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು?
- 20ಆದದರಿಂದ ಕರ್ತನು ಎದೋಮಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ ಅವನು ಮಾಡಿದ ಯೋಚನೆಗಳನ್ನೂ ಕೇಳಿರಿ. ನಿಶ್ಚಯವಾಗಿ ಮಂದೆಯ ಮರಿಗಳು ಅವರನ್ನು ಎಳೆಯುವವು, ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡು ವನು.
Cross references
- Deuteronomy 29:23 ಧರ್ಮೋಪದೇಶಕಾಂಡ 29:23ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್ ಗೊಮೋರ ಅದ್ಮಾಚೆಬೋ ಯಾಮ್ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ--
- Jeremiah 49:33 ಯೆರೆಮೀಯ 49:33ಹಾಚೋರು ಮೃಗಗಳ ನಿವಾಸವೂ ಎಂದೆಂದಿಗೂ ಹಾಳಾದ ಸ್ಥಳವೂ ಆಗುವದು; ಅಲ್ಲಿ ಯಾವನಾದರೂ ವಾಸಮಾಡುವದಿಲ್ಲ; ಅಲ್ಲಿ ಯಾವ ನರಪುತ್ರನಾದರೂ ತಂಗುವದಿಲ್ಲ.
- Jeremiah 50:40 ಯೆರೆಮೀಯ 50:40ದೇವರು ಸೊದೋಮನ್ನೂ ಗೊಮೋರವನ್ನು ಅವುಗಳ ಸವಿಾಪದಲ್ಲಿದ್ದ ಪಟ್ಟಣಗಳನ್ನೂ ಕೆಡವಿಹಾಕಿದಾಗ ಆದ ಹಾಗೆ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ; ಅದರಲ್ಲಿ ಯಾವ ನರಪುತ್ರನಾದರೂ ತಂಗುವದಿ ಲ್ಲವೆಂದು ಕರ್ತನು ಅನ್ನುತ್ತಾನೆ.
- Amos 4:11 ಆಮೋಸ 4:11ದೇವರು ಸೊದೋಮನ್ನೂ ಗೊಮೋರವನ್ನೂ ಕೆಡವಿದ ಹಾಗೆ ನಾನು ನಿಮ್ಮಲ್ಲಿ ಕೆಲವರನ್ನು ಕೆಡವಿ ಹಾಕಿದ್ದೇನೆ; ಹೌದು, ಬೆಂಕಿ ಉರಿಯೊಳಗಿಂದ ತೆಗೆದ ಕೊಳ್ಳಿಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
- Zephaniah 2:9 ಚೆಫನ್ಯ 2:9ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.
- Genesis 19:24–25 ಆದಿಕಾಂಡ 19:24–25ಆಗ ಕರ್ತನು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು. ಹೀಗೆ ಆತನು ಆ ಪಟ್ಟಣಗಳನ್ನೂ ಎಲ್ಲಾ ಮೈದಾನವನ್ನೂ ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಹಾಳುಮಾಡಿದನು.
- Job 18:15–18 ಯೋಬನು 18:15–18ಅವನಿಗಿಲ್ಲದ ಅವನ ಗುಡಾರದಲ್ಲಿ ಅದು ವಾಸಿ ಸುವುದು; ಅವನ ನಿವಾಸದ ಮೇಲೆ ಗಂಧಕ ಚದುರಿ ಬರುವದು. ಕೆಳಗಿನಿಂದ ಅವನ ಬೇರುಗಳು ಒಣ ಗುವವು; ಮೇಲಿನಿಂದ ಅವನ ಕೊಂಬೆಯು ಕೊಯ್ಯ ಲ್ಪಡುವದು; ಅವನ ಜ್ಞಾಪಕವು ದೇಶದೊಳಗಿಂದ ನಾಶವಾಗುವದು; ಬೀದಿಗಳಲ್ಲಿ ಅವನಿಗೆ ಹೆಸರು ಇಲ್ಲದೆ ಇರುವದು. ಬೆಳಕಿನಿಂದ ಅವನನ್ನು ಕತ್ತ ಲೆಗೆ ದೊಬ್ಬುವರು; ಲೋಕದಿಂದ ಓಡಿಸುವರು.
- Isaiah 34:10 ಯೆಶಾಯ 34:10ಅದು ರಾತ್ರಿಯಲ್ಲಾದರೂ ಇಲ್ಲವೆ ಹಗಲಿನಲ್ಲಾದರೂ ಆರು ವದಿಲ್ಲ; ಅದರ ಹೊಗೆಯು ನಿರಂತರವಾಗಿ ಏಳುತ್ತಿರು ವದು; ಅದು ತಲತಲಾಂತರಕ್ಕೂ ಹಾಳಾಗಿ ಬಿದ್ದಿರು ವದು; ಅದನ್ನು ಎಂದೆಂದಿಗೂ ಯಾರೂ ಹಾದು ಹೋಗರು.
- Revelation 18:21–23 ಪ್ರಕಟನೆ 18:21–23ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ. ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ. ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
- Psalm 11:6 ಕೀರ್ತನೆಗಳು 11:6ದುಷ್ಟರ ಮೇಲೆ ಉರ್ಲುಗಳನ್ನೂ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಆತನು ಸುರಿಸುವನು. ಇದು ಅವರ ಪಾನದ ಬಟ್ಟ ಲಾಗಿರುವದು;ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.
- Jude 1:7 ಯೂದನು 1:7ಸೊದೋಮ ಗೊಮೋರ ದವರೂ ಹಾಗೆಯೇ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅನ್ಯ ಶರೀರವನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ಪ್ರತಿದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲ್ಪಟ್ಟಿದ್ದಾರೆ.
- Isaiah 13:19–22 ಯೆಶಾಯ 13:19–22ರಾಜ್ಯಗಳ ಘನತೆಯೂ ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬೆಲಿಗೆ ದೇವರು ಸೊದೋ ಮ್ ಗೊಮೋರಗಳನ್ನು ಕೆಡವಿಬಿಟ್ಟಂತೆ ಇದನ್ನು ಸಹ ಕೆಡವಿಬಿಡುವನು. ಅದು ಎಂದಿಗೂ ನಿವಾಸ ಸ್ಥಳ ವಾಗದು, ಇಲ್ಲವೆ ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಇಲ್ಲವೆ ಯಾವ ಅರಬಿಯನೂ ಗುಡಾರ ಹಾಕನು; ಅಥವಾ ಕುರುಬರು ಮಂದೆಯನ್ನು ತಂಗಿಸರು. ಆದರೆ ಮರುಭೂಮಿಯ ಕಾಡುಮೃಗಗಳು ಅಲ್ಲಿ ಮಲಗುವವು; ಅವರ ಮನೆಗಳು ವ್ಯೆಥೆಯಿಂದ ತುಂಬಿರುವವು; ಅಲ್ಲಿ ಗೂಬೆಗಳು ವಾಸಿಸುವವು, ದೆವ್ವಗಳು ಕುಣಿದಾಡುವವು.ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು. ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.