Jeremiah · chapter 49 · verse 31
Jeremiah 49:31 in Kannada
ಏಳಿರಿ, ಭದ್ರವಾಗಿ ವಾಸಿಸುವ ಸುಖವುಳ್ಳ ಜನಾಂಗದ ಬಳಿಗೆ ಹೋಗಿರಿ ಎಂದು ಕರ್ತನು ಅನ್ನುತ್ತಾನೆ; ಅದಕ್ಕೆ ಬಾಗಲುಗಳು ಇಲ್ಲ; ಅಗುಳಿಗಳು ಇಲ್ಲ; ಏಕಾಂತವಾಗಿ ವಾಸಮಾಡುತ್ತದೆ.
Eliri, bhadravaagi vaasisuva sukhavulla janaangada balige hogiri endu kartanu annuttaane; adakke baagalugalu illa; aguligalu illa; ekaantavaagi vaasamaaduttade.
Jeremiah 49:31 in English
- King James Version (KJV)
- Arise, get you up unto the wealthy nation, that dwelleth without care, saith the LORD, which have neither gates nor bars, [which] dwell alone.
- World English Bible (WEB)
- Arise! Go up to a nation that is at ease, that dwells without care,” says the LORD; “that has neither gates nor bars, that dwells alone.
- American Standard Version (ASV)
- Arise, get you up unto a nation that is at ease, that dwelleth without care, saith Jehovah; that have neither gates nor bars, that dwell alone.
- Bible in Basic English (BBE)
- Up! go against a nation which is living in comfort and without fear of danger, says the Lord, without doors or locks, living by themselves.
- Darby Translation (DBY)
- Arise, get you up against the nation at ease, that dwelleth securely, saith Jehovah, which hath neither gates nor bars: they dwell alone.
- Webster's Bible (WBS)
- Arise, go up to the wealthy nation, that dwelleth without care, saith the LORD, which have neither gates nor bars, [which] dwell alone.
- Young's Literal Translation (YLT)
- Rise ye, go up unto a nation at rest, Dwelling confidently, an affirmation of Jehovah, It hath no two-leaved doors nor bar, Alone they do dwell.
Read in context
- 29ಅವರ ಗುಡಾರಗಳನ್ನೂ ಮಂದೆಗಳನ್ನೂ ತಕ್ಕೊಳ್ಳುವರು; ಅವರ ತೆರೆಗಳನ್ನೂ ಎಲ್ಲಾ ಪಾತ್ರೆ ಗಳನ್ನೂ ಒಂಟೆಗಳನ್ನೂ ವಶಮಾಡಿಕೊಳ್ಳುವರು; ಸುತ್ತಲೂ ಭಯವೆಂದು ಅವರಿಗೆ ಕೂಗುವರು.
- 30ಹಾಚೋರಿನ ನಿವಾಸಿಗಳೇ, ಓಡಿಹೋಗಿರಿ, ದೂರಕ್ಕೆ ಹೋಗಿಬಿಡಿರಿ, ಆಳವಾದ ಸ್ಥಳದಲ್ಲಿ ವಾಸ ವಾಗಿರ್ರಿ ಎಂದು ಕರ್ತನು ಅನ್ನುತ್ತಾನೆ. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ವಿರೋಧವಾಗಿ ಆಲೋಚನೆಯನ್ನೂ ಕಲ್ಪನೆಯನ್ನೂ ಮಾಡಿದ್ದಾನೆ.
- 31ಏಳಿರಿ, ಭದ್ರವಾಗಿ ವಾಸಿಸುವ ಸುಖವುಳ್ಳ ಜನಾಂಗದ ಬಳಿಗೆ ಹೋಗಿರಿ ಎಂದು ಕರ್ತನು ಅನ್ನುತ್ತಾನೆ; ಅದಕ್ಕೆ ಬಾಗಲುಗಳು ಇಲ್ಲ; ಅಗುಳಿಗಳು ಇಲ್ಲ; ಏಕಾಂತವಾಗಿ ವಾಸಮಾಡುತ್ತದೆ.
- 32ಅವರ ಒಂಟೆಗಳು ಕೊಳ್ಳೆಯಾಗುವವು, ದನಗಳ ಸಮೂಹವು ಸುಲಿಗೆಯಾಗುವವು; ದನಗಳ ಸಮೂಹವು ಸುಲಿಗೆ ಯಾಗುವದು; ಕಟ್ಟ ಕಡೆಯ ಮೂಲೆಗಳಲ್ಲಿ ಇರುವ ವರನ್ನು ಎಲ್ಲಾ ದಿಕ್ಕುಗಳಿಗೂ ಚದರಿಸುತ್ತೇನೆ; ಎಲ್ಲಾ ಕಡೆಯಿಂದ ಅವರನ್ನು ಸಂಹರಿಸುತ್ತೇನೆಂದು ಕರ್ತನು ಅನ್ನುತ್ತಾನೆ.
- 33ಹಾಚೋರು ಮೃಗಗಳ ನಿವಾಸವೂ ಎಂದೆಂದಿಗೂ ಹಾಳಾದ ಸ್ಥಳವೂ ಆಗುವದು; ಅಲ್ಲಿ ಯಾವನಾದರೂ ವಾಸಮಾಡುವದಿಲ್ಲ; ಅಲ್ಲಿ ಯಾವ ನರಪುತ್ರನಾದರೂ ತಂಗುವದಿಲ್ಲ.
Cross references
- Ezekiel 38:11 ಯೆಹೆಜ್ಕೇಲನು 38:11ನೀನು ಪೌಳಿಗೋಡೆಯಿಲ್ಲದ ಹಳ್ಳಿಗಳುಳ್ಳ ದೇಶಕ್ಕೆ ನಾನು ಹೋಗುವೆನು; ಪೌಳಿ ಗೋಡೆಗಳಿಲ್ಲದೆ ಇಲ್ಲವೆ ಬಾಗಲುಗಳು ಅಗುಳಿಗಳು ಇಲ್ಲದೆ ಅದೂ ಅವರು ವಿಶ್ರಾಂತಿಯಿಂದಲೂ ಸುಖ ವಾಗಿ ವಾಸಿಸುತ್ತಿರುವಾಗ ನಾನು ಹೋಗಿ,
- Micah 7:14 ಮೀಕ 7:14ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.
- Deuteronomy 33:28 ಧರ್ಮೋಪದೇಶಕಾಂಡ 33:28ಇಸ್ರಾಯೇಲು ಒಂಟಿಯಾಗಿ ಭರವಸದಿಂದ ಸುರಕ್ಷಿತವಾಗಿ ವಾಸಿಸುವದು. ಧಾನ್ಯ ದ್ರಾಕ್ಷಾರಸಗಳ ದೇಶದಲ್ಲಿ ಯಾಕೋಬನ ಬುಗ್ಗೆ ಇರುವದು. ಅವನ ಆಕಾಶಗಳು ಸಹ ಮಂಜನ್ನು ಸುರಿಸುವವು.ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.
- Isaiah 47:8 ಯೆಶಾಯ 47:8ನಾನೇ ಇರುವವಳು ನನ್ನ ಹೊರತು ಇನ್ನು ಯಾರೂ ಇಲ್ಲ. ನಾನು ವಿಧವೆಯಾಗಿ ಕೂತುಕೊಳ್ಳು ವದಿಲ್ಲ; ಪುತ್ರಶೋಕವನ್ನು ಅನುಭವಿಸುವದಿಲ್ಲ ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿ ಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.
- Numbers 23:9 ಅರಣ್ಯಕಾಂಡ 23:9ಬಂಡೆಗಳ ತುದಿಯಿಂದ ಅವನನ್ನು ನೋಡು ತ್ತೇನೆ; ಗುಡ್ಡಗಳಿಂದ ಅವನನ್ನು ದೃಷ್ಟಿಸಿದ್ದೇನೆ; ಇಗೋ, ಆ ಜನಾಂಗವು ಒಂಟಿಯಾಗಿ ವಾಸಿಸುವದು, ಜನಾಂಗ ಗಳಲ್ಲಿ ಅದು ಎಣಿಸಲ್ಪಡುವದಿಲ್ಲ.
- Ezekiel 30:9 ಯೆಹೆಜ್ಕೇಲನು 30:9ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣ ಮಾಡಿ ನಿಶ್ಚಿಂತರಾದ ಐಥಿಯೋಪ್ಯರನ್ನು ಹೆದರಿಸುವರು; ಐಗುಪ್ತದ ದಿನದಲ್ಲಿ ಆದಹಾಗೆ ಅವರ ಮೇಲೆ ದೊಡ್ಡಬಾಧೆ ಉಂಟಾಗುವದು; ಇಗೋ, ಅದು ಬಂತು.
- Ezekiel 39:6 ಯೆಹೆಜ್ಕೇಲನು 39:6ನಾನು ಮಾಗೋಗ್ ಮತ್ತು ಅವ ರೊಂದಿಗೆ ದ್ವೀಪಗಳಲ್ಲಿ ನಿರ್ಲಕ್ಷ್ಯವಾಗಿ ವಾಸಿಸುವವರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅವರು ನಾನೇ ಕರ್ತನೆಂದು ತಿಳಿಯುವರು.
- Nahum 1:12 ನಹೂಮ 1:12ಕರ್ತನು ಹೀಗೆ ಹೇಳು ತ್ತಾನೆ--ಅವರು ಸುಖವುಳ್ಳವರಾಗಿಯೂ ಬಹು ಮಂದಿ ಯಾಗಿಯೂ ಇದ್ದರೂ ಆತನು ಹಾದುಹೋಗುವಾಗ ಹೀಗೆ ಕಡಿಯಲ್ಪಡುವರು; ನಾನು ನಿನ್ನನ್ನು ಕಷ್ಟಪಡಿಸಿ ದಾಗ್ಯೂ ಇನ್ನು ಮೇಲೆ ಕಷ್ಟಪಡಿಸೆನು.
- Judges 18:7–10 ನ್ಯಾಯಸ್ಥಾಪಕರು 18:7–10ಆಗ ಆ ಐದು ಮಂದಿಯು ಹೊರಟು ಲಯಿಷಿಗೆ ಹೋಗಿ ಅದರಲ್ಲಿ ವಾಸಿಸಿರುವ ಆ ಜನರನ್ನು ನೋಡು ವಾಗ ಅವರು ನಿಶ್ಚಿಂತರಾಗಿಯೂ ಚೀದೋನ್ಯರ ಹಾಗೆ ನೆಮ್ಮದಿಯಾಗಿಯೂ ಸುರಕ್ಷಿತವಾಗಿಯೂ ಇದ್ದರು; ಯಾವ ಕಾರ್ಯದಲ್ಲಾದರೂ ನಾಚಿಕೆಪಡಿಸುವದಕ್ಕೆ ಬಿಗಿಹಿಡಿಯುವ ನ್ಯಾಯಾಧಿಪತಿಯು ದೇಶದಲ್ಲಿ ಇರ ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದರು; ಯಾವ ಮನುಷ್ಯನ ಸಂಗಡವೂ ಅವರಿಗೆ ಏನೂ ಕೆಲಸವಿರಲಿಲ್ಲ. ಅವರು ಚೊರ್ಗಾದಲ್ಲಿಯೂ ಎಷ್ಟಾ ವೋಲಿನಲ್ಲಿಯೂ ಇರುವ ಸಹೋದರರ ಬಳಿಗೆ ತಿರಿಗಿ ಬಂದರು. ಅವರ ಸಹೋದರರು ಅವರಿಗೆ--ನೀವು ಏನು ಹೇಳುತ್ತೀರಿ? ಅಂದರು. ಅದಕ್ಕವರು--ಏಳಿರಿ ನಾವು ಅವರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೋಗುವ ಹಾಗೆ ಆ ದೇಶವನ್ನು ನೋಡಿದೆವು; ಇಗೋ, ಅದು ಬಹಳ ಚೆನ್ನಾಗಿದೆ; ನೀವು ಸುಮ್ಮನೆ ಇರುವದು ಯಾಕೆ? ಆ ದೇಶದಲ್ಲಿ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳಲು ಹೋಗುವದಕ್ಕೆ ತಾಮಸ ಮಾಡಬೇಡಿರಿ. ನೀವು ಅಲ್ಲಿಗೆ ಹೋಗುವಾಗ ಭರವಸವಾಗಿರುವ ಜನರ ಬಳಿಗೆ ಹೋಗುವಿರಿ; ಅದು ವಿಸ್ತಾರವಾದ ದೇಶವಾಗಿದೆ; ದೇವರು ಅದನ್ನು ನಿಮ್ಮ ಕೈಗಳಲ್ಲಿ ಒಪ್ಪಿಸಿಕೊಟ್ಟಿದ್ದಾನೆ. ಆ ಸ್ಥಳದಲ್ಲಿ ಭೂಮಿ ಯಲ್ಲಿರುವ ವಸ್ತುಗಳಲ್ಲಿ ಒಂದಾದರೂ ಕೊರತೆ ಇಲ್ಲ ಅಂದರು.
- Zephaniah 2:15 ಚೆಫನ್ಯ 2:15ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.
- Isaiah 32:9 ಯೆಶಾಯ 32:9ನಿಶ್ಚಿಂತೆಯರಾದ ಹೆಂಗಸರೇ, ಏಳಿರಿ, ನನ್ನ ಸ್ವರ ವನ್ನು ಕೇಳಿರಿ, ಭಯವಿಲ್ಲದ ಹೆಣ್ಣುಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ.
- Isaiah 32:11 ಯೆಶಾಯ 32:11ನಿಶ್ಚಿಂತೆಯುಳ್ಳ ಹೆಂಗಸರೇ, ನೀವು ನಡುಗಿರಿ, ನಿರ್ಭೀತರೇ ಕಳವಳಗೊಳ್ಳಿರಿ; ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣೀತಟ್ಟನ್ನು ಸುತ್ತಿಕೊಳ್ಳಿರಿ.