Jeremiah · chapter 49 · verse 7
Jeremiah 49:7 in Kannada
ಎದೋಮಿನ ವಿಷಯವಾಗಿ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತೇಮಾನ್ನಲ್ಲಿ ಇನ್ನು ಮೇಲೆ ಜ್ಞಾನವಿರುವದಿಲ್ಲವೋ? ವಿವೇಕಿಗಳಿಂದ ಆಲೋಚ ನೆಯು ನಾಶವಾಯಿತೋ? ಅವರ ಜ್ಞಾನವು ಕಾಣದೆ ಹೋಯಿತೋ?
Edomina vishayavaagi sainyagala kartanu heege heluttaane--temaannalli innu mele jnyaanaviruvadillavo? Vivekigalinda aalocha neyu naashavaayito? Avara jnyaanavu kaanade hoyito?
Jeremiah 49:7 in English
- King James Version (KJV)
- Concerning Edom, thus saith the LORD of hosts; [Is] wisdom no more in Teman? is counsel perished from the prudent? is their wisdom vanished?
- World English Bible (WEB)
- Of Edom, the LORD of Armies says: “Is wisdom no more in Teman? Has counsel perished from the prudent? Has their wisdom vanished?
- American Standard Version (ASV)
- Of Edom. Thus saith Jehovah of hosts: Is wisdom no more in Teman? is counsel perished from the prudent? is their wisdom vanished?
- Bible in Basic English (BBE)
- About Edom. This is what the Lord of armies has said. Is there no more wisdom in Teman? have wise suggestions come to an end among men of good sense? has their wisdom completely gone?
- Darby Translation (DBY)
- Concerning Edom. Thus saith Jehovah of hosts: Is there no more wisdom in Teman? is counsel perished from the prudent? is their wisdom spent?
- Webster's Bible (WBS)
- Concerning Edom, thus saith the LORD of hosts; [Is] wisdom no more in Teman? hath counsel perished from the prudent? hath their wisdom vanished?
- Young's Literal Translation (YLT)
- Concerning Edom: 'Thus said Jehovah of Hosts: Is wisdom no more in Teman? Perished hath counsel from the intelligent? Vanished hath their wisdom?
Read in context
- 5ಇಗೋ, ನಾನು ನಿನ್ನ ಸುತ್ತಲಿರುವ ವರೆಲ್ಲರಿಂದ ನಿನ್ನ ಮೇಲೆ ಭಯವನ್ನು ಬರಮಾಡು ವೆನೆಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ. ಆಗ ನಿಮ್ಮಲ್ಲಿ ಒಬ್ಬೊಬ್ಬನು ಮುಂದಕ್ಕೆ ಓಡಿಸಲ್ಪಡುವನು; ಅಲೆದಾಡುವವನನ್ನು ಕೂಡಿಸುವವನೂ ಒಬ್ಬನೂ ಇರುವದಿಲ್ಲ.
- 6ಆದರೆ ತರುವಾಯ ಅಮ್ಮೋನನ ಮಕ್ಕಳನ್ನು ಸೆರೆಯಿಂದ ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ.
- 7ಎದೋಮಿನ ವಿಷಯವಾಗಿ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತೇಮಾನ್ನಲ್ಲಿ ಇನ್ನು ಮೇಲೆ ಜ್ಞಾನವಿರುವದಿಲ್ಲವೋ? ವಿವೇಕಿಗಳಿಂದ ಆಲೋಚ ನೆಯು ನಾಶವಾಯಿತೋ? ಅವರ ಜ್ಞಾನವು ಕಾಣದೆ ಹೋಯಿತೋ?
- 8ದೇದಾನಿನ ನಿವಾಸಿಗಳೇ, ಓಡಿ ಹೋಗಿರಿ, ತಿರುಗಿಕೊಳ್ಳಿರಿ, ಆಳವಾದ ಸ್ಥಳದಲ್ಲಿ ವಾಸಮಾಡಿರಿ. ಏಸಾವಿನ ಆಪತ್ತನ್ನೂ ನಾನು ಅವನನ್ನು ವಿಚಾರಿಸುವ ಕಾಲವನ್ನು ಅವನ ಮೇಲೆ ಬರಮಾಡು ತ್ತೇನೆ.
- 9ದ್ರಾಕ್ಷೇ ಕೂಡಿಸುವವರು ನಿನ್ನ ಬಳಿಗೆ ಬಂದಿದ್ದರೆ ಹಕ್ಕಲನ್ನಾದರೂ ಉಳಿಸರೇ? ರಾತ್ರಿಯಲ್ಲಿ ಕಳ್ಳರು ಬಂದಿದ್ದರೆ ತಮಗೆ ಸಾಕಾಗುವಷ್ಟು ಕೆಡಿಸುವವರಲ್ಲವೇ?
Cross references
- Amos 1:11–12 ಆಮೋಸ 1:11–12ಕರ್ತನು ಹೀಗೆ ಹೇಳುತ್ತಾನೆ--ಎದೋಮಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅದರ ದಂಡನೆಯಿಂದ ತಪ್ಪಿಸುವದಿಲ್ಲ. ಅವನು ತನ್ನ ಎಲ್ಲಾ ಕನಿಕರಗಳನ್ನು ಬಿಸಾಡಿಬಿಟ್ಟು ತನ್ನ ಸಹೋ ದರನನ್ನು ಕತ್ತಿಯ ಸಹಿತ ಹಿಂಬಾಲಿಸಿದನು. ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು; ತನ್ನ ರೌದ್ರ ವನ್ನು ನಿತ್ಯವಾಗಿ ಇಟ್ಟುಕೊಂಡನು. ಆದರೆ ನಾನು ತೇಮಾನಿನ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವದು.
- Jeremiah 25:21 ಯೆರೆಮೀಯ 25:21ಎದೋಮಿಗೂ ಮೋವಾ ಬಿಗೂ ಅಮ್ಮೋನನ ಮಕ್ಕಳಿಗೂ
- Genesis 36:15 ಆದಿಕಾಂಡ 36:15ಏಸಾವನ ಕುಮಾರರ ಮುಖಂಡರು ಯಾರಂದರೆ: ಏಸಾವನ ಚೊಚ್ಚಲ ಮಗನಾಗಿರುವ ಎಲೀಫಜನ ಮಕ್ಕಳಾದ ತೇಮಾನ್ ಓಮಾರ್ ಚೆಫೋ ಕೆನಜ್
- Genesis 25:30 ಆದಿಕಾಂಡ 25:30ಏಸಾವನು ಯಾಕೋಬನಿಗೆ--ಆ ಕೆಂಪಾದ ಪದಾರ್ಥವನ್ನು ತಿನ್ನುವದಕ್ಕೆ ನನಗೆ ಕೊಡು, ನಾನು ದಣಿದಿದ್ದೇನೆ ಅಂದನು. ಆದದರಿಂದ ಅವನಿಗೆ ಎದೋಮ್ ಎಂದು ಹೆಸರಾಯಿತು.
- Ezekiel 25:12–14 ಯೆಹೆಜ್ಕೇಲನು 25:12–14ದೇವರಾದ ಕರ್ತನು--ಎದೋಮು ಮತ್ತು ಯೆಹೂದನ ಮನೆತನದವರಿಗೆ ಮುಯ್ಯಿಗೆಮುಯ್ಯಿ ತೀರಿಸಿದ್ದರಿಂದಲೇ ಮತ್ತು ಅತಿ ಅಪರಾಧ ಮಾಡಿ ಅವರಲ್ಲಿ ಸೇಡು ತೀರಿಸಿ ತೆಗೆದುಕೊಂಡದ್ದರಿಂದಲೇ ಎಂದು ಹೇಳುತ್ತಾನೆ. ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನೂ ನನ್ನ ಕೈಯನ್ನು ಎದೋಮಿನ ಮೇಲೆ ಚಾಚುತ್ತೇನೆ, ಅದರೊಳಗಿನಿಂದ ಮನುಷ್ಯರನ್ನೂ ಮೃಗಗಳನ್ನೂ ಕಡಿದುಬಿಡುತ್ತೇನೆ, ತೇಮಾನು ಮೊದಲುಗೊಂಡು ಅದನ್ನು ಕಾಡನ್ನಾಗಿ ಮಾಡುತ್ತೇನೆ; ದೆದಾನಿಯವರು ಕತ್ತಿಯಿಂದ ಬೀಳು ವರು. ನಾನು ನನ್ನ ಜನರಾದ ಇಸ್ರಾಯೇಲಿನ ಮೂಲಕವಾಗಿ ನನ್ನ ಪ್ರತಿದಂಡನೆಯನ್ನು ಎದೋಮಿನ ಮೇಲೆ ಇಡುವೆನು, ಅವರು ಎದೋಮಿನಲ್ಲಿ ನನ್ನ ಕೋಪದ ಪ್ರಕಾರವೂ ರೋಷದ ಪ್ರಕಾರವೂ ಮಾಡು ವರು; ಹೀಗೆಯೇ ಅವರು ನನ್ನ ಪ್ರತಿದಂಡನೆಯನ್ನು ತಿಳಿಯುವರೆಂದು ದೇವರಾದ ಕರ್ತನು ಹೇಳುತ್ತಾನೆ.
- Jeremiah 49:20 ಯೆರೆಮೀಯ 49:20ಆದದರಿಂದ ಕರ್ತನು ಎದೋಮಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ ಅವನು ಮಾಡಿದ ಯೋಚನೆಗಳನ್ನೂ ಕೇಳಿರಿ. ನಿಶ್ಚಯವಾಗಿ ಮಂದೆಯ ಮರಿಗಳು ಅವರನ್ನು ಎಳೆಯುವವು, ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡು ವನು.
- Genesis 36:11 ಆದಿಕಾಂಡ 36:11ಎಲೀಫಜನ ಮಕ್ಕಳು ಯಾರಂದರೆ: ತೇಮಾನ್ ಓಮಾರ್ ಚೆಫೋ ಗತಾಮ್ ಕೆನಜ್;
- Job 2:11 ಯೋಬನು 2:11ಇದಲ್ಲದೆ ಯೋಬನ ಮೂವರು ಸ್ನೇಹಿತರು ಅವನ ಮೇಲೆ ಬಂದ ಈ ಎಲ್ಲಾ ಕೇಡನ್ನು ಕುರಿತು ಕೇಳಿ ತಮ್ಮ ತಮ್ಮ ಸ್ಥಳಗಳಿಂದ ಬಂದರು. ಅವರಾ ರಂದರೆ; ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು; ಇವರು ಅವನಿಗೋಸ್ಕರ ಗೋಳಾಡುವದಕ್ಕೂ ಅವನನ್ನು ಸಂತೈ ಸುವದಕ್ಕೂ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡರು.
- Genesis 36:8 ಆದಿಕಾಂಡ 36:8ಹೀಗೆ ಏಸಾವನು ಸೇಯಾರ್ ಪರ್ವತದಲ್ಲಿ ವಾಸವಾಗಿದ್ದನು. ಏಸಾವನೇ ಎದೋಮನು.
- Ezekiel 35:1–15 ಯೆಹೆಜ್ಕೇಲನು 35:1–15ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ, ಮನುಷ್ಯಪುತ್ರನೇ, ನೀನು ಸೇಯಾರ್ ಪರ್ವತಕ್ಕೆ ಅಭಿಮುಖವಾಗಿ ಅದಕ್ಕೆ ವಿರೋಧವಾಗಿ ಪ್ರವಾದಿಸು; ಅದಕ್ಕೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಸೇಯಾರ್ ಪರ್ವತವೇ, ನಾನು ನಿನಗೆ ವಿರುದ್ಧವಾಗಿ ದ್ದೇನೆ. ನಾನು ನನ್ನ ಕೈಯನ್ನು ನಿನಗೆ ವಿರುದ್ಧವಾಗಿ ಚಾಚುತ್ತೇನೆ. ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. ನಾನು ನಿನ್ನ ಪಟ್ಟಣಗಳನ್ನು ನಾಶಮಾಡಲು ನೀನು ಹಾಳಾಗುವಿ; ಆಗ ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ. ನೀನು ಇಸ್ರಾಯೇಲ್ಯರ ಮೇಲೆ ದೀರ್ಘ ದ್ವೇಷವಿಟ್ಟು ಅವರ ಅಪರಾಧದ ಕೊನೆಯ ಕಾಲದಲ್ಲಿ ಅಪತ್ತು ಸಂಭವಿಸಿ ದಾಗ ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದಿ. ಆದದರಿಂದ ದೇವರಾದ ಕರ್ತನು ಹೇಳುತ್ತಾನೆ-- ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು; ರಕ್ತದ ಕೋಡಿಯು ನಿನ್ನನ್ನು ಬೆನ್ನಟ್ಟು ವದು; ನೀನು ರಕ್ತಸುರಿಸುವದಕ್ಕೆ ಹೇಸದೆ ಹೋದ ಕಾರಣ ರಕ್ತಪ್ರವಾಹವೇ ನಿನ್ನ ಬೆನ್ನು ಹತ್ತುವದು. ಹೀಗೆ ನಾನು ಸೇಯಾರ್ ಪರ್ವತವನ್ನು ಸಂಪೂರ್ಣ ಹಾಳು ಮಾಡುವೆನು; ಅದರೊಳಗೆ ಹಾದು ಹೋಗು ವವನನ್ನೂ ಹಿಂತಿರುಗುವವನನ್ನೂ ಕಡಿದುಹಾಕುವೆನು. ಅದರ ಪರ್ವತಗಳನ್ನು ನಿನ್ನವರ ಹೆಣಗಳಿಂದ ತುಂಬಿ ಸುವರು. ನಿನ್ನ ಕತ್ತಿಯಿಂದ ಹತವಾದವರು ನಿನ್ನ ಹಳ್ಳ ಕೊಳ್ಳಗಳಲ್ಲಿಯೂ ಬೀಳುವರು. ನಾನು ನಿನ್ನನ್ನು ನಿತ್ಯ ನಾಶಕ್ಕೆ ಗುರಿಮಾಡುವೆನು; ನಿನ್ನ ನಗರಗಳು ಹಿಂತಿರುಗುವದಿಲ್ಲ ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ. ಕರ್ತನು ಅವುಗಳಲ್ಲಿರುವದರಿಂದ ಈ ಎರಡು ಜನಾಂಗಗಳೂ ಈ ಎರಡು ರಾಜ್ಯಗಳೂ ನನ್ನವಾಗು ವವು. ನೀನು ಹೇಳಿದ್ದರಿಂದ ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ. ಆದದರಿಂದ ದೇವರಾದ ಕರ್ತನು ಹೇಳುತ್ತಾನೆ--ನನ್ನ ಜೀವದಾಣೆ, ನಾನು ನಿನ್ನ ಕೋಪದ ಪ್ರಕಾರವೂ ನೀನು ದ್ವೇಷದಿಂದ ಅವರಿಗೆ ವಿರುದ್ಧವಾಗಿ ನಡೆಸಿದ ಹೊಟ್ಟೇಕಿಚ್ಚಿನ ಪ್ರಕಾರವೂ ನಿನಗೆ ನ್ಯಾಯತೀರಿಸಿದ ಮೇಲೆ ನಾನು ಅವರ ಮಧ್ಯದಲ್ಲಿ ನನ್ನನ್ನು ತಿಳಿಯಪಡಿಸುತ್ತೇನೆ. ಆಗ ನಾನೇ ಕರ್ತನೆಂದು ನೀನು ತಿಳಿಯುವಿ ಮತ್ತು ಇಸ್ರಾಯೇಲಿನ ಪರ್ವತಗಳ ವಿಷಯವಾಗಿ--ಅವು ಹಾಳಾಗಿವೆ ನಮಗೆ ಆಹಾರವಾಗಿ ಕೊಡಲ್ಪಟ್ಟಿವೆ ಎಂದು ಹೇಳಿ ಮಾತ ನಾಡಿದ ನಿನ್ನ ಎಲ್ಲಾ ದೂಷಣೆಗಳನ್ನು ಕೇಳಿರುವೆನೆಂದು ತಿಳಿಯುವಿ. ಹೀಗೆ ನಿಮ್ಮ ಬಾಯಿಂದ ನೀವು ನನಗೆ ವಿರೋಧವಾಗಿ ಕೊಚ್ಚಿದ್ದನ್ನೂ ನನಗೆ ವಿರೋಧವಾಗಿ ನಿಮ್ಮ ಮಾತುಗಳಿಂದ ಹೆಚ್ಚಿಸಿದ್ದನ್ನೂ ನಾನು ಕೇಳಿದ್ದೇನೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಯಾವಾಗ ಸಂಪೂರ್ಣ ಭೂಮಿಯು ಸಂತೋಷಪಡು ತ್ತದೋ ಆಗ ನಾನು ನಿನ್ನನ್ನು ಹಾಳುಮಾಡುವೆನು.ಹೇಗೆ ನೀನು ಇಸ್ರಾಯೇಲ್ಯರ ಸ್ವಾತಂತ್ರ್ಯದ ನಾಶನಕ್ಕೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಓ ಸೇಯಾರ್ ಪರ್ವತವೇ ಮತ್ತು ಸಮಸ್ತ ಎದೋಮೇಸಂಪೂರ್ಣವಾಗಿ ಹಾಳಾಗುವಿ; ಆಗ ನಾನೇ ಕರ್ತ ನೆಂದು ನಿಮಗೆ ತಿಳಿಯುವದು. ಹೇಗೆ ನೀನು ಇಸ್ರಾಯೇಲ್ಯರ ಸ್ವಾತಂತ್ರ್ಯದ ನಾಶನಕ್ಕೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಓ ಸೇಯಾರ್ ಪರ್ವತವೇ ಮತ್ತು ಸಮಸ್ತ ಎದೋಮೇಸಂಪೂರ್ಣವಾಗಿ ಹಾಳಾಗುವಿ; ಆಗ ನಾನೇ ಕರ್ತ ನೆಂದು ನಿಮಗೆ ತಿಳಿಯುವದು.
- Daniel 11:41 ದಾನಿಯೇಲನು 11:41ಇದಲ್ಲದೆ ಅವನು ರಮ್ಯವಾದ ದೇಶದೊಳಕ್ಕೂ ನುಗ್ಗುವನು; ಅನೇಕ ದೇಶಗಳು ಕೆಡವಲ್ಪಡುವವು; ಆದರೆ ಎದೋಮು, ಮೋವಾಬು ಅಮ್ಮೋನನ ಮಕ್ಕಳಲ್ಲಿ ಮುಖ್ಯಸ್ಥರು ಆತನ ಕೈಯಿಂದ ತಪ್ಪಿಸಿಕೊಳ್ಳುವರು.
- Deuteronomy 23:7 ಧರ್ಮೋಪದೇಶಕಾಂಡ 23:7ಎದೋಮ್ಯನನ್ನು ಅಸಹ್ಯಿಸಬೇಡ; ಅವನು ನಿನ್ನ ಸಹೋದರನು; ಐಗುಪ್ತ್ಯನನ್ನು ಅಸಹ್ಯಿಸಬೇಡ; ಅವನ ದೇಶದಲ್ಲಿ ನೀನು ಪರವಾಸಿಯಾಗಿದ್ದಿ.