Jeremiah · chapter 5 · verse 12
Jeremiah 5:12 in Kannada
ಕರ್ತನನ್ನು ಸುಳ್ಳುಗಾರ ನನ್ನಾಗಿ ಮಾಡಿ ಅವರು--ಆತನು ಅಂಥವನಲ್ಲ; ನಮ್ಮ ಮೇಲೆ ಕೇಡುಬಾರದು; ಇಲ್ಲವೆ ಕತ್ತಿಯನ್ನಾದರೂ ಬರವನ್ನಾದರೂ ನಾವು ನೋಡುವದಿಲ್ಲ.
Kartanannu sullugaara nannaagi maadi avaru--aatanu anthavanalla; namma mele kedubaaradu; illave kattiyannaadaroo baravannaadaroo naavu noduvadilla.
Jeremiah 5:12 in English
- King James Version (KJV)
- They have belied the LORD, and said, [It is] not he; neither shall evil come upon us; neither shall we see sword nor famine:
- World English Bible (WEB)
- They have denied the LORD, and said, “It is not he. Evil won’t come on us. We won’t see sword or famine.
- American Standard Version (ASV)
- They have denied Jehovah, and said, It is not he; neither shall evil come upon us; neither shall we see sword nor famine:
- Bible in Basic English (BBE)
- They would have nothing to do with the Lord, saying, He will do nothing, and no evil will come to us; we will not see the sword or be short of food:
- Darby Translation (DBY)
- They have denied Jehovah, and say, He is not; and evil shall not come upon us, nor shall we see sword nor famine;
- Webster's Bible (WBS)
- They have belied the LORD, and said, [It is] not he; neither shall evil come upon us; neither shall we see sword nor famine:
- Young's Literal Translation (YLT)
- They have lied against Jehovah, And they say, '[It is] not He, Nor come in against us doth evil, Yea, sword and famine we do not see.
Read in context
- 10ಅವಳ ಗೋಡೆಗಳನ್ನು ಏರಿರಿ, ಕೆಡಿಸಿರಿ; ಆದರೆ ಪೂರ್ಣವಾಗಿ ನಾಶಮಾಡಬೇಡಿರಿ. ಅವಳ ಕೋಟೆಯ ಉಪ್ಪರಿಗೆಗಳನ್ನು ತೆಗೆದುಬಿಡಿರಿ; ಅವು ಕರ್ತನವುಗಳಲ್ಲ.
- 11ಇಸ್ರಾಯೇಲ್ಯನ ಮನೆತನದವರೂ ಯೆಹೂದನ ಮನೆತನದವರೂ ನನಗೆ ಬಹಳ ವಂಚನೆ ಮಾಡಿದ್ದಾ ರೆಂದು ಕರ್ತನು ಅನ್ನುತ್ತಾನೆ.
- 12ಕರ್ತನನ್ನು ಸುಳ್ಳುಗಾರ ನನ್ನಾಗಿ ಮಾಡಿ ಅವರು--ಆತನು ಅಂಥವನಲ್ಲ; ನಮ್ಮ ಮೇಲೆ ಕೇಡುಬಾರದು; ಇಲ್ಲವೆ ಕತ್ತಿಯನ್ನಾದರೂ ಬರವನ್ನಾದರೂ ನಾವು ನೋಡುವದಿಲ್ಲ.
- 13ಪ್ರವಾದಿಗಳು ಗಾಳಿಯಾಗುವರು; ವಾಕ್ಯವು ಅವರಲ್ಲಿ ಇಲ್ಲ; ಅವರಿಗೆ ಹೀಗಾಗುವದು ಎಂದು ಹೇಳಿದ್ದಾರೆ.
- 14ಆದ ದರಿಂದ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ಈ ಮಾತನ್ನಾಡುವದರಿಂದ ಇಗೋ, ನಾನು ನಿನ್ನ ಬಾಯಲ್ಲಿರುವ ನನ್ನ ಮಾತುಗಳನ್ನು ಬೆಂಕಿಯಾಗಿಯೂ ಈ ಜನರನ್ನು ಕಟ್ಟಿಗೆಯಾಗಿಯೂ ಮಾಡುವೆನು; ಅದು ಅವರನ್ನು ತಿಂದುಬಿಡುವದು.
Cross references
- 2 Chronicles 36:16 2 ಪೂರ್ವಕಾಲವೃತ್ತಾಂತ 36:16ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
- Jeremiah 43:2–3 ಯೆರೆಮೀಯ 43:2–3ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಗರ್ವಿಷ್ಠ ಮನುಷ್ಯ ರೆಲ್ಲರೂ ಮಾತನಾಡಿ ಯೆರೆವಿಾಯನಿಗೆ ಹೇಳಿದ್ದೇ ನಂದರೆ-ನೀನು ಸುಳ್ಳು ಹೇಳುತ್ತೀ, ಅಲ್ಲಿ ಪ್ರವಾಸಿಯಾ ಗಿರುವದಕ್ಕೆ ಐಗುಪ್ತಕ್ಕೆ ಹೋಗಬಾರದೆಂದು ಹೇಳುವದಕ್ಕೆ ನಮ್ಮ ದೇವರಾದ ಕರ್ತನು ನಿನ್ನನ್ನು ಕಳುಹಿಸಲಿಲ್ಲ. ಅವರು ನಮ್ಮನ್ನು ಕೊಂದುಹಾಕುವಂತೆ ನಮ್ಮನ್ನು ಬಾಬೆಲಿಗೆ ಸೆರೆ ಒಯ್ಯುವ ಹಾಗೆ ನಮ್ಮನ್ನು ಕಸ್ದೀಯರ ಕೈಗೆ ಒಪ್ಪಿಸಬೇಕೆಂದು ನೇರೀಯನ ಮಗನಾದ ಬಾರೂ ಕನು ನಿನ್ನನ್ನು ನಮಗೆ ವಿರೋಧವಾಗಿ ಪ್ರೇರಿಸಿದ್ದಾನೆ ಅಂದರು.
- Jeremiah 28:15–17 ಯೆರೆಮೀಯ 28:15–17ಪ್ರವಾದಿಯಾದ ಯೆರೆವಿಾಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನಂದರೆ--ಹನ ನ್ಯನೇ, ಕೇಳು; ಕರ್ತನು ನಿನ್ನನ್ನು ಕಳುಹಿಸಲಿಲ್ಲ; ನೀನು ಈ ಜನರನ್ನು ಸುಳ್ಳಿನಲ್ಲಿ ನಂಬಿಕೆ ಇಡುವಂತೆ ಮಾಡುತ್ತೀ. ಆದದರಿಂದ ಕರ್ತನು ಹೀಗೆ ಹೇಳು ತ್ತಾನೆಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿ ಬಿಡುತ್ತೇನೆ; ಈ ವರುಷ ನೀನು ಸಾಯುವಿ; ನೀನು ಕರ್ತನಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ ಅಂದನು.ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು. ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು.
- Ezekiel 12:22–28 ಯೆಹೆಜ್ಕೇಲನು 12:22–28ಮನುಷ್ಯಪುತ್ರನೇ, ದಿನಗಳು ಬಹಳವಾ ಗುತ್ತಿವೆ; ಪ್ರತಿ ದರ್ಶನವು ತಪ್ಪುತ್ತದೆ ಎಂದು ಇಸ್ರಾ ಯೇಲ್ ದೇಶದಲ್ಲಿ ಹೇಳಿಕೊಳ್ಳುವ ಆ ಗಾದೆ ಏನು? ಆದದರಿಂದ ಅವರಿಗೆ ಹೀಗೆ ಹೇಳು ದೇವರಾದ ಕರ್ತನು ಹೇಳುವದೇನಂದರೆ--ನಾನು ಈ ಗಾದೆ ಯನ್ನು ನಿಲ್ಲಿಸುತ್ತೇನೆ, ಅದನ್ನು ಇನ್ನು ಮೇಲೆ ಇಸ್ರಾ ಯೇಲಿನಲ್ಲಿ ಗಾದೆಯಂತೆ ಉಪಯೋಗಿಸುವದಿಲ್ಲ; ದಿನಗಳು ಹತ್ತಿರವಾಗಿವೆ ಪ್ರತಿ ದರ್ಶನವು ಸವಿಾಪ ವಾಗಿದೆ ಎಂದು ಅವರಿಗೆ ಹೇಳು. ಇಸ್ರಾಯೇಲಿನ ಮನೆತನದವರೊಳಗೆ ಇನ್ನು ಮೇಲೆ ಯಾವ ವ್ಯರ್ಥ ದರ್ಶನವೂ ಮೋಸದ ಶಕುನವೂ ಇರುವದಿಲ್ಲ. ನಾನೇ ಕರ್ತನು, ನಾನೇ ಮಾತನಾಡುತ್ತೇನೆ. ನಾನು ಆಡುವ ಮಾತು ನೆರವೇರುವದು, ಅದು ಇನ್ನು ನಿಧಾನವಾಗುವದಿಲ್ಲ. ಓ ತಿರುಗಿ ಬೀಳುವ ಮನೆತನ ದವರೇ, ನಿಮ್ಮ ದಿವಸಗಳಲ್ಲಿ ನಾನು ನುಡಿದದ್ದನ್ನು ನಡಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ. ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ -- ಮನುಷ್ಯಪುತ್ರನೇ, ಇಗೋ, ಇಸ್ರಾಯೇಲಿನ ಮನೆತನದವರು--ಇವನಿಗಾದ ದರ್ಶನವು ಬಹು ದೂರ ಕಾಲಕ್ಕೆ ಸಂಬಂಧಿಸಿದ್ದು, ದೂರ ಕಾಲವನ್ನು ಕುರಿತು ಪ್ರವಾದಿಸುತ್ತಾನೆಂದು ಹೇಳುತ್ತಾರೆ.ಆದದರಿಂದ ಅವರು ಹೀಗೆ ಹೇಳುವರೆಂದು ದೇವರಾದ ಕರ್ತನು ಹೇಳುತ್ತಾನೆ; ನನ್ನ ಮಾತುಗಳಲ್ಲಿ ಒಂದಾದರೂ ಇನ್ನು ಮೇಲೆ ದೂರವಾಗುವದಿಲ್ಲ; ನಾನು ಆಡಿದ ಮಾತು ನಡಿಸಲ್ಪಡುವದೆಂದು ದೇವರಾದ ಕರ್ತನು ಹೇಳುತ್ತಾನೆ. ಆದದರಿಂದ ಅವರು ಹೀಗೆ ಹೇಳುವರೆಂದು ದೇವರಾದ ಕರ್ತನು ಹೇಳುತ್ತಾನೆ; ನನ್ನ ಮಾತುಗಳಲ್ಲಿ ಒಂದಾದರೂ ಇನ್ನು ಮೇಲೆ ದೂರವಾಗುವದಿಲ್ಲ; ನಾನು ಆಡಿದ ಮಾತು ನಡಿಸಲ್ಪಡುವದೆಂದು ದೇವರಾದ ಕರ್ತನು ಹೇಳುತ್ತಾನೆ.
- Deuteronomy 29:19 ಧರ್ಮೋಪದೇಶಕಾಂಡ 29:19ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ
- Jeremiah 14:13–14 ಯೆರೆಮೀಯ 14:13–14ಆಗ ನಾನು--ಹಾ, ದೇವರಾದ ಕರ್ತನೇ, ಇಗೋ, ಪ್ರವಾದಿಗಳು ಅವರಿಗೆ--ನೀವು ಕತ್ತಿಯನ್ನು ನೋಡುವದಿಲ್ಲ, ನಿಮಗೆ ಕ್ಷಾಮವು ಬಾರದು, ಆದರೆ ಕರ್ತನು ನಿಮಗೆ ಈ ಸ್ಥಳದಲ್ಲಿ ಸ್ಥಿರ ಸಮಾಧಾನ ಕೊಡುತ್ತಾನೆಂದು ಹೇಳುತ್ತಾರೆ ಅಂದೆನು. ಆಗ ಕರ್ತನು ನನಗೆ ಹೇಳಿದ್ದೇನಂದರೆ --ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿ ಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವ ರಿಗೆ ಆಜ್ಞೆ ಕೊಡಲಿಲ್ಲ; ಅವರ ಸಂಗಡ ಮಾತಾಡ ಲಿಲ್ಲ; ಸುಳ್ಳಿನ ದರ್ಶನವನ್ನೂ ಶಕುನವನ್ನೂ ಶೂನ್ಯ ವನ್ನೂ ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.
- Isaiah 28:14–15 ಯೆಶಾಯ 28:14–15ಆದಕಾರಣ ಯೆರೂಸಲೇಮಿನಲ್ಲಿರುವ ಈ ಜನ ರನ್ನು ಆಳುವ ಹಾಸ್ಯದ ಜನರಾದ ನೀವು ಕರ್ತನ ಮಾತನ್ನು ಕೇಳಿರಿ, ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ?
- Psalm 10:6 ಕೀರ್ತನೆಗಳು 10:6ನಾನು ಕದಲು ವದಿಲ್ಲ; ನಾನು ಎಂದಿಗೂ ಕೇಡಿನಲ್ಲಿರುವದಿಲ್ಲ ಎಂದು ಅವನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ.
- Jeremiah 23:14–17 ಯೆರೆಮೀಯ 23:14–17ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಸುಳ್ಳಿನಲ್ಲಿ ನಡಕೊಂಡದ್ದ ಲ್ಲದೆ ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ; ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ. ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿ ಗೊಡಬೇಡಿರಿ; ಅವರು ನಿಮ್ಮನ್ನು ನಿಷ್ಫಲಮಾಡುತ್ತಾರೆ; ಕರ್ತನ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನ ವನ್ನು ಹೇಳುತ್ತಾರೆ. ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ.
- Jeremiah 28:4 ಯೆರೆಮೀಯ 28:4ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ ಬಾಬೆಲಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರ ಮಾಡುವೆನೆಂದು ಕರ್ತನು ಅನ್ನುತ್ತಾನೆ; ಬಾಬೆಲಿನ ಅರಸನ ನೊಗವನ್ನು ಮುರಿದುಬಿಡುವೆನು.
- Jeremiah 5:31 ಯೆರೆಮೀಯ 5:31ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
- 1 Samuel 6:9 1 ಸಮುವೇಲನು 6:9ಅದು ತನ್ನ ಮೇರೆಯಾದ ಬೇತ್ಷೆಮೆಷಿನ ಮಾರ್ಗವನ್ನು ಹಿಡಿದು ಹೋದರೆ ಆತನು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾನೆ; ಇಲ್ಲದೆ ಹೋದರೆ ಆತನ ಹಸ್ತವು ನಮ್ಮನ್ನು ಮುಟ್ಟಲಿಲ್ಲ; ಅದು ನಮಗೆ ಪ್ರಾಪ್ತಿಯಾಯಿತೆಂದು ತಿಳುಕೊಳ್ಳಿರಿ ಅಂದರು.