Jeremiah · chapter 5 · verse 14
Jeremiah 5:14 in Kannada
ಆದ ದರಿಂದ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ಈ ಮಾತನ್ನಾಡುವದರಿಂದ ಇಗೋ, ನಾನು ನಿನ್ನ ಬಾಯಲ್ಲಿರುವ ನನ್ನ ಮಾತುಗಳನ್ನು ಬೆಂಕಿಯಾಗಿಯೂ ಈ ಜನರನ್ನು ಕಟ್ಟಿಗೆಯಾಗಿಯೂ ಮಾಡುವೆನು; ಅದು ಅವರನ್ನು ತಿಂದುಬಿಡುವದು.
Aada darinda sainyagala devaraada kartanu heege helu ttaane--neevu ee maatannaaduvadarinda igo, naanu ninna baayalliruva nanna maatugalannu benkiyaagiyoo ee janarannu kattigeyaagiyoo maaduvenu; adu avarannu tindubiduvadu.
Jeremiah 5:14 in English
- King James Version (KJV)
- Wherefore thus saith the LORD God of hosts, Because ye speak this word, behold, I will make my words in thy mouth fire, and this people wood, and it shall devour them.
- World English Bible (WEB)
- Therefore the LORD, the God of Armies says, “Because you speak this word, behold, I will make my words in your mouth fire, and this people wood, and it will devour them.
- American Standard Version (ASV)
- Wherefore thus saith Jehovah, the God of hosts, Because ye speak this word, behold, I will make my words in thy mouth fire, and this people wood, and it shall devour them.
- Bible in Basic English (BBE)
- For this reason the Lord, the God of armies, has said: Because you have said this, I will make my words in your mouth a fire, and this people wood, and they will be burned up by it.
- Darby Translation (DBY)
- Therefore thus saith Jehovah, the God of hosts: Because ye speak this word, behold, I will make my words in thy mouth fire, and this people wood, and it shall devour them.
- Webster's Bible (WBS)
- Wherefore thus saith the LORD God of hosts, Because ye speak this word, Behold, I will make my words in thy mouth fire, and this people wood, and it shall devour them.
- Young's Literal Translation (YLT)
- Therefore, thus said Jehovah, God of Hosts, Because of your speaking this word, Lo, I am making My words in thy mouth become fire, And this people wood, and it hath devoured them.
Read in context
- 12ಕರ್ತನನ್ನು ಸುಳ್ಳುಗಾರ ನನ್ನಾಗಿ ಮಾಡಿ ಅವರು--ಆತನು ಅಂಥವನಲ್ಲ; ನಮ್ಮ ಮೇಲೆ ಕೇಡುಬಾರದು; ಇಲ್ಲವೆ ಕತ್ತಿಯನ್ನಾದರೂ ಬರವನ್ನಾದರೂ ನಾವು ನೋಡುವದಿಲ್ಲ.
- 13ಪ್ರವಾದಿಗಳು ಗಾಳಿಯಾಗುವರು; ವಾಕ್ಯವು ಅವರಲ್ಲಿ ಇಲ್ಲ; ಅವರಿಗೆ ಹೀಗಾಗುವದು ಎಂದು ಹೇಳಿದ್ದಾರೆ.
- 14ಆದ ದರಿಂದ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ಈ ಮಾತನ್ನಾಡುವದರಿಂದ ಇಗೋ, ನಾನು ನಿನ್ನ ಬಾಯಲ್ಲಿರುವ ನನ್ನ ಮಾತುಗಳನ್ನು ಬೆಂಕಿಯಾಗಿಯೂ ಈ ಜನರನ್ನು ಕಟ್ಟಿಗೆಯಾಗಿಯೂ ಮಾಡುವೆನು; ಅದು ಅವರನ್ನು ತಿಂದುಬಿಡುವದು.
- 15ಇಗೋ, ಇಸ್ರಾಯೇಲ್ಯನ ಮನೆತನವೇ, ನಾನು ದೂರದಿಂದ ನಿಮ್ಮ ಮೇಲೆ ಒಂದು ಜನಾಂಗವನ್ನು ತರಿಸುತ್ತೇನೆಂದು ಕರ್ತನು ಅನ್ನುತ್ತಾನೆ. ಅದು ಬಲವಾದ ಜನಾಂಗವು ಪೂರ್ವಕಾಲದ ಜನಾಂಗವು, ಆ ಜನಾಂಗದ ಭಾಷೆಯನ್ನು ನೀನರಿಯೆ; ಇಲ್ಲವೆ ಅವರು ಹೇಳುವಂಥದ್ದು ನಿನಗೆ ತಿಳಿಯದು.
- 16ಅವರ ಬತ್ತಳಿಕೆ ತೆರೆದ ಸಮಾಧಿಯ ಹಾಗಿದೆ; ಅವರೆಲ್ಲರೂ ಪರಾಕ್ರಮ ಶಾಲಿಗಳೇ.
Cross references
- Jeremiah 23:29 ಯೆರೆಮೀಯ 23:29ನನ್ನ ವಾಕ್ಯವು ಬೆಂಕಿಯ ಹಾಗಲ್ಲವೋ ಎಂದು ಕರ್ತನು ಅನ್ನುತ್ತಾನೆ. ಅದು ಬಂಡೆಯನ್ನು ತುಂಡು ಮಾಡುವ ಸುತ್ತಿಗೆಯ ಹಾಗಲ್ಲವೋ?
- Jeremiah 1:9 ಯೆರೆಮೀಯ 1:9ಆಗ ಕರ್ತನು ಕೈಚಾಚಿ ನನ್ನ ಬಾಯಿಯನ್ನು ಮುಟ್ಟಿದನು; ನನಗೆ--ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ.
- Hosea 6:5 ಹೋಶೇಯ 6:5ಆದದರಿಂದ ನಾನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು ನನ್ನ ಬಾಯಿ ಮಾತುಗಳಿಂದ ಅವರನ್ನು ಕೊಂದುಹಾಕಿದ್ದೇನೆ; ನಿನ್ನ ನ್ಯಾಯತೀರ್ಪುಗಳು ಬೆಳಕಿನ ಹಾಗೆ ಹೊರಟವು.
- Revelation 11:5–6 ಪ್ರಕಟನೆ 11:5–6ಇವರಿಗೆ ಯಾವ ನಾದರೂ ಕೇಡನ್ನು ಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ನುಂಗಿ ಬಿಡುವದು; ಇವರಿಗೆ ಯಾವನಾದರೂ ಕೇಡನ್ನು ಉಂಟು ಮಾಡಬೇಕೆಂದಿದ್ದರೆ ಅವನು ಈ ರೀತಿಯಾಗಿ ಕೊಲೆಯಾಗಬೇಕು. ಅವರ ಪ್ರವಾದನೆಯ ದಿನ ಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹೊಡೆಯುವದಕ್ಕೂ ಅಧಿಕಾರ ಉಂಟು.
- Zechariah 1:6 ಜೆಕರ್ಯ 1:6ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
- Jeremiah 28:15–17 ಯೆರೆಮೀಯ 28:15–17ಪ್ರವಾದಿಯಾದ ಯೆರೆವಿಾಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನಂದರೆ--ಹನ ನ್ಯನೇ, ಕೇಳು; ಕರ್ತನು ನಿನ್ನನ್ನು ಕಳುಹಿಸಲಿಲ್ಲ; ನೀನು ಈ ಜನರನ್ನು ಸುಳ್ಳಿನಲ್ಲಿ ನಂಬಿಕೆ ಇಡುವಂತೆ ಮಾಡುತ್ತೀ. ಆದದರಿಂದ ಕರ್ತನು ಹೀಗೆ ಹೇಳು ತ್ತಾನೆಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿ ಬಿಡುತ್ತೇನೆ; ಈ ವರುಷ ನೀನು ಸಾಯುವಿ; ನೀನು ಕರ್ತನಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ ಅಂದನು.ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು. ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು.
- 2 Kings 1:10–14 2 ಅರಸುಗಳು 1:10–14ಅದಕ್ಕೆ ಎಲೀಯನು ಐವತ್ತು ಮಂದಿಯ ಪ್ರಧಾನನಿಗೆ ಪ್ರತ್ಯುತ್ತರವಾಗಿ--ನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ದಹಿಸಿಬಿಟ್ಟಿತು. ತಿರುಗಿ ಅರಸನು ಇವನ ಬಳಿಗೆ ಐವತ್ತು ಮಂದಿಯ ಪ್ರಧಾನ ನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಅವನು ಬಂದು ಇವನಿಗೆ--ದೇವರ ಮನುಷ್ಯನೇ, ಬೇಗ ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು. ಎಲೀಯನು ಅವರಿಗೆ ಪ್ರತ್ಯುತ್ತರವಾಗಿನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶ ದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ದೇವರ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ಸುಟ್ಟುಬಿಟ್ಟಿತು. ತಿರುಗಿ ಅವನು ಐವತ್ತು ಮಂದಿಯ ಪ್ರಧಾನನಾದ ಮೂರನೆಯವ ನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಈ ಐವತ್ತು ಮಂದಿಗೆ ಪ್ರಧಾನನಾದ ಮೂರನೆಯ ವನು ಬಂದು ಎಲೀಯನ ಮುಂದೆ ತನ್ನ ಮೊಣ ಕಾಲೂರಿಕೊಂಡು ಇವನಿಗೆ--ದೇವರ ಮನುಷ್ಯನೇ, ನೀನು ದಯೆತೋರು, ನನ್ನ ಪ್ರಾಣವೂ ನಿನ್ನ ಸೇವಕ ರಾದ ಈ ಐವತ್ತು ಮಂದಿಯ ಪ್ರಾಣಗಳೂ ನಿನ್ನ ಸಮ್ಮುಖದಲ್ಲಿ ಅಮೂಲ್ಯವಾಗಿರಲಿ. ಇಗೋ, ಬೆಂಕಿಯು ಆಕಾಶದಿಂದ ಇಳಿದು ಮೊದಲಿನ ಇಬ್ಬರು ಪ್ರಧಾನರನ್ನೂ ಅವರ ಐವತ್ತು ಮಂದಿಯನ್ನೂ ದಹಿ ಸಿಬಿಟ್ಟಿತು. ಆದರೆ ಈಗ ನನ್ನ ಪ್ರಾಣವು ನಿನ್ನ ಸಮ್ಮುಖದಲ್ಲಿ ಅಮೂಲ್ಯವಾಗಿರಲಿ ಎಂದು ಹೇಳಿ ಅವ ನನ್ನು ಬೇಡಿಕೊಂಡನು.