Jeremiah · chapter 5 · verse 26
Jeremiah 5:26 in Kannada
ನನ್ನ ಜನರಲ್ಲಿ ದುಷ್ಟರು ಸಿಕ್ಕಿದ್ದಾರೆ; ಉರುಲು ಇಡುವವನ ಹಾಗೆ ಹೊಂಚು ಹಾಕುತ್ತಾರೆ; ಬೋನು ಹಾಕಿ ಮನುಷ್ಯರನ್ನು ಹಿಡಿಯು ತ್ತಾರೆ.
Nanna janaralli dushtaru sikkiddaare; urulu iduvavana haage honchu haakuttaare; bonu haaki manushyarannu hidiyu ttaare.
Jeremiah 5:26 in English
- King James Version (KJV)
- For among my people are found wicked [men:] they lay wait, as he that setteth snares; they set a trap, they catch men.
- World English Bible (WEB)
- For wicked men are found among my people. They watch, as fowlers lie in wait. They set a trap. They catch men.
- American Standard Version (ASV)
- For among my people are found wicked men: they watch, as fowlers lie in wait; they set a trap, they catch men.
- Bible in Basic English (BBE)
- For there are sinners among my people: they keep watch, like men watching for birds; they put a net and take men in it.
- Darby Translation (DBY)
- For among my people are found wicked [men]: they lay wait, as fowlers stoop down; they set a trap, they catch men.
- Webster's Bible (WBS)
- For among my people are found wicked [men] : they lay wait, as he that setteth snares; they set a trap, they catch men.
- Young's Literal Translation (YLT)
- For the wicked have been found among My people. It looketh about the covering of snares, They have set up a trap — men they capture.
Read in context
- 24ಇಲ್ಲವೆ ತಮ್ಮ ಹೃದಯದಲ್ಲಿ--ಮುಂಗಾರು ಹಿಂಗಾರು ಮಳೆಯನ್ನು ಅದರದರ ಕಾಲದಲ್ಲಿ ನಮಗೆ ಕೊಡು ವಂಥ ಸುಗ್ಗಿಗೆ ನೇಮಕವಾದ ವಾರಗಳಲ್ಲಿ ನಮ್ಮನ್ನು ಕಾಪಾಡುವಂಥ ನಮ್ಮ ದೇವರಾದ ಕರ್ತನಿಗೆ ಭಯ ಪಡೋಣ ಎಂದು ಅಂದುಕೊಳ್ಳುವದಿಲ್ಲ.
- 25ನಿಮ್ಮ ಅಕ್ರಮಗಳು ಇವುಗಳನ್ನು ತಪ್ಪಿಸಿ ಅವೆ; ನಿಮ್ಮ ಪಾಪ ಗಳು ಒಳ್ಳೆಯವುಗಳನ್ನು ನಿಮ್ಮಿಂದ ಹಿಂದೆಳೆದಿವೆ.
- 26ನನ್ನ ಜನರಲ್ಲಿ ದುಷ್ಟರು ಸಿಕ್ಕಿದ್ದಾರೆ; ಉರುಲು ಇಡುವವನ ಹಾಗೆ ಹೊಂಚು ಹಾಕುತ್ತಾರೆ; ಬೋನು ಹಾಕಿ ಮನುಷ್ಯರನ್ನು ಹಿಡಿಯು ತ್ತಾರೆ.
- 27ಪಂಜರವು ಪಕ್ಷಿಗಳಿಂದ ತುಂಬಿರುವ ಪ್ರಕಾರ ಅವರ ಮನೆಗಳು ಮೋಸದಿಂದ ತುಂಬಿಯವೆ. ಆದದರಿಂದ ಅವರು ದೊಡ್ಡವರೂ ಐಶ್ವರ್ಯವಂತರೂ ಆಗಿದ್ದಾರೆ;
- 28ಕೊಬ್ಬಿದ್ದಾರೆ, ಪ್ರಕಾಶಿಸುತ್ತಾರೆ; ಹೌದು, ದುಷ್ಟರ ಕೃತ್ಯಗಳಿಗಿಂತ ವಿಾರಿ ಹೋಗಿದ್ದಾರೆ. ವ್ಯಾಜ್ಯ ವನ್ನು, ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವದಿಲ್ಲ; ಆದಾಗ್ಯೂ ಅವರು ಸಫಲವಾಗುತ್ತಾರೆ; ಬಡವರ ನ್ಯಾಯವನ್ನು ತೀರಿಸರು.
Cross references
- Proverbs 1:11 ಜ್ಞಾನೋಕ್ತಿಗಳು 1:11ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ.
- Psalm 64:5 ಕೀರ್ತನೆಗಳು 64:5ಕೆಟ್ಟಕಾರ್ಯದಲ್ಲಿ ಅವರು ತಮ್ಮನ್ನು ತಾವೇ ಪ್ರೋತ್ಸಾಹ ಮಾಡಿಕೊಳ್ಳುತ್ತಾರೆ; ಬಲೆಗಳನ್ನು ಒಡ್ಡು ವದಕ್ಕೆ ಮಾತನಾಡುತ್ತಾ--ನಮ್ಮನ್ನು ನೋಡುವವ ರಾರೆಂದು ಹೇಳುತ್ತಾರೆ.
- Jeremiah 18:22 ಯೆರೆಮೀಯ 18:22ನೀನು ಅಕಸ್ಮಾತ್ತಾಗಿ ಅವರ ಮೇಲೆ ಸೈನ್ಯವನ್ನು ತರಿಸುವಾಗ ಕೂಗು ಅವರ ಮನೆಗಳೊಳಗಿಂದ ಕೇಳಬರಲಿ; ನನ್ನನ್ನು ಹಿಡಿಯು ವದಕ್ಕೆ ಕುಣಿ ಅಗೆದಿದ್ದಾರೆ; ನನ್ನ ಕಾಲುಗಳಿಗೆ ಉರ್ಲು ಗಳನ್ನು ಒಡ್ಡಿದ್ದಾರೆ.ಆದಾಗ್ಯೂ ಕರ್ತನೇ, ಅವರು ನನ್ನನ್ನು ಸಾಯಿಸುವದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀನು ಬಲ್ಲೆ; ಅವರ ಅಕ್ರಮವನ್ನು ಮನ್ನಿಸಬೇಡ; ಪಾಪವನ್ನು ನಿನ್ನ ಸನ್ನಿಧಿ ಯೊಳಗಿಂದ ಅಳಿಸಿಬಿಡಬೇಡ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪದ ಕಾಲದಲ್ಲಿ ಅವರಿಗೆ ಹಾಗೆ ಮಾಡು.
- Ezekiel 22:2–12 ಯೆಹೆಜ್ಕೇಲನು 22:2–12ಈಗ ಮನುಷ್ಯ ಪುತ್ರನೇ, ನೀನು ನ್ಯಾಯತೀರಿಸುವೆಯಾ? ರಕ್ತಾಪರಾಧ ವುಳ್ಳ ಪಟ್ಟಣಕ್ಕೆ ನ್ಯಾಯತೀರಿಸುವೆಯಾ ಹೌದು ಅದರ ಅಸಹ್ಯವಾದವುಗಳನ್ನೆಲ್ಲಾ ಅದಕ್ಕೆ ತಿಳಿಸುವಿ. ನೀನು ಹೇಳಬೇಕಾದದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪಟ್ಟಣವು ಅದರ ಮಧ್ಯದಲ್ಲಿ ಅದರ ಕಾಲ ಬರುವ ಹಾಗೆ ರಕ್ತವನ್ನು ಚೆಲ್ಲುತ್ತದೆ. ತನ್ನನ್ನು ಅಶುದ್ಧ ಮಾಡುವ ಹಾಗೆ ತನ್ನಲ್ಲಿ ವಿಗ್ರಹಗಳನ್ನು ಮಾಡಿಕೊಂಡಿದೆ. ನೀನು ಚೆಲ್ಲಿದ ನಿನ್ನ ರಕ್ತದಿಂದ ನಿನಗೆ ಅಪರಾಧ ಬಂದಿತು; ನೀನು ಮಾಡಿದ ನಿನ್ನ ವಿಗ್ರಹಗಳಿಂದ ನೀನು ಅಶುದ್ಧವಾದೆ; ನಿನ್ನ ದಿನಗಳನ್ನು ಸವಿಾಪಿಸಿರುವೆ; ನಿನ್ನ ವರುಷಗಳನ್ನು ಮುಟ್ಟಿರುವೆ. ಆದದರಿಂದ ನಿನ್ನನ್ನು ಅನ್ಯಜನಾಂಗಗಳಿಗೆ ನಾಚಿಕೆ ಯಾಗಿಯೂ ಎಲ್ಲಾ ದೇಶಗಳಿಗೆ ನಿಂದೆಯಾಗಿಯೂ ಮಾಡಿದ್ದೇನೆ. ಅಶುದ್ಧ ಹೆಸರುಳ್ಳವಳೇ, ಬಹಳ ತೊಂದರೆಗೊಳಗಾದವಳೇ, ನಿನಗೆ ಹತ್ತಿರದವರೂ ದೂರದವರೂ ನಿಂದಿಸುವರು. ಇಗೋ ಇಸ್ರಾ ಯೇಲಿನ ಪ್ರಭುಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ಶಕ್ತ್ಯಾನುಸಾರವಾಗಿ ರಕ್ತವನ್ನು ನಿನ್ನ ಮೇಲೆ ಚೆಲ್ಲುತ್ತಲೇ ಇದ್ದಾನೆ. ನಿನ್ನಲ್ಲಿ ತಂದೆಯನ್ನೂ ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ; ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ; ನಿನ್ನಲ್ಲಿ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಪೀಡಿಸಿದ್ದಾರೆ. ನೀನು ನನ್ನ ಪರಿಶುದ್ಧ ಸಂಗತಿಗಳನು ತಿರಸ್ಕರಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದ್ದೀ. ನಿನ್ನಲ್ಲಿ ರಕ್ತಚೆಲ್ಲುವ ಹಾಗೆ ಚಾಡಿ ಹೇಳುವ ಜನ ಇದ್ದಾರೆ; ಬೆಟ್ಟಗಳ ಮೇಲೆ ತಿನ್ನುವವರಿದ್ದಾರೆ; ದುರಾ ಚಾರಿಗಳು ನಿನ್ನ ಮಧ್ಯದಲ್ಲಿದ್ದಾರೆ. ನಿನ್ನಲ್ಲಿ ತಂದೆಯ ಬೆತ್ತಲೆತನವನ್ನು ಹೊರಗೆಡವಿದ್ದಾರೆ; ನಿನ್ನಲ್ಲಿ ಮುಟ್ಟಾಗಿ ಪ್ರತ್ಯೇಕವಾಗಿರುವವರನ್ನು ಕೂಡಿದ್ದಾರೆ; ಒಬ್ಬನು ತನ್ನ ನೆರೆಯವನ ಹೆಂಡತಿಯ ಸಂಗಡ ದುರಾಚಾರವನ್ನು ಮಾಡಿದ್ದಾನೆ; ಮತ್ತೊಬ್ಬನು ಅಕೃತ್ಯದಿಂದ ಸೊಸೆಯನ್ನು ಕೆಡಿಸಿದ್ದಾನೆ; ಇನ್ನೊಬ್ಬನು ತನ್ನ ತಂದೆಯ ಮಗಳಾದ ತನ್ನ ಸಹೋದರಿಯನ್ನೇ ಭಂಗಪಡಿಸಿದ್ದಾನೆ. ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚತಿಂದಿದ್ದಾರೆ; ಬಡ್ಡಿಯನ್ನೂ ಲಾಭವನ್ನೂ ತೆಗೆದುಕೊಂಡಿದ್ದಾರೆ; ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭಮಾಡಿಕೊಂಡಿದ್ದಾರೆ; ನನ್ನನ್ನು ಮರೆತುಬಿಟ್ಟಿ ದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.
- Psalm 10:9–10 ಕೀರ್ತನೆಗಳು 10:9–10ಗವಿಯಲ್ಲಿರುವ ಸಿಂಹದ ಹಾಗೆ ಮರೆಯಲ್ಲಿ ಹೊಂಚು ಹಾಕುತ್ತಾನೆ; ಬಡವನನ್ನು ಹಿಡಿ ಯುವದಕ್ಕೆ ಹೊಂಚು ಹಾಕುತ್ತಾನೆ; ಬಡವನನ್ನು ತನ್ನ ಬಲೆಯಲ್ಲಿ ಎಳೆದು ಹಿಡಿಯುತ್ತಾನೆ. ಅವನು ಕುಗ್ಗಿ ಬೊಗ್ಗುತ್ತಾನೆ; ಆದದರಿಂದ ಗತಿಯಿಲ್ಲದವರು ಅವನ ಬಲದಿಂದ ಬೀಳುತ್ತಾರೆ.
- Isaiah 58:1 ಯೆಶಾಯ 58:1ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು.
- Luke 5:10 ಲೂಕನು 5:10ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರೂ ಹಾಗೆಯೇ ವಿಸ್ಮಯ ಪಟ್ಟರು. ಆಗ ಯೇಸು ಸೀಮೋನನಿಗೆ--ಹೆದರಬೇಡ. ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವಿ ಅಂದನು.
- Jeremiah 4:22 ಯೆರೆಮೀಯ 4:22ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
- Habakkuk 1:14–15 ಹಬಕ್ಕೂಕ 1:14–15ಮನುಷ್ಯರನ್ನು ಸಮುದ್ರದ ವಿಾನುಗ ಳಂತೆಯೂ ಆಳುವವನಿಲ್ಲದ ಕ್ರಿಮಿಗಳಂತೆಯೂ ಯಾಕೆ ಮಾಡುತ್ತೀ? ಅವರನ್ನೆಲ್ಲಾ ಗಾಳದಿಂದ ಎತ್ತಿ ತಮ್ಮ ಬಲೆಯಿಂದ ಅವರನ್ನು ಹಿಡಿದು ತಮ್ಮ ಜಾಲದಿಂದ ಅವರನ್ನು ಕೂಡಿಸುತ್ತಾರೆ; ಆದದರಿಂದ ಸಂತೋಷಿಸಿ ಉಲ್ಲಾಸ ಪಡುತ್ತಾರೆ.
- 1 Samuel 19:10–11 1 ಸಮುವೇಲನು 19:10–11ಆಗ ಸೌಲನು ದಾವೀದನನ್ನು ಈಟಿಯಿಂದ ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯಬೇಕೆಂದು ಯತ್ನಿಸಿದನು; ಆದರೆ ಇವನು ಸೌಲನ ಎದುರಿನಿಂದ ತಪ್ಪಿಸಿಕೊಂಡನು. ಈಟಿಯು ಗೋಡೆಯಲ್ಲಿ ಹತ್ತಿ ಕೊಳ್ಳುವಂತೆ ಅವನು ಹೊಡೆದನು. ದಾವೀದನು ಆ ರಾತ್ರಿಯಲ್ಲಿ ಓಡಿಹೋಗಿ ತಪ್ಪಿಸಿಕೊಂಡನು. ಆದರೆ ದಾವೀದನಿಗಾಗಿ ಕಾದುಕೊಂಡಿದ್ದು ಉದಯ ದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ವಿಾಕಲಳು ಅವನಿಗೆ--ನೀನು ಈ ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ ನಾಳೆ ಕೊಲ್ಲಲ್ಪಡುವಿ ಎಂದು ಹೇಳಿ
- Proverbs 1:17–18 ಜ್ಞಾನೋಕ್ತಿಗಳು 1:17–18ನಿಶ್ಚಯವಾಗಿ ಪಕ್ಷಿಯ ಕಣ್ಣೆದುರಿಗೆ ಬಲೆಯನ್ನು ಹರಡುವದು ವ್ಯರ್ಥವೇ. ಅವರು ತಮ್ಮ ಸ್ವಂತ ರಕ್ತಕ್ಕೆ ಹೊಂಚುಹಾಕುತ್ತಾರೆ; ತಮ್ಮ ಪ್ರಾಣಗಳಿಗೆ ರಹಸ್ಯವಾಗಿ ಅಡಗಿಕೊಳ್ಳುತ್ತಾರೆ.