Jeremiah · chapter 5 · verse 31
Jeremiah 5:31 in Kannada
ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
Enandare pravaadigalu sullaagi pravaadisu ttaare, yaajakaru tamma aadaayadinda doretana maaduttaare; nanna janaru adannu preeti maadu ttaare; aadare adara antyadalli neevu enu maaduviri?
Jeremiah 5:31 in English
- King James Version (KJV)
- The prophets prophesy falsely, and the priests bear rule by their means; and my people love [to have it] so: and what will ye do in the end thereof?
- World English Bible (WEB)
- The prophets prophesy falsely, and the priests rule by their own authority; and my people love to have it so. What will you do in the end of it?
- American Standard Version (ASV)
- the prophets prophesy falsely, and the priests bear rule by their means; and my people love to have it so: and what will ye do in the end thereof?
- Bible in Basic English (BBE)
- The prophets give false words and the priests give decisions by their direction; and my people are glad to have it so: and what will you do in the end?
- Darby Translation (DBY)
- the prophets prophesy falsehood, and the priests rule by their means; and my people love [to have it] so. But what will ye do in the end thereof?
- Webster's Bible (WBS)
- The prophets prophesy falsely, and the priests bear rule by their means; and my people love [to have it] so: and what will ye do in the end thereof?
- Young's Literal Translation (YLT)
- The prophets have prophesied falsely, And the priests bear rule by their means, And My people have loved [it] so, And what do they at its latter end?
Read in context
- 29ಇವುಗಳ ನಿಮಿತ್ತ ನಾನು ವಿಚಾರಿಸುವದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.
- 30ಆಶ್ಚರ್ಯವೂ ಭಯಂಕರವೂ ಆದ ಕಾರ್ಯವು ದೇಶದಲ್ಲಿ ನಡೆಯು ತ್ತದೆ,ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
- 31ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
Cross references
- Ezekiel 13:6 ಯೆಹೆಜ್ಕೇಲನು 13:6ಅವರು ವ್ಯರ್ಥವಾದದ್ದನ್ನೂ ಸುಳ್ಳು ಭವಿಷ್ಯ ವಾದದ್ದನ್ನೂ ನೋಡಿದ್ದಾರೆಂದು ಕರ್ತನು ಹೇಳುತ್ತಾನೆ; ಆದರೆ ಕರ್ತನು ಅವರನ್ನು ಕಳುಹಿಸಲಿಲ್ಲ; ತಾವು ನುಡಿದ ಮಾತು ಬೇರೆಯವರು ನಿರೀಕ್ಷಿಸುವಂತೆ ಮಾಡುತ್ತಾರೆ.
- Jeremiah 14:14 ಯೆರೆಮೀಯ 14:14ಆಗ ಕರ್ತನು ನನಗೆ ಹೇಳಿದ್ದೇನಂದರೆ --ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿ ಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವ ರಿಗೆ ಆಜ್ಞೆ ಕೊಡಲಿಲ್ಲ; ಅವರ ಸಂಗಡ ಮಾತಾಡ ಲಿಲ್ಲ; ಸುಳ್ಳಿನ ದರ್ಶನವನ್ನೂ ಶಕುನವನ್ನೂ ಶೂನ್ಯ ವನ್ನೂ ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.
- Micah 2:11 ಮೀಕ 2:11ಒಬ್ಬನು ಆತ್ಮದಲ್ಲಿಯೂ ವಂಚನೆಯಲ್ಲಿಯೂ ನಡೆದು ಸುಳ್ಳು ಹೇಳಿ--ನಿನಗೆ ದ್ರಾಕ್ಷಾರಸವನ್ನೂ ಮತ್ತಾಗುವದನ್ನೂ ಕುರಿತು ಪ್ರವಾದಿಸುವೆನೆಂದು ಹೇಳಿ ದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.
- 2 Timothy 4:3–4 2 ತಿಮೊಥೆಯನಿಗೆ 4:3–4ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು. ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು.
- 2 Thessalonians 2:9–11 2 ಥೆಸಲೊನೀಕದವರಿಗೆ 2:9–11ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ. ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ.
- 2 Corinthians 11:13–15 2 ಕೊರಿಂಥದವರಿಗೆ 11:13–15ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ. ಇದೇನೂ ಆಶ್ಚರ್ಯವಲ್ಲ; ಯಾಕಂದರೆ ಸೈತಾನನು ಬೆಳಕಿನ ದೂತನಂತೆ ಕಾಣಿಸಿಕೊಳ್ಳುವ ಹಾಗೆ ತನ್ನನ್ನು ತಾನೇ ಮಾರ್ಪಡಿಸಿಕೊಳ್ಳುತ್ತಾನೆ. ಅವನ ಸೇವಕರು ಸಹ ನೀತಿಗೆ ಸೇವಕರಾಗಿ ಕಾಣಿಸಿಕೊಳ್ಳುವದಕ್ಕೆ ಮಾರ್ಪಡಿಸಿಕೊಳ್ಳುವದು ದೊಡ್ಡ ದಲ್ಲ. ಅವರ ಅಂತ್ಯವು ಅವರ ಕೃತ್ಯಗಳಿಗೆ ತಕ್ಕ ಹಾಗೆಯೇ ಆಗುವದು.
- Deuteronomy 32:29 ಧರ್ಮೋಪದೇಶಕಾಂಡ 32:29ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು!
- Ezekiel 22:14 ಯೆಹೆಜ್ಕೇಲನು 22:14ನಾನು ನಿನ್ನೊಳಗೆ ಕೆಲಸ ನಡೆಸುವ ದಿವಸಗಳಲ್ಲಿ ನಿನ್ನ ಹೃದಯವು ನಿಲ್ಲುವದೋ? ನಿನ್ನ ಕೈಗಳು ಬಲವಾಗಿರುವವೋ? ಕರ್ತನಾದ ನಾನೇ ಹೇಳಿದ್ದೇನೆ, ನಾನೇ ಅದನ್ನು ಮಾಡುತ್ತೇನೆ.
- Zephaniah 2:2–3 ಚೆಫನ್ಯ 2:2–3ನಿರ್ಣಯವು ಬರುವದಕ್ಕಿಂತ ಮುಂಚೆ ಯೂ ದಿನವು ಹೊಟ್ಟಿನಂತೆ ಹಾದುಹೋಗುವದಕ್ಕಿಂತ ಮುಂಚೆಯೂ ಕರ್ತನ ಕೋಪದ ದಿನವು ಉರಿದು ನಿಮ್ಮ ಮೇಲೆ ಬರುವದಕ್ಕಿಂತ ಮುಂಚೆಯೂ ಕೂಡಿ ಕೊಳ್ಳಿರಿ. ಆತನ ನ್ಯಾಯತೀರ್ಪುಗಳನ್ನು ಮಾಡುವ ಲೋಕದ ದೀನರೆಲ್ಲರೇ, ಕರ್ತನನ್ನು ಹುಡುಕಿರಿ, ನೀತಿ ಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ; ಒಂದು ವೇಳೆ ಕರ್ತನ ಕೋಪದ ದಿನದಲ್ಲಿ ಮರೆಯಾಗುವಿರಿ.
- John 3:19–21 ಯೋಹಾನನು 3:19–21ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು. ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ. ಆದರೆ ಸತ್ಯವನ್ನು ಅನುಸರಿಸುವವನು ತನ್ನ ಕೃತ್ಯಗಳು ದೇವರಿಂದ ಮಾಡಲ್ಪಟ್ಟವುಗಳೆಂದು ಪ್ರಕಟವಾಗು ವಂತೆ ಬೆಳಕಿಗೆ ಬರುತ್ತಾನೆ ಎಂದು ಹೇಳಿದನು.
- Isaiah 10:3 ಯೆಶಾಯ 10:3ವಿಚಾರಣೆಯ ದಿನದಲ್ಲಿಯೂ ದೂರ ದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡು ವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ವೈಭವವನ್ನು ಎಲ್ಲಿ ಬಿಡುವಿರಿ?
- 2 Peter 2:1–2 2 ಪೇತ್ರನು 2:1–2ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು.