Jeremiah · chapter 5 · verse 4
Jeremiah 5:4 in Kannada
ಆದದರಿಂದ ನಾನು--ನಿಶ್ಚಯವಾಗಿ ಇವರು ಬಡವರು, ಬುದ್ಧಿ ಹೀನರು; ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ಅರಿಯರು.
Aadadarinda naanu--nishchayavaagi ivaru badavaru, buddhi heenaru; kartana maargavannoo tamma devara nyaayateerpannoo ariyaru.
Jeremiah 5:4 in English
- King James Version (KJV)
- Therefore I said, Surely these [are] poor; they are foolish: for they know not the way of the LORD, [nor] the judgment of their God.
- World English Bible (WEB)
- Then I said, “Surely these are poor. They are foolish; for they don’t know the LORD’s way, nor the law of their God.
- American Standard Version (ASV)
- Then I said, Surely these are poor; they are foolish; for they know not the way of Jehovah, nor the law of their God:
- Bible in Basic English (BBE)
- Then I said, But these are the poor: they are foolish, for they have no knowledge of the way of the Lord or of the behaviour desired by their God.
- Darby Translation (DBY)
- And I said, Surely these are the wretched ones, they are foolish; for they know not the way of Jehovah, the judgment of their God.
- Webster's Bible (WBS)
- Therefore I said, Surely these [are] poor; they are foolish: for they know not the way of the LORD, [nor] the judgment of their God.
- Young's Literal Translation (YLT)
- And I — I said, 'Surely these [are] poor, They have been foolish, For they have not known the way of Jehovah, The judgment of their God.
Read in context
- 2ಅವರು--ಕರ್ತನು ಜೀವಿಸುತ್ತಾನೆಂದು ಹೇಳಿದರೂ ನಿಶ್ಚಯವಾಗಿ ಸುಳ್ಳಾಗಿಯೇ ಅವರು ಆಣೆ ಇಡುತ್ತಾರೆ.
- 3ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.
- 4ಆದದರಿಂದ ನಾನು--ನಿಶ್ಚಯವಾಗಿ ಇವರು ಬಡವರು, ಬುದ್ಧಿ ಹೀನರು; ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ಅರಿಯರು.
- 5ನಾನು ದೊಡ್ಡವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡು ವೆನು; ಅವರು ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ತಿಳಿದಿದ್ದಾರೆ; ಆದರೆ ಇವರು ಕೂಡ ನೊಗವನ್ನು ಮುರಿದು ಬಂಧನಗಳನ್ನು ಹರಿದು ಬಿಟ್ಟಿದ್ದಾರೆ.
- 6ಹೀಗಿರುವದರಿಂದ ಅಡವಿಯ ಸಿಂಹವು ಅವರನ್ನು ಕೊಲ್ಲುವದು; ಸಂಜೆಯ ತೋಳವು ಅವರನ್ನು ಸೂರೆ ಮಾಡುವದು; ಚಿರತೆ ಅವರ ಪಟ್ಟಣಗಳ ಮೇಲೆ ಕಾವಲಾಗಿರುವದು; ಅಲ್ಲಿಂದ ಹೊರಗೆ ಬರುವವ ರೆಲ್ಲರೂ ಸೀಳಲ್ಪಡುವರು; ಅವರ ದ್ರೋಹಗಳು ಬಹಳವಾಗಿವೆ; ಅವರ ಹಿಂತಿರುಗುವಿಕೆಯು ಹೆಚ್ಚಾಗಿದೆ.
Cross references
- Jeremiah 8:7 ಯೆರೆಮೀಯ 8:7ಹೌದು, ಆಕಾಶ ದಲ್ಲಿ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿ ಯುತ್ತದೆ; ಪಾರಿವಾಳವೂ ಬಾನಕ್ಕಿಯೂ ಕೊಕ್ಕರೆಯೂ ತಾವು ಬರತಕ್ಕ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಕರ್ತನ ನ್ಯಾಯ ತೀರ್ಪನ್ನು ಅರಿಯರು.
- Hosea 4:6 ಹೋಶೇಯ 4:6ನನ್ನ ಜನರು ತಿಳುವಳಿ ಕೆಯ ಕೊರತೆಯಿಂದ ನಾಶವಾಗಿದ್ದಾರೆ; ಆದಕಾರಣ ನೀನು ತಿಳುವಳಿಕೆಯನ್ನು ತಳ್ಳಿಬಿಟ್ಟದ್ದರಿಂದ ನಾನು ಸಹ ನನಗೆ ಯಾಜಕನಾಗದಂತೆ ನಿನ್ನನ್ನು ತಳ್ಳಿಬಿಡುತ್ತೇನೆ; ನೀನು ನಿನ್ನ ದೇವರ ನ್ಯಾಯಪ್ರಮಾಣವನ್ನು ಮರೆತು ಬಿಟ್ಟಿದ್ದರಿಂದ ನಾನು ಸಹ ನಿನ್ನ ಮಕ್ಕಳನ್ನು ಮರೆತು ಬಿಡುವೆನು.
- Isaiah 28:9–13 ಯೆಶಾಯ 28:9–13ಈತನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಯಾರಿಗೆ ಬೋಧನೆಯನ್ನು ತಿಳುಕೊಳ್ಳುವ ಹಾಗೆ ಮಾಡುತ್ತಾನೆ? ಮೊಲೆಬಿಟ್ಟ ಕೂಸುಗಳಿಗೋ? ಎದೆ ಬಿಟ್ಟ ಮಕ್ಕಳಿಗೋ? ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಅಲ್ಲಿ ಸ್ವಲ್ಪ. ಇಲ್ಲಿ ಸ್ವಲ್ಪ. ತೊದಲು ಮಾತಿನವರು ಅನ್ಯಭಾಷಿಗಳು ಇವರ ಮೂಲಕವಾಗಿಯೇ ಆತನು ಈ ಜನರ ಸಂಗಡ ಮಾತನಾಡುತ್ತಾನೆ. ಆತನು ಮೊದಲು--ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ. ಬಳಲಿದವರನ್ನು ವಿಶ್ರಮಗೊಳಿಸಿರಿ, ನಿಮಗೆ ಅನುಕೂಲವಾದ ಉಪ ಶಮನ ಇದೇ ಎಂದು ಹೇಳಿದಾಗ್ಯೂ ಅವರು ಕೇಳ ಲಿಲ್ಲ. ಆದರೆ ಅವರು ಹೋಗಿ ಹಿಂದಕ್ಕೆ ಎಡವಿ ಮುರಿದುಕೊಳ್ಳುವ ಹಾಗೆಯೂ ಬೋನಿನಲ್ಲಿ ಹಿಡಿ ಯಲ್ಪಟ್ಟು ಸಿಕ್ಕಿಬೀಳುವ ಹಾಗೆಯೂ ಕರ್ತನ ವಾಕ್ಯವು ಅವರಿಗೆ ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ ಇರುವದು.
- Matthew 11:5 ಮತ್ತಾಯನು 11:5ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
- Jeremiah 4:22 ಯೆರೆಮೀಯ 4:22ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
- Isaiah 27:11 ಯೆಶಾಯ 27:11ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.
- John 7:48–49 ಯೋಹಾನನು 7:48–49ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಅವನ ಮೇಲೆ ವಿಶ್ವಾಸವಿಟ್ಟಿದ್ದಾರೋ? ಆದರೆ ನ್ಯಾಯಪ್ರಮಾಣ ವನ್ನರಿಯದ ಈ ಜನರು ಶಾಪಗ್ರಸ್ತರೇ ಎಂದು ಹೇಳಿದರು.
- Jeremiah 7:8 ಯೆರೆಮೀಯ 7:8ಇಗೋ, ನೀವು ಪ್ರಯೋಜನವಿಲ್ಲದ ಸುಳ್ಳಾದ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ.