Jeremiah · chapter 50 · verse 13
Jeremiah 50:13 in Kannada
ಕರ್ತನ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವದಿಲ್ಲ; ಸಂಪೂರ್ಣ ಹಾಳಾಗುವದು ಬಾಬೆಲನ್ನು ಹಾದುಹೋಗುವವ ರೆಲ್ಲರು ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.
Kartana raudrada nimitta adaralli yaaroo vaasamaaduvadilla; sampoorna haalaaguvadu baabelannu haaduhoguvava rellaru adara ellaa baadhegala vishaya vismayapattu silliduvaru.
Jeremiah 50:13 in English
- King James Version (KJV)
- Because of the wrath of the LORD it shall not be inhabited, but it shall be wholly desolate: every one that goeth by Babylon shall be astonished, and hiss at all her plagues.
- World English Bible (WEB)
- Because of the LORD’s wrath she won’t be inhabited, but she will be wholly desolate. Everyone who goes by Babylon will be astonished, and hiss at all her plagues.
- American Standard Version (ASV)
- Because of the wrath of Jehovah she shall not be inhabited, but she shall be wholly desolate: every one that goeth by Babylon shall be astonished, and hiss at all her plagues.
- Bible in Basic English (BBE)
- Because of the wrath of the Lord no one will be living in it, and it will be quite unpeopled: everyone who goes by Babylon will be overcome with wonder, and make sounds of fear at all her punishments.
- Darby Translation (DBY)
- Because of the wrath of Jehovah, it shall not be inhabited, but it shall be wholly desolate; every one that goeth by Babylon shall be astonished, and shall hiss, because of all her plagues.
- Webster's Bible (WBS)
- Because of the wrath of the LORD it shall not be inhabited, but it shall be wholly desolate: every one that goeth by Babylon shall be astonished, and hiss at all her plagues.
- Young's Literal Translation (YLT)
- Because of the wrath of Jehovah it is not inhabited, And it hath been a desolation — all of it. Every passer by at Babylon is astonished, And doth hiss because of all her plagues.
Read in context
- 11ನನ್ನ ಸ್ವಾಸ್ತ್ಯವನ್ನು ನಾಶಮಾಡಿದವರೇ, ನೀವು ಸಂತೋಷಿಸಿದ್ದರಿಂದಲೂ ಉಲ್ಲಾಸಿಸಿದ್ದರಿಂದಲೂ ಕೊಬ್ಬಿದ ಕಡಸಿನ ಹಾಗೆ ಗರ್ವಪಟ್ಟದ್ದರಿಂದಲೂ ಹೋರಿಗಳ ಹಾಗೆ ಹೂಂಕರಿಸಿದ್ದರಿಂದಲೂ
- 12ನಿಮ್ಮ ತಾಯಿ ಬಹಳವಾಗಿ ನಾಚಿಕೆಪಡುವಳು; ನಿಮ್ಮನ್ನು ಹೆತ್ತವಳು ಲಜ್ಜೆ ಹೊಂದುವಳು; ಇಗೋ, ಜನಾಂಗ ಗಳಲ್ಲಿ ಅಂತ್ಯವಾದದ್ದು ಕಾಡೂ ಒಣ ಭೂಮಿಯೂ ಅರಣ್ಯವೂ ಆಗುವದು.
- 13ಕರ್ತನ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವದಿಲ್ಲ; ಸಂಪೂರ್ಣ ಹಾಳಾಗುವದು ಬಾಬೆಲನ್ನು ಹಾದುಹೋಗುವವ ರೆಲ್ಲರು ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.
- 14ಬಿಲ್ಲನ್ನು ಬೊಗ್ಗಿಸುವವರೆಲ್ಲರೇ, ಬಾಬೆಲಿಗೆ ವಿರೋಧವಾಗಿ ಸುತ್ತಲೂ ಯುದ್ಧವನ್ನು ಸಿದ್ಧಮಾಡಿರಿ. ಬಾಣಗಳನ್ನು ಅದಕ್ಕೆ ಎಸೆಯಿರಿ; ಕಡಿಮೆ ಮಾಡಬೇಡಿರಿ; ಅದು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆ.
- 15ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಒಳಪಟ್ಟಿತು; ಅದರ ಅಸ್ತಿವಾರಗಳು ಬಿದ್ದು ಹೋದವು; ಅದರ ಗೋಡೆಗಳು ಕೆಡವಲ್ಪಟ್ಟವು; ಅದು ಕರ್ತನ ಪ್ರತಿದಂಡನೆಯೇ, ಅದರಿಂದ ಪ್ರತಿ ದಂಡನೆ ತಕ್ಕೊಳ್ಳಿರಿ. ಅದು ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ.
Cross references
- Jeremiah 18:16 ಯೆರೆಮೀಯ 18:16ಹೀಗೆ ತಮ್ಮ ದೇಶವನ್ನು ಹಾಳಾಗಿಯೂ ನಿತ್ಯವಾದ ಹಾಸ್ಯಾಸ್ಪದವಾ ಗಿಯೂ ಮಾಡಿದ್ದಾರೆ. ಅದನ್ನು ಹಾದು ಹೋಗುವವ ರೆಲ್ಲರು ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.
- Jeremiah 49:17 ಯೆರೆಮೀಯ 49:17ಎದೋಮು ಸಹ ಹಾಳಾಗುವದು; ಅದರ ಬಳಿಯಲ್ಲಿ ಹಾದು ಹೋಗುವವರೆಲ್ಲರೂ ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.
- Job 27:23 ಯೋಬನು 27:23ಜನರು ಅವನ ಕಡೆಗೆ ಚಪ್ಪಾಳೆ ತಟ್ಟುತ್ತಾರೆ. ಅವನ ಸ್ಥಳದೊಳಗಿಂದ ಅವನನ್ನು ಛೇ ಎಂದು ಹೊರಡಿಸುತ್ತಾರೆ.
- Jeremiah 25:12 ಯೆರೆಮೀಯ 25:12ಎಪ್ಪತ್ತು ವರುಷ ತುಂಬಿದ ಮೇಲೆ ನಾನು ಬಾಬೆಲಿನ ಅರಸನನ್ನೂ ಆ ಜನಾಂಗವನ್ನೂ ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು.
- Zechariah 1:15 ಜೆಕರ್ಯ 1:15ನಿಶ್ಚಿಂತೆ ಯುಳ್ಳವರಾಗಿರುವ ಅನ್ಯಜನಾಂಗದ ಮೇಲೆ ನಾನು ಬಹಳ ಕೋಪಿಸಿಕೊಂಡಿದ್ದೇನೆ. ನಾನು ಸ್ವಲ್ಪ ಕೋಪ ಮಾಡಿಕೊಂಡಾಗ ಅವರು ಸಂಕಟಕ್ಕೆ ಸಹಾಯಮಾಡಿ ದರು.
- Zephaniah 2:15 ಚೆಫನ್ಯ 2:15ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.
- Lamentations 2:15–16 ಪ್ರಲಾಪಗಳು 2:15–16ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ? ನಿನ್ನ ಎಲ್ಲಾ ಶತ್ರುಗಳು ನಿನಗೆ ವಿರೋಧವಾಗಿ ತಮ್ಮ ಬಾಯಿ ತೆರೆದಿದ್ದಾರೆ; ಅವರು ಸಿಳ್ಳು ಹಾಕಿ ಹಲ್ಲು ಕಡಿಯುತ್ತಾ--ನಾವು ಅವಳನ್ನು ನುಂಗಿ ಬಿಟ್ಟಿದ್ದೇವೆ; ನಿಶ್ಚಯವಾಗಿ ನಾವು ನಿರೀಕ್ಷಿಸಿದ ದಿನವು ಇದೇ; ಅದನ್ನು ನಾವು ಕಂಡಿದ್ದೇವೆ; ನೋಡಿ ದ್ದೇವೆ ಎಂದು ಅವರು ಹೇಳುತ್ತಾರೆ.
- Habakkuk 2:6–18 ಹಬಕ್ಕೂಕ 2:6–18ಇವರೆಲ್ಲರು ಅವನ ಮೇಲೆ ಸಾಮ್ಯವನ್ನೂ ಹಾಸ್ಯದ ಸಾಮತಿಯನ್ನೂ ಎತ್ತಿ--ತನಗಲ್ಲದ್ದನ್ನು ಹೆಚ್ಚಿಸಿಕೊಳ್ಳು ವವನಿಗೆ ಅಯ್ಯೋ! ಅದು ಎಷ್ಟರ ವರೆಗೆ? ತಾನಾಗಿ ತನ್ನ ಮೇಲೆ ಗಟ್ಟಿ ಮಣ್ಣನ್ನು ಹೊತ್ತುಕೊಳ್ಳುವವನಿಗೆ ಅಯ್ಯೋ ಎಂದು ಹೇಳರೋ? ನಿನ್ನನ್ನು ಕಚ್ಚುವವರು ಕ್ಷಣಮಾತ್ರದಲ್ಲಿ ಏಳರೋ? ನಿನ್ನನ್ನು ಪೀಡಿಸುವವರು ಎಚ್ಚರವಾಗರೋ? ಆಗ ನೀನು ಅವರಿಗೆ ಸುಲಿಗೆ ಯಾಗುವಿ. ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು; ಮನುಷ್ಯರ ರಕ್ತಕ್ಕಾಗಿ ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಬಲಾತ್ಕಾರದ ನಿಮಿತ್ತವೇ. ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ! ಅನೇಕ ಜನಗಳನ್ನು ಕಡಿದುಬಿಡುವದರಿಂದ ನಿನ್ನ ಮನೆಗೆ ನಾಚಿಕೆಯನ್ನು ಯೋಚಿಸಿದ್ದೀ; ಸ್ವಂತ ಪ್ರಾಣಕ್ಕೆ ವಿರೋಧವಾಗಿ ಪಾಪಮಾಡಿದ್ದೀ. ಗೋಡೆಯೊಳ ಗಿಂದ ಕಲ್ಲು ಕೂಗುತ್ತದೆ. ಮರದ ತೊಲೆ ಅದಕ್ಕೆ ಉತ್ತರ ಕೊಡುತ್ತದೆ. ಊರನ್ನು ರಕ್ತದಿಂದ ಕಟ್ಟಿ, ಪಟ್ಟಣವನ್ನು ಅನ್ಯಾಯ ದಿಂದ ಸ್ಥಾಪಿಸುವವನಿಗೆ ಅಯ್ಯೋ! ಇಗೋ, ಇದು ಸೈನ್ಯಗಳ ಕರ್ತನಿಂದ ಅಲ್ಲವೋ? ಏನಂದರೆ, ಜನರು ಬೆಂಕಿಗೋಸ್ಕರ ಪರಿಶ್ರಮಪಟ್ಟ ವ್ಯರ್ಥಕ್ಕೋಸ್ಕರ ಆಯಾಸಪಡುವದೇ. ನೀರುಗಳು ಸಮುದ್ರವನ್ನು ಮುಚ್ಚುವ ಪ್ರಕಾರ ಭೂಮಿಯು ಕರ್ತನ ಮಹಿಮೆಯ ತಿಳುವಳಿಕೆಯಿಂದ ತುಂಬಿರುವದು. ತನ್ನ ನೆರೆಯವ ನಿಗೆ ಕುಡಿಯಕೊಟ್ಟು ನಿನ್ನ ಬುಟ್ಟಿಯನ್ನು ಹೊಯಿದು ಅವರ ಬೆತ್ತಲೆತನವನ್ನು ನೋಡುವ ಹಾಗೆ ಅಮಲೇರಿ ಸುವವನಿಗೆ ಅಯ್ಯೋ! ಘನತೆಗೆ ಬದಲಾಗಿ ನಿಂದೆ ಯಿಂದ ತುಂಬಿದ್ದೀ; ನೀನು ಸಹ ಕುಡಿದು ನಿನ್ನ ಮುಂದೊಗಲು ಮುಚ್ಚಲ್ಪಡದಿರಲಿ. ಕರ್ತನ ಬಲಗೈಯ ಪಾತ್ರೆ ನಿನ್ನ ಕಡೆಗೆ ತಿರುಗುವದು. ನಿನ್ನ ಘನತೆಯ ಮೇಲೆ ಕಾರುವಿಕೆಯೂ ಲಜ್ಜೆಯೂ ಇರುವದು. ಲೆಬನೋನಿನ ಹಿಂಸೆಯು ನಿನ್ನನ್ನು ಮುಚ್ಚುವದು; ಮೃಗಗಳ ಸೂರೆ ನಿನ್ನನ್ನು ಹೆದರಿಸುವದು; ಮನುಷ್ಯರ ರಕ್ತಕ್ಕಾಗಿ, ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಹಿಂಸೆಯು ನಿಮಿತ್ತವೇ. ಅದನ್ನು ಕೆತ್ತಿ ರೂಪಿಸಿದವನ ಕೆತ್ತಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ, ಅದನ್ನು ರೂಪಿಸಿದವನು ಮೂಕ ಬೊಂಬೆಗಳನ್ನು ಮಾಡಿ ಅದರಲ್ಲಿ ನಂಬಿಕೆಯಿಡು ವಂಥ, ಎರಕದ ವಿಗ್ರಹದಿಂದ ಪ್ರಯೋಜನವೇನು?
- Jeremiah 19:8 ಯೆರೆಮೀಯ 19:8ಈ ಪಟ್ಟಣಗಳನ್ನು ಹಾಳಾಗಿಯೂ ತಿರಸ್ಕರಿಸಲ್ಪಡುವಂತೆಯೂ ಮಾಡುವೆನು; ಅದನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಹೊಂದಿ ಸಿಳ್ಳು ಹಾಕುವರು.
- Isaiah 14:4–17 ಯೆಶಾಯ 14:4–17ಹೀಗೆ ಹಿಂಸಕನು ಕೊನೆ ಗೊಂಡನು, ಬಂಗಾರದ ಪಟ್ಟಣವು ಸುಮ್ಮನೆ ಇದೆ. ಜನರನ್ನು ಉಗ್ರಕೋಪದಿಂದ ಎಡೆಬಿಡದೆ ಹೊಡೆ ದು ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ ಆಳುತ್ತಿದ್ದ ದುಷ್ಟರ ಕೋಲನ್ನೂ ರಾಜರ ದಂಡವನ್ನೂ ಕರ್ತನು ಮುರಿದುಬಿಟ್ಟಿದ್ದಾನೆ. ಯಾವನೂ ಅಡ್ಡಿ ಮಾಡನು. ಭೂಲೋಕವೆಲ್ಲಾ ಶಾಂತವಾಗಿ ವಿಶ್ರಾಂತಿ ಗೊಂಡಿದೆ. ಅವರು ಉತ್ಸಾಹಧ್ವನಿಯನ್ನು ಎತ್ತುತ್ತಾರೆ. ಹೌದು, ತುರಾಯಿ ಮರಗಳೂ ಲೆಬನೋನಿನ ದೇವದಾರು ಮರಗಳೂ ನೀನು ಬಿದ್ದಂದಿನಿಂದ ಕಡಿಯುವವನು ಯಾವನೂ ತಮ್ಮ ಮೇಲೆ ಬರಲಿಲ್ಲವೆಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ. ನಿನಗೋ ಸ್ಕರ ನಿನ್ನ ಬರೋಣವನ್ನು ಎದುರುಗೊಳ್ಳುವದಕ್ಕೆ ಪಾತಾಳವು ಕೆಳಗಿನಿಂದ ತಳಮಳಪಡುತ್ತದೆ. ಸತ್ತವ ರನ್ನೂ ಅಂದರೆ, ಭೂಲೋಕದ ಮುಖಂಡರಾಗಿದ್ದವರೆ ಲ್ಲರನ್ನೂ ಕಲಕಿ (ಎಚ್ಚರಿಸಿ) ಜನಾಂಗಗಳ ಎಲ್ಲಾ ರಾಜ ರುಗಳನ್ನು ಅವರ ಸಿಂಹಾಸನಗಳಿಂದ ಎಬ್ಬಿಸುತ್ತದೆ. ಅವರೆಲ್ಲರು ನಿನಗೆ--ನಮ್ಮ ಹಾಗೆ ನೀನು ಸಹ ಬಲಹೀನನಾಗಿದ್ದೀ, ನೀನು ನಮ್ಮ ಸಮಾನನಾಗಿದ್ದೀ ಎಂದು ಮಾತಾಡಿ ಹೇಳುವರು. ನಿನ್ನ ವೈಭವವೂ ವೀಣೆಗಳ ಸ್ವರವೂ ಸಮಾಧಿಗೆ ಇಳಿಸಲ್ಪಟ್ಟಿವೆ. ನಿನಗೆ ಹುಳುಗಳೇ ಹಾಸಿಗೆ, ನಿನ್ನ ಹೊದಿಕೆಯು ಕ್ರಿಮಿಗಳೇ; ಓ ಲೂಸಿಫರ್ ಉದಯದ ಮಗನೇ. ಆಕಾಶದಿಂದ ನೀನು ಹೇಗೆ ಬಿದ್ದೀ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಕಡಿಯಲ್ಪಟ್ಟಿದ್ದೀ? ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು. ಉನ್ನತವಾದ ಮೇಘ ಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುತ್ತೇನೆ ಅಂದು ಕೊಂಡಿದ್ದೆಯಲ್ಲಾ; ಆದಾಗ್ಯೂ ಪಾತಾಳದ ಕುಣಿಯ ಪಾರ್ಶ್ವಗಳಿಗೆ ಇಳಿಸಲ್ಪಡುವಿ. ನಿನ್ನನ್ನು ನೋಡುವ ವರು ನಿನ್ನನ್ನು ಸೂಕ್ಷ್ಮವಾಗಿ ದೃಷ್ಟಿಸಿ ಯೋಚಿಸುತ್ತಾ --ಭೂಮಿಯನ್ನು ನಡುಗಿಸಿ ರಾಜ್ಯಗಳನ್ನು ಕದಲಿಸಿ ಪಟ್ಟಣವನ್ನು ನಾಶಮಾಡಿ ಲೋಕವನ್ನು ಕಾಡ ನ್ನಾಗಿ ಮಾಡಿ ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದ ವನು ಈ ಮನುಷ್ಯನೋ ಎಂದು ಅಂದುಕೊಳ್ಳುವರು.
- Jeremiah 51:37 ಯೆರೆಮೀಯ 51:37ಬಾಬೆಲ್ ದಿಬ್ಬೆಗಳಾಗುವದು; ನಿವಾಸಿಗಳು ಇಲ್ಲದೆ ನರಿಗಳ ವಾಸಸ್ಥಳವೂ ಆಶ್ಚರ್ಯವೂ ಹಾಳೂ ಸಿಳ್ಳಿಡುವಿಕೆಯೂ ಆಗುವದು.