Jeremiah · chapter 50 · verse 17
Jeremiah 50:17 in Kannada
ಇಸ್ರಾಯೇಲನು ಚದರಿಹೋದ ಕುರಿಯಾಗಿ ದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಶ್ಶೂರಿನ ಅರಸನು ಅವನನ್ನು ನುಂಗಿಬಿಟ್ಟನು. ಕಡೆಯಲ್ಲಿ ಬಾಬೆಲಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.
Israayelanu chadarihoda kuriyaagi ddanu; sinhagalu avanannu odisibittavu; modalu ashshoorina arasanu avanannu nungibittanu. Kadeyalli baabelina arasanaada ee nebookadnechcharanu avana elubugalannu murididdaane.
Jeremiah 50:17 in English
- King James Version (KJV)
- Israel [is] a scattered sheep; the lions have driven [him] away: first the king of Assyria hath devoured him; and last this Nebuchadrezzar king of Babylon hath broken his bones.
- World English Bible (WEB)
- “Israel is a hunted sheep. The lions have driven him away. First, the king of Assyria devoured him, and now at last Nebuchadnezzar king of Babylon has broken his bones.”
- American Standard Version (ASV)
- Israel is a hunted sheep; the lions have driven him away: first, the king of Assyria devoured him; and now at last Nebuchadrezzar king of Babylon hath broken his bones.
- Bible in Basic English (BBE)
- Israel is a wandering sheep; the lions have been driving him away: first he was attacked by the king of Assyria, and now his bones have been broken by Nebuchadrezzar, king of Babylon.
- Darby Translation (DBY)
- Israel is a hunted sheep; the lions have driven him away: first the king of Assyria devoured him, and last this Nebuchadrezzar king of Babylon hath broken his bones.
- Webster's Bible (WBS)
- Israel [is] a scattered sheep; the lions have driven [him] away: first the king of Assyria hath devoured him; and last this Nebuchadrezzar king of Babylon hath broken his bones.
- Young's Literal Translation (YLT)
- A scattered sheep is Israel, lions have driven away, At first, devour him did the king of Asshur, And now, at last, broken his bone Hath Nebuchadrezzar king of Babylon.
Read in context
- 15ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಒಳಪಟ್ಟಿತು; ಅದರ ಅಸ್ತಿವಾರಗಳು ಬಿದ್ದು ಹೋದವು; ಅದರ ಗೋಡೆಗಳು ಕೆಡವಲ್ಪಟ್ಟವು; ಅದು ಕರ್ತನ ಪ್ರತಿದಂಡನೆಯೇ, ಅದರಿಂದ ಪ್ರತಿ ದಂಡನೆ ತಕ್ಕೊಳ್ಳಿರಿ. ಅದು ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ.
- 16ಬಿತ್ತುವವನನ್ನೂ ಸುಗ್ಗಿ ಕಾಲದಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನೊಳ ಗಿಂದ ಕಡಿದು ಬಿಡಿರಿ; ಕಷ್ಟಪಡಿಸುವ ಕತ್ತಿಯ ಭಯದಿಂದ ಅವರು ತಮ್ಮ ತಮ್ಮ ಜನರ ಬಳಿಗೆ ತಿರುಗಿಕೊಳ್ಳುವರು; ತಮ್ಮ ತಮ್ಮ ದೇಶಗಳಿಗೆ ಓಡಿ ಹೋಗುವರು.
- 17ಇಸ್ರಾಯೇಲನು ಚದರಿಹೋದ ಕುರಿಯಾಗಿ ದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಶ್ಶೂರಿನ ಅರಸನು ಅವನನ್ನು ನುಂಗಿಬಿಟ್ಟನು. ಕಡೆಯಲ್ಲಿ ಬಾಬೆಲಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.
- 18ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅಶ್ಶೂರಿನ ಅರಸನನ್ನು ಶಿಕ್ಷಿಸಿದ ಹಾಗೆ, ಬಾಬೆಲಿನ ಅರಸನನ್ನೂ ಅವನ ದೇಶವನ್ನೂ ಶಿಕ್ಷಿಸುತ್ತೇನೆ.
- 19ಇಸ್ರಾಯೇಲನನ್ನು ಅವನ ನಿವಾಸಕ್ಕೆ ತಿರಿಗಿ ಬರಮಾಡುತ್ತೇನೆ; ಅವನು ಕರ್ಮೆಲಿ ನಲ್ಲಿಯೂ ಬಾಷಾನಿನ್ನಲ್ಲಿಯೂ ಮೇಯುವನು; ಅವನ ಪ್ರಾಣವು ಎಫ್ರಾಯಿಮ್ ಬೆಟ್ಟದಲ್ಲಿಯೂ ಗಿಲ್ಯಾದಿ ನಲ್ಲಿಯೂ ತೃಪ್ತಿಹೊಂದುವದು.
Cross references
- Jeremiah 2:15 ಯೆರೆಮೀಯ 2:15ಪ್ರಾಯದ ಸಿಂಹಗಳು ಅವನಿಗೆ ವಿರೋಧವಾಗಿ ಘರ್ಜಿಸಿ, ಅಬ್ಬ ರಿಸುತ್ತವೆ. ಅವನ ದೇಶವನ್ನು ಹಾಳುಮಾಡುತ್ತವೆ; ಅವನ ಪಟ್ಟಣಗಳು ನಿವಾಸವಿಲ್ಲದೆ ಸುಟ್ಟುಹೋಗಿವೆ.
- 2 Kings 18:9–13 2 ಅರಸುಗಳು 18:9–13ಇಸ್ರಾಯೇಲಿನ ಅರಸನಾಗಿರುವ ಏಲನ ಮಗ ನಾದ ಹೋಶೇಯನ ಆಳ್ವಿಕೆಯ ಏಳನೇ ವರುಷದಲ್ಲಿ, ಅರಸನಾಗಿರುವ ಹಿಜ್ಕೀಯನ ನಾಲ್ಕನೇ ವರುಷದಲ್ಲಿ ಏನಾಯಿತಂದರೆ, ಅಶ್ಶೂರಿನ ಅರಸನಾದ ಶಲ್ಮನೆಸೆರನು ಸಮಾರ್ಯದ ಮೇಲೆ ಬಂದು ಅದನ್ನು ಮುತ್ತಿಗೆ ಹಾಕಿದನು. ಮೂರು ವರುಷವಾದ ತರುವಾಯ ಅವರು ಅದನ್ನು ತೆಗೆದುಕೊಂಡರು. ಇಸ್ರಾಯೇಲಿನ ಅರಸನಾಗಿರುವ ಹೋಶೇಯನ ಆಳ್ವಿಕೆಯ ಒಂಭತ್ತನೇ ವರುಷವಾದ ಹಿಜ್ಕೀಯನ ಆರನೇ ವರುಷದಲ್ಲಿ ಸಮಾ ರ್ಯವು ತೆಗೆದುಕೊಳ್ಳಲ್ಪಟ್ಟಿತು. ಅಶ್ಶೂರಿನ ಅರಸನು ಅಶ್ಶೂರಕ್ಕೆ ಇಸ್ರಾಯೇಲನ್ನು ಸೆರೆಯಾಗಿ ಒಯ್ದು ಗೋಜಾನ್ ನದಿಯ ಬಳಿಯಲ್ಲಿ ಹಲಹುನಲ್ಲಿಯೂ ಹಾಬೋರಿನಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು. ಅವರು ತಮ್ಮ ದೇವರಾದ ಕರ್ತನ ಶಬ್ದವನ್ನು ಕೇಳದೆ ಆತನ ಒಡಂಬಡಿಕೆಯನ್ನೂ ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಎಲ್ಲ ವನ್ನೂ ವಿಾರಿದರು; ಅವುಗಳನ್ನು ಕೇಳದೆಯೂ ಮಾಡ ದೆಯೂ ಹೋದರು. ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರಿನ ಅರಸನಾದ ಸನ್ಹೇರೀಬನು ಯೆಹೂದದ ಕೋಟೆಯುಳ್ಳ ಸಕಲ ಪಟ್ಟಣಗಳ ಮೇಲೆ ಬಂದು ಅವುಗಳನ್ನು ವಶಪಡಿಸಿಕೊಂಡನು.
- John 10:10–12 ಯೋಹಾನನು 10:10–12ಕಳ್ಳನು ಕದ್ದುಕೊಳ್ಳುವದಕ್ಕೂ ಕೊಲ್ಲುವದಕ್ಕೂ ಹಾಳುಮಾಡು ವದಕ್ಕೂ ಮಾತ್ರ ಬರುತ್ತಾನೇ ಹೊರತು ಮತ್ತಾವದಕ್ಕೂ ಬರುವದಿಲ್ಲ; ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಸಮೃದ್ಧಿಯು ಇರಬೇಕೆಂತಲೂ ಬಂದೆನು. ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ. ಆದರೆ ಕೂಲಿಯವನು ಕುರುಬನಲ್ಲವಾದದ ರಿಂದಲೂ ಕುರಿಗಳು ತನ್ನವುಗಳಲ್ಲವಾದದರಿಂದಲೂ ತೋಳ ಬರುವದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ; ಆಗ ತೋಳವು ಕುರಿಗಳನ್ನು ಹಿಡಿದು ಕೊಂಡು ಅವುಗಳನ್ನು ಚದರಿಸುತ್ತದೆ.
- Joel 3:2 ಯೋವೇಲ 3:2ಎಲ್ಲಾ ಜನಾಂಗಗಳನ್ನು ಕೂಡಿಸಿ ಯೆಹೋಷಾಫಾಟನ ತಗ್ಗಿಗೆ ಅವರನ್ನು ಇಳಿಸಿ ನನ್ನ ಜನರೂ ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯ ಅವರ ಸಂಗಡ ವ್ಯಾಜ್ಯವಾಡುವೆನು; ಅವರು ಅವರನ್ನು ಜನಾಂಗಗಳಲ್ಲಿ ಚದರಿಸಿ ನನ್ನ ದೇಶವನ್ನು ಪಾಲಿಟ್ಟು
- 1 Peter 2:25 1 ಪೇತ್ರನು 2:25ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- Jeremiah 50:6 ಯೆರೆಮೀಯ 50:6ನನ್ನ ಜನರು ಕಳೆದುಹೋದ ಕುರಿಗಳಾಗಿದ್ದರು; ಅವರ ಕುರುಬರು ಅವರನ್ನು ತಪ್ಪಿ ಹೋಗುವಂತೆ ಮಾಡಿದರು; ಅವರನ್ನು ಬೆಟ್ಟಗಳ ಮೇಲೆ ತಿರುಗಿಸಿ ಅಡ್ಡಾಡಿಸಿದರು; ಅವರು ಬೆಟ್ಟದಿಂದ ಗುಡ್ಡಕ್ಕೆ ಹೋದರು; ಮಲಗುವ ಸ್ಥಳವನ್ನು ಮರೆತುಬಿಟ್ಟರು.
- 2 Chronicles 36:1–23 2 ಪೂರ್ವಕಾಲವೃತ್ತಾಂತ 36:1–23ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು, ತಕ್ಕೊಂಡು ಯೆರೂಸಲೇಮಿನಲ್ಲಿ ಅವನ ತಂದೆಗೆ ಬದ ಲಾಗಿ ಅವನನ್ನು ಅರಸನಾಗಿ ಮಾಡಿದರು. ಯೆಹೋ ವಾಹಾಜನು ಆಳಲು ಆರಂಭಿಸಿದಾಗ ಇಪ್ಪತ್ತಮೂರು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಐಗುಪ್ತದ ಅರಸನು ಯೆರೂಸಲೇ ಮಿನಲ್ಲಿ ಅವನನ್ನು ತೆಗೆದುಹಾಕಿ ದೇಶದಿಂದ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರ ವನ್ನೂ ದಂಡ ತಕ್ಕೊಂಡನು. ಇದಲ್ಲದೆ ಐಗುಪ್ತದ ಅರಸನು ಅವನ ಸಹೋದರನಾದ ಎಲ್ಯಾಕೀಮ ನನ್ನು ಯೆಹೂದದ ಯೆರೂಸಲೇಮಿನ ಮೇಲೆ ಅರಸ ನಾಗಿ ಮಾಡಿ ಯೆಹೋಯಾಕೀಮನೆಂಬ ಬದಲು ಹೆಸರನ್ನು ಅವನಿಗೆ ಇಟ್ಟನು. ನೆಕೋ ಅವನ ಸಹೋ ದರನಾದ ಯೆಹೋವಾಹಾಜನನ್ನು ತಕ್ಕೊಂಡು ಐಗುಪ್ತಕ್ಕೆ ಒಯ್ದನು. ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಆದರೆ ತನ್ನ ದೇವ ರಾದ ಕರ್ತನ ಸಮ್ಮುಖದಲ್ಲಿ ಅವನು ಕೆಟ್ಟದ್ದನ್ನು ಮಾಡಿ ದನು. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬೆಲಿಗೆ ಒಯ್ಯುವ ಹಾಗೆ ಅವನಿಗೆ ಸಂಕೋಲೆಗಳನ್ನು ಹಾಕಿಸಿದನು. ಇದಲ್ಲದೆ ನೆಬೂಕದ್ನೆಚ್ಚರನು ಕರ್ತನ ಮನೆಯ ಪಾತ್ರೆಗಳಲ್ಲಿ ಕೆಲವನ್ನು ಬಾಬೆಲಿಗೆ ತಕ್ಕೊಂಡು ಹೋಗಿ ಬಾಬೆಲಿ ನಲ್ಲಿರುವ ತನ್ನ ಮಂದಿರದಲ್ಲಿ ಇರಿಸಿದನು. ಆದರೆ ಯೆಹೋಯಾಕೀಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಅಸಹ್ಯಗಳೂ ಅವನಲ್ಲಿ ಕಂಡು ಕೊಂಡದ್ದೂ ಇಗೋ, ಅವು ಇಸ್ರಾಯೇಲ್ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಆಳಿದನು. ಯೆಹೋಯಾಕೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು. ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ಒಂದು ವರುಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ ಅವನನ್ನೂ ಕರ್ತನ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬೆ ಲಿಗೆ ತಕ್ಕೊಂಡು ತರಿಸಿಕೊಂಡು ಅವನ ಸಹೋದರ ನಾದ ಚಿದ್ಕೀಯನನ್ನು ಯೆಹೂದ ಯೆರೂಸಲೇಮಿನ ಮೇಲೆ ಅರಸನಾಗಿ ಮಾಡಿದನು. ಚಿದ್ಕೀಯನು ಆಳಲು ಆರಂಭಿಸಿದಾಗ ಅವನು ಇಪ್ಪತ್ತೊಂದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹನ್ನೊಂದು ವರುಷ ಆಳಿದನು. ಅವನು ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಕರ್ತನ ಬಾಯಿ ಮಾತು ಹೇಳಿದ ಪ್ರವಾದಿ ಯಾದ ಯೆರೆವಿಾಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳದೆ ಇದ್ದನು. ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿ ಬಿದ್ದನು. ಹೇಗಂದರೆ ಅವನು ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರುಗದೆಯೂ ತನ್ನ ಕುತ್ತಿಗೆ ಯನ್ನು ಬೊಗ್ಗಿಸದೆಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು. ಇದಲ್ಲದೆ ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ ಜನರೂ ಜನಾಂಗಗಳ ಅಸಹ್ಯ ಗಳನ್ನು ಹಿಂಬಾಲಿಸಿ ಬಹಳವಾಗಿ ಅಪರಾಧ ಮಾಡಿ ಕರ್ತನು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು. ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು. ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು. ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು. ಇದಲ್ಲದೆ ದೊಡ್ಡವೂ ಸಣ್ಣವೂ ಆದ ಕರ್ತನ ಮನೆಯ ಎಲ್ಲಾ ಸಾಮಾನುಗಳು ಕರ್ತನ ಆಲಯದ ಬೊಕ್ಕಸಗಳು ಅರಸನ ಬೊಕ್ಕಸಗಳು ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬೆಲಿಗೆ ತರಿಸಿದನು. ಅವರು ದೇವರ ಆಲಯವನ್ನು ಸುಟ್ಟು ಬಿಟ್ಟು ಯೆರೂಸಲೇಮಿನ ಗೋಡೆಯನ್ನು ಕೆಡವಿ ಹಾಕಿ ಅದರ ಅರಮನೆಗಳನ್ನು ಸುಟ್ಟು ಬಿಟ್ಟು ಅದರ ಬೆಲೆಯುಳ್ಳ ಸಾಮಾನುಗಳನ್ನೆಲ್ಲಾ ಕೆಡಿಸಿದರು. ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು. ದೇಶವು ಎಪ್ಪತ್ತು ವರುಷ ತೀರುವ ಪರ್ಯಂತರ ಹಾಳಾಗಿದ್ದು ಸಬ್ಬತ್ತನ್ನು ಅನುಭವಿಸುತ್ತಾ ಇತ್ತು. ಆದರೆ ಪಾರಸಿಯ ಅರಸನಾದ ಕೊರೇಷನ ಮೊದಲನೇ ವರುಷದಲ್ಲಿ ಕರ್ತನು ಯೆರೆವಿಾಯನ ಮೂಲಕವಾಗಿ ಹೇಳಿದ ವಾಕ್ಯವು ಈಡೇರುವ ಹಾಗೆ ಕರ್ತನು ಪಾರಸಿಯ ಅರಸನಾದ ಕೊರೇಷನ ಆತ್ಮ ವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇ ನಂದರೆ --ಪಾರಸಿಯ ಅರಸನಾದ ಕೊರೇಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾದ ಕರ್ತನು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದೇಶದೊಳಗೆ ಯೆರೂಸಲೇಮಿನಲ್ಲಿ ತನಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮಲ್ಲಿ ಹೋಗುವವರು ಯಾರು? ಅವನು ಹೋಗಲಿ, ಅವನ ದೇವರಾದ ಕರ್ತನು ಅವನ ಸಂಗಡ ಇರಲಿ ಅಂದನು. ಪಾರಸಿಯ ಅರಸನಾದ ಕೊರೇಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾದ ಕರ್ತನು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದೇಶದೊಳಗೆ ಯೆರೂಸಲೇಮಿನಲ್ಲಿ ತನಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮಲ್ಲಿ ಹೋಗುವವರು ಯಾರು? ಅವನು ಹೋಗಲಿ, ಅವನ ದೇವರಾದ ಕರ್ತನು ಅವನ ಸಂಗಡ ಇರಲಿ ಅಂದನು.
- 2 Kings 24:1–7 2 ಅರಸುಗಳು 24:1–7ಅವನ ದಿವಸಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚರನು ಬಂದನು. ಯೆಹೋಯಾಕೀಮನು ಮೂರು ವರುಷ ಅವನ ಸೇವಕನಾಗಿದ್ದು ತರುವಾಯ ಅವನ ಮೇಲೆ ತಿರುಗಿ ಬಿದ್ದನು. ಆದರೆ ಕರ್ತನು ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನ್ಯರ ಗುಂಪುಗಳನ್ನೂ ಅವನ ಮೇಲೆ ಕಳುಹಿಸಿದನು. ಕರ್ತನು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಮಾತಿನ ಪ್ರಕಾರ ಯೆಹೂದವನ್ನು ನಾಶ ಮಾಡುವಂತೆ ಅದರ ಮೇಲೆ ಅವರನ್ನು ಬರಮಾಡಿದನು. ನಿಶ್ಚಯವಾಗಿ ಕರ್ತನ ಅಪ್ಪಣೆಯಿಂದ ಇದು ಯೆಹೂದದ ಮೇಲೆ ಆಯಿತು. ಅದೇನಂದರೆ, ಮನಸ್ಸೆಯು ತನ್ನ ಎಲ್ಲಾ ಕೃತ್ಯಗಳಿಂದ ಮಾಡಿದ ಪಾಪಗಳ ನಿಮಿತ್ತ ಅವರನ್ನು ಆತನು ತನ್ನ ಸಮ್ಮುಖದಿಂದ ತೆಗೆದು ಹಾಕುವದಕ್ಕೋಸ್ಕರವೇ. ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು. ಯೆಹೋಯಾ ಕೀಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಯೆಹೋಯಾಕೀಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಯೆಹೋಯಾಖೀನನು ಅವನಿಗೆ ಬದಲಾಗಿ ಅರಸ ನಾದನು. ಆದರೆ ಐಗುಪ್ತದ ಅರಸನು ತನ್ನ ದೇಶದಿಂದ ತಿರಿಗಿ ಬರಲಿಲ್ಲ. ಯಾಕಂದರೆ ಐಗುಪ್ತದ ನದಿ ಮೊದಲು ಗೊಂಡು ಯೂಫ್ರೇಟೀಸ್ ನದಿಯ ವರೆಗೂ ಐಗು ಪ್ತದ ಅರಸನಿಗೆ ಇದ್ದದ್ದೆಲ್ಲಾ ಬಾಬೆಲಿನ ಅರಸನು ಹಿಡಿದಿದ್ದನು.
- Jeremiah 23:1–2 ಯೆರೆಮೀಯ 23:1–2ನನ್ನ ಹುಲ್ಲುಗಾವಲಿನ ಕುರಿಗಳನ್ನು ಹಾಳು ಮಾಡಿ ಚದರಿಸುವ ಕುರುಬರಿಗೆ ಅಯ್ಯೋ, ಎಂದು ಕರ್ತನು ಅನ್ನುತ್ತಾನೆ. ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ನನ್ನ ಜನರನ್ನು ಮೇಯಿಸುವ ಕುರುಬರಿಗೆ ವಿರೋಧ ವಾಗಿ ಹೀಗೆ ಹೇಳುತ್ತಾನೆ--ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟು ವಿಚಾರಿಸದೆ ಇದ್ದೀರಿ; ಇಗೋ, ನಾನು ನಿಮ್ಮ ಕ್ರಿಯೆಗಳ ಕೆಟ್ಟತನವನ್ನು ನಿಮ್ಮಲ್ಲಿ ವಿಚಾರಿಸುತ್ತೇನೆಂದು ಕರ್ತನು ಅನ್ನುತ್ತಾನೆ.
- Jeremiah 52:1 ಯೆರೆಮೀಯ 52:1ಚಿದ್ಕೀಯನು ಆಳುವದಕ್ಕೆ ಆರಂಭಿಸಿದಾಗ ಇಪ್ಪತ್ತೊಂದು ವರುಷದವನಾಗಿದ್ದನು; ಅವನು ಹನ್ನೊಂದು ವರುಷ ಯೆರೂಸಲೇಮಿನಲ್ಲಿ ಆಳಿದನು; ಅವನ ತಾಯಿಯ ಹೆಸರು ಲಿಬ್ನದವನಾದ ಯೆರೆವಿಾಯನ ಮಗಳಾದ ಹಮೂಟಲ್.
- Luke 15:4–6 ಲೂಕನು 15:4–6ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದು ಕೊಂಡರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ವರೆಗೆ ಅದನ್ನು ಹುಡುಕಿಕೊಂಡು ಹೋಗದಿರುವನೇ? ಅವನು ಆ ಕುರಿಯನ್ನು ಕಂಡುಕೊಂಡ ಮೇಲೆ ಸಂತೋಷ ಪಡುತ್ತಾ ಅದನ್ನು ತನ್ನ ಹೆಗಲುಗಳ ಮೇಲೆ ಹೊತ್ತು ಕೊಳ್ಳುವನು. ಆಮೇಲೆ ಅವನು ಮನೆಗೆ ಬಂದು ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ;ಯಾಕಂದರೆ ಕಳೆದುಹೋದ ನನ್ನ ಕುರಿಯನ್ನು ನಾನು ಕಂಡು ಕೊಂಡೆನು ಅನ್ನುವನು.
- Ezekiel 34:5–6 ಯೆಹೆಜ್ಕೇಲನು 34:5–6ಅವು ಚದರಿಹೋದವು; ಯಾಕಂದರೆ ಅಲ್ಲಿ ಕುರುಬ ರಿಲ್ಲ; ಅವರು ಚದರಿಹೋದಾಗ ಬಯಲಿನಲ್ಲಿರುವ ಎಲ್ಲಾ ಮೃಗಗಳಿಗೆ ಆಹಾರವಾದವು. ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದರಿ ಹೋಗಿದೆ; ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ.
Original words (Hebrew)
- Israel · H3478יִשְׂרָאֵל Yisrâʼêl
- scattered · H6340פָּזַר pâzar
- sheep · H7716שֶׂה seh
- lions · H738אֲרִי ʼărîy
- away · H5080נָדַח nâdach
- first · H7223רִאשׁוֹן riʼshôwn
- king · H4428מֶלֶךְ melek
- Assyria · H804אַשּׁוּר ʼAshshûwr
- devoured · H398אָכַל ʼâkal
- last · H314אַחֲרוֹן ʼachărôwn
- Nebuchadrezzar · H5019נְבוּכַדְנֶאצַּר Nᵉbûwkadneʼtstsar
- king · H4428מֶלֶךְ melek
- Babylon · H894בָּבֶל Bâbel
- bones · H6105עָצַם ʻâtsam