Jeremiah · chapter 50 · verse 19
Jeremiah 50:19 in Kannada
ಇಸ್ರಾಯೇಲನನ್ನು ಅವನ ನಿವಾಸಕ್ಕೆ ತಿರಿಗಿ ಬರಮಾಡುತ್ತೇನೆ; ಅವನು ಕರ್ಮೆಲಿ ನಲ್ಲಿಯೂ ಬಾಷಾನಿನ್ನಲ್ಲಿಯೂ ಮೇಯುವನು; ಅವನ ಪ್ರಾಣವು ಎಫ್ರಾಯಿಮ್ ಬೆಟ್ಟದಲ್ಲಿಯೂ ಗಿಲ್ಯಾದಿ ನಲ್ಲಿಯೂ ತೃಪ್ತಿಹೊಂದುವದು.
Israayelanannu avana nivaasakke tirigi baramaaduttene; avanu karmeli nalliyoo baashaaninnalliyoo meyuvanu; avana praanavu ephraayim bettadalliyoo gilyaadi nalliyoo truptihonduvadu.
Jeremiah 50:19 in English
- King James Version (KJV)
- And I will bring Israel again to his habitation, and he shall feed on Carmel and Bashan, and his soul shall be satisfied upon mount Ephraim and Gilead.
- World English Bible (WEB)
- I will bring Israel again to his pasture, and he will feed on Carmel and Bashan. His soul will be satisfied on the hills of Ephraim and in Gilead.
- American Standard Version (ASV)
- And I will bring Israel again to his pasture, and he shall feed on Carmel and Bashan, and his soul shall be satisfied upon the hills of Ephraim and in Gilead.
- Bible in Basic English (BBE)
- And I will make Israel come back to his resting-place, and he will get his food on Carmel and Bashan, and have his desire in full measure on the hills of Ephraim and in Gilead.
- Darby Translation (DBY)
- And I will bring Israel again to his pasture, and he shall feed on Carmel and Bashan, and his soul shall be satisfied upon mount Ephraim and in Gilead.
- Webster's Bible (WBS)
- And I will bring Israel again to his habitation, and he shall feed on Carmel and Bashan, and his soul shall be satisfied upon mount Ephraim and Gilead.
- Young's Literal Translation (YLT)
- And I have brought back Israel unto his habitation, And he hath fed on Carmel, and on Bashan. And in mount Ephraim, and on Gilead is his soul satisfied.
Read in context
- 17ಇಸ್ರಾಯೇಲನು ಚದರಿಹೋದ ಕುರಿಯಾಗಿ ದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಶ್ಶೂರಿನ ಅರಸನು ಅವನನ್ನು ನುಂಗಿಬಿಟ್ಟನು. ಕಡೆಯಲ್ಲಿ ಬಾಬೆಲಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.
- 18ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅಶ್ಶೂರಿನ ಅರಸನನ್ನು ಶಿಕ್ಷಿಸಿದ ಹಾಗೆ, ಬಾಬೆಲಿನ ಅರಸನನ್ನೂ ಅವನ ದೇಶವನ್ನೂ ಶಿಕ್ಷಿಸುತ್ತೇನೆ.
- 19ಇಸ್ರಾಯೇಲನನ್ನು ಅವನ ನಿವಾಸಕ್ಕೆ ತಿರಿಗಿ ಬರಮಾಡುತ್ತೇನೆ; ಅವನು ಕರ್ಮೆಲಿ ನಲ್ಲಿಯೂ ಬಾಷಾನಿನ್ನಲ್ಲಿಯೂ ಮೇಯುವನು; ಅವನ ಪ್ರಾಣವು ಎಫ್ರಾಯಿಮ್ ಬೆಟ್ಟದಲ್ಲಿಯೂ ಗಿಲ್ಯಾದಿ ನಲ್ಲಿಯೂ ತೃಪ್ತಿಹೊಂದುವದು.
- 20ಕರ್ತನು ಹೀಗೆ ಅನ್ನುತ್ತಾನೆ--ಆ ದಿವಸಗಳಲ್ಲಿ ಆ ಕಾಲದಲ್ಲಿ ಇಸ್ರಾ ಯೇಲಿನ ಅಕ್ರಮವನ್ನು ಹುಡುಕಿದರೂ ಅಲ್ಲಿ ಏನೂ ಇರದು; ಯೆಹೂದದ ಪಾಪಗಳನ್ನು ಹುಡುಕಿದರೂ ಅವು ಸಿಕ್ಕುವದಿಲ್ಲ. ನಾನು ಉಳಿಸುವವರನ್ನು ಮನ್ನಿಸುತ್ತೇನೆ.
- 21ಮೆರಾಥಯಿಮ್ ದೇಶಕ್ಕೂ ಪೆಕೋದಿನ ನಿವಾಸಿ ಗಳಿಗೂ ವಿರೋಧವಾಗಿ ಏರಿಹೋಗು; ಅವರನ್ನು ಹಿಂದಟ್ಟಿ ಕೆಡಿಸಿಬಿಟ್ಟು ಸಂಪೂರ್ಣ ನಾಶಮಾಡು, ನಾನು ನಿನಗೆ ಆಜ್ಞಾಪಿಸಿದ್ದೆಲಾದರ ಪ್ರಕಾರ ಮಾಡು ಎಂದು ಕರ್ತನು ಅನ್ನುತ್ತಾನೆ.
Cross references
- Micah 7:14 ಮೀಕ 7:14ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.
- Jeremiah 30:10 ಯೆರೆಮೀಯ 30:10ಆದದರಿಂದ ನನ್ನ ಸೇವಕನಾದ ಯಾಕೋ ಬನೇ, ಭಯಪಡಬೇಡ ಎಂದು ಕರ್ತನು ಅನ್ನುತ್ತಾನೆ; ಇಸ್ರಾಯೇಲೇ ಹೆದರಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಲ್ಲಿರುವನು; ಹೆದರಿಸುವವನಿಲ್ಲದೆ ಸೌಖ್ಯವಾಗಿರುವನು.
- Jeremiah 31:6 ಯೆರೆಮೀಯ 31:6ಒಂದು ದಿನವದೆ; ಆಗ ಎಫ್ರಾಯಾಮಿನ ಪರ್ವತದಲ್ಲಿ ಕಾಯುವವರು--ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಕರ್ತನ ಬಳಿಗೆ ಹೋಗೋಣ ಎಂದು ಕೂಗುವರು.
- Jeremiah 24:6–7 ಯೆರೆಮೀಯ 24:6–7ನಾನು ನನ್ನ ಕಣ್ಣುಗಳನ್ನು ಅವರ ಮೇಲೆ ಒಳ್ಳೇದಕ್ಕಾಗಿ ಇಡುವೆನು. ಈ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು; ಕೆಡವಿ ಹಾಕದೆ ಅವರನ್ನು ಕಟ್ಟುವೆನು, ಕೀಳದೆ ಅವರನ್ನು ನೆಡುವೆನು. ನಾನೇ ಕರ್ತನೆಂದು ನನ್ನನ್ನು ತಿಳುಕೊಳ್ಳುವದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿ ರುವರು; ನಾನು ಅವರ ದೇವರಾಗಿರುವೆನು; ತಮ್ಮ ಪೂರ್ಣ ಹೃದಯದಿಂದ ನನ್ನ ಬಳಿಗೆ ಹಿಂತಿರುಗಿಕೊಳ್ಳು ವರು.
- Jeremiah 3:18 ಯೆರೆಮೀಯ 3:18ಆ ದಿನಗಳಲ್ಲಿ ಯೆಹೂದದ ಮನೆ ತನವು ಇಸ್ರಾಯೇಲಿನ ಮನೆಯ ಸಂಗಡ ಹೋಗು ವದು; ಅವರು ಏಕವಾಗಿ ಉತ್ತರ ದೇಶದಿಂದ ನಾನು ನಿಮ್ಮ ತಂದೆಗಳಿಗೆ ಸ್ವಾಸ್ತ್ಯವಾಗಿ ಕೊಟ್ಟ ದೇಶಕ್ಕೆ ಬರುವರು.
- Jeremiah 31:14 ಯೆರೆಮೀಯ 31:14ಇದಲ್ಲದೆ ಯಾಜಕರ ಪ್ರಾಣವನ್ನು ಕೊಬ್ಬಿನಿಂದ ತುಂಬಿಸುವೆನು; ನನ್ನ ಜನರು ನನ್ನ ಒಳ್ಳೇತನದಿಂದ ತೃಪ್ತಿಪಡುವರೆಂದು ಕರ್ತನು ಅನ್ನುತ್ತಾನೆ.
- Ezekiel 34:13–14 ಯೆಹೆಜ್ಕೇಲನು 34:13–14ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳ ಸ್ವಂತ ದೇಶಕ್ಕೆ ತರುವೆನು. ಇಸ್ರಾಯೇಲಿನ ಪರ್ವತಗಳ ಮೇಲೆ ನದಿಗಳಲ್ಲಿ ನಿವಾಸಿಸುವ ಎಲ್ಲಾ ದೇಶಗಳಲ್ಲಿ ಮೇಯಿಸುವೆನು. ನಾನು ಒಳ್ಳೇ ಮೇವಿನಲ್ಲಿ ಅವು ಗಳನ್ನು ಮೇಯಿಸುವೆನು; ಇಸ್ರಾಯೇಲಿನ ಎತ್ತರವಾದ ಪರ್ವತಗಳಲ್ಲಿ ಅವುಗಳ ಮಂದೆಯು ಇರುವದು. ಅವುಗಳು ಆ ಒಳ್ಳೆಯ ಮಂದೆಯಲ್ಲಿ ಮಲಗಿ ಇಸ್ರಾ ಯೇಲಿನ ಪರ್ವತಗಳ ಮೇಲೆ ಪುಷ್ಟಿಯುಳ್ಳ ಮೇವನ್ನು ಮೇಯುವವು.
- Jeremiah 23:3 ಯೆರೆಮೀಯ 23:3ನಾನು ನನ್ನ ಮಂದೆಯ ಶೇಷವನ್ನು, ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು; ಅವರು ಫಲಕಾರಿಯಾಗಿ ಹೆಚ್ಚುವರು.
- Amos 9:14–15 ಆಮೋಸ 9:14–15ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ. ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- Jeremiah 31:8–10 ಯೆರೆಮೀಯ 31:8–10ಇಗೋ, ನಾನು ಅವರನ್ನು ಉತ್ತರ ದೇಶ ದಿಂದ ಬರಮಾಡಿ ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ; ಅವರಲ್ಲಿ ಕುರುಡರೂ ಕುಂಟರೂ ಗರ್ಭಿಣಿಯಾದವರೂ ದಿನತುಂಬಿದ ಗರ್ಭಿಣಿಯರ ಸಹಿತವಾಗಿ ಇರುವರು; ದೊಡ್ಡ ಗುಂಪಾಗಿ ಇಲ್ಲಿಗೆ ಹಿಂತಿರುಗಿ ಬರುವರು. ಅಳುತ್ತಾ ಬರುವರು; ಬಿನ್ನಹಗಳ ಸಂಗಡ ಅವರನ್ನು ನಡಿಸುವೆನು; ಅವರು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು; ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ; ಎಫ್ರಾಯಾಮನು ನನ್ನ ಚೊಚ್ಚಲನೇ. ಜನಾಂಗಗಳೇ, ಕರ್ತನ ವಾಕ್ಯವನ್ನು ಕೇಳಿರಿ; ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ತಿಳಿಸಿ ಹೀಗೆ ಹೇಳಿರಿ--ಇಸ್ರಾಯೇಲನನ್ನು ಚದರಿಸಿದಾತನು ಅವ ನನ್ನು ಕೂಡಿಸುವನು; ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವನನ್ನು ಕಾಯುವನು.
- Jeremiah 30:18 ಯೆರೆಮೀಯ 30:18ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ; ಅವನ ನಿವಾಸಗಳನ್ನು ಕರುಣಿಸುತ್ತೇನೆ; ಪಟ್ಟಣವು ಅದರ ದಿಣ್ಣೆಯ ಮೇಲೆ ಕಟ್ಟಲ್ಪಡುವದು; ಅರಮನೆಯು ತಕ್ಕಸ್ಥಳದಲ್ಲಿ ನೆಲೆಯಾಗಿರುವದು.
- Jeremiah 50:4–5 ಯೆರೆಮೀಯ 50:4–5ಆ ದಿವಸಗಳಲ್ಲಿಯೂ ಕಾಲ ದಲ್ಲಿಯೂ ಇಸ್ರಾಯೇಲಿನ ಮಕ್ಕಳು ಬರುವರು; ಅವರೂ ಯೆಹೂದನ ಮಕ್ಕಳೂ ಒಟ್ಟಾಗಿ ಕೂಡಿ ಕೊಳ್ಳುವರೆಂದು ಕರ್ತನು ಅನ್ನುತ್ತಾನೆ. ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಕರ್ತನನ್ನು ಹುಡುಕುವರು. ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ--ಬನ್ನಿ, ಮರೆತುಹೋಗದ ನಿತ್ಯವಾದ ಒಡಂಬಡಿಕೆಯಿಂದ ಕರ್ತನನ್ನು ಸೇರಿಸಿ ಕೊಳ್ಳೋಣ ಅನ್ನುವರು.
Original words (Hebrew)
- bring · H7725שׁוּב shûwb
- Israel · H3478יִשְׂרָאֵל Yisrâʼêl
- again · H7725שׁוּב shûwb
- habitation · H5116נָוֶה nâveh
- feed · H7462רָעָה râʻâh
- Carmel · H3760כַּרְמֶל Karmel
- Bashan · H1316בָּשָׁן Bâshân
- soul · H5315נֶפֶשׁ nephesh
- satisfied · H7646שָׂבַע sâbaʻ
- mount · H2022הַר har
- Ephraim · H669אֶפְרַיִם ʼEphrayim
- Gilead · H1568גִּלְעָד Gilʻâd