Jeremiah · chapter 50 · verse 20
Jeremiah 50:20 in Kannada
ಕರ್ತನು ಹೀಗೆ ಅನ್ನುತ್ತಾನೆ--ಆ ದಿವಸಗಳಲ್ಲಿ ಆ ಕಾಲದಲ್ಲಿ ಇಸ್ರಾ ಯೇಲಿನ ಅಕ್ರಮವನ್ನು ಹುಡುಕಿದರೂ ಅಲ್ಲಿ ಏನೂ ಇರದು; ಯೆಹೂದದ ಪಾಪಗಳನ್ನು ಹುಡುಕಿದರೂ ಅವು ಸಿಕ್ಕುವದಿಲ್ಲ. ನಾನು ಉಳಿಸುವವರನ್ನು ಮನ್ನಿಸುತ್ತೇನೆ.
Kartanu heege annuttaane--aa divasagalalli aa kaaladalli israa yelina akramavannu hudukidaroo alli enoo iradu; yehoodada paapagalannu hudukidaroo avu sikkuvadilla. Naanu ulisuvavarannu mannisuttene.
Jeremiah 50:20 in English
- King James Version (KJV)
- In those days, and in that time, saith the LORD, the iniquity of Israel shall be sought for, and [there shall be] none; and the sins of Judah, and they shall not be found: for I will pardon them whom I reserve.
- World English Bible (WEB)
- In those days, and in that time,” says the LORD, “the iniquity of Israel will be sought for, and there will be none, also the sins of Judah, and they won’t be found; for I will pardon them whom I leave as a remnant.
- American Standard Version (ASV)
- In those days, and in that time, saith Jehovah, the iniquity of Israel shall be sought for, and there shall be none; and the sins of Judah, and they shall not be found: for I will pardon them whom I leave as a remnant.
- Bible in Basic English (BBE)
- In those days and in that time, says the Lord, when the evil-doing of Israel is looked for, there will be nothing; and in Judah no sins will be seen: for I will have forgiveness for those whom I will keep safe.
- Darby Translation (DBY)
- In those days, and at that time, saith Jehovah, the iniquity of Israel shall be sought for, and there shall be none; and the sins of Judah, and they shall not be found: for I will pardon those whom I leave remaining.
- Webster's Bible (WBS)
- In those days, and in that time, saith the LORD, the iniquity of Israel shall be sought for, and [there shall] be none; and the sins of Judah, and they shall not be found: for I will pardon them whom I reserve.
- Young's Literal Translation (YLT)
- In those days, and at that time, An affirmation of Jehovah, Sought is the iniquity of Israel, and it is not, And the sin of Judah, and it is not found, For I am propitious to those whom I leave!
Read in context
- 18ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅಶ್ಶೂರಿನ ಅರಸನನ್ನು ಶಿಕ್ಷಿಸಿದ ಹಾಗೆ, ಬಾಬೆಲಿನ ಅರಸನನ್ನೂ ಅವನ ದೇಶವನ್ನೂ ಶಿಕ್ಷಿಸುತ್ತೇನೆ.
- 19ಇಸ್ರಾಯೇಲನನ್ನು ಅವನ ನಿವಾಸಕ್ಕೆ ತಿರಿಗಿ ಬರಮಾಡುತ್ತೇನೆ; ಅವನು ಕರ್ಮೆಲಿ ನಲ್ಲಿಯೂ ಬಾಷಾನಿನ್ನಲ್ಲಿಯೂ ಮೇಯುವನು; ಅವನ ಪ್ರಾಣವು ಎಫ್ರಾಯಿಮ್ ಬೆಟ್ಟದಲ್ಲಿಯೂ ಗಿಲ್ಯಾದಿ ನಲ್ಲಿಯೂ ತೃಪ್ತಿಹೊಂದುವದು.
- 20ಕರ್ತನು ಹೀಗೆ ಅನ್ನುತ್ತಾನೆ--ಆ ದಿವಸಗಳಲ್ಲಿ ಆ ಕಾಲದಲ್ಲಿ ಇಸ್ರಾ ಯೇಲಿನ ಅಕ್ರಮವನ್ನು ಹುಡುಕಿದರೂ ಅಲ್ಲಿ ಏನೂ ಇರದು; ಯೆಹೂದದ ಪಾಪಗಳನ್ನು ಹುಡುಕಿದರೂ ಅವು ಸಿಕ್ಕುವದಿಲ್ಲ. ನಾನು ಉಳಿಸುವವರನ್ನು ಮನ್ನಿಸುತ್ತೇನೆ.
- 21ಮೆರಾಥಯಿಮ್ ದೇಶಕ್ಕೂ ಪೆಕೋದಿನ ನಿವಾಸಿ ಗಳಿಗೂ ವಿರೋಧವಾಗಿ ಏರಿಹೋಗು; ಅವರನ್ನು ಹಿಂದಟ್ಟಿ ಕೆಡಿಸಿಬಿಟ್ಟು ಸಂಪೂರ್ಣ ನಾಶಮಾಡು, ನಾನು ನಿನಗೆ ಆಜ್ಞಾಪಿಸಿದ್ದೆಲಾದರ ಪ್ರಕಾರ ಮಾಡು ಎಂದು ಕರ್ತನು ಅನ್ನುತ್ತಾನೆ.
- 22ಯುದ್ಧದ ಶಬ್ದವೂ ದೊಡ್ಡ ನಾಶನವೂ ದೇಶದಲ್ಲಿ ಇರುವದು.
Cross references
- Micah 7:19 ಮೀಕ 7:19ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ಅವರ ಪಾಪಗಳ ನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವಿ.ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
- Jeremiah 31:34 ಯೆರೆಮೀಯ 31:34ನೆರೆ ಯವನಿಗೆ ನೆರೆಯವನೂ ಸಹೋದರನಿಗೆ ಸಹೋ ದರನೂ-- ಕರ್ತನನ್ನು ತಿಳಿಯಿರಿ ಎಂದು ಇನ್ನು ಮೇಲೆ ಬೋಧಿಸುವದಿಲ್ಲ; ಅವರೆಲ್ಲರೂ ಚಿಕ್ಕವನು ಮೊದಲು ಗೊಂಡು ದೊಡ್ಡವನ ವರೆಗೂ ನನ್ನನ್ನು ತಿಳಿಯುವ ರೆಂದು ಕರ್ತನು ಅನ್ನುತ್ತಾನೆ; ಅವರ ಅಕ್ರಮವನ್ನು ಮನ್ನಿಸುವೆನು; ಪಾಪಗಳನ್ನು ಇನ್ನು ಮೇಲೆ ಜ್ಞಾಪಕ ಮಾಡುವದಿಲ್ಲ.
- Isaiah 1:9 ಯೆಶಾಯ 1:9ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.
- Isaiah 43:25 ಯೆಶಾಯ 43:25ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.
- Hebrews 10:17–18 ಇಬ್ರಿಯರಿಗೆ 10:17–18ಇದಲ್ಲದೆ ಅವರ ಪಾಪಗಳನ್ನೂ ದುಷ್ಕೃತ್ಯ ಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ಹೇಳುತ್ತಾನೆ. ಪಾಪವು ಪರಿಹಾರವಾದಲ್ಲಿ ಇನ್ನು ಎಂದಿಗೂ ಅದಕ್ಕಾಗಿ ಅರ್ಪಣೆ ಇರುವದಿಲ್ಲ.
- Psalm 103:12 ಕೀರ್ತನೆಗಳು 103:12ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾನೆ.
- Romans 8:33–34 ರೋಮಾಪುರದವರಿಗೆ 8:33–34ದೇವರಾದುಕೊಂಡವರ ಮೇಲೆ ಯಾರು ತಪ್ಪು ಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ. ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;
- Isaiah 44:22 ಯೆಶಾಯ 44:22ನಾನು ನಿನ್ನ ದ್ರೋಹಗಳನ್ನು ಗಾಢವಾದ ಮೇಘದಂತೆ ಅಳಿಸಿಬಿಟ್ಟಿದ್ದೇನೆ; ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನನ್ನ ಕಡೆಗೆ ತಿರಿಗಿಕೋ, ನಾನು ನಿನ್ನನ್ನು ವಿಮೋಚಿಸಿದ್ದೇನೆ.
- Hebrews 8:10–12 ಇಬ್ರಿಯರಿಗೆ 8:10–12ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ ಇದಲ್ಲದೆ ಪ್ರತಿ ಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದ ರನಿಗೂ--ಕರ್ತನನ್ನು ತಿಳಿದುಕೊಳ್ಳಿರಿ ಎಂದು ಉಪ ದೇಶಿಸುವದಿಲ್ಲ; ಯಾಕಂದರೆ ಚಿಕ್ಕವರಿಂದ ದೊಡ್ಡವರ ವರೆಗೂ ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅನೀತಿಯ ವಿಷಯವಾಗಿ ಕರುಣೆಯುಳ್ಳವನಾಗಿದ್ದು ಅವರ ಪಾಪಗಳನ್ನೂ ಅಪರಾಧಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ನುಡಿಯು ತ್ತಾನೆ.ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.
- Numbers 23:21 ಅರಣ್ಯಕಾಂಡ 23:21ಆತನು ಯಾಕೋಬನಲ್ಲಿ ಪಾಪವನ್ನು ಕಾಣಲಿಲ್ಲ; ಇಸ್ರಾಯೇಲನಲ್ಲಿ ವಕ್ರತೆಯನ್ನು ನೋಡಲಿಲ್ಲ; ಅವನ ದೇವರಾದ ಕರ್ತನು ಅವನ ಸಂಗಡ ಇದ್ದಾನೆ; ಅರಸನ ಜಯ ಧ್ವನಿಯು ಅವರಲ್ಲಿ ಉಂಟು.
- 2 Peter 3:15 2 ಪೇತ್ರನು 3:15ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು.
- Romans 11:26–27 ರೋಮಾಪುರದವರಿಗೆ 11:26–27ಹೀಗೆ ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ--ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು. ನಾನು ಅವರ ಪಾಪಗಳನ್ನು ತೆಗೆದು ಹಾಕುವದು ಅವರ ಸಂಗಡ ಮಾಡಿಕೊಂಡ ನನ್ನ ಒಡಂಬಡಿಕೆಯಾಗಿದೆ ಎಂಬದು.