Jeremiah · chapter 50 · verse 24
Jeremiah 50:24 in Kannada
ನಾನು ಬೋನನ್ನು ಇಟ್ಟೆನು; ಹೌದು, ಬಾಬೆಲೇ ನೀನು ಹಿಡಿಯಲ್ಪಟ್ಟಿದ್ದೀ; ಆದರೆ ನಿನಗೆ ತಿಳಿಯದಿತ್ತು; ನೀನು ಕರ್ತನಿಗೆ ವಿರೋಧವಾಗಿ ಜಗಳವಾಡಿದ್ದ ರಿಂದಲೇ ಸಿಕ್ಕಿದ್ದೀ; ವಶಮಾಡಲ್ಪಟ್ಟಿದ್ದೀ;
Naanu bonannu ittenu; haudu, baabele neenu hidiyalpattiddee; aadare ninage tiliyadittu; neenu kartanige virodhavaagi jagalavaadidda rindale sikkiddee; vashamaadalpattiddee;
Jeremiah 50:24 in English
- King James Version (KJV)
- I have laid a snare for thee, and thou art also taken, O Babylon, and thou wast not aware: thou art found, and also caught, because thou hast striven against the LORD.
- World English Bible (WEB)
- I have laid a snare for you, and you are also taken, Babylon, and you weren’t aware. You are found, and also caught, because you have fought against the LORD.
- American Standard Version (ASV)
- I have laid a snare for thee, and thou art also taken, O Babylon, and thou wast not aware: thou art found, and also caught, because thou hast striven against Jehovah.
- Bible in Basic English (BBE)
- I have put a net for you, and you have been taken, O Babylon, without your knowledge: you have been uncovered and taken because you were fighting against the Lord.
- Darby Translation (DBY)
- I have laid a snare for thee, and thou, Babylon, art also taken, and thou wast not aware; thou art found, and also caught, for thou hast contended with Jehovah.
- Webster's Bible (WBS)
- I have laid a snare for thee, and thou art also taken, O Babylon, and thou wast not aware: thou art found, and also caught, because thou hast striven against the LORD.
- Young's Literal Translation (YLT)
- I have laid a snare for thee, And also — thou art captured, O Babylon, And thou — thou hast known, Thou hast been found, and also art caught, For against Jehovah thou hast stirred thyself up.
Read in context
- 22ಯುದ್ಧದ ಶಬ್ದವೂ ದೊಡ್ಡ ನಾಶನವೂ ದೇಶದಲ್ಲಿ ಇರುವದು.
- 23ಎಲ್ಲಾ ಭೂಮಿಯ ಸುತ್ತಿಗೆಯೂ ಹೇಗೆ ತುಂಡಾಗಿ ಮುರಿಯಲ್ಪಟ್ಟಿತು; ಬಾಬೆಲ್ ಹೇಗೆ ಜನಾಂಗಗಳೊಳಗೆ ಹಾಳಾಯಿತು!
- 24ನಾನು ಬೋನನ್ನು ಇಟ್ಟೆನು; ಹೌದು, ಬಾಬೆಲೇ ನೀನು ಹಿಡಿಯಲ್ಪಟ್ಟಿದ್ದೀ; ಆದರೆ ನಿನಗೆ ತಿಳಿಯದಿತ್ತು; ನೀನು ಕರ್ತನಿಗೆ ವಿರೋಧವಾಗಿ ಜಗಳವಾಡಿದ್ದ ರಿಂದಲೇ ಸಿಕ್ಕಿದ್ದೀ; ವಶಮಾಡಲ್ಪಟ್ಟಿದ್ದೀ;
- 25ಕರ್ತನು ತನ್ನ ಆಯುಧ ಶಾಲೆಯನ್ನು ತೆರೆದು, ರೋಷದ ಆಯುಧಗಳನ್ನು ಹೊರಗೆ ತಂದಿದ್ದಾನೆ; ಕಸ್ದೀಯರ ದೇಶದಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ನಿರ್ವಹಿಸ ಬೇಕಾದ ಕಾರ್ಯವುಂಟು.
- 26ಕಟ್ಟಕಡೆಯ ಮೇರೆ ಯಿಂದ ಅದಕ್ಕೆ ವಿರೋಧವಾಗಿ ಬನ್ನಿ; ಅದರ ಕಣಜಗಳನ್ನು ತೆರೆಯಿರಿ; ಅದನ್ನು ದಿಬ್ಬಗಳಂತೆ ತುಳಿ ಯಿರಿ; ಸಂಪೂರ್ಣವಾಗಿ ನಾಶಮಾಡಿರಿ; ಅದಕ್ಕೆ ಒಂದೂ ಉಳಿಯದಿರಲಿ.
Cross references
- Daniel 5:30–31 ದಾನಿಯೇಲನು 5:30–31ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಕೊಲ್ಲಲ್ಪಟ್ಟನು.ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು. ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.
- Job 9:4 ಯೋಬನು 9:4ಆತನು ಹೃದಯದಲ್ಲಿ ಜ್ಞಾನಿಯೂ ಬಲದಲ್ಲಿ ಶಕ್ತನೂ ಆಗಿದ್ದಾನೆ; ಆತನಿಗೆ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?
- Job 40:9 ಯೋಬನು 40:9ಇಲ್ಲವೆ ದೇವರ ಹಾಗೆ ತೋಳುಳ್ಳವನಾಗಿದ್ದೀಯೋ? ಇಲ್ಲವೆ ಆತನ ಹಾಗೆ ಗುಡುಗಿನಿಂದ ಆರ್ಭಟ ಮಾಡು ವಿಯೋ?
- Job 40:2 ಯೋಬನು 40:2ಸರ್ವಶಕ್ತನ ಸಂಗಡ ವಾದಿಸುವವನು ಆತನಿಗೆ ಶಿಕ್ಷಣ ಕೊಡುವನೋ? ದೇವರನ್ನು ಗದರಿಸು ವವನು ಅದಕ್ಕೆ ಉತ್ತರಕೊಡಲಿ ಎಂದು ಹೇಳಿದನು.
- Isaiah 21:3–5 ಯೆಶಾಯ 21:3–5ಆದ ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ; ಕೇಳಕೂಡದ ಹಾಗೆ ಸಂಕಟಪಡುತ್ತೇನೆ, ನೋಡಕೂಡದ ಹಾಗೆ ಭ್ರಾಂತನಾಗಿದ್ದೇನೆ. ನನ್ನ ಹೃದಯವು (ಎದುರಿಸುತ್ತದೆ) ಗಾಬರಿಗೊಂಡಿದೆ, ನಡು ಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನನ್ನ ಆನಂ ದದ ರಾತ್ರಿಯನ್ನು ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ. ಮೇಜನ್ನು ಸಿದ್ಧಮಾಡು ಬುರುಜಿನ ಮೇಲೆ ಕಾವ ಲಿರು, ಉಣ್ಣು, ಕುಡಿ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಬಳಿಯಿರಿ.
- Revelation 18:7–8 ಪ್ರಕಟನೆ 18:7–8ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ.
- Jeremiah 51:8 ಯೆರೆಮೀಯ 51:8ಇದ್ದಕ್ಕಿದ್ದ ಹಾಗೆ ಬಾಬೆಲ್ ಬಿದ್ದು ಮುರಿಯಲ್ಪಟ್ಟಿದೆ; ಅದರ ವಿಷಯ ಗೋಳಾ ಡಿರಿ; ಅದರ ನೋವಿಗೆ ತೈಲ ತಕ್ಕೊಳ್ಳಿರಿ; ಒಂದು ವೇಳೆ ವಾಸಿಯಾದೀತು.
- Exodus 10:3 ವಿಮೋಚನಕಾಂಡ 10:3ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು.
- 2 Thessalonians 2:4 2 ಥೆಸಲೊನೀಕದವರಿಗೆ 2:4ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.
- Isaiah 45:9 ಯೆಶಾಯ 45:9ತನ್ನನ್ನು ರೂಪಿಸಿದವನ ಸಂಗಡ ವಾದ ಮಾಡುವವ ನಿಗೆ ಅಯ್ಯೋ! ಬೋಕಿಯು ಭೂಮಿಯ ಬೋಕಿಯ ಸಂಗಡವಾದ ಮಾಡಲಿ; ಮಣ್ಣು ರೂಪಿಸುವವನಿಗೆ --ನೀನು ಏನು ಮಾಡುತ್ತೀ ಎಂದೂ ನಿನ್ನ ಕೆಲಸವು --ಅವನಿಗೆ ಕೈಯಿಲ್ಲ ಅಂದೀತೇ?
- Jeremiah 51:31–39 ಯೆರೆಮೀಯ 51:31–39ಪಟ್ಟಣವು ಒಂದು ಕಡೆಯಲ್ಲಿ ಹಿಡಿಯಲ್ಪಟ್ಟಿದೆ ಎಂದೂ ದಾಟುವ ಸ್ಥಳಗಳು ವಶವಾದವೆಂದೂ ಬಿದಿರುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದೂ ಯುದ್ಧಸ್ಥರು ಗಾಬರಿ ಪಟ್ಟರೆಂದೂ ಬಾಬೆಲಿನ ಅರಸನಿಗೆ ತಿಳಿಸುವದಕ್ಕೆ ಓಡುವವನು ಓಡುವವನನ್ನೂ ತಿಳಿಸುವವನು ತಿಳಿಸುವವನನ್ನೂ ಎದುರುಗೊಳ್ಳುವದಕ್ಕೆ ಓಡುವರು. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬೆಲಿನ ಮಗಳು ಇದ್ದಾಳೆ; ಇನ್ನು ಸ್ವಲ್ಪ ಹೊತ್ತಾದ ಮೇಲೆ ಅದಕ್ಕೆ ಸುಗ್ಗೀಕಾಲ ಬರುವದು. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ನುಂಗಿಬಿಟ್ಟಿದ್ದಾನೆ; ಜಜ್ಜಿದ್ದಾನೆ; ಬರಿದಾದ ಪಾತ್ರೆಯಾಗಿ ಮಾಡಿದ್ದಾನೆ; ಘಟಸರ್ಪದ ಹಾಗೆ ನುಂಗಿಬಿಟ್ಟಿದ್ದಾನೆ; ನನ್ನ ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ; ನನ್ನನ್ನು ತಳ್ಳಿಬಿಟ್ಟಿದ್ದಾನೆ. ನನಗೂ ನನ್ನ ಶರೀರಕ್ಕೂ ಮಾಡಿರುವ ಬಲಾತ್ಕಾರವು ಬಾಬೆಲಿನ ಮೇಲೆ ಇರಲಿ ಎಂದು ಚೀಯೋನಿನ ನಿವಾಸಿ ಹೇಳುವನು; ಕಸ್ದೀಯರ ನಿವಾಸಿಗಳ ಮೇಲೆ ನನ್ನ ರಕ್ತವು ಇರಲಿ ಎಂದು ಯೆರೂಸಲೇಮು ಹೇಳುವದು. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನ ನಿಮಿತ್ತ ವ್ಯಾಜ್ಯವಾಡುತ್ತೇನೆ; ನಿನಗೋಸ್ಕರ ಪ್ರತಿದಂಡನೆ ಮಾಡುತ್ತೇನೆ; ಅದರ ಸಮುದ್ರವನ್ನು ಒಣಗಿಸುತ್ತೇನೆ; ಅದರ ಬುಗ್ಗೆಯನ್ನು ಬತ್ತಿ ಹೋಗುವಂತೆ ಮಾಡುತ್ತೇನೆ; ಬಾಬೆಲ್ ದಿಬ್ಬೆಗಳಾಗುವದು; ನಿವಾಸಿಗಳು ಇಲ್ಲದೆ ನರಿಗಳ ವಾಸಸ್ಥಳವೂ ಆಶ್ಚರ್ಯವೂ ಹಾಳೂ ಸಿಳ್ಳಿಡುವಿಕೆಯೂ ಆಗುವದು. ಅವರು ಸಿಂಹಗಳ ಹಾಗೆ ಒಟ್ಟಾಗಿ ಗರ್ಜಿಸುವರು, ಸಿಂಹದ ಮರಿಗಳ ಹಾಗೆ ಶಬ್ದ ಮಾಡುವರು. ಅವರ ಉರಿಯಲ್ಲಿ ನಾನು ಅವರ ಔತಣವನ್ನು ಸಿದ್ಧಮಾಡುವೆನು; ಅವರು ಉಲ್ಲಾಸಿಸಿ ನಿತ್ಯವಾದ ನಿದ್ರೆಯನ್ನು ಮಾಡಿ ಎಚ್ಚರವಾಗದ ಹಾಗೆ ಅವರಿಗೆ ಅಮಲೇರಿಸುವೆನೆಂದು ಕರ್ತನು ಅನ್ನುತ್ತಾನೆ.
- Jeremiah 51:57 ಯೆರೆಮೀಯ 51:57ಇದಲ್ಲದೆ ನಾನು ಅವಳ ಪ್ರಧಾನಿಗಳನ್ನೂ, ಜ್ಞಾನಿಗಳನ್ನೂ, ಅಧಿಪತಿಗಳನ್ನೂ, ಅಧಿಕಾರಿಗಳನ್ನೂ, ಪರಾಕ್ರಮಶಾಲಿಗಳನ್ನೂ, ಮತ್ತರಾಗಮಾಡುತ್ತೇನೆ; ಅವರು ನಿತ್ಯ ನಿದ್ರೆ ಮಾಡುವರು, ಎಚ್ಚರವಾಗುವದಿಲ್ಲವೆಂದು ಸೈನ್ಯಗಳ ಕರ್ತನೆಂಬ ಹೆಸರುಳ್ಳ ಅರಸನು ಅನ್ನುತ್ತಾನೆ.