Jeremiah · chapter 50 · verse 25
Jeremiah 50:25 in Kannada
ಕರ್ತನು ತನ್ನ ಆಯುಧ ಶಾಲೆಯನ್ನು ತೆರೆದು, ರೋಷದ ಆಯುಧಗಳನ್ನು ಹೊರಗೆ ತಂದಿದ್ದಾನೆ; ಕಸ್ದೀಯರ ದೇಶದಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ನಿರ್ವಹಿಸ ಬೇಕಾದ ಕಾರ್ಯವುಂಟು.
Kartanu tanna aayudha shaaleyannu teredu, roshada aayudhagalannu horage tandiddaane; kasdeeyara deshadalli sainyagala kartanaada devarige nirvahisa bekaada kaaryavuntu.
Jeremiah 50:25 in English
- King James Version (KJV)
- The LORD hath opened his armoury, and hath brought forth the weapons of his indignation: for this [is] the work of the Lord GOD of hosts in the land of the Chaldeans.
- World English Bible (WEB)
- The LORD has opened his armory, and has brought out the weapons of his indignation; for the Lord, GOD of Armies, has a work to do in the land of the Chaldeans.
- American Standard Version (ASV)
- Jehovah hath opened his armory, and hath brought forth the weapons of his indignation; for the Lord, Jehovah of hosts, hath a work [to do] in the land of the Chaldeans.
- Bible in Basic English (BBE)
- From his store-house the Lord has taken the instruments of his wrath: for the Lord, the Lord of armies, has a work to do in the land of the Chaldaeans.
- Darby Translation (DBY)
- Jehovah hath opened his armoury, and hath brought forth the weapons of his indignation; for this is a work for the Lord, Jehovah of hosts, in the land of the Chaldeans.
- Webster's Bible (WBS)
- The LORD hath opened his armory, and hath brought forth the weapons of his indignation: for this [is] the work of the Lord GOD of hosts in the land of the Chaldeans.
- Young's Literal Translation (YLT)
- Jehovah hath opened His treasury, And He bringeth out the weapons of His indignation, For a work [is] to the Lord Jehovah of Hosts, In the land of the Chaldeans.
Read in context
- 23ಎಲ್ಲಾ ಭೂಮಿಯ ಸುತ್ತಿಗೆಯೂ ಹೇಗೆ ತುಂಡಾಗಿ ಮುರಿಯಲ್ಪಟ್ಟಿತು; ಬಾಬೆಲ್ ಹೇಗೆ ಜನಾಂಗಗಳೊಳಗೆ ಹಾಳಾಯಿತು!
- 24ನಾನು ಬೋನನ್ನು ಇಟ್ಟೆನು; ಹೌದು, ಬಾಬೆಲೇ ನೀನು ಹಿಡಿಯಲ್ಪಟ್ಟಿದ್ದೀ; ಆದರೆ ನಿನಗೆ ತಿಳಿಯದಿತ್ತು; ನೀನು ಕರ್ತನಿಗೆ ವಿರೋಧವಾಗಿ ಜಗಳವಾಡಿದ್ದ ರಿಂದಲೇ ಸಿಕ್ಕಿದ್ದೀ; ವಶಮಾಡಲ್ಪಟ್ಟಿದ್ದೀ;
- 25ಕರ್ತನು ತನ್ನ ಆಯುಧ ಶಾಲೆಯನ್ನು ತೆರೆದು, ರೋಷದ ಆಯುಧಗಳನ್ನು ಹೊರಗೆ ತಂದಿದ್ದಾನೆ; ಕಸ್ದೀಯರ ದೇಶದಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ನಿರ್ವಹಿಸ ಬೇಕಾದ ಕಾರ್ಯವುಂಟು.
- 26ಕಟ್ಟಕಡೆಯ ಮೇರೆ ಯಿಂದ ಅದಕ್ಕೆ ವಿರೋಧವಾಗಿ ಬನ್ನಿ; ಅದರ ಕಣಜಗಳನ್ನು ತೆರೆಯಿರಿ; ಅದನ್ನು ದಿಬ್ಬಗಳಂತೆ ತುಳಿ ಯಿರಿ; ಸಂಪೂರ್ಣವಾಗಿ ನಾಶಮಾಡಿರಿ; ಅದಕ್ಕೆ ಒಂದೂ ಉಳಿಯದಿರಲಿ.
- 27ಅದರ ಹೋರಿಗಳನ್ನೆಲ್ಲಾ ಕೊಂದುಹಾಕಿರಿ; ಅವು ಕೊಲೆಗೆ ಇಳಿಯಲಿ; ಅವರಿಗೆ ಅಯ್ಯೋ! ಅವರ ದಿನವೂ ಅವರ ವಿಚಾರಣೆಯ ಕಾಲವೂ ಬಂತು.
Cross references
- Jeremiah 51:55 ಯೆರೆಮೀಯ 51:55ಕರ್ತನು ಬಾಬೆಲನ್ನು ಸೂರೆಮಾಡಿ ದ್ದಾನೆ; ಅವಳೊಳಗಿಂದ ಮಹಾ ಶಬ್ದವನ್ನು ತೆಗೆದುಹಾಕಿ ದ್ದಾನೆ; ಅವಳ ತೆರೆಗಳು ಬಹಳ ನೀರುಗಳ ಹಾಗೆ ಘೋಷಿಸುವಾಗ ಅವುಗಳ ಶಬ್ದದ ಧ್ವನಿ ಹೊರಟಿತು.
- Jeremiah 51:25 ಯೆರೆಮೀಯ 51:25ನಾಶಮಾಡುವ ಬೆಟ್ಟವೇ! ಭೂಮಿಯನ್ನೆಲ್ಲಾ ನಾಶಮಾಡುವಂಥಾದ್ದೇ! ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ. ನಿನ್ನ ಮೇಲೆ ನನ್ನ ಕೈಯನ್ನು ಚಾಚಿ ಬಂಡೆಗಳ ಮೇಲಿನಿಂದ ನಿನ್ನನ್ನು ಹೊರಳಿಸಿ ನಿನ್ನನ್ನು ಸುಟ್ಟ ಬೆಟ್ಟವಾಗಿ ಮಾಡುತ್ತೇನೆ.
- Amos 3:6 ಆಮೋಸ 3:6ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವದಿಲ್ಲವೇ? ಪಟ್ಟಣದಲ್ಲಿ ಕೇಡು ಇರು ವದಾದರೆ ಅದು ಕರ್ತನಿಂದ ಅಲ್ಲವೇ?
- Jeremiah 51:20 ಯೆರೆಮೀಯ 51:20ನೀನು ನನ್ನ ಸುತ್ತಿಗೆಯೇ, ನನ್ನ ಯುದ್ಧದ ಆಯುಧಗಳೇ, ನಿನ್ನಿಂದ ಜನಾಂಗಗಳನ್ನು ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಾಜ್ಯಗಳನ್ನು ನಾಶಮಾಡುತ್ತೇನೆ;
- Jeremiah 50:15 ಯೆರೆಮೀಯ 50:15ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಒಳಪಟ್ಟಿತು; ಅದರ ಅಸ್ತಿವಾರಗಳು ಬಿದ್ದು ಹೋದವು; ಅದರ ಗೋಡೆಗಳು ಕೆಡವಲ್ಪಟ್ಟವು; ಅದು ಕರ್ತನ ಪ್ರತಿದಂಡನೆಯೇ, ಅದರಿಂದ ಪ್ರತಿ ದಂಡನೆ ತಕ್ಕೊಳ್ಳಿರಿ. ಅದು ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ.
- Isaiah 13:17–18 ಯೆಶಾಯ 13:17–18ಇಗೋ, ಬೆಳ್ಳಿಯನ್ನು ಲಕ್ಷಿಸದೆ ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧ ವಾಗಿ ನಾನು ಎಬ್ಬಿಸುವೆನು. ಅವರ ಬಿಲ್ಲುಗಳು ಸಹ ಯುವಕರನ್ನು ಹೊಡೆದು ತುಂಡುತುಂಡು ಮಾಡುವವು; ಇವರು ಗರ್ಭಫಲವನ್ನು ಕರುಣಿಸರು, ಇವರ ಕಣ್ಣುಗಳು ಮಕ್ಕಳನ್ನೂ ಉಳಿಸುವದಿಲ್ಲ.
- Psalm 45:5 ಕೀರ್ತನೆಗಳು 45:5ನಿನ್ನ ಹದವಾದ ಬಾಣಗಳು ಅರಸನ ಶತ್ರು ಗಳ ಹೃದಯದಲ್ಲಿ ನೆಟ್ಟಿವೆ; ಅವುಗಳಿಂದ ಜನರು ನಿನ್ನ ಕೆಳಗೆ ಬೀಳುತ್ತಾರೆ
- Jeremiah 51:11–12 ಯೆರೆಮೀಯ 51:11–12ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ. ಬಾಬೆಲಿನ ಗೋಡೆಯ ಮೇಲೆ ಧ್ವಜವನ್ನೆತ್ತಿರಿ, ಪಹರೆ ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ; ಹೊಂಚಿ ಕೊಳ್ಳುವವರನ್ನು ಸಿದ್ಧಮಾಡಿರಿ; ಕರ್ತನು ಬಾಬೆಲಿನ ನಿವಾಸಿಗಳಿಗೆ ವಿರೋಧವಾಗಿ ತಾನು ಹೇಳಿದ್ದನ್ನು ಯೋಚಿಸಿ ಮಾಡಿದ್ದಾನೆ.
- Isaiah 21:7–9 ಯೆಶಾಯ 21:7–9ಅವನು ಜೋಡಿ ಜೋಡಿಯಾಗಿ ಬರುವ ರಥ ಸವಾರರ ಸಾಲನ್ನು ಕತ್ತೆಗಳ, ಒಂಟೆಗಳ, ರಥಗಳ ಸಾಲುಗಳನ್ನು ನೋಡಿ ದರೆ, ಬಹು ಗಮನದಿಂದ ಕಿವಿಗೊಟ್ಟು ಗಮನಿಸಲಿ ಎಂಬದೇ. ಬಳಿಕ ಅವನು ಸಿಂಹದಂತೆ ಕೂಗಿದ್ದೇ ನಂದರೆ, ನನ್ನ ಒಡೆಯನೇ, ನಾನು ಹಗಲೆಲ್ಲಾ ಕಾವ ಲಿನ ಬುರುಜಿನ ಮೇಲೆ ನಿಂತಿದ್ದೇನೆ. ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ. ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ ಮತ್ತು ಪ್ರತ್ಯುತ್ತರ ವಾಗಿ--ಬಾಬೆಲ್ ಬಿತ್ತು, ಆದರೆ ಕೆತ್ತಿದ ದೇವತೆಗಳ ವಿಗ್ರಹಗಳನ್ನು ಮುರಿದು ನೆಲಸಮ ಮಾಡಿಬಿಟ್ಟರು ಎಂದು ಹೇಳಿದನು.
- Jeremiah 50:35–38 ಯೆರೆಮೀಯ 50:35–38ಕಸ್ದೀಯರಿಗೂ ಬಾಬೆಲಿನ ನಿವಾಸಿಗಳಿಗೂ ಅದರ ಪ್ರಧಾನರಿಗೂ ಜ್ಞಾನಿಗಳಿಗೂ ವಿರೋಧವಾಗಿ ಕತ್ತಿ ಉಂಟೆಂದು ಕರ್ತನು ಅನ್ನುತ್ತಾನೆ. ಸುಳ್ಳುಗಾರರಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಮೂರ್ಖರಾಗು ವರು; ಅದರ ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಭಯಭ್ರಾಂತಿ ಪಡುವರು. ಅವರ ಕುದುರೆಗಳಿಗೂ ರಥಗಳಿಗೂ ಅದರೊಳ ಗಿರುವ ಎಲ್ಲಾ ಜನರಿಗೆ ವಿರೋಧವಾಗಿ ಖಡ್ಗ ಉಂಟು. ಅವರು ಹೆಂಗಸರ ಹಾಗೆ ಬೆದರುವರು; ಅದರ ಬೊಕ್ಕಸಗಳಿಗೆ ವಿರೋಧವಾಗಿಯೂ ಖಡ್ಗ ಉಂಟು. ಅವು ಕೊಳ್ಳೆಯಾಗುವವು. ಬೇಗೆಯು ಅವರ ನೀರನ್ನೆಲ್ಲಾ ಹೀರಲಿ; ಅದು ಬತ್ತಿ ಹೋಗುವದು; ಅದು ವಿಗ್ರಹಗಳ ದೇಶವೇ, ಅವರು ವಿಗ್ರಹಗಳಿಂದ ಹುಚ್ಚರಾದರು.
- Isaiah 46:10–11 ಯೆಶಾಯ 46:10–11ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ. ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು.
- Isaiah 48:14–15 ಯೆಶಾಯ 48:14–15ನೀವೆಲ್ಲರೂ ಕೂಡಿಕೊಂಡು ಕೇಳಿರಿ. ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವರು ಯಾರು? ಕರ್ತನು ಅವನನ್ನು ಪ್ರೀತಿಮಾಡಿದ್ದಾನೆ. ಆತನು ಬಾಬೆಲಿನಲ್ಲಿ ಅವನ ಇಷ್ಟವನ್ನು ನೆರವೇರಿಸುವನು; ಆತನ ಹಸ್ತವು ಕಸ್ದೀಯರ ಮೇಲಿರುವದು. ನಾನೇ ನಾನಾಗಿಯೇ ಮಾತಾಡಿದ್ದೇನೆ; ಹೌದು, ನಾನು ಅವನನ್ನು ಕರೆದು ಬರಮಾಡಿದ್ದೇನೆ; ಅವನು ಅವನ ಮಾರ್ಗವನ್ನು ಏಳಿಗೆ ಪಡಿಸುವನು.