Jeremiah · chapter 50 · verse 35
Jeremiah 50:35 in Kannada
ಕಸ್ದೀಯರಿಗೂ ಬಾಬೆಲಿನ ನಿವಾಸಿಗಳಿಗೂ ಅದರ ಪ್ರಧಾನರಿಗೂ ಜ್ಞಾನಿಗಳಿಗೂ ವಿರೋಧವಾಗಿ ಕತ್ತಿ ಉಂಟೆಂದು ಕರ್ತನು ಅನ್ನುತ್ತಾನೆ.
Kasdeeyarigoo baabelina nivaasigaligoo adara pradhaanarigoo jnyaanigaligoo virodhavaagi katti untendu kartanu annuttaane.
Jeremiah 50:35 in English
- King James Version (KJV)
- A sword [is] upon the Chaldeans, saith the LORD, and upon the inhabitants of Babylon, and upon her princes, and upon her wise [men].
- World English Bible (WEB)
- “A sword is on the Chaldeans,” says the LORD, “and on the inhabitants of Babylon, on her princes, and on her wise men.
- American Standard Version (ASV)
- A sword is upon the Chaldeans, saith Jehovah, and upon the inhabitants of Babylon, and upon her princes, and upon her wise men.
- Bible in Basic English (BBE)
- A sword is on the Chaldaeans, says the Lord, and on the people of Babylon, and on her rulers and on her wise men.
- Darby Translation (DBY)
- The sword is upon the Chaldeans, saith Jehovah, and upon the inhabitants of Babylon, and upon her princes, and upon her wise men;
- Webster's Bible (WBS)
- A sword [is] upon the Chaldeans, saith the LORD, and upon the inhabitants of Babylon, and upon her princes, and upon her wise [men] .
- Young's Literal Translation (YLT)
- A sword [is] for the Chaldeans, An affirmation of Jehovah, And it [is] on the inhabitants of Babylon, And on her heads, and on her wise men;
Read in context
- 33ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ-- ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಕೂಡ ಹಿಂಸಿಸಲ್ಪಟ್ಟರು; ಅವರನ್ನು ಸೆರೆಗೆ ಒಯ್ಯುವವ ರೆಲ್ಲರು ಅವರನ್ನು ಬಲವಾಗಿ ಹಿಡಿದು, ಕಳುಹಿಸಿ ಬಿಡಲೊಲ್ಲದೆ ಇದ್ದರು.
- 34ಅವರ ವಿಮೋಚಕನು ಬಲಿಷ್ಠನೇ, ಸೈನ್ಯಗಳ ಕರ್ತನು ಆತನ ಹೆಸರು; ಆತನು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ ಬಾಬೆಲಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವನು.
- 35ಕಸ್ದೀಯರಿಗೂ ಬಾಬೆಲಿನ ನಿವಾಸಿಗಳಿಗೂ ಅದರ ಪ್ರಧಾನರಿಗೂ ಜ್ಞಾನಿಗಳಿಗೂ ವಿರೋಧವಾಗಿ ಕತ್ತಿ ಉಂಟೆಂದು ಕರ್ತನು ಅನ್ನುತ್ತಾನೆ.
- 36ಸುಳ್ಳುಗಾರರಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಮೂರ್ಖರಾಗು ವರು; ಅದರ ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಭಯಭ್ರಾಂತಿ ಪಡುವರು.
- 37ಅವರ ಕುದುರೆಗಳಿಗೂ ರಥಗಳಿಗೂ ಅದರೊಳ ಗಿರುವ ಎಲ್ಲಾ ಜನರಿಗೆ ವಿರೋಧವಾಗಿ ಖಡ್ಗ ಉಂಟು. ಅವರು ಹೆಂಗಸರ ಹಾಗೆ ಬೆದರುವರು; ಅದರ ಬೊಕ್ಕಸಗಳಿಗೆ ವಿರೋಧವಾಗಿಯೂ ಖಡ್ಗ ಉಂಟು. ಅವು ಕೊಳ್ಳೆಯಾಗುವವು.
Cross references
- Jeremiah 47:6 ಯೆರೆಮೀಯ 47:6ಕರ್ತನ ಕತ್ತಿಯೇ, ಎಷ್ಟರ ವರೆಗೆ ವಿಶ್ರಮಿಸಿಕೊಳ್ಳದೆ ಇರುವಿ? ನಿನ್ನ ಒರೆಯಲ್ಲಿ ಅಡಗಿಕೋ! ವಿಶ್ರಮಿಸಿಕೋ, ಸುಮ್ಮನಿರು.ಅದು ಹೇಗೆ ಸುಮ್ಮನಿರುವದು? ಅಷ್ಕೆಲೋನಿಗೆ ವಿರೋಧವಾಗಿಯೂ ಸಮುದ್ರತೀರಕ್ಕೆ ವಿರೋಧ ವಾಗಿಯೂ ಕರ್ತನು ಅದಕ್ಕೆ ಆಜ್ಞೆ ಕೊಟ್ಟಿದ್ದಾನಲ್ಲಾ; ಅಲ್ಲಿ ಅದನ್ನು ನೇಮಿಸಿದ್ದಾನೆ.
- Jeremiah 51:57 ಯೆರೆಮೀಯ 51:57ಇದಲ್ಲದೆ ನಾನು ಅವಳ ಪ್ರಧಾನಿಗಳನ್ನೂ, ಜ್ಞಾನಿಗಳನ್ನೂ, ಅಧಿಪತಿಗಳನ್ನೂ, ಅಧಿಕಾರಿಗಳನ್ನೂ, ಪರಾಕ್ರಮಶಾಲಿಗಳನ್ನೂ, ಮತ್ತರಾಗಮಾಡುತ್ತೇನೆ; ಅವರು ನಿತ್ಯ ನಿದ್ರೆ ಮಾಡುವರು, ಎಚ್ಚರವಾಗುವದಿಲ್ಲವೆಂದು ಸೈನ್ಯಗಳ ಕರ್ತನೆಂಬ ಹೆಸರುಳ್ಳ ಅರಸನು ಅನ್ನುತ್ತಾನೆ.
- Daniel 5:30 ದಾನಿಯೇಲನು 5:30ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಕೊಲ್ಲಲ್ಪಟ್ಟನು.ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.
- Daniel 5:1–2 ದಾನಿಯೇಲನು 5:1–2ಅರಸನಾದ ಬೆಲ್ಯಚ್ಚರನು ತನ್ನ ಪ್ರಭುಗಳಲ್ಲಿ ಸಾವಿರ ಮಂದಿಗೆ ದೊಡ್ಡ ಔತಣವನ್ನು ಮಾಡಿಸಿ, ಆ ಸಾವಿರ ಮಂದಿಯ ಮುಂದೆ ಅವನು ದ್ರಾಕ್ಷಾರಸವನ್ನು ಕುಡಿದನು. ಆ ದ್ರಾಕ್ಷಾರಸವನ್ನು ರುಚಿಸುತ್ತಿರುವಾಗ ಬೆಲ್ಯಚ್ಚರನು ತನ್ನ ತಂದೆಯಾದ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯ ದೊಳಗಿಂದ ತಂದ ಬೆಳ್ಳಿಬಂಗಾರಗಳ ಪಾತ್ರೆಗಳಲ್ಲಿ ಅರಸನೂ ಅವನ ಪ್ರಭುಗಳೂ ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವ ಹಾಗೆ ತರಲು ಆಜ್ಞಾಪಿಸಿದನು.
- Daniel 5:7–8 ದಾನಿಯೇಲನು 5:7–8ಆಗ ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ ಕಸ್ದೀಯರನ್ನೂ ಶಕುನರನ್ನೂ ಕರೆಸಿ ಬಾಬೆಲಿನ ಜ್ಞಾನಿ ಗಳಿಗೆ ಹೇಳಿದ್ದೇನಂದರೆ--ಯಾವನೂ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ತಿಳಿಸುವನೋ ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ರಾಜ್ಯದ ಮೂರನೆಯ ಅಧಿಕಾರಿ ಯಾಗಿ ಮಾಡುವೆನು ಅಂದನು. ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹ ವನ್ನು ಓದಲೂ ಅದರ ಅರ್ಥವನ್ನು ಅರಸನಿಗೆ ತಿಳಿ ಸಲೂ ಅವರಿಗೆ ಆಗದೆಹೋಯಿತು.
- Hosea 11:6 ಹೋಶೇಯ 11:6ಆದದರಿಂದ ಅವರ ಆಲೋಚನೆಗಳ ನಿಮಿತ್ತ ಕತ್ತಿಯು ಅವರ ಪಟ್ಟಣಗಳ ಮೇಲೆ ನೆಲೆಯಾಗಿದ್ದು ಅಲ್ಲಿನ ಕೊಂಬೆ ಗಳನ್ನು ಸುಟ್ಟು ಅವರನ್ನು ನುಂಗಿಬಿಡುತ್ತದೆ.
- Jeremiah 50:27 ಯೆರೆಮೀಯ 50:27ಅದರ ಹೋರಿಗಳನ್ನೆಲ್ಲಾ ಕೊಂದುಹಾಕಿರಿ; ಅವು ಕೊಲೆಗೆ ಇಳಿಯಲಿ; ಅವರಿಗೆ ಅಯ್ಯೋ! ಅವರ ದಿನವೂ ಅವರ ವಿಚಾರಣೆಯ ಕಾಲವೂ ಬಂತು.
- Leviticus 26:25 ಯಾಜಕಕಾಂಡ 26:25ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ.
- Isaiah 41:25 ಯೆಶಾಯ 41:25ಉತ್ತರ ದಿಕ್ಕಿನಿಂದ ಒಬ್ಬನನ್ನು ನಾನು ಎಬ್ಬಿಸಿದ್ದೇನೆ, ಸೂರ್ಯೋ ದಯದ ಕಡೆಯಿಂದ ಅವನು ನನ್ನ ಹೆಸರನ್ನು ಸ್ಮರಿಸು ವನು; ಅವನು ಜೇಡಿಮಣ್ಣಿನಂತೆಯೂ ಕುಂಬಾರನು ಮಣ್ಣನ್ನು ತುಳಿಯುವಂತೆಯೂ ಅಧಿಕಾರಸ್ಥರ ಮೇಲೆ ಬರುವನು.
- Isaiah 19:11–13 ಯೆಶಾಯ 19:11–13ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ? ಅವರು ಎಲ್ಲಿದ್ದಾರೆ? ನಿನ್ನ ಜ್ಞಾನಿಗಳು ಎಲ್ಲಿ? ಅವರು ನಿನಗೆ ಹೇಳಲಿ. ಸೈನ್ಯಗಳ ಕರ್ತನು ಐಗುಪ್ತ್ಯರ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ತಿಳಿದು ಕೊಳ್ಳಲಿ. ಚೋಯನಿನ ಶ್ರೇಷ್ಠರು (ಪ್ರಧಾನರು) ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಐಗುಪ್ತದ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿ ತಪ್ಪುದಾರಿಗೆಳೆದಿದ್ದಾರೆ.
- Isaiah 44:25 ಯೆಶಾಯ 44:25ಸುಳ್ಳುಗಾರರ ಗುರುತುಗಳನ್ನು ನಿರರ್ಥಕಮಾಡುವವನೂ ಕಣಿ ಹೇಳು ವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಬುದ್ದಿಹೀನ ವಾಗ ಮಾಡುವವನೂ
- Ezekiel 14:2 ಯೆಹೆಜ್ಕೇಲನು 14:2ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--