Jeremiah · chapter 50 · verse 38
Jeremiah 50:38 in Kannada
ಬೇಗೆಯು ಅವರ ನೀರನ್ನೆಲ್ಲಾ ಹೀರಲಿ; ಅದು ಬತ್ತಿ ಹೋಗುವದು; ಅದು ವಿಗ್ರಹಗಳ ದೇಶವೇ, ಅವರು ವಿಗ್ರಹಗಳಿಂದ ಹುಚ್ಚರಾದರು.
Begeyu avara neerannellaa heerali; adu batti hoguvadu; adu vigrahagala deshave, avaru vigrahagalinda huchcharaadaru.
Jeremiah 50:38 in English
- King James Version (KJV)
- A drought [is] upon her waters; and they shall be dried up: for it [is] the land of graven images, and they are mad upon [their] idols.
- World English Bible (WEB)
- A drought is on her waters, and they will be dried up; for it is a land of engraved images, and they are mad over idols.
- American Standard Version (ASV)
- A drought is upon her waters, and they shall be dried up; for it is a land of graven images, and they are mad over idols.
- Bible in Basic English (BBE)
- A sword is on her waters, drying them up; for it is a land of images, and their minds are fixed on false gods.
- Darby Translation (DBY)
- a drought is upon her waters, and they shall be dried up; for it is a land of graven images, and they are mad after frightful idols.
- Webster's Bible (WBS)
- A drouth [is] upon her waters; and they shall be dried up: for it [is] the land of graven images, and they are mad upon [their] idols.
- Young's Literal Translation (YLT)
- A sword [is] on her waters, and they have been dried up, For it [is] a land of graven images, And in idols they do boast themselves.
Read in context
- 36ಸುಳ್ಳುಗಾರರಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಮೂರ್ಖರಾಗು ವರು; ಅದರ ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಭಯಭ್ರಾಂತಿ ಪಡುವರು.
- 37ಅವರ ಕುದುರೆಗಳಿಗೂ ರಥಗಳಿಗೂ ಅದರೊಳ ಗಿರುವ ಎಲ್ಲಾ ಜನರಿಗೆ ವಿರೋಧವಾಗಿ ಖಡ್ಗ ಉಂಟು. ಅವರು ಹೆಂಗಸರ ಹಾಗೆ ಬೆದರುವರು; ಅದರ ಬೊಕ್ಕಸಗಳಿಗೆ ವಿರೋಧವಾಗಿಯೂ ಖಡ್ಗ ಉಂಟು. ಅವು ಕೊಳ್ಳೆಯಾಗುವವು.
- 38ಬೇಗೆಯು ಅವರ ನೀರನ್ನೆಲ್ಲಾ ಹೀರಲಿ; ಅದು ಬತ್ತಿ ಹೋಗುವದು; ಅದು ವಿಗ್ರಹಗಳ ದೇಶವೇ, ಅವರು ವಿಗ್ರಹಗಳಿಂದ ಹುಚ್ಚರಾದರು.
- 39ಆದದರಿಂದ ಅರಣ್ಯದ ಕಾಡು ಮೃಗಗಳು, ನರಿಗಳು ಕೂಡ ಅಲ್ಲಿ ವಾಸಮಾಡುವವು. ಗೂಬೆಗಳೂ ಸಹ ಅದರಲ್ಲಿ ವಾಸಮಾಡುವವು; ಅದು ಇನ್ನು ಮೇಲೆ ಎಂದೆಂದಿಗೂ ನಿವಾಸವಾಗುವದಿಲ್ಲ; ತಲತಲಾಂತರಗಳ ವರೆಗೂ ಯಾರೂ ಅದರಲ್ಲಿ ತಂಗುವದಿಲ್ಲ.
- 40ದೇವರು ಸೊದೋಮನ್ನೂ ಗೊಮೋರವನ್ನು ಅವುಗಳ ಸವಿಾಪದಲ್ಲಿದ್ದ ಪಟ್ಟಣಗಳನ್ನೂ ಕೆಡವಿಹಾಕಿದಾಗ ಆದ ಹಾಗೆ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ; ಅದರಲ್ಲಿ ಯಾವ ನರಪುತ್ರನಾದರೂ ತಂಗುವದಿ ಲ್ಲವೆಂದು ಕರ್ತನು ಅನ್ನುತ್ತಾನೆ.
Cross references
- Revelation 16:12 ಪ್ರಕಟನೆ 16:12ಆರನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಯೂಫ್ರೇಟೀಸ್ ಮಹಾನದಿಯ ಮೇಲೆ ಹೊಯ್ಯಲು ಮೂಡಣ ದಿಕ್ಕಿನಿಂದ ಬರುವ ರಾಜರಿಗೆ ಮಾರ್ಗವು ಸಿದ್ಧವಾಗುವಂತೆ ಅದರ ನೀರು ಬತ್ತಿ ಹೋಯಿತು.
- Isaiah 44:27 ಯೆಶಾಯ 44:27ಅಗಾಧಕ್ಕೆ-- ಒಣಗಿಹೋಗು; ನಿನ್ನ ನದಿಗಳನ್ನು ಒಣಗಿಸಿಬಿಡುವೆನು ಎಂದು ಅನ್ನುವವನೂಕೋರೆಷನ ವಿಷಯ ವಾಗಿ--ಅವನು ನನ್ನ ಕುರುಬನು; ನನ್ನ ಇಚ್ಛೆಯನ್ನೆಲ್ಲಾ ಪೂರೈಸುವವನೂ ಯೆರೂಸಲೇಮಿಗೆ--ನೀನು ಕಟ್ಟಲ್ಪ ಡುವಿ; ದೇವಾಲಯಕ್ಕೆ--ನಿನ್ನ ಅಸ್ತಿವಾರವು ಹಾಕಲ್ಪಡು ವದೆಂದು ಅನ್ನುವವನು ನಾನೇ.
- Jeremiah 50:2 ಯೆರೆಮೀಯ 50:2ಜನಾಂಗಗಳಿಗೆ ತಿಳಿಸಿರಿ, ಸಾರಿರಿ; ಧ್ವಜವನ್ನೆತ್ತಿರಿ; ಸಾರಿರಿ, ಮರೆಮಾಡಬೇಡಿರಿ, ಬಾಬೆಲು ಹಿಡಿಯ ಲ್ಪಟ್ಟಳು, ಬೇಲ್ನಿಗೆ ನಾಚಿಕೆಯಾಯಿತು, ಮೆರೋದಾ ಕನು ತುಂಡು ತುಂಡಾಗಿ ಮುರಿದು ಹೋದನು, ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಅವಳ ವಿಗ್ರಹಗಳು ಮುರಿದು ಹೋದವೆಂದು ಹೇಳಿರಿ;
- Jeremiah 51:47 ಯೆರೆಮೀಯ 51:47ಆದದರಿಂದ ಇಗೋ, ದಿನಗಳು ಬರುವವು; ಆಗ ನಾನು ಬಾಬೆಲಿನ ವಿಗ್ರಹಗಳಿಗೆ ನ್ಯಾಯತೀರಿ ಸುವೆನು. ಅದರ ದೇಶವೆಲ್ಲಾ ನಾಚಿಕೆಪಡುವದು; ಕೊಲ್ಲಲ್ಪಟ್ಟವರು ಅದರ ಮಧ್ಯದಲ್ಲಿ ಬೀಳುವರು.
- Jeremiah 51:52 ಯೆರೆಮೀಯ 51:52ಆದದರಿಂದ ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಅವಳ ಕೆತ್ತಿದ ವಿಗ್ರಹಗಳಿಗೆ ನ್ಯಾಯತೀರಿಸುತ್ತೇನೆ. ಅವಳ ದೇಶದಲ್ಲೆಲ್ಲಾ ಗಾಯಪಟ್ಟವರು ನರಳುವರು.
- Jeremiah 51:44 ಯೆರೆಮೀಯ 51:44ನಾನು ಬಾಬೆಲಿನಲ್ಲಿರುವ ಬೇಲ್ನನ್ನು ದಂಡಿಸಿ ಅವನು ನುಂಗಿದ್ದನ್ನು ಅವನ ಬಾಯೊಳಗಿಂದ ಹೊರಗೆ ತರಿಸುವೆನು; ಇನ್ನು ಮೇಲೆ ಜನಾಂಗಗಳು ಅವನ ಬಳಿಗೆ ಪ್ರವಾಹವಾಗಿ ಬರುವದಿಲ್ಲ; ಹೌದು, ಬಾಬೆಲಿನ ಗೋಡೆ ಬೀಳುವದು.
- Jeremiah 51:32–36 ಯೆರೆಮೀಯ 51:32–36ಬಾಬೆಲಿನ ಅರಸನಿಗೆ ತಿಳಿಸುವದಕ್ಕೆ ಓಡುವವನು ಓಡುವವನನ್ನೂ ತಿಳಿಸುವವನು ತಿಳಿಸುವವನನ್ನೂ ಎದುರುಗೊಳ್ಳುವದಕ್ಕೆ ಓಡುವರು. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬೆಲಿನ ಮಗಳು ಇದ್ದಾಳೆ; ಇನ್ನು ಸ್ವಲ್ಪ ಹೊತ್ತಾದ ಮೇಲೆ ಅದಕ್ಕೆ ಸುಗ್ಗೀಕಾಲ ಬರುವದು. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ನುಂಗಿಬಿಟ್ಟಿದ್ದಾನೆ; ಜಜ್ಜಿದ್ದಾನೆ; ಬರಿದಾದ ಪಾತ್ರೆಯಾಗಿ ಮಾಡಿದ್ದಾನೆ; ಘಟಸರ್ಪದ ಹಾಗೆ ನುಂಗಿಬಿಟ್ಟಿದ್ದಾನೆ; ನನ್ನ ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ; ನನ್ನನ್ನು ತಳ್ಳಿಬಿಟ್ಟಿದ್ದಾನೆ. ನನಗೂ ನನ್ನ ಶರೀರಕ್ಕೂ ಮಾಡಿರುವ ಬಲಾತ್ಕಾರವು ಬಾಬೆಲಿನ ಮೇಲೆ ಇರಲಿ ಎಂದು ಚೀಯೋನಿನ ನಿವಾಸಿ ಹೇಳುವನು; ಕಸ್ದೀಯರ ನಿವಾಸಿಗಳ ಮೇಲೆ ನನ್ನ ರಕ್ತವು ಇರಲಿ ಎಂದು ಯೆರೂಸಲೇಮು ಹೇಳುವದು. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನ ನಿಮಿತ್ತ ವ್ಯಾಜ್ಯವಾಡುತ್ತೇನೆ; ನಿನಗೋಸ್ಕರ ಪ್ರತಿದಂಡನೆ ಮಾಡುತ್ತೇನೆ; ಅದರ ಸಮುದ್ರವನ್ನು ಒಣಗಿಸುತ್ತೇನೆ; ಅದರ ಬುಗ್ಗೆಯನ್ನು ಬತ್ತಿ ಹೋಗುವಂತೆ ಮಾಡುತ್ತೇನೆ;
- Jeremiah 51:7 ಯೆರೆಮೀಯ 51:7ಬಾಬೆಲ್ ಕರ್ತನ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿ ಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದದರಿಂದ ಜನಾಂಗ ಗಳು ಹುಚ್ಚರಾದರು.
- Revelation 17:5 ಪ್ರಕಟನೆ 17:5ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು.
- Acts 17:16 ಅಪೊಸ್ತಲರ ಕೃತ್ಯಗಳು 17:16ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣವೆಲ್ಲಾ ವಿಗ್ರಹಾರಾ ಧನೆಯಿಂದ ತುಂಬಿರುವದನ್ನು ನೋಡಿ ಅವನ ಮನಸ್ಸು ಅವನೊಳಗೆ ಕುದಿಯಿತು.
- Revelation 17:15–16 ಪ್ರಕಟನೆ 17:15–16ಅವನು ನನಗೆ--ನೀನು ಕಂಡ ಆ ಜಾರಸ್ತ್ರೀಯು ಕೂತುಕೊಂಡಿರುವ ನೀರುಗಳು ಅಂದರೆ ಪ್ರಜೆಗಳೂ ಸಮೂಹಗಳೂ ಜನಾಂಗಗಳೂ ಭಾಷೆಗಳೂ ಆಗಿವೆ. ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು.
- Jeremiah 50:12 ಯೆರೆಮೀಯ 50:12ನಿಮ್ಮ ತಾಯಿ ಬಹಳವಾಗಿ ನಾಚಿಕೆಪಡುವಳು; ನಿಮ್ಮನ್ನು ಹೆತ್ತವಳು ಲಜ್ಜೆ ಹೊಂದುವಳು; ಇಗೋ, ಜನಾಂಗ ಗಳಲ್ಲಿ ಅಂತ್ಯವಾದದ್ದು ಕಾಡೂ ಒಣ ಭೂಮಿಯೂ ಅರಣ್ಯವೂ ಆಗುವದು.