Jeremiah · chapter 50 · verse 39
Jeremiah 50:39 in Kannada
ಆದದರಿಂದ ಅರಣ್ಯದ ಕಾಡು ಮೃಗಗಳು, ನರಿಗಳು ಕೂಡ ಅಲ್ಲಿ ವಾಸಮಾಡುವವು. ಗೂಬೆಗಳೂ ಸಹ ಅದರಲ್ಲಿ ವಾಸಮಾಡುವವು; ಅದು ಇನ್ನು ಮೇಲೆ ಎಂದೆಂದಿಗೂ ನಿವಾಸವಾಗುವದಿಲ್ಲ; ತಲತಲಾಂತರಗಳ ವರೆಗೂ ಯಾರೂ ಅದರಲ್ಲಿ ತಂಗುವದಿಲ್ಲ.
Aadadarinda aranyada kaadu mrugagalu, narigalu kooda alli vaasamaaduvavu. Goobegaloo saha adaralli vaasamaaduvavu; adu innu mele endendigoo nivaasavaaguvadilla; talatalaantaragala varegoo yaaroo adaralli tanguvadilla.
Jeremiah 50:39 in English
- King James Version (KJV)
- Therefore the wild beasts of the desert with the wild beasts of the islands shall dwell [there], and the owls shall dwell therein: and it shall be no more inhabited for ever; neither shall it be dwelt in from generation to generation.
- World English Bible (WEB)
- Therefore the wild animals of the desert with the wolves will dwell there. The ostriches will dwell therein. It will be inhabited no more forever, neither will it be lived in from generation to generation.
- American Standard Version (ASV)
- Therefore the wild beasts of the desert with the wolves shall dwell there, and the ostriches shall dwell therein: and it shall be no more inhabited for ever; neither shall it be dwelt in from generation to generation.
- Bible in Basic English (BBE)
- For this reason the beasts of the waste land with the wolves will make their holes there and the ostriches will be living in it: never again will men be living there, it will be unpeopled from generation to generation.
- Darby Translation (DBY)
- Therefore wild beasts of the desert with jackals shall dwell there, and ostriches shall dwell therein; and it shall be no more inhabited for ever, neither shall it be dwelt in from generation to generation.
- Webster's Bible (WBS)
- Therefore the wild beasts of the desert with the wild beasts of the isles, shall dwell [there] , and the owls shall dwell therein: and it shall be no more inhabited for ever; neither shall it be dwelt in from generation to generation.
- Young's Literal Translation (YLT)
- Therefore dwell do Ziim with Iim, Yea, dwelt in her have daughters of the ostrich, And it is not inhabited any more for ever, Nor dwelt in unto all generations.
Read in context
- 37ಅವರ ಕುದುರೆಗಳಿಗೂ ರಥಗಳಿಗೂ ಅದರೊಳ ಗಿರುವ ಎಲ್ಲಾ ಜನರಿಗೆ ವಿರೋಧವಾಗಿ ಖಡ್ಗ ಉಂಟು. ಅವರು ಹೆಂಗಸರ ಹಾಗೆ ಬೆದರುವರು; ಅದರ ಬೊಕ್ಕಸಗಳಿಗೆ ವಿರೋಧವಾಗಿಯೂ ಖಡ್ಗ ಉಂಟು. ಅವು ಕೊಳ್ಳೆಯಾಗುವವು.
- 38ಬೇಗೆಯು ಅವರ ನೀರನ್ನೆಲ್ಲಾ ಹೀರಲಿ; ಅದು ಬತ್ತಿ ಹೋಗುವದು; ಅದು ವಿಗ್ರಹಗಳ ದೇಶವೇ, ಅವರು ವಿಗ್ರಹಗಳಿಂದ ಹುಚ್ಚರಾದರು.
- 39ಆದದರಿಂದ ಅರಣ್ಯದ ಕಾಡು ಮೃಗಗಳು, ನರಿಗಳು ಕೂಡ ಅಲ್ಲಿ ವಾಸಮಾಡುವವು. ಗೂಬೆಗಳೂ ಸಹ ಅದರಲ್ಲಿ ವಾಸಮಾಡುವವು; ಅದು ಇನ್ನು ಮೇಲೆ ಎಂದೆಂದಿಗೂ ನಿವಾಸವಾಗುವದಿಲ್ಲ; ತಲತಲಾಂತರಗಳ ವರೆಗೂ ಯಾರೂ ಅದರಲ್ಲಿ ತಂಗುವದಿಲ್ಲ.
- 40ದೇವರು ಸೊದೋಮನ್ನೂ ಗೊಮೋರವನ್ನು ಅವುಗಳ ಸವಿಾಪದಲ್ಲಿದ್ದ ಪಟ್ಟಣಗಳನ್ನೂ ಕೆಡವಿಹಾಕಿದಾಗ ಆದ ಹಾಗೆ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ; ಅದರಲ್ಲಿ ಯಾವ ನರಪುತ್ರನಾದರೂ ತಂಗುವದಿ ಲ್ಲವೆಂದು ಕರ್ತನು ಅನ್ನುತ್ತಾನೆ.
- 41ಇಗೋ, ಒಂದು ಜನಾಂಗ ಉತ್ತರದಿಂದ ಬರುತ್ತದೆ; ಅದು ದೊಡ್ಡ ಜನಾಂಗವು. ಭೂಮಿಯ ಮೇರೆಗಳಿಂದ ಅನೇಕ ಅರಸರು ಎಬ್ಬಿಸಲ್ಪಡುವರು.
Cross references
- Isaiah 13:20–22 ಯೆಶಾಯ 13:20–22ಅದು ಎಂದಿಗೂ ನಿವಾಸ ಸ್ಥಳ ವಾಗದು, ಇಲ್ಲವೆ ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಇಲ್ಲವೆ ಯಾವ ಅರಬಿಯನೂ ಗುಡಾರ ಹಾಕನು; ಅಥವಾ ಕುರುಬರು ಮಂದೆಯನ್ನು ತಂಗಿಸರು. ಆದರೆ ಮರುಭೂಮಿಯ ಕಾಡುಮೃಗಗಳು ಅಲ್ಲಿ ಮಲಗುವವು; ಅವರ ಮನೆಗಳು ವ್ಯೆಥೆಯಿಂದ ತುಂಬಿರುವವು; ಅಲ್ಲಿ ಗೂಬೆಗಳು ವಾಸಿಸುವವು, ದೆವ್ವಗಳು ಕುಣಿದಾಡುವವು.ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು. ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.
- Revelation 18:2 ಪ್ರಕಟನೆ 18:2ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು.
- Jeremiah 25:12 ಯೆರೆಮೀಯ 25:12ಎಪ್ಪತ್ತು ವರುಷ ತುಂಬಿದ ಮೇಲೆ ನಾನು ಬಾಬೆಲಿನ ಅರಸನನ್ನೂ ಆ ಜನಾಂಗವನ್ನೂ ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು.
- Jeremiah 51:37–38 ಯೆರೆಮೀಯ 51:37–38ಬಾಬೆಲ್ ದಿಬ್ಬೆಗಳಾಗುವದು; ನಿವಾಸಿಗಳು ಇಲ್ಲದೆ ನರಿಗಳ ವಾಸಸ್ಥಳವೂ ಆಶ್ಚರ್ಯವೂ ಹಾಳೂ ಸಿಳ್ಳಿಡುವಿಕೆಯೂ ಆಗುವದು. ಅವರು ಸಿಂಹಗಳ ಹಾಗೆ ಒಟ್ಟಾಗಿ ಗರ್ಜಿಸುವರು, ಸಿಂಹದ ಮರಿಗಳ ಹಾಗೆ ಶಬ್ದ ಮಾಡುವರು.
- Jeremiah 50:12–13 ಯೆರೆಮೀಯ 50:12–13ನಿಮ್ಮ ತಾಯಿ ಬಹಳವಾಗಿ ನಾಚಿಕೆಪಡುವಳು; ನಿಮ್ಮನ್ನು ಹೆತ್ತವಳು ಲಜ್ಜೆ ಹೊಂದುವಳು; ಇಗೋ, ಜನಾಂಗ ಗಳಲ್ಲಿ ಅಂತ್ಯವಾದದ್ದು ಕಾಡೂ ಒಣ ಭೂಮಿಯೂ ಅರಣ್ಯವೂ ಆಗುವದು. ಕರ್ತನ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವದಿಲ್ಲ; ಸಂಪೂರ್ಣ ಹಾಳಾಗುವದು ಬಾಬೆಲನ್ನು ಹಾದುಹೋಗುವವ ರೆಲ್ಲರು ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.
- Isaiah 34:11–17 ಯೆಶಾಯ 34:11–17ಆದರೆ ಬಕ ಪಕ್ಷಿಯು ಮತ್ತು ಮುಳ್ಳು ಹಂದಿಯು ಅದನ್ನು ಆವರಿಸಿಕೊಳ್ಳುವವು; ಗೂಬೆ ಮತ್ತು ಕಾಗೆಗಳು ಸಹ ಅಲ್ಲಿ ವಾಸಿಸುವವು; ಗಲಿಬಿಲಿ ಯೆಂಬ ನೂಲನ್ನು ಶೂನ್ಯವೆಂಬ ಗಟ್ಟಿ ತೂಕವನ್ನು ಆತನು ಅದರ ಮೇಲೆ ಎಳೆಯುವನು. ಅವರ ರಾಜ್ಯಕ್ಕೆ ಪ್ರಮುಖರನ್ನು ಕರೆಯುವರು; ಆದರೆ ಅಲ್ಲಿ ಯಾರೂ ಇರುವದಿಲ್ಲ; (ಅದರ) ಅವಳ ಪ್ರಭುಗಳು ಇಲ್ಲದಂತಾಗುವರು. ಅವಳ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು; ಅವಳ ಕೋಟೆಗಳಲ್ಲಿ ತುರುಚಿಯೂ ದತ್ತೂರಿಯೂ ಇರುವವು; ಅದು (ಉಷ್ಟ್ರ ಪಕ್ಷಿಗಳ) ಸರ್ಪಗಳ ನಿವಾಸವೂ ಗೂಬೆಗಳಿಗೆ ಸ್ಥಾನವೂ ಆಗುವದು. ಮರುಭೂಮಿಯ ಕಾಡು ಮೃಗಗಳು ಸಹ ದ್ವೀಪದ ಕಾಡುಮೃಗಗಳೊಂದಿಗೆ ಸಂಧಿಸುವವು; ದೆವ್ವವು ತನ್ನ ಜೊತೆಯನ್ನು ಕೂಗು ವದು; ಅಲ್ಲಿ ಚೀರುಗೂಬೆಯು ಸಹ ವಿಶ್ರಮಿಸಿಕೊಂಡು ಉಪಶಮನ ಸ್ಥಳವನ್ನು ಕಂಡುಕೊಳ್ಳುವದು. ದೊಡ್ಡ ಗೂಬೆಯು ಅಲ್ಲಿ ಗೂಡನ್ನು ಮಾಡಿಕೊಂಡು ಮೊಟ್ಟೆ ಯಿಟ್ಟು ಮರಿ ಮಾಡಿ ಅವುಗಳನ್ನು ತನ್ನ ನೆರಳಿನಲ್ಲಿ ಕೂಡಿಸುವದು; ಅಲ್ಲಿ ಹದ್ದುಗಳಲ್ಲಿ ಪ್ರತಿಯೊಂದು ತಮ್ಮ ಜೊತೆಜೊತೆಯಾಗಿ ಕೂಡಿಕೊಳ್ಳುವವು. ಕರ್ತನ ಪುಸ್ತಕದಲ್ಲಿ ನೀವು ಹುಡುಕಿ ಓದಿರಿ; ಇವು ಗಳಲ್ಲಿ ಒಂದಾದರೂ ತಪ್ಪದು, ಜೊತೆಯಿಲ್ಲದೆ ಒಂದೂ ಇಲ್ಲ; ನನ್ನ ಬಾಯಿಯೇ ಅದನ್ನು ಆಜ್ಞಾಪಿ ಸಿತು; ಆತನ ಆತ್ಮವೇ ಅವುಗಳನ್ನು ಒಟ್ಟುಗೂಡಿಸಿತುಆತನೇ ಅವುಗಳಿಗೋಸ್ಕರ ಚೀಟು ಹಾಕಿದ್ದಾನೆ, ಆತನ ಕೈಯೇ ಅದನ್ನು ಗೆರೆ ಎಳೆದು ಅವರಿಗೆ ಹಂಚಿ ಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿ ಕೊಳ್ಳುವವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು. ಆತನೇ ಅವುಗಳಿಗೋಸ್ಕರ ಚೀಟು ಹಾಕಿದ್ದಾನೆ, ಆತನ ಕೈಯೇ ಅದನ್ನು ಗೆರೆ ಎಳೆದು ಅವರಿಗೆ ಹಂಚಿ ಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿ ಕೊಳ್ಳುವವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.
- Jeremiah 51:26 ಯೆರೆಮೀಯ 51:26ಒಬ್ಬರೂ ನಿನ್ನಿಂದ ಮೂಲೆಯ ಕಲ್ಲನ್ನಾಗಲಿ, ಅಸ್ತಿವಾರದ ಕಲ್ಲನ್ನಾಗಲಿ ತೆಗೆಯರು; ನೀನು ಎಂದೆಂದಿಗೂ ಹಾಳಾಗುವಿ ಎಂದು ಕರ್ತನು ಅನ್ನುತ್ತಾನೆ.
- Revelation 18:21–24 ಪ್ರಕಟನೆ 18:21–24ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ. ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ. ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು. ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
- Jeremiah 51:62–64 ಯೆರೆಮೀಯ 51:62–64ಈ ವಾಕ್ಯಗಳನ್ನೆಲ್ಲಾ ನೋಡಿ ಓದುತ್ತಿರುವಾಗ ಹೇಳತಕ್ಕದ್ದೇನಂದರೆ--ಓ ಕರ್ತನೇ, ಈ ಸ್ಥಳಕ್ಕೆ ವಿರೋಧವಾಗಿ ಅದರಲ್ಲಿ ಮನುಷ್ಯ ರಾಗಲಿ, ಮೃಗಗಳಾಗಲಿ ನಿವಾಸಿಗಳು ಎಂದಿಗೂ ಇರದ ಹಾಗೆಯೂ ಅದು ನಿತ್ಯವಾಗಿ ಹಾಳಾಗುವ ಹಾಗೆಯೂ ಅದನ್ನು ಕಡಿದುಬಿಡುತ್ತೇನೆಂದು ನೀನೇ ಮಾತನಾ ಡಿದ್ದೀ. ನೀನು ಈ ಪುಸ್ತಕವನ್ನು ಓದಿ ಮುಗಿಸಿದ ಮೇಲೆ ಅದಕ್ಕೆ ಕಲ್ಲುಕಟ್ಟಿ ಅದನ್ನು ಯೂಫ್ರೇಟೀಸಿನ ಮಧ್ಯದಲ್ಲಿ ಬಿಸಾಡಿ ಹೀಗೆ ಹೇಳು--ಈ ಪ್ರಕಾರ ಬಾಬೆಲ್ ಮುಳುಗಿಹೋಗುವದು;ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು, ಅವರು ಆಯಾಸ ಪಡುವರು. ಇಲ್ಲಿಯ ತನಕ ಯೆರೆವಿಾಯನ ವಾಕ್ಯಗಳು. ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು, ಅವರು ಆಯಾಸ ಪಡುವರು. ಇಲ್ಲಿಯ ತನಕ ಯೆರೆವಿಾಯನ ವಾಕ್ಯಗಳು.
- Jeremiah 51:43 ಯೆರೆಮೀಯ 51:43ಅದರ ಪಟ್ಟಣಗಳು ಹಾಳಾದವು; ಅವು ಒಣನೆಲವೂ ಅಡವಿಯೂ ಯಾರೂ ವಾಸಮಾಡದೆ, ಮನುಷ್ಯನ ಮಗನು ಹಾದುಹೋಗದೆ ಇರುವ ದೇಶವೂ ಆಗಿವೆ.
- Isaiah 14:23 ಯೆಶಾಯ 14:23ಅದನ್ನು ಸಹ ಮುಳ್ಳುಹಂದಿಗೆ ಬಾಧ್ಯ ವಾಗಿಯೂ ನೀರಿನ ಕುಣಿಗಳಾಗಿಯೂ ಮಾಡಿ ನಾಶ ವೆಂಬ ಕಸಬರಿಕೆಯಿಂದ ಗುಡಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.