Jeremiah · chapter 50 · verse 40
Jeremiah 50:40 in Kannada
ದೇವರು ಸೊದೋಮನ್ನೂ ಗೊಮೋರವನ್ನು ಅವುಗಳ ಸವಿಾಪದಲ್ಲಿದ್ದ ಪಟ್ಟಣಗಳನ್ನೂ ಕೆಡವಿಹಾಕಿದಾಗ ಆದ ಹಾಗೆ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ; ಅದರಲ್ಲಿ ಯಾವ ನರಪುತ್ರನಾದರೂ ತಂಗುವದಿ ಲ್ಲವೆಂದು ಕರ್ತನು ಅನ್ನುತ್ತಾನೆ.
Devaru sodomannoo gomoravannu avugala saviాpadallidda pattanagalannoo kedavihaakidaaga aada haage alli yaava manushyanaadaroo vaasamaaduvadilla; adaralli yaava naraputranaadaroo tanguvadi llavendu kartanu annuttaane.
Jeremiah 50:40 in English
- King James Version (KJV)
- As God overthrew Sodom and Gomorrah and the neighbour [cities] thereof, saith the LORD; [so] shall no man abide there, neither shall any son of man dwell therein.
- World English Bible (WEB)
- As when God overthrew Sodom and Gomorrah and its neighbor cities,” says the LORD, “so no man will dwell there, neither will any son of man live therein.
- American Standard Version (ASV)
- As when God overthrew Sodom and Gomorrah and the neighbor cities thereof, saith Jehovah, so shall no man dwell there, neither shall any son of man sojourn therein.
- Bible in Basic English (BBE)
- As when Sodom and Gomorrah and their neighbouring towns were overturned by God, says the Lord, so no man will be living in it, and no son of man will have a resting-place there.
- Darby Translation (DBY)
- As when God overthrew Sodom and Gomorrah, and their neighbour cities, saith Jehovah, no one shall dwell there, neither shall a son of man sojourn therein.
- Webster's Bible (WBS)
- As God overthrew Sodom and Gomorrah and the neighboring [cities] , saith the LORD; [so] shall no man abide there, neither shall any son of man dwell therein.
- Young's Literal Translation (YLT)
- As overthrown by God with Sodom, And with Gomorrah, and with its neighbours, An affirmation of Jehovah, none doth dwell there, Nor sojourn in her doth a son of man.
Read in context
- 38ಬೇಗೆಯು ಅವರ ನೀರನ್ನೆಲ್ಲಾ ಹೀರಲಿ; ಅದು ಬತ್ತಿ ಹೋಗುವದು; ಅದು ವಿಗ್ರಹಗಳ ದೇಶವೇ, ಅವರು ವಿಗ್ರಹಗಳಿಂದ ಹುಚ್ಚರಾದರು.
- 39ಆದದರಿಂದ ಅರಣ್ಯದ ಕಾಡು ಮೃಗಗಳು, ನರಿಗಳು ಕೂಡ ಅಲ್ಲಿ ವಾಸಮಾಡುವವು. ಗೂಬೆಗಳೂ ಸಹ ಅದರಲ್ಲಿ ವಾಸಮಾಡುವವು; ಅದು ಇನ್ನು ಮೇಲೆ ಎಂದೆಂದಿಗೂ ನಿವಾಸವಾಗುವದಿಲ್ಲ; ತಲತಲಾಂತರಗಳ ವರೆಗೂ ಯಾರೂ ಅದರಲ್ಲಿ ತಂಗುವದಿಲ್ಲ.
- 40ದೇವರು ಸೊದೋಮನ್ನೂ ಗೊಮೋರವನ್ನು ಅವುಗಳ ಸವಿಾಪದಲ್ಲಿದ್ದ ಪಟ್ಟಣಗಳನ್ನೂ ಕೆಡವಿಹಾಕಿದಾಗ ಆದ ಹಾಗೆ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ; ಅದರಲ್ಲಿ ಯಾವ ನರಪುತ್ರನಾದರೂ ತಂಗುವದಿ ಲ್ಲವೆಂದು ಕರ್ತನು ಅನ್ನುತ್ತಾನೆ.
- 41ಇಗೋ, ಒಂದು ಜನಾಂಗ ಉತ್ತರದಿಂದ ಬರುತ್ತದೆ; ಅದು ದೊಡ್ಡ ಜನಾಂಗವು. ಭೂಮಿಯ ಮೇರೆಗಳಿಂದ ಅನೇಕ ಅರಸರು ಎಬ್ಬಿಸಲ್ಪಡುವರು.
- 42ಅವರು ಬಿಲ್ಲನ್ನೂ ಭಲ್ಲೆಯನ್ನೂ ಹಿಡಿಯುವರು; ಅವರು ಕ್ರೂರರು; ಅಂತಃಕರುಣೆ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುವದು; ಬಾಬೆಲಿನ ಮಗಳೇ, ನಿನಗೆ ವಿರೋಧವಾಗಿ ಯುದ್ಧಕ್ಕೆ ಸಿದ್ಧವಾಗಿ ರುವ ಪುರುಷರ ಹಾಗೆ ಕುದುರೆಗಳನ್ನು ಹತ್ತಿಕೊಂಡು ಬರುವರು.
Cross references
- Genesis 19:24–25 ಆದಿಕಾಂಡ 19:24–25ಆಗ ಕರ್ತನು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು. ಹೀಗೆ ಆತನು ಆ ಪಟ್ಟಣಗಳನ್ನೂ ಎಲ್ಲಾ ಮೈದಾನವನ್ನೂ ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಹಾಳುಮಾಡಿದನು.
- Isaiah 13:19–20 ಯೆಶಾಯ 13:19–20ರಾಜ್ಯಗಳ ಘನತೆಯೂ ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬೆಲಿಗೆ ದೇವರು ಸೊದೋ ಮ್ ಗೊಮೋರಗಳನ್ನು ಕೆಡವಿಬಿಟ್ಟಂತೆ ಇದನ್ನು ಸಹ ಕೆಡವಿಬಿಡುವನು. ಅದು ಎಂದಿಗೂ ನಿವಾಸ ಸ್ಥಳ ವಾಗದು, ಇಲ್ಲವೆ ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಇಲ್ಲವೆ ಯಾವ ಅರಬಿಯನೂ ಗುಡಾರ ಹಾಕನು; ಅಥವಾ ಕುರುಬರು ಮಂದೆಯನ್ನು ತಂಗಿಸರು.
- 2 Peter 2:6 2 ಪೇತ್ರನು 2:6ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.
- Luke 17:28–30 ಲೂಕನು 17:28–30ಅದೇ ಪ್ರಕಾರ ಲೋಟನ ದಿವಸಗಳಲ್ಲಿಯೂ ಇತ್ತು. ಅವರು ತಿನ್ನು ತ್ತಿದ್ದರು, ಕುಡಿಯುತ್ತಿದ್ದರು; ಅವರು ಕೊಂಡುಕೊಳ್ಳು ತ್ತಿದ್ದರು, ಮಾರುತ್ತಿದ್ದರು; ಅವರು ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು. ಆದರೆ ಲೋಟನು ಸೊದೋಮಿನಿಂದ ಹೊರಗೆ ಹೋದ ದಿನವೇ ಆಕಾಶದಿಂದ ಬೆಂಕಿಯೂ ಗಂಧಕವೂ ಸುರಿದು ಎಲ್ಲರನ್ನು ನಾಶಪಡಿಸಿದವು. ಮನುಷ್ಯಕುಮಾರನು ಪ್ರತ್ಯಕ್ಷನಾಗುವ ದಿನದಲ್ಲಿ ಹೀಗೆಯೇ ಇರುವದು.
- Jude 1:7 ಯೂದನು 1:7ಸೊದೋಮ ಗೊಮೋರ ದವರೂ ಹಾಗೆಯೇ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅನ್ಯ ಶರೀರವನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ಪ್ರತಿದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲ್ಪಟ್ಟಿದ್ದಾರೆ.
- Jeremiah 49:18 ಯೆರೆಮೀಯ 49:18ಸೊದೋಮ್ ಗೊಮೋರ ಅವುಗಳ ಸವಿಾಪ ದಲ್ಲಿದ್ದ ಪಟ್ಟಣಗಳೂ ಕೆಡವಲ್ಪಟ್ಟಾಗ ಹಾಗೆಯೇ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ, ಅದರಲ್ಲಿ ಯಾವ ಮನುಷ್ಯನ ಪುತ್ರನಾದರೂ ತಂಗುವದಿಲ್ಲವೆಂದು ಕರ್ತನು ಅನ್ನುತ್ತಾನೆ.
- Zephaniah 2:9 ಚೆಫನ್ಯ 2:9ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.
- Hosea 11:8–9 ಹೋಶೇಯ 11:8–9ಎಫ್ರಾಯಾಮೇ, ನಾನು ನಿನ್ನನ್ನು ಬಿಟ್ಟು ಬಿಡುವದು ಹೇಗೆ? ಇಸ್ರಾಯೇಲೇ, ನಿನ್ನನ್ನು ನಾನು ಬಿಡಿಸುವದು ಹೇಗೆ? ನಾನು ನಿನ್ನನ್ನು ಅದ್ಮದ ಹಾಗೆ ಮಾಡುವದು ಹೇಗೆ? ನಾನು ನಿನ್ನನ್ನು ಜೆಬೋಯಾಮಿನ ಹಾಗೆ ಸ್ಥಾಪಿಸುವದು ಹೇಗೆ? ನನ್ನ ಹೃದಯವು ನನ್ನಲ್ಲಿ ತಿರುಗಿಕೊಂಡಿದೆ. ನನ್ನ ಪಶ್ಚಾತ್ತಾಪಗಳು ಒಟ್ಟಿಗೆ ಹತ್ತಿ ಕೊಂಡಿವೆ. ನನ್ನ ಕೋಪದ ಉರಿಯನ್ನು ನಾನು ತೀರಿಸುವದಿಲ್ಲ, ನಾನು ಎಫ್ರಾಯಾಮನ್ನು ನಾಶ ಮಾಡಲು ತಿರುಗಿಕೊಳ್ಳುವದಿಲ್ಲ; ನಾನು ದೇವರೇ ಮನುಷ್ಯನಲ್ಲ, ನಿಮ್ಮ ಮಧ್ಯದಲ್ಲಿರುವಾತನಾದ ಪರಿ ಶುದ್ಧನೇ. ಪಟ್ಟಣದೊಳಗೆ ನಾನು ಪ್ರವೇಶಿಸುವದಿಲ್ಲ.
- Jeremiah 51:26 ಯೆರೆಮೀಯ 51:26ಒಬ್ಬರೂ ನಿನ್ನಿಂದ ಮೂಲೆಯ ಕಲ್ಲನ್ನಾಗಲಿ, ಅಸ್ತಿವಾರದ ಕಲ್ಲನ್ನಾಗಲಿ ತೆಗೆಯರು; ನೀನು ಎಂದೆಂದಿಗೂ ಹಾಳಾಗುವಿ ಎಂದು ಕರ್ತನು ಅನ್ನುತ್ತಾನೆ.
- Isaiah 1:9 ಯೆಶಾಯ 1:9ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.
- Deuteronomy 29:23 ಧರ್ಮೋಪದೇಶಕಾಂಡ 29:23ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್ ಗೊಮೋರ ಅದ್ಮಾಚೆಬೋ ಯಾಮ್ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ--
- Revelation 11:8 ಪ್ರಕಟನೆ 11:8ಇವರ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಆತ್ಮಿಕವಾಗಿ ಸೊದೋಮ್ ಎಂತಲೂ ಐಗುಪ್ತ ಎಂತಲೂ ಕರೆಯುವರು; ನಮ್ಮ ಕರ್ತನು ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು.