Jeremiah · chapter 50 · verse 41
Jeremiah 50:41 in Kannada
ಇಗೋ, ಒಂದು ಜನಾಂಗ ಉತ್ತರದಿಂದ ಬರುತ್ತದೆ; ಅದು ದೊಡ್ಡ ಜನಾಂಗವು. ಭೂಮಿಯ ಮೇರೆಗಳಿಂದ ಅನೇಕ ಅರಸರು ಎಬ್ಬಿಸಲ್ಪಡುವರು.
Igo, ondu janaanga uttaradinda baruttade; adu dodda janaangavu. Bhoomiya meregalinda aneka arasaru ebbisalpaduvaru.
Jeremiah 50:41 in English
- King James Version (KJV)
- Behold, a people shall come from the north, and a great nation, and many kings shall be raised up from the coasts of the earth.
- World English Bible (WEB)
- “Behold, a people comes from the north. A great nation and many kings will be stirred up from the uttermost parts of the earth.
- American Standard Version (ASV)
- Behold, a people cometh from the north; and a great nation and many kings shall be stirred up from the uttermost parts of the earth.
- Bible in Basic English (BBE)
- See, a people is coming from the north; a great nation and a number of kings will be put in motion from the inmost parts of the earth.
- Darby Translation (DBY)
- Behold, a people cometh from the north, and a great nation. And many kings shall arise from the uttermost parts of the earth.
- Webster's Bible (WBS)
- Behold, a people shall come from the north, and a great nation, and many kings shall be raised up from the borders of the earth.
- Young's Literal Translation (YLT)
- Lo, a people hath come from the north, Even a great nation, And many kings are stirred up from the sides of the earth.
Read in context
- 39ಆದದರಿಂದ ಅರಣ್ಯದ ಕಾಡು ಮೃಗಗಳು, ನರಿಗಳು ಕೂಡ ಅಲ್ಲಿ ವಾಸಮಾಡುವವು. ಗೂಬೆಗಳೂ ಸಹ ಅದರಲ್ಲಿ ವಾಸಮಾಡುವವು; ಅದು ಇನ್ನು ಮೇಲೆ ಎಂದೆಂದಿಗೂ ನಿವಾಸವಾಗುವದಿಲ್ಲ; ತಲತಲಾಂತರಗಳ ವರೆಗೂ ಯಾರೂ ಅದರಲ್ಲಿ ತಂಗುವದಿಲ್ಲ.
- 40ದೇವರು ಸೊದೋಮನ್ನೂ ಗೊಮೋರವನ್ನು ಅವುಗಳ ಸವಿಾಪದಲ್ಲಿದ್ದ ಪಟ್ಟಣಗಳನ್ನೂ ಕೆಡವಿಹಾಕಿದಾಗ ಆದ ಹಾಗೆ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ; ಅದರಲ್ಲಿ ಯಾವ ನರಪುತ್ರನಾದರೂ ತಂಗುವದಿ ಲ್ಲವೆಂದು ಕರ್ತನು ಅನ್ನುತ್ತಾನೆ.
- 41ಇಗೋ, ಒಂದು ಜನಾಂಗ ಉತ್ತರದಿಂದ ಬರುತ್ತದೆ; ಅದು ದೊಡ್ಡ ಜನಾಂಗವು. ಭೂಮಿಯ ಮೇರೆಗಳಿಂದ ಅನೇಕ ಅರಸರು ಎಬ್ಬಿಸಲ್ಪಡುವರು.
- 42ಅವರು ಬಿಲ್ಲನ್ನೂ ಭಲ್ಲೆಯನ್ನೂ ಹಿಡಿಯುವರು; ಅವರು ಕ್ರೂರರು; ಅಂತಃಕರುಣೆ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುವದು; ಬಾಬೆಲಿನ ಮಗಳೇ, ನಿನಗೆ ವಿರೋಧವಾಗಿ ಯುದ್ಧಕ್ಕೆ ಸಿದ್ಧವಾಗಿ ರುವ ಪುರುಷರ ಹಾಗೆ ಕುದುರೆಗಳನ್ನು ಹತ್ತಿಕೊಂಡು ಬರುವರು.
- 43ಬಾಬೆಲಿನ ಅರಸನು ಅವರ ಸುದ್ದಿಯನ್ನು ಕೇಳಿದ್ದಾನೆ. ಅವನ ಕೈಗಳು ನಿತ್ರಾಣವಾದವು. ಸಂಕಟವೂ ಹೆರುವ ಸ್ತ್ರೀಯ ಹಾಗೆ ನೋವೂ ಅವನನ್ನು ಹಿಡಿದವು.
Cross references
- Jeremiah 51:27–28 ಯೆರೆಮೀಯ 51:27–28ದೇಶದಲ್ಲಿ ಧ್ವಜವನ್ನೆತ್ತಿರಿ; ಜನಾಂಗಗಳಲ್ಲಿ ತುತೂರಿಯನ್ನೂದಿರಿ; ಅದಕ್ಕೆ ವಿರೋಧವಾಗಿ ಜನಾಂಗಗಳನ್ನು ಸಿದ್ಧಮಾಡಿರಿ; ಅರರಾಟ್, ಮಿನ್ನಿ, ಅಷ್ಕೆನಜ್ ರಾಜ್ಯಗಳನ್ನು ಅದಕ್ಕೆ ವಿರೋಧವಾಗಿ ಕರೆಯಿರಿ; ಅದಕ್ಕೆ ವಿರೋಧವಾಗಿ ಸೈನ್ಯಾಧಿಪತಿಯನ್ನು ನೇಮಿಸಿರಿ; ಬಿರುಸಾದ ಮಿಡತೆ ದಂಡಿನಂತೆ ಕುದುರೆ ಗಳನ್ನು ಬರಮಾಡಿರಿ. ಅದಕ್ಕೆ ವಿರೋಧವಾಗಿ ಜನಾಂಗಗಳನ್ನೂ ಮೇದ್ಯರ ಅರಸರನ್ನೂ ಅದರ ಅಧಿಪತಿಗಳನ್ನೂ ಅಧಿಕಾರಿಗಳೆಲ್ಲರನ್ನೂ ಅವನ ರಾಜ್ಯದ ದೇಶವನ್ನೆಲ್ಲಾ ಸಿದ್ಧಮಾಡಿರಿ.
- Jeremiah 50:9 ಯೆರೆಮೀಯ 50:9ಇಗೋ, ನಾನು ಉತ್ತರ ದೇಶದಿಂದ ದೊಡ್ಡ ಜನಾಂಗಗಳ ಸಭೆ ಸೇರಿಸಿ; ಬಾಬೆಲಿಗೆ ವಿರೋಧವಾಗಿ ಏಳುವಂತೆ ಮಾಡುತ್ತೇನೆ. ಅವರು ಅದಕ್ಕೆ ವಿರೋಧ ವಾಗಿ ಯುದ್ಧವನ್ನು ಸಿದ್ಧಮಾಡುವರು; ಅಲ್ಲಿಂದ ಅದು ಹಿಡಿಯಲ್ಪಡುವದು; ಅವರ ಬಾಣಗಳು ಬಲಿಷ್ಠನಾದ ಪ್ರವೀಣಶಾಲಿಯ ಹಾಗಿರುವವು. ಯಾವದೂ ವ್ಯರ್ಥವಾಗಿ ತಿರುಗವು.
- Jeremiah 6:22–23 ಯೆರೆಮೀಯ 6:22–23ಕರ್ತನು ಹೀಗೆ ಹೇಳುತ್ತಾನೆ--ಇಗೋ, ಒಂದು ಜನವು ಉತ್ತರ ದೇಶದಿಂದ ಬರುತ್ತದೆ; ದೊಡ್ಡ ಜನಾಂಗವು ಭೂಮಿಯ ಮೇರೆಗಳಿಂದ ಎದ್ದು ಬರು ತ್ತದೆ. ಅವರು ಬಿಲ್ಲನ್ನೂ ಬಲ್ಲೆಯನ್ನೂ ಹಿಡಿದ ಕ್ರೂರಿಗಳಾಗಿದ್ದಾರೆ, ಕನಿಕರ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುತ್ತದೆ; ಕುದುರೆ ಗಳ ಮೇಲೆ ಸವಾರಿ ಮಾಡುತ್ತಾರೆ; ಚೀಯೋನಿನ ಕುಮಾರಿಯೇ, ನಿನಗೆ ವಿರೋಧವಾಗಿ ಯುದ್ದ ಮಾಡುವ ಮನುಷ್ಯರಂತೆ ಸಿದ್ಧಮಾಡಿಕೊಂಡಿದ್ದಾರೆ;
- Isaiah 13:2–5 ಯೆಶಾಯ 13:2–5ಅವರು(ಶತ್ರುಗಳು) ಬಂದು ಘನವಂತ ದ್ವಾರಗಳೊಳಗೆ ಹೋಗುವಂತೆ ಎತ್ತರವಾದ ಪರ್ವತದ ಮೇಲೆ ನೀವು ಧ್ವಜವನ್ನೆತ್ತಿ ಅವರಿಗೆ ನಿಮ್ಮ ಶಬ್ದವನ್ನು ಕೇಳಿಸುವಂತೆ ಜೋರಾಗಿ ಕೂಗಿ ಕರೆಯಿರಿ. ನಾನು ನನ್ನ ಪರಿಶುದ್ಧರಿಗೆ ಆಜ್ಞಾಪಿಸಿ ನನ್ನ ಮಹಿಮೆಯಲ್ಲಿ ಉಲ್ಲಾಸಿಸುವವರನ್ನೂ ಶೂರರನ್ನೂ ನನ್ನ ಕೋಪಕ್ಕೆ ಕರೆದಿದ್ದೇನೆ. ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ; ಒಟ್ಟಿಗೆ ಕೂಡಿಕೊಂಡ ರಾಜ್ಯ ಜನಾಂಗ ಗಳ ಆರ್ಭಟ; ಸೈನ್ಯಗಳ ಕರ್ತನು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾನೆ. ಕರ್ತನೂ ಆತನ ರೋಷಕ್ಕೆ ಆಯುಧಗಳಾದವರೂ ದೂರ ದೇಶದಿಂದ, ಅಂದರೆ ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವದಕ್ಕಾಗಿ ಬರುತ್ತಾರೆ.
- Jeremiah 25:14 ಯೆರೆಮೀಯ 25:14ಅನೇಕ ಜನಾಂಗಗಳೂ ದೊಡ್ಡ ಅರಸರೂ ಅವರಿಂದ ಸೇವೆ ಮಾಡಿಸಿಕೊಳ್ಳುವರು. ಅವರ ಕ್ರಿಯೆ ಗಳ ಪ್ರಕಾರವೂ ಅವರ ಕೈ ಕೆಲಸದ ಪ್ರಕಾರವೂ ನಾನು ಅವರಿಗೆ ಪ್ರತಿಫಲ ಕೊಡುವೆನು ಎಂದು ಕರ್ತನು ಅನ್ನುತ್ತಾನೆ.
- Jeremiah 51:11 ಯೆರೆಮೀಯ 51:11ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ.
- Jeremiah 50:2–3 ಯೆರೆಮೀಯ 50:2–3ಜನಾಂಗಗಳಿಗೆ ತಿಳಿಸಿರಿ, ಸಾರಿರಿ; ಧ್ವಜವನ್ನೆತ್ತಿರಿ; ಸಾರಿರಿ, ಮರೆಮಾಡಬೇಡಿರಿ, ಬಾಬೆಲು ಹಿಡಿಯ ಲ್ಪಟ್ಟಳು, ಬೇಲ್ನಿಗೆ ನಾಚಿಕೆಯಾಯಿತು, ಮೆರೋದಾ ಕನು ತುಂಡು ತುಂಡಾಗಿ ಮುರಿದು ಹೋದನು, ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಅವಳ ವಿಗ್ರಹಗಳು ಮುರಿದು ಹೋದವೆಂದು ಹೇಳಿರಿ; ಉತ್ತರದಿಂದ ಅವಳ ವಿರೋಧವಾಗಿ ಜನಾಂಗವು ಬರುತ್ತದೆ; ಅದು ಅವಳ ದೇಶವನ್ನು ಹಾಳು ಮಾಡಿ ಬಿಡುವದು; ಅವಳಲ್ಲಿ ಯಾರೂ ವಾಸಿಸುವದಿಲ್ಲ; ಮನುಷ್ಯರೂ ಮೃಗಗಳೂ ಒಟ್ಟಾಗಿ ತೊಲಗಿಬಿಡುತ್ತಾರೆ, ಓಡಿಹೋಗುತ್ತಾರೆ.
- Isaiah 13:17–18 ಯೆಶಾಯ 13:17–18ಇಗೋ, ಬೆಳ್ಳಿಯನ್ನು ಲಕ್ಷಿಸದೆ ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧ ವಾಗಿ ನಾನು ಎಬ್ಬಿಸುವೆನು. ಅವರ ಬಿಲ್ಲುಗಳು ಸಹ ಯುವಕರನ್ನು ಹೊಡೆದು ತುಂಡುತುಂಡು ಮಾಡುವವು; ಇವರು ಗರ್ಭಫಲವನ್ನು ಕರುಣಿಸರು, ಇವರ ಕಣ್ಣುಗಳು ಮಕ್ಕಳನ್ನೂ ಉಳಿಸುವದಿಲ್ಲ.
- Revelation 17:16 ಪ್ರಕಟನೆ 17:16ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು.
- Jeremiah 51:1–2 ಯೆರೆಮೀಯ 51:1–2ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಬಾಬೆಲಿಗೆ ವಿರೋಧವಾಗಿಯೂ ನನಗೆದುರಾಗಿ ಎದ್ದಿರುವವರ ಮಧ್ಯದಲ್ಲಿ ವಾಸಿಸುವ ವರಿಗೆ ವಿರೋಧವಾಗಿಯೂ ನಾಶಮಾಡುವ ಗಾಳಿ ಯನ್ನು ಎಬ್ಬಿಸುತ್ತೇನೆ. ಬಾಬೆಲಿಗೆ ತೂರುವವರನ್ನು ಕಳುಹಿಸುವೆನು; ಅವರು ಅದನ್ನು ತೂರಿ ಅದರ ದೇಶವನ್ನು ಬರಿದುಮಾಡುವರು; ದುರ್ದಿನದಲ್ಲಿ ಸುತ್ತಲಾಗಿ ಅದಕ್ಕೆ ವಿರೋಧವಾಗಿರುವರು.